< ನ್ಯಾಯಸ್ಥಾಪಕರು 13 >
1 ೧ ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದುದರಿಂದ ಆತನು ಅವರನ್ನು ನಲ್ವತ್ತು ವರ್ಷಗಳ ಕಾಲ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.
१इस्राएलियों ने फिर यहोवा की दृष्टि में बुरा किया; इसलिए यहोवा ने उनको पलिश्तियों के वश में चालीस वर्ष के लिये रखा।
2 ೨ ಚೊರ್ಗಾ ಎಂಬ ಊರಲ್ಲಿ ದಾನ್ ಕುಲದವನಾದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಬಂಜೆಯಾಗಿದ್ದರಿಂದ ಅವನಿಗೆ ಮಕ್ಕಳಿರಲಿಲ್ಲ.
२दान के कुल का सोरावासी मानोह नामक एक पुरुष था, जिसकी पत्नी के बाँझ होने के कारण कोई पुत्र न था।
3 ೩ ಒಂದಾನೊಂದು ದಿನ ಯೆಹೋವನ ದೂತನು ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಮಗನನ್ನು ಹೆರುವಿ.
३इस स्त्री को यहोवा के दूत ने दर्शन देकर कहा, “सुन, बाँझ होने के कारण तेरे बच्चा नहीं; परन्तु अब तू गर्भवती होगी और तेरे बेटा होगा।
4 ೪ ಆದುದರಿಂದ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧ ಪದಾರ್ಥಗಳನ್ನು ಊಟಮಾಡದಿರು.
४इसलिए अब सावधान रह, कि न तो तू दाखमधु या और किसी भाँति की मदिरा पीए, और न कोई अशुद्ध वस्तु खाए,
5 ೫ ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಲು ಪ್ರಾರಂಭಿಸುವನು” ಅಂದನು.
५क्योंकि तू गर्भवती होगी और तेरे एक बेटा उत्पन्न होगा। और उसके सिर पर छुरा न फिरे, क्योंकि वह जन्म ही से परमेश्वर का नाज़ीर रहेगा; और इस्राएलियों को पलिश्तियों के हाथ से छुड़ाने में वही हाथ लगाएगा।”
6 ೬ ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವರಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.
६उस स्त्री ने अपने पति के पास जाकर कहा, “परमेश्वर का एक जन मेरे पास आया था जिसका रूप परमेश्वर के दूत का सा अति भययोग्य था; और मैंने उससे न पूछा कि तू कहाँ का है? और न उसने मुझे अपना नाम बताया;
7 ೭ ಆದರೆ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ; ಆದುದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವ ವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು’ ಎಂದು ಹೇಳಿದನು” ಅಂದಳು.
७परन्तु उसने मुझसे कहा, ‘सुन तू गर्भवती होगी और तेरे एक बेटा होगा; इसलिए अब न तो दाखमधु या और न किसी भाँति की मदिरा पीना, और न कोई अशुद्ध वस्तु खाना, क्योंकि वह लड़का जन्म से मरण के दिन तक परमेश्वर का नाज़ीर रहेगा।’”
8 ೮ ಮಾನೋಹನು ಇದನ್ನು ಕೇಳಿ ಯೆಹೋವನಿಗೆ, “ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ” ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು.
८तब मानोह ने यहोवा से यह विनती की, “हे प्रभु, विनती सुन, परमेश्वर का वह जन जिसे तूने भेजा था फिर हमारे पास आए, और हमें सिखाए कि जो बालक उत्पन्न होनेवाला है उससे हम क्या-क्या करें।”
9 ೯ ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ ದೇವದೂತನು ಪುನಃ ಬಂದನು. ಆಕೆಯ ಗಂಡನಾದ ಮಾನೋಹನು ಅಲ್ಲಿರಲಿಲ್ಲ.
