< ಯೆಹೋಶುವನು 9 >
1 ೧ ಯೊರ್ದನ್ ನದಿಯ ಆಚೆಗಿರುವ ಬೆಟ್ಟದ ಮೇಲಿನ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು ಹಾಗೂ
Afei, ahemfo a wɔwɔ Yordan atɔe fam no nyinaa tee nsɛm a asisi. Eyinom ne Hetifo, Amorifo, Kanaanfo, Perisifo, Hewifo ne Yebusifo ahemfo a na wɔtete mmepɔw nsase a ɛwɔ atɔe fam mmepɔw no ase ne Po Kɛse no mpoano kosi Lebanon atifi fam mmepɔw no so tɔnn.
2 ೨ ಒಂದೇ ಮನಸ್ಸಿನಿಂದ ಯೆಹೋಶುವನಿಗೂ ಇಸ್ರಾಯೇಲ್ಯರಿಗೂ ವಿರೋಧವಾಗಿ ಯುದ್ಧಮಾಡುವುದಕ್ಕೆ ಕೂಡಿಕೊಂಡರು.
Saa ahemfo yi boaa wɔn nsraadɔm ano ntɛm so sɛ wɔbɛko atia Yosua ne Israelfo.
3 ೩ ಯೆರಿಕೋವಿನವರನ್ನೂ ಮತ್ತು ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯು ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು
Nanso Gibeonfo tee asɛm a ato Yeriko ne Ai no,
4 ೪ ಅವರು ಒಂದು ಉಪಾಯವನ್ನು ಮಾಡಿದರು. ಅದೇನೆಂದರೆ ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿ ತಟ್ಟುಗಳನ್ನು ಹಾಕಿ, ಅವುಗಳ ಮೇಲೆ ತೇಪೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿದರು,
wɔfaa nnaadaa kwan so de gyee wɔn ho nkwa. Wɔsomaa ananmusifo kɔɔ Yosua nkyɛn. Wɔde nkotoku a atetew ne mmoa nhoma nsa nkotoku a ayɛ dedaw na wɔatetare mu soaa wɔn mfurum.
5 ೫ ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.
Wɔhyehyɛɛ ntade dedaw ne mpaboa a akyɛ na wɔapempam. Afei wɔfaa brodo a abɔ ntuw sɛ wɔn aduan.
6 ೬ ತಾವು ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಾಯೇಲ್ಯರಿಗೂ “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಬೇಕು” ಎಂದು ಕೇಳಿ ಕೊಂಡರು.
Woduu Israelfo atenae wɔ Gilgal no, wɔka kyerɛɛ Yosua ne Israel mmarima no se, “Yefi akyirikyiri man bi so na aba rebɛsrɛ mo sɛ mo ne yɛn nyɛ asomdwoe apam.”
7 ೭ ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ “ಬಹುಶಃ ನೀವು ನಮ್ಮ ದೇಶದ ನಿವಾಸಿಗಳೇ ಆಗಿರಬಹುದು. ಹೀಗಿರುವುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಕೊಟ್ಟರು.
Israelfo no buaa saa Hewifo yi sɛ, “Ɛbɛyɛ dɛn na yɛahu sɛ monnte mmɛn ha? Efisɛ sɛ ɛte saa a, yɛrentumi ne mo nnyɛ apam.”
8 ೮ ಅವರು ಯೆಹೋಶುವನಿಗೆ “ನಾವು ನಿಮ್ಮ ದಾಸರು” ಎಂದರು. ಯೆಹೋಶುವನು ಅವರನ್ನು “ನೀವು ಯಾರು? ಎಲ್ಲಿಯವರು?” ಎಂದು ವಿಚಾರಿಸಿದನು.
Wobuae se, “Yɛbɛyɛ mo asomfo.” Yosua bisaa wɔn se, “Moyɛ ɛhefo na mufi he?”
9 ೯ ಅವರು “ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಯೆಹೋವನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನು ಕೇಳಿದ್ದಾರೆ.
Wobuaa se, “Yefi akyirikyiri asase bi so. Yɛate Awurade, mo Nyankopɔn no kɛseyɛ ne nea ɔyɛɛ wɔ Misraim nyinaa.
10 ೧೦ ಹೆಷ್ಬೋನಿನ ಅರಸನಾದ ಸೀಹೋನ್, ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಎಂಬ ಈ ಇಬ್ಬರು ಅಮೋರಿಯರ ಅರಸರಿಗೆ ಯೆಹೋವನು ಮಾಡಿದ್ದೆಲ್ಲವನ್ನೂ ಕೇಳಿದ್ದಾರೆ.
Afei yɛate nea ɔyɛɛ Amorifo ahemfo baanu wɔ Asubɔnten Yordan apuei fam, Hesbonhene Sihon ne Basanhene Og (a ɔtenaa Astarot no).
