< ನ್ಯಾಯಸ್ಥಾಪಕರು 11 >

1 ಗಿಲ್ಯಾದ್ಯನಾದ ಯೆಪ್ತಾಹನು ಮಹಾಪರಾಕ್ರಮಿಯಾಗಿದ್ದನು. ಅವನು ಗಿಲ್ಯಾದನಿಂದ ಒಬ್ಬ ವೇಶ್ಯೆಗೆ ಹುಟ್ಟಿದವನು.
Jefté, el Galaadita, era un hombre de gran valor. Era hijo de una prostituta. Galaad fue el padre de Jefté.
2 ಗಿಲ್ಯಾದನಿಗೆ ಹೆಂಡತಿಗೂ ಮಕ್ಕಳು ಹುಟ್ಟಿದ್ದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
La mujer de Galaad le dio hijos. Cuando los hijos de su mujer crecieron, expulsaron a Jefté y le dijeron: “No heredarás en la casa de nuestro padre, porque eres hijo de otra mujer”.
3 ಅವನು ತನ್ನ ಸಹೋದರರನ್ನು ಬಿಟ್ಟು ಟೋಬ್ ದೇಶಕ್ಕೆ ಹೋಗಲು ಅಲ್ಲಿನ ಕಾಕಪೋಕರು ಕೂಡಿ ಅವನನ್ನು ಹಿಂಬಾಲಿಸಿದರು.
Entonces Jefté huyó de sus hermanos y vivió en la tierra de Tob. Los forajidos se unieron a Jefté y salieron con él.
4 ಸ್ವಲ್ಪಕಾಲದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಅವರ ಮೇಲೆ ಯುದ್ಧವನ್ನು ಪ್ರಾರಂಭಿಸಿದರು.
Después de un tiempo, los hijos de Amón hicieron la guerra contra Israel.
5 ಆಗ ಗಿಲ್ಯಾದಿನ ಹಿರಿಯರು ಯೆಪ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರುವುದಕ್ಕಾಗಿ ಅಲ್ಲಿಗೆ ಹೋದರು.
Cuando los hijos de Amón hicieron la guerra contra Israel, los ancianos de Galaad fueron a sacar a Jefté de la tierra de Tob.
6 ಅವರು ಅವನಿಗೆ, “ನಾವು ಅಮ್ಮೋನಿಯರೊಡನೆ ಯುದ್ಧಮಾಡುವ ಹಾಗೆ ನೀನು ಬಂದು ನಮ್ಮ ನಾಯಕನಾಗು” ಎಂದು ಬೇಡಿಕೊಂಡರು.
Le dijeron a Jefté: “Ven y sé nuestro jefe, para que luchemos contra los hijos de Amón”.
7 ಅವನು ಅವರಿಗೆ, “ನನ್ನನ್ನು ಹಗೆಮಾಡಿ, ನನ್ನ ತಂದೆಯ ಮನೆಯಿಂದ ಓಡಿಸಿಬಿಟ್ಟವರು ನೀವೇ ಅಲ್ಲವೋ? ನಿಮಗೆ ಕಷ್ಟ ಬಂದಾಗ ನನ್ನ ಬಳಿಗೆ ಯಾಕೆ ಬಂದಿರಿ?” ಎನ್ನಲು
Jefté dijo a los ancianos de Galaad: “¿No me odiasteis y me expulsasteis de la casa de mi padre? ¿Por qué habéis venido a mí ahora que estáis en apuros?”
8 ಅವರು, “ಆದುದರಿಂದಲೇ ಈಗ ತಿರುಗಿ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವುದಾದರೆ ಗಿಲ್ಯಾದಿನವರಿಗೆಲ್ಲಾ ನೀನೇ ನಾಯಕನಾಗಿರುವಿ” ಎಂದು ಹೇಳಿದರು.
Los ancianos de Galaad dijeron a Jefté: “Por eso nos hemos vuelto a ti ahora, para que vayas con nosotros y luches contra los hijos de Amón. Tú serás nuestro jefe sobre todos los habitantes de Galaad”.