९मानोह की यह बात परमेश्वर ने सुन ली, इसलिए जब वह स्त्री मैदान में बैठी थी, और उसका पति मानोह उसके संग न था, तब परमेश्वर का वही दूत उसके पास आया।
10 ೧೦ ಆದ್ದರಿಂದ ಆಕೆಯು ಬೇಗನೆ ಗಂಡನ ಬಳಿಗೆ ಹೋಗಿ, “ಮೊನ್ನೆ ನನಗೆ ಪ್ರತ್ಯಕ್ಷನಾದ ಪುರುಷನು ತಿರುಗಿ ಬಂದಿದ್ದಾನೆ” ಎಂದು ತಿಳಿಸಲು
१०तब उस स्त्री ने झट दौड़कर अपने पति को यह समाचार दिया, “जो पुरुष उस दिन मेरे पास आया था उसी ने मुझे दर्शन दिया है।”
11 ೧೧ ಅವನೆದ್ದು ಹೆಂಡತಿಯೊಡನೆ ಬಂದು ಆ ಪುರುಷನಿಗೆ, “ಮೊನ್ನೆ ಈಕೆಯೊಡನೆ ಮಾತನಾಡಿದವನು ನೀನೋ” ಎಂದು ಕೇಳಲು ಅವನು, “ಹೌದು, ನಾನೇ” ಅಂದನು.
११यह सुनते ही मानोह उठकर अपनी पत्नी के पीछे चला, और उस पुरुष के पास आकर पूछा, “क्या तू वही पुरुष है जिसने इस स्त्री से बातें की थीं?” उसने कहा, “मैं वही हूँ।”
12 ೧೨ ಆಗ ಮಾನೋಹನು, “ನೀನು ಹೇಳಿದ್ದು ನೆರವೇರಿದಾಗ ನಾವು ಆ ಮಗುವಿಗೋಸ್ಕರ ಮಾಡತಕ್ಕದ್ದೇನು? ಅವನನ್ನು ಹೇಗೆ ಬೆಳೆಸಬೇಕು” ಎಂದು ಕೇಳಲು
१२मानोह ने कहा, “जब तेरे वचन पूरे हो जाएँ तो, उस बालक का कैसा ढंग और उसका क्या काम होगा?”
13 ೧೩ ಯೆಹೋವನ ದೂತನು ಮಾನೋಹನಿಗೆ, “ನಾನು ಹೇಳಿದ್ದನ್ನೆಲ್ಲಾ ಈಕೆಯು ಜಾಗರೂಕತೆಯಿಂದ ಕೈಕೊಳ್ಳಲಿ.
१३यहोवा के दूत ने मानोह से कहा, “जितनी वस्तुओं की चर्चा मैंने इस स्त्री से की थी उन सबसे यह परे रहे।
14 ೧೪ ದ್ರಾಕ್ಷಾಫಲವನ್ನು ತಿನ್ನದಿರಲಿ; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರಲಿ; ನಿಷಿದ್ಧಾಹಾರವನ್ನು ಮುಟ್ಟದಿರಲಿ; ಹೀಗೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಕೈಕೊಳ್ಳಲಿ” ಅಂದನು.
१४यह कोई वस्तु जो दाखलता से उत्पन्न होती है न खाए, और न दाखमधु या और किसी भाँति की मदिरा पीए, और न कोई अशुद्ध वस्तु खाए; और जो आज्ञा मैंने इसको दी थी उसी को यह माने।”
15 ೧೫ ಮತ್ತು ಮಾನೋಹನು ಯೆಹೋವನ ದೂತನನ್ನು, “ನಾವು ನಿನಗೋಸ್ಕರ ಒಂದು ಹೋತಮರಿಯನ್ನು ಪಕ್ವಮಾಡಿ ತರುವವರೆಗೆ ದಯವಿಟ್ಟು ಇಲ್ಲೇ ನಿಲ್ಲಬೇಕು” ಎಂದು ಬೇಡಿಕೊಂಡನು.
१५मानोह ने यहोवा के दूत से कहा, “हम तुझको रोक लें, कि तेरे लिये बकरी का एक बच्चा पकाकर तैयार करें।”
16 ೧೬ ಯೆಹೋವನ ದೂತನು ಮಾನೋಹನಿಗೆ, “ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವುದಿಲ್ಲ; ಯಜ್ಞಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸಮರ್ಪಿಸು” ಅಂದನು. ಅವನು ಯೆಹೋವನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.
१६यहोवा के दूत ने मानोह से कहा, “चाहे तू मुझे रोक रखे, परन्तु मैं तेरे भोजन में से कुछ न खाऊँगा; और यदि तू होमबलि करना चाहे तो यहोवा ही के लिये कर।” (मानोह तो न जानता था, कि यह यहोवा का दूत है।)
17 ೧೭ ಆದ್ದರಿಂದ ಅವನು ಆ ದೂತನನ್ನು, “ನೀನು ಹೇಳಿದ್ದು ನೆರವೇರಿದಾಗ ನಿನ್ನನ್ನು ಸನ್ಮಾನಿಸಬೇಕೆಂದಿರುತ್ತೇವೆ, ನಿನ್ನ ಹೆಸರೇನು” ಎಂದು ಕೇಳಿದನು.
