< ಯೆಹೋಶುವನು 8 >
1 ೧ ಅನಂತರ ಯೆಹೋವನು ಯೆಹೋಶುವನಿಗೆ “ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ಕರೆದುಕೊಂಡು ಆಯಿ ಪಟ್ಟಣಕ್ಕೆ ಹೋಗು. ನೋಡು, ಆಯಿ ಎಂಬ ಊರಿನ ಅರಸ, ಪ್ರಜೆ, ನಗರ, ಸೀಮೆ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ.
The LORD said to Joshua, "Do not be afraid, neither be dismayed. Take all the people of war with you, and arise, go up to Ai. Look, I have given into your hand the king of Ai, with his people, his city, and his land.
2 ೨ ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ” ಎಂದು ಆಜ್ಞಾಪಿಸಿದನು.
You shall do to Ai and her king as you did to Jericho and her king, except its spoil and its livestock, you shall take for a plunder for yourselves. Set an ambush for the city behind it."
3 ೩ ಅಂತೆಯೇ ಯೆಹೋಶುವನು ಎದ್ದು ಭಟರೆಲ್ಲರ ಸಹಿತವಾಗಿ ಆಯಿಗೆ ಹೋಗುವುದಕ್ಕೋಸ್ಕರ ಸಿದ್ಧನಾಗಿ ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿ ಅವರಿಗೆ
So Joshua arose, and all the people of war, to go up to Ai. Joshua chose thirty thousand men, the mighty men of valor, and sent them out by night.
4 ೪ “ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ಪಟ್ಟಣಕ್ಕೆ ಬಹುದೂರವಾಗಿರಬೇಡಿರಿ; ಎಲ್ಲರೂ ಸಿದ್ಧವಾಗಿರಿ.
He commanded them, saying, "Look, you shall lie in ambush against the city, behind the city. Do not go very far from the city, but all of you be ready.
5 ೫ ನಾನೂ ಮತ್ತು ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸಮೀಪಕ್ಕೆ ಹೋಗುವೆವು. ಅವರು ಮೊದಲಿನಂತೆ ನಮ್ಮೊಡನೆ ಯುದ್ಧಕ್ಕೆ ಬಂದ ಕೂಡಲೆ ನಾವು ಓಡಿ ಹೋಗುವೆವು.
I, and all the people who are with me, will approach to the city. It shall happen, when they come out against us, as at the first, that we will flee before them.
6 ೬ ಇವರು ಮೊದಲಿನಂತೆ ನಮಗೆ ಹೆದರಿ ಓಡಿಹೋಗುತ್ತಿದ್ದಾರೆಂದು ತಿಳಿದು ಅವರು ನಮ್ಮನ್ನು ಹಿಂದಟ್ಟುವರು; ನಾವು ಓಡುತ್ತಲೇ ಇರುವೆವು.
They will come out after us, until we have drawn them away from the city; for they will say, 'They flee before us, like the first time.' So we will flee before them,
7 ೭ ನಾವೂ ಅವರೂ ಪಟ್ಟಣದಿಂದ ದೂರವಾದ ಕೂಡಲೇ ನೀವು ಹೊಂಚಿ ಕುಳಿತ್ತಿದ್ದ ಸ್ಥಳದಿಂದ ಎದ್ದು ಪಟ್ಟಣದೊಳಗೆ ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮ ಕೈಗೆ ಒಪ್ಪಿಸುವನು.
and you shall rise up from the ambush, and take possession of the city; for the LORD your God will deliver it into your hand.
8 ೮ ನೀವು ಪಟ್ಟಣವನ್ನು ಹಿಡಿದ ಕೂಡಲೆ ಅದಕ್ಕೆ ಬೆಂಕಿ ಹೊತ್ತಿಸಿರಿ. ಯೆಹೋವನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ” ಎಂದು ಹೇಳಿ ಅವರನ್ನು ರಾತ್ರಿಯಲ್ಲಿಯೇ ಕಳುಹಿಸಿದನು.