11 ೧೧ ‘ನೀವು ಪ್ರಯಾಣಕ್ಕೋಸ್ಕರ ಬುತ್ತೀ ಕಟ್ಟಿಕೊಂಡು ಹೋಗಿ ಇಸ್ರಾಯೇಲ್ಯರನ್ನು ಎದುರುಗೊಂಡು “ನಾವು ನಿಮ್ಮ ಸೇವಕರು”, ನೀವು ನಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳಬೇಕು ಎಂಬುದಾಗಿ ಅವರನ್ನು ಬೇಡಿಕೊಳ್ಳಿರಿ ಎಂದು ಹೇಳಿ ನಮ್ಮನ್ನು ಕಳುಹಿಸಿದರು.
Ɛno nti, yɛn mpanyimfo ne ɔmanfo no ka kyerɛɛ yɛn ɔhyɛ so sɛ, ‘Munsiesie mo ho mma akwantu tenten. Munkohyia Israelfo na mompae mu nka se “Yɛn nkurɔfo bɛyɛ wɔn asomfo na mompere asomdwoe.”’
12 ೧೨ ನಾವು ನಿಮ್ಮನ್ನು ಎದುರುಗೊಳ್ಳುವುದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೋಸ್ಕರ ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು. ಈಗ ಒಣಗಿ ಚೂರುಚೂರಾಗಿದೆ ನೋಡಿರಿ.
Yɛresi mu no, na brodo yi yɛ hyerehyere a efi fonoo mu. Nanso sɛnea muhu no, akyenkyen na abɔ ntuw.
13 ೧೩ ನಾವು ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸದಾಗಿದ್ದವು; ಈಗ ಹರಿದುಹೋಗಿವೆ. ನಮ್ಮ ಬಟ್ಟೆಬರೆಗಳು ಹಾಗೂ ಕೆರಗಳು ದೀರ್ಘಪ್ರಯಾಣದಿಂದ ಸವೆದುಹೋಗಿವೆ’” ಎಂದು ವಿವರಿಸಿದರು.
Saa mmoa nhoma nsa nkotoku yi, bere a yɛde nsa guu mu no na ɛyɛ foforo, nanso mprempren, apaapae ayɛ dedaw. Na yɛn ntade ne mpaboa nso, esiane akwantu tenten nti, atetew.”
14 ೧೪ ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.
Enti Israelfo no hwehwɛɛ wɔn brodo no ho nanso wɔammisa Awurade.
15 ೧೫ ಯೆಹೋಶುವನು ಅವರೊಡನೆ “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿ ಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಹಾಗೆಯೇ ಪ್ರಮಾಣ ಮಾಡಿದರು. ಜನರ ಪ್ರಧಾನರೂ ಪ್ರಮಾಣಮಾಡಿದರು.
Yosua kɔɔ so ne wɔn yɛɛ asomdwoe apam no na Israel mpanyimfo no kekaa ntam a emu yɛ den nam so gye too mu.
16 ೧೬ ಈ ಒಪ್ಪಂದವಾದ ಮೂರು ದಿನಗಳ ಮೇಲೆ ಅವರು ತಮ್ಮ ನೆರೆಯವರೆಂದು ತಮ್ಮ ಮಧ್ಯದಲ್ಲಿಯೇ ವಾಸಿಸುವವರೆಂದು ಇಸ್ರಾಯೇಲ್ಯರಿಗೆ ಗೊತ್ತಾಯಿತು.
Nnansa akyi no, nokware no daa adi sɛ saa nnipa a wɔyɛ Gibeonfo no te bɛn.
17 ೧೭ ಹೇಗೆಂದರೆ ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.
Enti Israelfo no anna so koraa na wɔyɛɛ sɛ wɔbɛyɛ nhwehwɛmu. Nnansa akyi no woduu wɔn nkurow no so. Saa nkurow no ne Gibeon, Kefira, Beerot ne Kiriat-Yearim.
18 ೧೮ ಸಭೆಯ ನಾಯಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣಮಾಡಿದ್ದರಿಂದ ಇಸ್ರಾಯೇಲ್ಯರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರು ತಮ್ಮ ನಾಯಕರಿಗೆ ವಿರೋಧವಾಗಿ ಗೊಣಗಾಡಿದರು.
Nanso Israelfo no antow anhyɛ nkurow no so, efisɛ na wɔn mpanyimfo aka ntam akyerɛ Awurade, Israel Nyankopɔn. Esiane Apam no nti, Israelfo no nwiinwii hyɛɛ wɔn mpanyimfo no.
19 ೧೯ ಆಗ ನಾಯಕರೆಲ್ಲರು ಸಭೆಯ ಎಲ್ಲಾ ಸದಸ್ಯರಿಗೆ “ನಾವು ಇಸ್ರಾಯೇಲರ ದೇವರಾದ ಯೆಹೋವನ ಹೆಸರಿನಲ್ಲಿ ಅವರಿಗೆ ಪ್ರಮಾಣ ಮಾಡಿದ್ದರಿಂದ ಅವರನ್ನು ಮುಟ್ಟಲಾಗದು.