१७मानोह ने यहोवा के दूत से कहा, “अपना नाम बता, इसलिए कि जब तेरी बातें पूरी हों तब हम तेरा आदरमान कर सके।”
18 ೧೮ ಯೆಹೋವನ ದೂತನು, “ನನ್ನ ಹೆಸರನ್ನು ಕೇಳುವುದೇಕೆ? ಅದು ಆಶ್ಚರ್ಯಕರವಾದದ್ದು” ಅಂದನು.
१८यहोवा के दूत ने उससे कहा, “मेरा नाम तो अद्भुत है, इसलिए तू उसे क्यों पूछता है?”
19 ೧೯ ಮಾನೋಹನು ಹೋತಮರಿಯನ್ನೂ ಧಾನ್ಯದ್ರವ್ಯವನ್ನೂ ತಂದು ಬಂಡೆಯ ಮೇಲಿಟ್ಟು ಯೆಹೋವನಿಗೆ ಸಮರ್ಪಿಸಿದನು. ಮಾನೋಹನೂ ಅವನ ಹೆಂಡತಿಯೂ ನೋಡುತ್ತಿರುವಾಗಲೇ ಯೆಹೋವನ ದೂತನು ಆಶ್ಚರ್ಯವನ್ನು ನಡಿಸಿದನು.
१९तब मानोह ने अन्नबलि समेत बकरी का एक बच्चा लेकर चट्टान पर यहोवा के लिये चढ़ाया तब उस दूत ने मानोह और उसकी पत्नी के देखते-देखते एक अद्भुत काम किया।
20 ೨೦ ಏನೆಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲುಬಿದ್ದರು.
२०अर्थात् जब लौ उस वेदी पर से आकाश की ओर उठ रही थी, तब यहोवा का दूत उस वेदी की लौ में होकर मानोह और उसकी पत्नी के देखते-देखते चढ़ गया; तब वे भूमि पर मुँह के बल गिरे।
21 ೨೧ ಯೆಹೋವನ ದೂತನು ಮಾನೋಹನಿಗೂ ಅವನ ಹೆಂಡತಿಗೂ ಮತ್ತೆ ಕಾಣಿಸಲಿಲ್ಲ. ಆಗ ಮಾನೋಹನು ಆತನು ಯೆಹೋವನ ದೂತನೆಂದು ತಿಳಿದು
२१परन्तु यहोवा के दूत ने मानोह और उसकी पत्नी को फिर कभी दर्शन न दिया। तब मानोह ने जान लिया कि वह यहोवा का दूत था।
22 ೨೨ ತನ್ನ ಹೆಂಡತಿಗೆ, “ನಾವು ಸಾಯುವುದು ನಿಜ, ದೇವರನ್ನು ಕಣ್ಣಾರೆ ಕಂಡೆವಲ್ಲಾ” ಅಂದನು.
२२तब मानोह ने अपनी पत्नी से कहा, “हम निश्चय मर जाएँगे, क्योंकि हमने परमेश्वर का दर्शन पाया है।”
23 ೨೩ ಆದರೆ ಆಕೆಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಯಜ್ಞವನ್ನೂ, ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ; ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ, ಹೇಳುತ್ತಿರಲಿಲ್ಲ” ಅಂದಳು.
२३उसकी पत्नी ने उससे कहा, “यदि यहोवा हमें मार डालना चाहता, तो हमारे हाथ से होमबलि और अन्नबलि ग्रहण न करता, और न वह ऐसी सब बातें हमको दिखाता, और न वह इस समय हमें ऐसी बातें सुनाता।”
24 ೨೪ ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನೆಂದು ಹೆಸರಿಟ್ಟಳು. ಹುಡುಗನು ದೊಡ್ಡವನಾದನು. ಯೆಹೋವನ ಆಶೀರ್ವಾದವು ಅವನ ಮೇಲಿತ್ತು.
२४और उस स्त्री के एक बेटा उत्पन्न हुआ, और उसका नाम शिमशोन रखा; और वह बालक बढ़ता गया, और यहोवा उसको आशीष देता रहा।
25 ೨೫ ಇದಲ್ಲದೆ ಅವನು ಚೊರ್ಗಕ್ಕೂ, ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿತು.
२५और यहोवा का आत्मा सोरा और एश्ताओल के बीच महनेदान में उसको उभारने लगा।