9 ಆಗ ಯೆಪ್ತಾಹನು ಅವರಿಗೆ, “ನೀವು ನನ್ನನ್ನು ಅಮ್ಮೋನಿಯರೊಡನೆ ಯುದ್ಧಮಾಡುವುದಕ್ಕೋಸ್ಕರ ಕರೆದುಕೊಂಡು ಹೋಗುವಲ್ಲಿ ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟರೆ ನಿಜವಾಗಿ ನನ್ನನ್ನು ಅಧಿಪತಿಯನ್ನಾಗಿ ಮಾಡುವಿರೋ?” ಎಂದು ಕೇಳಲು
Jefté dijo a los ancianos de Galaad: “Si me lleváis de nuevo a casa para luchar contra los hijos de Amón, y Yahvé los libra antes que yo, ¿seré yo vuestro jefe?”
10 ೧೦ ಅವರು ಅವನಿಗೆ, “ಹಾಗೆಯೇ ಮಾಡುವೆವು; ನಮ್ಮಿಬ್ಬರ ಈ ಮಾತುಗಳಿಗೆ ಯೆಹೋವನೇ ಸಾಕ್ಷಿ” ಎಂದು ಉತ್ತರಕೊಟ್ಟರು.
Los ancianos de Galaad dijeron a Jefté: “Yahvé será testigo entre nosotros. Ciertamente haremos lo que dices”.
11 ೧೧ ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಜನರು ಅವನನ್ನು ಅಧಿಪತಿಯನ್ನಾಗಿಯೂ, ನಾಯಕನನ್ನಾಗಿಯೂ ನೇಮಿಸಿದರು. ಮತ್ತು ಯೆಪ್ತಾಹನು ತನ್ನ ಸಂಗತಿಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವನ ಮುಂದೆ ಅರಿಕೆಮಾಡಿದನು.
Entonces Jefté se fue con los ancianos de Galaad, y el pueblo lo nombró jefe y rector de ellos. Jefté pronunció todas sus palabras ante el Señor en Mizpa.
12 ೧೨ ಯೆಪ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನನಗೂ ನಿನಗೂ ಏನಿದೆ? ನೀನು ನನ್ನ ದೇಶಕ್ಕೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಏನು ಕಾರಣ?” ಎಂದು ಕೇಳಿದನು.
Jefté envió mensajeros al rey de los hijos de Amón, diciendo: “¿Qué tienes que ver conmigo, que has venido a luchar contra mi tierra?”
13 ೧೩ ಆ ಅರಸನು ದೂತರಿಗೆ, “ಇಸ್ರಾಯೇಲರು ಐಗುಪ್ತದಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್ ಮತ್ತು ಯೊರ್ದನ್ ಹೊಳೆಗಳವರೆಗೂ ಇದ್ದ ನನ್ನ ದೇಶವನ್ನು ವಶಪಡಿಸಿಕೊಂಡರಲ್ಲಾ; ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು” ಎಂದು ಹೇಳಿ ಕಳುಹಿಸಿದನು.
El rey de los hijos de Amón respondió a los mensajeros de Jefté: “Porque Israel me quitó mi tierra cuando subió de Egipto, desde el Arnón hasta el Jaboc y el Jordán. Ahora, pues, devuelve ese territorio en paz”.
14 ೧೪ ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,
Jefté volvió a enviar mensajeros al rey de los hijos de Amón;
15 ೧೫ “ಯೆಪ್ತಾಹನಾದ ನನ್ನ ಮಾತನ್ನು ಕೇಳು; ಇಸ್ರಾಯೇಲರು ಮೋವಾಬ್ಯರ ಮತ್ತು ಅಮ್ಮೋನಿಯರ ದೇಶವನ್ನು ತೆಗೆದುಕೊಳ್ಳಲೇ ಇಲ್ಲ.
y le dijo: “Jefté dice: Israel no se apoderó de la tierra de Moab, ni de la tierra de los hijos de Amón;
16 ೧೬ ಅವರು ಐಗುಪ್ತವನ್ನು ಬಿಟ್ಟನಂತರ ಅರಣ್ಯದಲ್ಲಿ ಸಂಚರಿಸಿ, ಕೆಂಪು ಸಮುದ್ರಕ್ಕೂ ಅನಂತರ ಕಾದೇಶಿಗೂ ಬಂದರು.
pero cuando subieron de Egipto, e Israel atravesó el desierto hasta el Mar Rojo, y llegó a Cades,
17 ೧೭ ಅವರು ಅಲ್ಲಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನೂ ಒಪ್ಪಿಕೊಳ್ಳಲಿಲ್ಲ; ಆದುದರಿಂದ ಅವರು ಕಾದೇಶಿನಲ್ಲಿಯೇ ಉಳಿದುಕೊಂಡರು.
entonces Israel envió mensajeros al rey de Edom, diciendo: “Por favor, déjame pasar por tu tierra”; pero el rey de Edom no le hizo caso. Del mismo modo, envió al rey de Moab, pero éste se negó; así que Israel se quedó en Cades.