Na mpanyimfo no buae se, “Yɛaka ntam wɔ Awurade, Israel Nyankopɔn anim. Yɛrentumi mfa yɛn nsa nka wɔn.
20 ೨೦ ನಾವು ಇಟ್ಟ ಆಣೆಯ ನಿಮಿತ್ತ ದೇವರ ಕೋಪವು ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದುಳಿಸಬೇಕು. ನಾವು ಹೀಗೆ ಮಾಡೋಣ, ಅವರನ್ನು ಜೀವದಿಂದ ಉಳಿಸಿ ಬಿಟ್ಟುಬಿಡೋಣ
Ɛsɛ sɛ yɛma wɔtena. Sɛ yebu yɛn ntam no so a, Onyankopɔn bo befuw yɛn.
21 ೨೧ ಅವರು ಸಮೂಹಕ್ಕೆಲ್ಲಾ ಕಟ್ಟಿಗೆ ಸೀಳುವವರೂ ನೀರು ಹೊರುವವರೂ ಆಗಿರಲಿ” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು.
Momma wɔntena. Nanso, yɛbɛma wɔabu nnua, akɔ asu ama asafo no nyinaa.” Enti Israelfo no dii bɔ a wɔahyɛ Gibeonfo no so.
22 ೨೨ ಯೆಹೋಶುವನು ಗಿಬ್ಯೋನ್ಯರನ್ನು ಕರೆಸಿ ಅವರಿಗೆ “ನೀವು ನಮ್ಮ ಮಧ್ಯದಲ್ಲಿ ವಾಸಿಸುವವರಾಗಿದ್ದರೂ ಬಹು ದೂರದವರೆಂದು ಹೇಳಿ ನಮ್ಮನ್ನು ವಂಚಿಸಿದ್ದೇಕೆ?
Na Yosua frɛɛ Gibeonfo mpanyimfo no bisaa wɔn se, “Adɛn nti na mutwaa atoro kyerɛɛ yɛn? Adɛn nti na mokaa se mote akyirikyiri asase so wɔ bere a mote yɛn mu pɛɛ?
23 ೨೩ ಇದರಿಂದ ನೀವು ಶಾಪಗ್ರಸ್ತರು! ನೀವು ಯಾವಾಗಲೂ ದಾಸರಾಗಿದ್ದು ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಹೊಡೆಯುವವರೂ ನೀರುತರುವವರೂ ಆಗಿರಬೇಕು” ಎಂದನು.
Nnome mmra mo so! Efi nnɛ rekɔ, mubebu nnua, atwe nsu de akɔ me Nyankopɔn fi.”
24 ೨೪ ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.
Wobuaa Yosua se, “Yɛyɛɛ saa, efisɛ wɔka kyerɛɛ yɛn se, Awurade, mo Nyankopɔn hyɛɛ ne somfo Mose sɛ ɔmmɛko nni saa asase yi nyinaa so na ɔnsɛe nnipa a wɔte so nyinaa. Yesuroo sɛ mubekunkum yɛn. Ɛno nti na ɛma yɛyɛɛ saa.
25 ೨೫ ಇಗೋ, ಈಗ ನಾವು ನಿನ್ನ ಕೈಯಲ್ಲಿದ್ದೇವೆ; ನಿನಗೆ ಯಾವುದು ಒಳ್ಳೆಯದು, ನ್ಯಾಯವಾದುದ್ದು ಎಂದು ತೋರುತ್ತದೋ ಅದರಂತೆ ನಮಗೆ ಮಾಡು” ಎಂದು ಉತ್ತರಕೊಟ್ಟರು.
Mprempren yɛdan mo. Nea mususuw sɛ eye ma mo biara no, monyɛ.”
26 ೨೬ ಯೆಹೋಶುವನು ತಾನು ಮೊದಲು ಹೇಳಿದಂತೆಯೇ ಮಾಡಿದನು. ಅವನು ಅವರನ್ನು ಇಸ್ರಾಯೇಲ್ಯರ ಕೈಯಿಂದ ಹತರಾಗದಂತೆ ತಪ್ಪಿಸಿದನು.
Yosua amma Israelfo no ankum wɔn.
27 ೨೭ ಇಸ್ರಾಯೇಲ್ಯರಿಗಾಗಿ ಯೆಹೋವನು ಆರಿಸಿಕೊಂಡ ಸ್ಥಳದಲ್ಲಿ ಕಟ್ಟಲಾಗುವ ಆತನ ಯಜ್ಞವೇದಿಗೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ಹೊರುವವರನ್ನಾಗಿ ಅವರನ್ನು ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸವನ್ನು ಮಾಡಿಕೊಂಡು ಇಸ್ರಾಯೇಲ್ಯರೊಂದಿಗಿದ್ದಾರೆ.
Na ɛda no, ɔmaa Gibeonfo no yɛɛ nnuabufo ne asukɔfo maa Israelfo ne Awurade afɔremuka no wɔ baabiara a Awurade bɛka sɛ wonsi no no. Saa nhyehyɛe no wɔ hɔ de besi nnɛ.