< ಯೆಹೋಶುವನು 1 >
1 ೧ ಯೆಹೋವನ ಸೇವಕನಾದ ಮೋಶೆಯ ಮರಣದ ನಂತರ ಯೆಹೋವನು ಮೋಶೆಯ ಸೇವಕನಾದ ನೂನನ ಮಗನಾದ ಯೆಹೋಶುವನಿಗೆ
১সদাপ্রভুর দাস মোশির মৃত্যু হবার পর সদাপ্রভু নূনের পুত্র যিহোশূয় নামে মোশির প্রধান পরিচারককে বললেন,
2 ೨ “ನನ್ನ ಸೇವಕನಾದ ಮೋಶೆ ಸತ್ತನು; ನೀನು ಈಗ ಹೊರಟು ಸಮಸ್ತ ಇಸ್ರಾಯೇಲ್ ಜನರೊಂದಿಗೆ ಈ ಯೊರ್ದನ್ ನದಿಯನ್ನು ದಾಟಿ, ನಾನು ಅವರಿಗೆ ಕೊಡುವ ದೇಶಕ್ಕೆ ಹೋಗು.
২“আমার দাস মোশির মৃত্যু হয়েছে; এখন ওঠ, তুমি এই সমস্ত লোকদের নিয়ে এই যর্দ্দন নদী পার হও এবং তাদেরকে, অর্থাৎ ইস্রায়েল-সন্তানদের আমি যে দেশ দেব, সেই দেশে যাও।
3 ೩ ನಾನು ಮೋಶೆಗೆ ವಾಗ್ದಾನ ಮಾಡಿದಂತೆ ನೀವು ಕಾಲಿಡುವ ಸ್ಥಳಗಳನ್ನೆಲ್ಲಾ ನಿಮಗೆ ಕೊಟ್ಟಿದ್ದೇನೆ.
৩সে সমস্ত স্থানে তোমরা যাতায়াত করবে, আমি মোশিকে যেমন বলেছিলাম, সেই অনুযায়ী সেই সমস্ত স্থান তোমাদেরকে দিয়েছি।
4 ೪ ಅರಣ್ಯಗಳು ಹಾಗೂ ಈ ಲೆಬನೋನ್ ಪರ್ವತದಿಂದ ಮೊದಲುಗೊಂಡು ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು; ನಿಮ್ಮ ಸೀಮೆಯು ಪಶ್ಚಿಮದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು.
৪মরুভূমি ও এই লিবানোন থেকে মহানদী, ফরাৎ নদী পর্যন্ত হিত্তীয়দের সমস্ত দেশ এবং সূর্য্যের অস্ত যাওয়ার দিকে মহাসমুদ্র পর্যন্ত তোমাদের সীমা হবে।
5 ೫ ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.
৫তোমার সমস্ত জীবনকালে কেউ তোমার সামনে দাঁড়াতে পারবে না; আমি যেমন মোশির সঙ্গে সঙ্গে ছিলাম, তেমনই তোমারও সঙ্গে সঙ্গে থাকব; আমি তোমাকে একা ছাড়ব না বা তোমাকে ত্যাগ করব না।
6 ೬ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.
৬বলবান হও ও সাহস কর; কারণ যে দেশ দিতে এদের পিতৃপুরুষদের কাছে আমি শপথ করেছি, তা তুমি এই লোকদেরকে অধিকার করাবে।
7 ೭ ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.
৭তুমি বলবান ও সাহসী হও; আমার দাস মোশি তোমাকে যে ব্যবস্থা আদেশ করেছে, তুমি সেই সমস্ত যত্নের সঙ্গে পালন কর, সেই সমস্ত থেকে ডান দিকে কিম্বা বাঁ দিকে যেও না, যেন তুমি যে কোন স্থানে যাও, সেখানে সফল হও।
8 ೮ ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.
৮তোমার মুখ থেকে এই ব্যবস্থার বই প্রস্থান না করুক; এর মধ্যে যা কিছু লেখা আছে, যত্নের সঙ্গে, সেই সমস্ত অনুযায়ী কাজ করার মাধ্যমে তুমি দিন রাত তা গভীরভাবে ধ্যান কর, কারণ তা করলে তুমি বৃদ্ধি পাবে ও সফল হবে।
9 ೯ ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.
৯আমি কি তোমাকে আজ্ঞা দিই নাই? তুমি বলবান হও ও সাহস কর, ত্রাসযুক্ত কি নিরাশ হয়ো না; কেননা তুমি যে কোন স্থানে যাও, সেই স্থানে তোমার ঈশ্বর সদাপ্রভু তোমার সহবর্ত্তী।
10 ೧೦ ಆಗ ಯೆಹೋಶುವನು ಜನರ ಅಧಿಕಾರಿಗಳಿಗೆ
১০তখন যিহোশূয় লোকদের অধ্যক্ষগণকে আজ্ঞা করলেন,
11 ೧೧ “ನೀವು ಪಾಳೆಯದ ಎಲ್ಲೆಡೆಗೆ ಹೋಗಿ ನಿಮ್ಮ ಜನರಿಗೆ ‘ನೀವು ಇನ್ನು ಮೂರು ದಿನಗಳಲ್ಲಿ ಈ ಯೊರ್ದನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ದೇಶವನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ’ ಎಂದು ತಿಳಿಸಿರಿ” ಅಂದನು.
