< ನ್ಯಾಯಸ್ಥಾಪಕರು 14 >
1 ೧ ಸಂಸೋನನು ಗಟ್ಟಾ ಇಳಿದು ತಿಮ್ನಾ ಊರಿಗೆ ಹೋಗಿ ಅಲ್ಲಿನ ಫಿಲಿಷ್ಟಿಯರ ಹೆಣ್ಣುಗಳಲ್ಲಿ ಒಬ್ಬಳನ್ನು ನೋಡಿ, ತಿರುಗಿ ತಂದೆತಾಯಿಗಳ ಬಳಿಗೆ ಬಂದು
১আর শিম্শোন তিম্নায় (গ্রামে) নেমে গেলেন, ও তিম্নায় পলেষ্টীয়দের মেয়েদের মধ্যে একটি মেয়েটি দেখতে পেলেন।
2 ೨ ಅವರಿಗೆ, “ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿರಿ” ಎಂದು ಹೇಳಿದನು.
২পরে ফিরে এসে নিজের মা বাবাকে সংবাদ দিয়ে বললেন, “আমি তিম্নায় পলেষ্টীয়দের মেয়েদের মধ্যে একটি মেয়েটি দেখেছি; তোমরা তাকে এনে আমার সঙ্গে বিয়ে দাও।”
3 ೩ ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ಮದುವೆ ಮಾಡಿಕೊಳ್ಳಬೇಕೆಂದಿರುತ್ತೀಯಲ್ಲಾ; ನಿನ್ನ ಬಂಧುಗಳಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ನಿನಗೆ ಹೆಣ್ಣು ಸಿಕ್ಕುವುದಿಲ್ಲವೋ?” ಎಂದು ಕೇಳಲು ಅವನು, “ನನಗೋಸ್ಕರ ಆಕೆಯನ್ನೇ ತೆಗೆದುಕೊಳ್ಳಬೇಕು; ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಅಂದನು.
৩তখন তাঁর বাবা মা তাঁকে বললেন, “তোমার আত্মীয়দের মধ্যে ও আমার সব নিজের জাতির মধ্যে কি কোনো মেয়ে নেই যে, তুমি অচ্ছিন্নত্বক পলেষ্টীয়দের মেয়ে বিয়ে করতে যাচ্ছ?” শিম্শোন বাবাকে বললেন, “তুমি আমার জন্য তাকেই নিয়ে এস, কারণ আমার দৃষ্টিতে সে খুবই সুন্দরী।”
4 ೪ ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬುದು ಅವನ ತಂದೆತಾಯಿಗಳಿಗೆ ಗೊತ್ತಿರಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.
৪কিন্তু তাঁর মা-বাবা জানতেন না যে, ওটা সদাপ্রভু থেকে হয়েছে, কারণ তিনি পলেষ্টীয়দের বিরুদ্ধে সুযোগ খুঁজছিলেন। সেই দিনের পলেষ্টীয়েরা ইস্রায়েলের উপরে কর্তৃত্ব করত।
5 ೫ ಸಂಸೋನನು ತನ್ನ ತಂದೆತಾಯಿಗಳ ಸಹಿತ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷಿ ತೋಟಗಳ ಬಳಿಗೆ ಬಂದಾಗ, ಒಂದು ಪ್ರಾಯದ ಸಿಂಹವು ಗರ್ಜಿಸುತ್ತಾ ಅವನೆದುರಿಗೆ ಬಂದಿತು.
৫পরে শিম্শোন ও তাঁর মা-বাবা তিম্নায় নেমে গেলেন, তিম্নায় আঙ্গুর ক্ষেতে পৌছালে দেখ, এক যুবসিংহ শিম্শোনের সামনে হয়ে গর্জন করে উঠল।
6 ೬ ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.
৬তখন সদাপ্রভুর আত্মা তাঁর ওপরে আসলেন, তাতে তাঁর হাতে কিছু না থাকলেও তিনি ছাগলের বাচ্চা ছিঁড়বার মত ঐ সিংহকে ছিঁড়ে ফেললেন, কিন্তু কি করেছেন, তা বাবা মাকে বললেন না।
7 ೭ ಅನಂತರ ಅವನು ಊರೊಳಗೆ ಹೋಗಿ ಆ ಸ್ತ್ರೀಯನ್ನು ಮಾತನಾಡಿಸಿ ಆಕೆಯನ್ನು ಮೆಚ್ಚಿಕೊಂಡನು.
৭পরে তিনি গিয়ে সেই কন্যার সঙ্গে আলাপ করলেন; আর সে শিম্শোনের দৃষ্টিতে খুবই সুন্দরী ছিল।
8 ೮ ಕೆಲವು ದಿನಗಳಾದ ಮೇಲೆ ಅವನು ಆಕೆಯನ್ನು ವರಿಸುವುದಕ್ಕೋಸ್ಕರ ತಿರುಗಿ ಆ ಊರಿಗೆ ಹೋಗುತ್ತಿದ್ದಾಗ ದಾರಿಯ ಸಮೀಪದಲ್ಲಿ ಬಿದ್ದಿದ್ದ ಸಿಂಹದ ಹೆಣವನ್ನು ನೋಡುವುದಕ್ಕೆ ಹೋಗಲು ಅದರ ಒಡಲಲ್ಲಿ ಜೇನುಹುಳಗಳನ್ನೂ, ಜೇನನ್ನೂ ಕಂಡು,
৮কিছু দিন পরে তিনি তাকে বিয়ে করতে সেই জায়গায় ফিরে গেলেন এবং সেই সিংহের শব দেখবার জন্য পথ ছেড়ে গেলেন; আর দেখ, সিংহের দেহে এক ঝাঁক মৌমাছি ও মৌচাক রয়েছে।
9 ೯ ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಸತ್ತ ಸಿಂಹದ ದೇಹದಿಂದ ತಾನು ಜೇನು ತೆಗೆದುಕೊಂಡನೆಂದು ಅವರಿಗೆ ತಿಳಿಸಲಿಲ್ಲ.