18 ೧೮ ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್‍ ದೇಶದ ಪೂರ್ವದಿಕ್ಕಿಗೆ ಬಂದು, ಅದರ ಮೇರೆಯಾಗಿರುವ ಅರ್ನೋನ್ ಹೊಳೆಯ ಆಚೆಯಲ್ಲಿ ಇಳಿದುಕೊಂಡರು. ಮೋವಾಬ್ಯರ ಮೇರೆಯೊಳಗೆ ಕಾಲಿಡಲಿಲ್ಲ.
Luego atravesaron el desierto y rodearon la tierra de Edom y la tierra de Moab, y llegaron por el lado oriental de la tierra de Moab, y acamparon al otro lado del Arnón; pero no llegaron a la frontera de Moab, porque el Arnón era la frontera de Moab.
19 ೧೯ ತರುವಾಯ ಅವರು ಹೆಷ್ಬೋನನ್ನು ರಾಜಧಾನಿ ಮಾಡಿಕೊಂಡಿದ್ದ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿ ನಮ್ಮ ದೇಶಕ್ಕೆ ಹೋಗುವುದಕ್ಕೆ ಅಪ್ಪಣೆಕೊಡು’ ಎಂದು ಅವನನ್ನು ಬೇಡಿಕೊಂಡರು.
Israel envió mensajeros a Sehón, rey de los amorreos, el rey de Hesbón, y le dijo: “Por favor, déjanos pasar por tu tierra hasta mi lugar.
20 ೨೦ ಆದರೆ ಸೀಹೋನನು ಅವರನ್ನು ನಂಬದೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
Pero Sehón no confió en que Israel pasara por su frontera, sino que reunió a todo su pueblo, acampó en Jahaz y luchó contra Israel.
21 ೨೧ ಇಸ್ರಾಯೇಲರ ದೇವರಾದ ಯೆಹೋವನು ಸೀಹೋನನನ್ನೂ, ಅವನ ಜನರೆಲ್ಲರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು, ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು.
Yahvé, el Dios de Israel, entregó a Sehón y a todo su pueblo en manos de Israel, y ellos los hirieron. Así, Israel poseyó toda la tierra de los amorreos, los habitantes de ese país.
22 ೨೨ ಹೀಗೆ ಇಸ್ರಾಯೇಲರು ಅರ್ನೋನಿನಿಂದ ಯಬ್ಬೋಕಿನವರೆಗೂ, ಅರಣ್ಯದಿಂದ ಯೊರ್ದನಿನವರೆಗೂ ಇದ್ದ ಅಮೋರಿಯರ ಪ್ರಾಂತ್ಯವನ್ನೆಲ್ಲಾ ವಶಮಾಡಿಕೊಂಡರು.
Poseyeron toda la frontera de los amorreos, desde Arnón hasta Jaboc, y desde el desierto hasta el Jordán.
23 ೨೩ ಇಸ್ರಾಯೇಲರ ದೇವರಾದ ಯೆಹೋವನು ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವುದು ಹೇಗೆ?
Así que ahora Yahvé, el Dios de Israel, ha desposeído a los amorreos de la presencia de su pueblo Israel, ¿y tú debes poseerlos?
24 ೨೪ ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವಾಧೀನಪಡಿಸಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವಾಧೀನಪಡಿಸಿಕೊಳ್ಳುವುದು ನ್ಯಾಯವಾಗಿದೆ.
¿No vas a poseer lo que Quemos, tu dios, te da para que lo poseas? Así que a quien el Señor, nuestro Dios, haya despojado de su presencia ante nosotros, a él lo poseeremos.