It shall be, when you have seized on the city, that you shall set the city on fire. You shall do this according to the word of the LORD. Look, I have commanded you."
9 ೯ ಅವರು ಹೊಂಚುಹಾಕುವುದಕ್ಕೆ ಹೊರಟುಹೋಗಿ ಬೇತೇಲಿಗೂ ಆಯಿಗೂ ನಡುವೆ ಆಯಿ ಎಂಬ ಊರಿನ ಪಶ್ಚಿಮದಲ್ಲಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯನ್ನು ಜನರ ಮಧ್ಯದಲ್ಲಿ ಕಳೆದನು.
Joshua sent them out; and they went to set up the ambush, and stayed between Bethel and Ai, on the west side of Ai; but Joshua stayed among the people that night.
10 ೧೦ ಅವನು ಬೆಳಿಗ್ಗೆ ಎದ್ದು ಇಸ್ರಾಯೇಲ್ಯರ ಹಿರಿಯರ ಸಂಗಡ ಸೈನ್ಯವನ್ನು ಕೂಡಿಸಿ ಅವರ ಮುಂದಾಗಿ ಆಯಿಗೆ ಹೊರಟನು.
Joshua rose up early in the morning, mustered the people, and went up, he and the elders, before the people to Ai.
11 ೧೧ ಅವನ ಸಂಗಡ ಇದ್ದ ಭಟರೆಲ್ಲರೂ ಗಟ್ಟಾಹತ್ತಿ ಪಟ್ಟಣದ ಸಮೀಪಕ್ಕೆ ಬಂದು ಅದರ ಉತ್ತರದಿಕ್ಕಿನಲ್ಲಿ ಇಳಿದುಕೊಂಡರು. ಅವರಿಗೂ ಆಯಿಗೂ ನಡುವೆ ಒಂದು ತಗ್ಗು ಇತ್ತು.
All the people, even the men of war who were with him, went up, and drew near, and came before the city, and camped on the north side of Ai. Now there was a valley between him and Ai.
12 ೧೨ ಯೆಹೋಶುವನು ಹೆಚ್ಚುಕಡಿಮೆ ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ಇರುವ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುವುದಕ್ಕೋಸ್ಕರ ಇರಿಸಿದನು.
He took about five thousand men, and set them in ambush between Bethel and Ai, on the west side of the city.
13 ೧೩ ಪಟ್ಟಣದ ಉತ್ತರದಲ್ಲಿದ್ದ ಎಲ್ಲಾ ಸೈನ್ಯವನ್ನೂ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುತ್ತಿದ್ದ ಸೈನ್ಯವನ್ನೂ ಕ್ರಮಪಡಿಸಿಕೊಂಡು ಯೆಹೋಶುವನು ಆ ರಾತ್ರಿಯಲ್ಲಿ ಕಣಿವೆಗೆ ಹೋದನು.
So they set the people, even all the army who was on the north of the city, and their ambush on the west of the city; and Joshua went that night into the midst of the valley.
14 ೧೪ ಆಯಿ ಎಂಬ ಊರಿನ ಅರಸನು ಬೆಳಿಗ್ಗೆ ಇದನ್ನು ತಿಳಿದು ತ್ವರೆಯಾಗಿ ಜನರೆಲ್ಲರ ಸಹಿತವಾಗಿ ಇಸ್ರಾಯೇಲ್ಯರ ವಿರುದ್ಧ ಯುದ್ಧ ಮಾಡುವುದಕ್ಕೆ ಹೊರಟನು. ಅವನೂ ಅವನ ಜನರೂ ಅರಾಬಾ ಎಂಬ ಕಣಿವೆಯ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಪಟ್ಟಣದ ಹಿಂಭಾಗದಲ್ಲಿ ಹೊಂಚಿನೋಡುತ್ತಿರುವುದು ಅವನಿಗೆ ಗೊತ್ತಿರಲಿಲ್ಲ.
