< ನ್ಯಾಯಸ್ಥಾಪಕರು 10 >
1 ೧ ಅಬೀಮೆಲೆಕನ ಮರಣದ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ, ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸಿವುದಕ್ಕೋಸ್ಕರ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸವಾಗಿದ್ದನು.
And there arose, after Abimelech, to save Israel—Tola son of Puah son of Dodo, a man of Issachar, —and, he, used to sit in Shamir, in the hill country of Ephraim;
2 ೨ ಇಪ್ಪತ್ತಮೂರು ವರ್ಷಗಳವರೆಗೆ ಇಸ್ರಾಯೇಲರನ್ನು ಪಾಲಿಸಿದ ನಂತರ, ಅವನು ಸತ್ತು ಶಾಮೀರಿನಲ್ಲಿ ಹೂಣಲ್ಪಟ್ಟನು.
and he judged Israel, twenty-three years, —and died, and was buried in Shamir.
3 ೩ ತೋಲನ ಮರಣದ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರ್ಷ ಪಾಲಿಸಿದನು.
And there arose, after him, Jair the Gileadite, —and judged Israel twenty-two years.
4 ೪ ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ, ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನ ವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.
Now he had thirty sons, that rode on thirty ass colts, and they had, thirty cities, —they are called Havvoth-jair, until this day, which are in the land of Gilead.
5 ೫ ಯಾಯೀರನು ಸತ್ತು ಕಾಮೋನಿನಲ್ಲಿ ಹೂಣಲ್ಪಟ್ಟನು.
And Jair died, and was buried in Kamon.
6 ೬ ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.
And the sons of Israel again did the thing that was wicked in the sight of Yahweh, and served the Baals and the Ashtoreths, and the gods of Syria, and the gods of Zidon, and the gods of Moab, and the gods of the sons of Ammon, and the gods of the Philistines, —and forsook Yahweh, and served him not.
7 ೭ ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.
So the anger of Yahweh kindled upon Israel, —and he sold them into the hand of the Philistines, and into the hand of the sons of Ammon;
8 ೮ ಇವರು ಅಂದಿನಿಂದ ಹದಿನೆಂಟು ವರ್ಷಗಳ ವರೆಗೆ ಯೊರ್ದನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಾಯೇಲರನ್ನು ಬಹಳವಾಗಿ ಪೀಡಿಸುತ್ತಾ, ಕುಗ್ಗಿಸುತ್ತಾ ಇದ್ದರು. ಈ ದೇಶವು ಮೊದಲು ಅಮೋರಿಯರದಾಗಿತ್ತು.
and they enfeebled and oppressed the sons of Israel in that year, —eighteen years, did they this unto all the sons of Israel who were beyond the Jordan, in the land of the Amorites, that was in Gilead.
9 ೯ ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ, ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲರಿಗೆ ಬಹಳ ಕಷ್ಟವಾಯಿತು.
And the sons of Ammon crossed the Jordan, to fight, even against Judah and against Benjamin, and against the house of Ephraim, —so that Israel was sore distressed.
10 ೧೦ ಆಗ ಅವರು ಯೆಹೋವನಿಗೆ, “ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು, ಬಾಳನ ಪ್ರತಿಮೆಗಳನ್ನು ಪೂಜಿಸಿ, ನಿನಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಮೊರೆಯಿಟ್ಟರು.
Then did the sons of Israel make outcry unto Yahweh, saying, —We have sinned against thee, because we have forsaken our God, and have served the Baals.
11 ೧೧ ಆತನು ಅವರಿಗೆ, “ಐಗುಪ್ತ, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ, ಚೀದೋನ್ಯ, ಅಮಾಲೇಕ್ಯ, ಮಾವೋನ್ಯ ಇವೇ
Then said Yahweh unto the sons of Israel, —Was it not, from the Egyptians, and from the Amorites, and from the sons of Ammon, and from the Philistines, [that I saved you]?
12 ೧೨ ಮೊದಲಾದ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವರಿಂದ ನಿಮ್ಮನ್ನು ಬಿಡಿಸಿದರೂ
The Zidonians also, and the Amalekites, and the Maonites, oppressed you, —and ye made outcry unto me, and I saved you out of their hand.
13 ೧೩ ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.
Yet have, ye, forsaken me, and served other gods, —therefore will I not again save you.
14 ೧೪ ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ” ಅಂದನು.
Go and make outcry unto the gods whom ye have chosen, —they, must save you, in the time of your tribulation.
15 ೧೫ ಅವರು ತಿರುಗಿ ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ; ನಿನಗೆ ಸರಿಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು” ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದು ಹಾಕಿ ಯೆಹೋವನನ್ನು ಸೇವಿಸುವವರಾದರು.
And the sons of Israel said unto Yahweh—We have sinned, do, thou, with us, according to all that is fitting in thine eyes, —only rescue us, we beseech thee this day.
16 ೧೬ ಆಗ ಆತನ ಮನಸ್ಸು ಇಸ್ರಾಯೇಲರ ಸಂಕಟದ ನಿಮಿತ್ತ ಬಹಳವಾಗಿ ನೊಂದಿತು.
And they put away the gods of the stranger out of their midst, and served Yahweh, —and his soul was impatient of the misery of Israel.
17 ೧೭ ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಳ್ಳಲು ಇಸ್ರಾಯೇಲರು ಸೇರಿ ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.
Now the sons of Ammon were called out, and they encamped in Gilead, —and the sons of Israel assembled themselves together, and encamped in Mizpah.
18 ೧೮ ಗಿಲ್ಯಾದಿನ ಜನರೂ ಅಧಿಪತಿಗಳೂ, “ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕುವವನು ಯಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡುವೆವು” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
Then said the people, the princes of Gilead, one to another, Who is the man that will begin to fight against the sons of Ammon? he shall become head to all the inhabitants of Gilead.