25 ೨೫ ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಇಸ್ರಾಯೇಲರೊಡನೆ ಎಂದಾದರೂ ವಿವಾದಮಾಡಿದನೋ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ?
¿Acaso eres mejor que Balac, hijo de Zipor, rey de Moab? ¿Acaso luchó él alguna vez contra Israel, o peleó contra ellos?
26 ೨೬ ಇಸ್ರಾಯೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ, ಅವುಗಳ ಗ್ರಾಮಗಳಲ್ಲಿಯೂ, ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದಾರಲ್ಲಾ. ಇಷ್ಟು ದಿನಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?
¡Israel vivió en Hesbón y sus pueblos, en Aroer y sus pueblos, y en todas las ciudades que están a la orilla del Arnón durante trescientos años! ¿Por qué no los recuperaste en ese tiempo?
27 ೨೭ ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದರಿಂದ ನೀನೇ ಅನ್ಯಾಯ ಮಾಡಿದ ಹಾಗಾಯಿತು. ನ್ಯಾಯಸ್ಥಾಪಕನಾದ ಯೆಹೋವನೇ ಈ ಹೊತ್ತು ಇಸ್ರಾಯೇಲರ ಮತ್ತು ಅಮ್ಮೋನಿಯರ ಮಧ್ಯದಲ್ಲಿ ನ್ಯಾಯತೀರಿಸಲಿ” ಎಂದು ಹೇಳಿಸಿದನು.
Por lo tanto, yo no he pecado contra ti, sino que tú me haces mal al guerrear contra mí. Que el Juez Yahvé sea hoy juez entre los hijos de Israel y los hijos de Amón”.
28 ೨೮ ಆದರೆ ಯೆಪ್ತಾಹನು ಹೇಳಿಕಳುಹಿಸಿದ ಮಾತುಗಳಿಗೆ ಅಮ್ಮೋನಿಯರ ಅರಸನು ಕಿವಿಗೊಡಲಿಲ್ಲ.
Sin embargo, el rey de los hijos de Amón no escuchó las palabras de Jefté que le envió.
29 ೨೯ ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರುಗಿ ಗಿಲ್ಯಾದಿನ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.
Entonces el Espíritu de Yahvé vino sobre Jefté, y pasó por Galaad y Manasés, y pasó por Mizpa de Galaad, y de Mizpa de Galaad pasó a los hijos de Ammón.
30 ೩೦ ಇದಲ್ಲದೆ ಅವನು ಯೆಹೋವನಿಗೆ, “ನೀನು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ
Jefté hizo un voto a Yahvé y dijo: “Si en verdad entregas a los hijos de Amón en mi mano,
31 ೩೧ ನಾನು ಸುರಕ್ಷಿತವಾಗಿ ಮನೆಗೆ ಸೇರುವಾಗ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನನ್ನ ಮನೆಯ ಬಾಗಿಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು ಅದನ್ನು ನಿನಗೋಸ್ಕರ ಯಜ್ಞವಾಗಿ ಅರ್ಪಿಸುವೆನು” ಎಂದು ಹರಕೆಮಾಡಿದನು.
entonces será que todo lo que salga de las puertas de mi casa a recibirme cuando regrese en paz de los hijos de Amón, será de Yahvé, y lo ofreceré en holocausto.”
32 ೩೨ ಯೆಪ್ತಾಹನು ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗಲು ಯೆಹೋವನು ಅವರನ್ನು ಅವನ ಕೈಗೆ ಒಪ್ಪಿಸಿದನು.
Entonces Jefté pasó a los hijos de Amón para combatirlos, y Yahvé los entregó en su mano.
33 ೩೩ ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ಮಿನ್ನೀತಿನ ದಾರಿಯವರೆಗೂ ಆಬೇಲ್ ಕೆರಾಮೀಮಿನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿಬಿಟ್ಟನು. ಹೀಗೆ ದೊಡ್ಡ ಜಯವಾಗಿ ಅಮ್ಮೋನಿಯರು ಇಸ್ರಾಯೇಲರ ಮುಂದೆ ತಗ್ಗಿಸಲ್ಪಟ್ಟರು.
Los hirió desde Aroer hasta llegar a Minnith, veinte ciudades, y hasta Abelcheramim, con una matanza muy grande. Así los hijos de Amón fueron sometidos ante los hijos de Israel.