And it happened, when the king of Ai saw it, that he hurried and rose up early, and the men of the city went out to engage them directly in battle, he and all his people, to the meeting place in front of the Arabah; but he did not know that there was an ambush against him behind the city.
15 ೧೫ ಯೆಹೋಶುವನೂ ಅವನ ಸಂಗಡ ಇದ್ದ ಇಸ್ರಾಯೇಲ್ಯರೆಲ್ಲರೂ ತಾವು ಸೋತವರೋ ಎಂಬಂತೆ ಅರಣ್ಯಮಾರ್ಗವಾಗಿ ಓಡತೊಡಗಿದರು.
Joshua and all Israel made as if they were beaten before them, and fled by the way of the wilderness.
16 ೧೬ ಆಯಿ ಎಂಬ ಪಟ್ಟಣದವರು ಊರಿನಲ್ಲಿದ್ದ ತಮ್ಮ ಎಲ್ಲಾ ಜನರನ್ನೂ ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ಪಟ್ಟಣವನ್ನು ದೂರವಾಗಿ ಓಡತೊಡಗಿದರು.
All the people who were in the city were called together to pursue after them. They pursued Joshua, and were drawn away from the city.
17 ೧೭ ಆಯಿ ಎಂಬ ಊರಿನಲ್ಲಿಯೂ ಬೇತೇಲಿನಲ್ಲಿಯೂ ಒಬ್ಬ ಗಂಡಸಾದರೂ ಉಳಿಯಲಿಲ್ಲ. ಊರಬಾಗಿಲುಗಳನ್ನು ತೆರೆದು ಬಿಟ್ಟು ಎಲ್ಲರೂ ಇಸ್ರಾಯೇಲ್ಯರನ್ನು ಹಿಂದಟ್ಟುವುದಕ್ಕೋಸ್ಕರ ಹೊರಟರು.
There was not a man left in Ai or Beth El who did not go out after Israel. They left the city open, and pursued Israel.
18 ೧೮ ಯೆಹೋವನು ಯೆಹೋಶುವನಿಗೆ “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಊರಿನ ಕಡೆಗೆ ಚಾಚು; ಆ ಪಟ್ಟಣವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ” ಎನ್ನಲು ಅವನು ಅದನ್ನು ಚಾಚಿದನು.
The LORD said to Joshua, "Stretch out the javelin that is in your hand toward Ai, for I will give it into your hand." Joshua stretched out the javelin that was in his hand toward the city.
19 ೧೯ ಅವನು ಈಟಿಯನ್ನು ಚಾಚಿದ ಕೂಡಲೆ ಹೊಂಚಿನೋಡುತ್ತಿದ್ದವರು ತಾವಿದ್ದ ಸ್ಥಳದಿಂದ ಎದ್ದು ಓಡಿಬಂದು ಪಟ್ಟಣದೊಳಕ್ಕೆ ನುಗ್ಗಿ ಕೂಡಲೆ ಅದಕ್ಕೆ ಬೆಂಕಿ ಹಚ್ಚಿದರು.
The ambush arose quickly out of their place, and they ran as soon as he had stretched out his hand, and entered into the city, and took it. They hurried and set the city on fire.
20 ೨೦ ಆಯಿ ಎಂಬ ಊರಿನ ಜನರು ಹಿಂದಿರುಗಿ ನೋಡಿದಾಗ ಪಟ್ಟಣದ ಹೊಗೆಯು ಆಕಾಶದೆತ್ತರಕ್ಕೆ ಏರಿಹೋಗುವುದನ್ನು ಕಂಡು ಯಾವ ಮಾರ್ಗದಿಂದಲೂ ತಪ್ಪಿಸಿಕೊಳ್ಳಲಾರದೆ ಇದ್ದರು. ಅರಣ್ಯದ ಕಡೆಗೆ ಓಡಿಹೋಗಿದ್ದ ಇಸ್ರಾಯೇಲ್ಯರು ಹಿಂದಟ್ಟುವವರ ಕಡೆಗೆ ತಿರುಗಿದರು.