১১তোমরা শিবিরের মধ্য দিয়ে যাও, লোকদিগকে এই কথা বল, তোমরা আপনাদের জন্য পাথেয় সামগ্রী প্রস্তুত কর; কেননা তোমাদের ঈশ্বর সদাপ্রভু অধিকারার্থে তোমাদেরকে যে দেশ দিচ্ছেন, সেই দেশে প্রবেশ করে তা অধিকার করার জন্য তিন দিনের র মধ্যে তোমাদেরকে এই যর্দ্দন পার হয়ে যেতে হবে।
12 ೧೨ ಬಳಿಕ ಯೆಹೋಶುವನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಹೇಳಿದ್ದೇನಂದರೆ
১২পরে যিহোশূয় রূবেণীয়দিগকে, গাদীয়দিগকে ও মনঃশির অর্দ্ধ বংশকে বললেন,
13 ೧೩ “ಯೆಹೋವನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟು ವಿಶ್ರಾಂತಿ ನೀಡಿದ್ದಾನೆ.
১৩সদাপ্রভুর দাস মোশি তোমাদেরকে যে আজ্ঞা দিয়েছিলেন, তা স্মরণ কর; তিনি বলেছিলেন, তোমাদের ঈশ্বর সদাপ্রভু তোমাদেরকে বিশ্রাম দিচ্ছেন, আর এই দেশ তোমাদেরকে দেবেন।
14 ೧೪ ನಿಮ್ಮ ಹೆಂಡತಿ ಮಕ್ಕಳು, ನಿಮ್ಮ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ವಾಸವಾಗಿರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ಹೊಳೆದಾಟಿ ಅವರಿಗೆ ಸಹಾಯಮಾಡಬೇಕು.
১৪মোশির যর্দ্দনের পূর্ব্বপারে তোমাদেরকে যে দেশ দিয়েছেন, তোমাদের স্ত্রীলোক, বালকবালিকা ও পশুগণ সেই দেশে থাকবে; কিন্তু তোমরা, সমস্ত বলবান্ বীর, সসজ্জ হয়ে তোমাদের ভ্রাতৃগণের আগে আগে পার হয়ে যাবে ও তাহাদের সাহায্য করবে।
15 ೧೫ ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿ ಹೊಂದಿದ ನಂತರ ನಿಮ್ಮ ಸ್ವಂತ ದೇಶಕ್ಕೆ ಹಿಂತಿರುಗಿ, ಮೋಶೆಯು ನಿಮಗೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವತ್ತಾಗಿ ಕೊಟ್ಟ ದೇಶವನ್ನು ಸ್ವಾಧೀನಪಡಿಸಿಕೊಂಡು ಅದನ್ನು ಅನುಭವಿಸುವಿರಿ” ಎಂದನು.
১৫পরে যখন সদাপ্রভু তোমাদের মত তোমাদের ভাইদের বিশ্রাম দেবেন, অর্থাৎ তোমাদের ঈশ্বর সদাপ্রভু তাদেরকে যে দেশ দিচ্ছেন, তারাও যখন সেই দেশ অধিকার করবে, তখন তোমরা যর্দ্দনের পূর্বদিকে সূর্যোদয়ের দিকে যা সদাপ্রভুর দাস মোশি দিয়েছিলেন, সেখানে ফিরে গিয়ে তা অধিকার করবে।”
16 ೧೬ ಆಗ ಅವರು ಯೆಹೋಶುವನಿಗೆ ಉತ್ತರವಾಗಿ “ನೀನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುತ್ತೇವೆ; ಎಲ್ಲಿಗೆ ಕಳುಹಿಸಿದರೂ ಹೋಗುತ್ತೇವೆ.
১৬তারা যিহোশূয়কে বলল, “আপনি আমাদেরকে যা কিছু আজ্ঞা করেছেন, সে সমস্তই আমরা করব; আপনি আমাদের যে কোন জায়গায় পাঠাবেন, সেই জায়গায় আমরা যাব।
17 ೧೭ ನಾವು ಮೋಶೆಯ ಎಲ್ಲಾ ಮಾತುಗಳಿಗೆ ವಿಧೇಯರಾದ ಹಾಗೆ ನಿನ್ನ ಮಾತುಗಳಿಗೂ ವಿಧೇಯರಾಗುವೆವು. ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.
১৭আমরা সমস্ত বিষয়ে যেমন মোশির কথা শুনতাম, তেমনি আপনার কথাও শুনব; শুধুমাত্র আপনার ঈশ্বর সদাপ্রভু যেমন মোশির সঙ্গে সঙ্গে ছিলেন, তেমনি আপনারও সঙ্গে সঙ্গে থাকুন।
18 ೧೮ ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯ ಮಾಡಿದರೆ ನಿನ್ನ ವಿಧಿಗಳಿಗೆ ವಿರುದ್ಧವಾಗಿ ನಡೆದರೆ ಮರಣದಂಡನೆಗೆ ಗುರಿಯಾಗತಕ್ಕವನು; ಆದುದರಿಂದ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು” ಎಂದು ಹೇಳಿದರು.
১৮যে কেউ আপনার আজ্ঞার বিরুদ্ধে যাবে এবং আপনার আজ্ঞার অবাধ্য হবে, তাঁর প্রাণদণ্ড হবে, আপনি শুধু বলবান হন ও সাহস করুন।”