34 ೩೪ ಯೆಪ್ತಾಹನು ಮಿಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿಬಡಿಯುತ್ತಾ, ನೃತ್ಯಮಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆಯು ಅವನಿಗೆ ಒಬ್ಬಳೇ ಮಗಳಾಗಿದ್ದಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ.
Jefté llegó a Mizpa a su casa, y he aquí que su hija salió a recibirlo con panderetas y danzas. Era su única hija. Además de ella no tenía ni hijo ni hija.
35 ೩೫ ಆಕೆಯನ್ನು ಕಾಣುತ್ತಲೇ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಕುಗ್ಗಿಸೇಬಿಟ್ಟೆಯಲ್ಲಾ; ನನಗೆ ಮಹಾಸಂಕಟವನ್ನು ಉಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು” ಎಂದು ಕೂಗಿಕೊಳ್ಳಲು
Cuando la vio, se rasgó las vestiduras y dijo: “¡Ay, hija mía! Me has hecho caer muy bajo, y eres de las que me molestan; porque he abierto mi boca a Yahvé, y no puedo volver atrás.”
36 ೩೬ ಆಕೆಯು ಅವನಿಗೆ, “ನನ್ನ ತಂದೆಯೇ, ನೀನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ ಮೇಲೆ ಆತನು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿತೀರಿಸಿದ್ದರಿಂದ ನಿನ್ನ ಬಾಯಿಂದ ಹೊರಟದ್ದನ್ನೇ ನೆರವೇರಿಸು” ಎಂದಳು.
Ella le dijo: “Padre mío, has abierto tu boca a Yahvé; haz conmigo lo que ha salido de tu boca, porque Yahvé se ha vengado de tus enemigos, de los hijos de Amón.”
37 ೩೭ ಆಕೆಯು ತಿರುಗಿ ತನ್ನ ತಂದೆಗೆ, “ನನ್ನ ಬಿನ್ನಹವನ್ನು ಲಾಲಿಸು; ಎರಡು ತಿಂಗಳುಗಳ ಕಾಲ ನನ್ನನ್ನು ಬಿಡು. ನಾನು ನನ್ನ ಗೆಳತಿಯರೊಡನೆ ಬೆಟ್ಟದ ಪ್ರದೇಶಗಳಿಗೆ ಹೋಗಿ, ನನ್ನ ಕನ್ಯಾವಸ್ಥೆಗೋಸ್ಕರ ಗೋಳಾಡುವೆನು” ಎಂದಳು.
Entonces ella dijo a su padre: “Que se haga esto por mí. Déjame dos meses, para que me vaya y baje a los montes, y llore mi virginidad, yo y mis compañeras.”
38 ೩೮ ಅವನು, “ಎರಡು ತಿಂಗಳ ತನಕ ಹೋಗಿ ಬಾ” ಎಂದು ಕಳುಹಿಸಿದನು. ಆಕೆಯು ಸಖಿಯರ ಸಹಿತವಾಗಿ ಬೆಟ್ಟದ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗೋಸ್ಕರ ಗೋಳಾಡಿದಳು.
Le dijo: “Vete”. La envió por dos meses; y ella partió, ella y sus compañeras, y lloró su virginidad en las montañas.
39 ೩೯ ಎರಡು ತಿಂಗಳು ಕಳೆದ ನಂತರ ಆಕೆ ಪುನಃ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.
Al cabo de dos meses, volvió a su padre, quien hizo con ella lo que había prometido. Era virgen. Se convirtió en costumbre en Israel
40 ೪೦ ಇಸ್ರಾಯೇಲ್ಯರ ಹೆಣ್ಣುಮಕ್ಕಳು ಪ್ರತಿವರ್ಷದಲ್ಲಿಯೂ ನಾಲ್ಕು ದಿನ ಗಿಲ್ಯಾದ್ಯನಾದ ಯೆಪ್ತಾಹನ ಮಗಳನ್ನು ವರ್ಣಿಸುತ್ತಾರೆ. ಇದು ಅವರಲ್ಲಿ ಒಂದು ಪದ್ಧತಿ.
que las hijas de Israel fueran anualmente a festejar a la hija de Jefté Galaadita cuatro días al año.

< ನ್ಯಾಯಸ್ಥಾಪಕರು 11 >