When the men of Ai looked behind them, they saw, and look, the smoke of the city ascended up to heaven, and they had no power to flee this way or that way. The people who fled to the wilderness turned back on the pursuers.
21 ೨೧ ಯೆಹೋಶುವನೂ ಇಸ್ರಾಯೇಲ್ಯರೂ ಪಟ್ಟಣವು ಹೊಂಚಿ ನೋಡುತ್ತಿದ್ದವರಿಗೆ ಸ್ವಾಧೀನವಾದದ್ದನ್ನೂ, ಹೊಗೆಯು ಆಕಾಶಕ್ಕೆ ಏರಿಹೋಗುತ್ತಿದ್ದದ್ದನ್ನೂ ಕಂಡು ಹಿಂದಿರುಗಿ ಬಂದು ಆಯಿ ಊರಿನ ಜನರನ್ನು ಸಂಹರಿಸಿದರು.
When Joshua and all Israel saw that the ambush had taken the city, and that the smoke of the city ascended, then they turned again, and killed the men of Ai.
22 ೨೨ ಪಟ್ಟಣದೊಳಗೆ ನುಗ್ಗಿದವರೂ ಒಟ್ಟಿಗೆ ಸೇರಿದ್ದರಿಂದ ಆಯಿ ಎಂಬ ಊರಿನವರು ಆ ಕಡೆಯಿಂದಲೂ ಈ ಕಡೆಯಿಂದಲೂ ಇದ್ದ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿಬಿದ್ದರು. ಅವರು ಎಲ್ಲರನ್ನೂ ಕೊಂದು ಹಾಕಿದರು. ಒಬ್ಬನಾದರೂ ಉಳಿಯಲಿಲ್ಲ, ಯಾವನೂ ತಪ್ಪಿಸಿಕೊಳ್ಳಲಿಲ್ಲ.
The others came out of the city against them, so they were in the midst of Israel, some on this side, and some on that side. They struck them, so that they let none of them remain or escape.
23 ೨೩ ಆಯಿ ಎಂಬ ಪಟ್ಟಣದ ಅರಸನನ್ನು ಮಾತ್ರ ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ಕರೆದುಕೊಂಡು ಬಂದರು.
They captured the king of Ai alive, and brought him to Joshua.
24 ೨೪ ಇಸ್ರಾಯೇಲ್ಯರು ತಮ್ಮನ್ನು ಅರಣ್ಯದವರೆಗೂ ಹಿಂದಟ್ಟಿ ಬಂದ ಆಯಿ ಎಂಬ ಊರಿನವರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು.
And it came to pass when Israel had made an end of killing all the inhabitants of Ai in the plains, and on the mountain on the slope, where they pursued them, and they had all fallen by the edge of the sword until they were destroyed, then all Israel returned to Ai and struck it with the edge of the sword.
25 ೨೫ ಆ ದಿನ ಆಯಿ ಎಂಬ ಊರಿನಲ್ಲಿ ಸತ್ತ ಗಂಡಸರ ಮತ್ತು ಹೆಂಗಸರ ಸಂಖ್ಯೆ ಹನ್ನೆರಡು ಸಾವಿರ ಮಂದಿ.
All that fell that day, both of men and women, were twelve thousand, even all the men of Ai.
26 ೨೬ ಪಟ್ಟಣದವರೆಲ್ಲರೂ ಹತರಾಗುವವರೆಗೆ ಯೆಹೋಶುವನು ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ.
For Joshua did not draw back his hand, with which he stretched out the javelin, until he had utterly destroyed all the inhabitants of Ai.
27 ೨೭ ಯೆಹೋವನು ಯೆಹೋಶುವನಿಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಆ ಪಟ್ಟಣದೊಳಗಿಂದ ಪಶು ಪ್ರಾಣಿ ಮೊದಲಾದವುಗಳನ್ನು ಮಾತ್ರ ಕೊಳ್ಳೆಯಾಗಿ ತೆಗೆದುಕೊಂಡರು.
Only the livestock and the spoil of that city Israel took for prey to themselves, according to the word of the LORD which he commanded Joshua.
28 ೨೮ ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಎಂದಿಗೂ ತಿರುಗಿ ಕಟ್ಟಲು ಸಾಧ್ಯವಾಗದಂತೆ ಹಾಳುದಿಬ್ಬವನ್ನಾಗಿ ಮಾಡಿದನು. ಅದು ಇಂದಿನ ವರೆಗೂ ಹಾಗೆಯೇ ಉಳಿದಿದೆ.
So Joshua burnt Ai, and made it a heap forever, even a desolation, to this day.
29 ೨೯ ಆಯಿ ಊರಿನ ಅರಸನನ್ನು ಸಾಯಂಕಾಲದವರೆಗೂ ಮರಕ್ಕೆ ನೇತು ಹಾಕಿಸಿ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಹಾಕಿಸಿದನು. ಅದು ಇಂದಿನ ವರೆಗೂ ಹಾಗೆಯೇ ಇದೆ.
He hanged the king of Ai on a tree until the evening, and at the sundown Joshua commanded, and they took his body down from the tree, and threw it at the entrance of the gate of the city, and raised a great heap of stones on it that remains to this day.
30 ೩೦ ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು. ಉಳಿಯು ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು
Then Joshua built an altar to the LORD, the God of Israel, on Mount Ebal,
31 ೩೧ ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.
as Moses the servant of the LORD commanded the children of Israel, as it is written in the book of the law of Moses, "an altar of uncut stones, on which no man has touched with an iron tool." They offered burnt offerings on it to the LORD, and sacrificed peace offerings.
32 ೩೨ ಯೆಹೋಶುವನು ಅಲ್ಲಿದ್ದ ಕಲ್ಲುಗಳ ಮೇಲೆ ಜನರೆಲ್ಲರ ಸಮಕ್ಷಮದಲ್ಲಿ ಮೋಶೆಯ ಧರ್ಮಶಾಸ್ತ್ರದ ಒಂದು ಪ್ರತಿಯನ್ನು ಬರೆದನು.
He wrote there on the stones a copy of the Law of Moses, which he wrote in the presence of the children of Israel.
33 ೩೩ ಎಲ್ಲಾ ಇಸ್ರಾಯೇಲ್ಯರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಪರದೇಶದವರೂ ಹಾಗೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ, ಏಬಾಲ್ ಬೆಟ್ಟದ ಕಡೆ ಅರ್ಧ ಜನರೂ, ಹೀಗೆ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವುದಕ್ಕೋಸ್ಕರ ನಿಂತರು.
All Israel, and their elders and officers, and their judges, stood on this side of the ark and on that side before the priests the Levites, who carried the ark of the LORD's covenant, the foreigner as well as the native; half of them in front of Mount Gerizim, and half of them in front of Mount Ebal, as Moses the servant of the LORD had commanded at the first, that they should bless the children of Israel.
34 ೩೪ ಅನಂತರ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಅಶೀರ್ವಾದದ ವಾಕ್ಯಗಳನ್ನು ಹಾಗೂ ಶಾಪವಾಕ್ಯಗಳನ್ನು ಆ ಗ್ರಂಥದಲ್ಲಿ ಇದ್ದ ಹಾಗೆಯೇ ಓದಿದನು.
Afterward he read all the words of the law, the blessing and the curse, according to all that is written in the book of the law.
35 ೩೫ ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಹೆಂಗಸರಿಗೂ, ಚಿಕ್ಕವರಿಗೂ, ಪರದೇಶದವರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಅದನ್ನು ಓದಿದನು.
There was not a word of all that Moses commanded, which Joshua did not read before all the assembly of Israel, with the women, the little ones, and the foreigners who were among them.