৯তখন তিনি তা হাতে নিয়ে চললেন, ভোজন করতে করতে চললেন এবং মা বাবার কাছে গিয়ে তাঁদেরকেও কিছু দিলে তাঁরাও ভোজন করলেন; কিন্তু সেই মধু যে সিংহের দেহ থেকে এনেছেন, তা তিনি তাঁদেরকে বললেন না।
10 ೧೦ ಸಂಸೋನನ ತಂದೆಯು ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ದತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು.
১০পরে তাঁর পিতা সেই মেয়ের কাছে গেলে শিম্শোন সেই জায়গায় ভোজ প্রস্তুত করলেন্, কারণ যুবকদের সেই রকম রীতি ছিল।
11 ೧೧ ಅವರು ಅವನನ್ನು ನೋಡಿದಾಗ ತಮ್ಮಲ್ಲಿಂದ ಮೂವತ್ತು ಮಂದಿಯನ್ನು ಆರಿಸಿ ಅವನ ಜೊತೆಯಲ್ಲಿರಿಸಿದರು.
১১আর তাঁকে দেখে পলেষ্টীয়েরা তাঁর কাছে থাকতে ত্রিশ জন বন্ধুদেরকে আনল।
12 ೧೨ ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.
১২শিম্শোন তাদেরকে বললেন, “আমি তোমাদের কাছে একটি ধাঁধা বলি, তোমরা যদি এই উৎসবের সাত দিনের র মধ্যে তার অর্থ বুঝে আমাকে বলে দিতে পার, তবে আমি তোমাদেরকে ত্রিশটি জামা ও ত্রিশ জোড়া বস্ত্র দেব।
13 ೧೩ ನಿಮ್ಮಿಂದ ಆಗದೆ ಹೋದರೆ ನೀವು ನನಗೆ ಮೂವತ್ತು ನಾರು ಬಟ್ಟೆಯ ನಿಲುವಂಗಿಗಳನ್ನು (ದುಪ್ಪಟಿಗಳನ್ನೂ), ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡಬೇಕು” ಅನ್ನಲು ಅವರು ಅವನಿಗೆ, “ನಿನ್ನ ಒಗಟನ್ನು ಹೇಳು, ಕೇಳೋಣ” ಎಂದು ಹೇಳಿದರು.
১৩কিন্তু যদি আমাকে তার অর্থ বলতে না পার, তবে তোমরা আমাকে ত্রিশটি জামা ও ত্রিশ জোড়া বস্ত্র দেবে।” তাঁরা বলল, “তোমার ধাঁধাটি বল, আমরা শুনি।”
14 ೧೪ ಆಗ ಅವನು, “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು; ಕ್ರೂರವಾದದ್ದರಿಂದ ಮಧುರವಾದದ್ದು ಹುಟ್ಟಿತು” ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು.
১৪তিনি তাদেরকে বললেন, “খাদক থেকে বের হল খাদ্য, বলবান থেকে বের হল মিষ্ট দ্রব্য।” তারা তিন দিনের সেই হেঁয়ালির অর্থ করতে পারল না।
15 ೧೫ ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರೆಸಿದಿರೋ” ಅಂದರು.
১৫পরে সপ্তম দিনের তারা শিম্শোনের স্ত্রীকে বলল, “তুমি নিজের স্বামীকে খোসামোদ, যাতে তিনি ধাঁধার অর্থ আমাদেরকে বলেন; না হলে আমরা তোমাকে ও তোমার পিতৃকুলকে আগুনে পুড়িয়ে মারব। তোমরা কি আমাদেরকে দরিদ্র করার জন্য এই জায়গায় নিমন্ত্রণ করেছ? তাই নয় কি?”
16 ೧೬ ಆಕೆಯು ಸಂಸೋನನ ಮುಂದೆ ಅಳುತ್ತಾ, “ನೀನು ನನ್ನನ್ನು ಪ್ರೀತಿಸುವುದಿಲ್ಲ, ದ್ವೇಷಿಸುತ್ತೀಯಷ್ಟೆ; ನನ್ನ ಜನರಿಗೆ ಒಗಟನ್ನು ಹೇಳಿದ್ದೀ, ಅದರ ಅರ್ಥವನ್ನು ನನಗೆ ತಿಳಿಸಲಿಲ್ಲವಲ್ಲಾ” ಎಂದು ತೊಂದರೆಪಡಿಸಿದಳು. ಅವನು ಆಕೆಗೆ, “ಅದನ್ನು ನನ್ನ ತಂದೆತಾಯಿಗಳಿಗೂ ಹೇಳಲಿಲ್ಲ; ನಿನಗೆ ಹೇಳುವೆನೋ?” ಎಂದು ಉತ್ತರ ಕೊಟ್ಟನು.
১৬তখন শিম্শোনের স্ত্রী স্বামীর কাছে কেঁদে বলল, “তুমি আমাকে শুধুই ঘৃণা কর, ভালবাস না; আমার স্বজাতীয়দেরকে একটা ধাঁধা বললে, কিন্তু আমাকে তা বুঝিয়ে দিলে না।” তিনি তাঁকে বললেন, “দেখ, আমার বাবা-মাকেও তা বুঝিয়ে দেয়নি, তবে তোমাকে কি বোঝাব?”
17 ೧೭ ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.
১৭তার স্ত্রী উৎসব-সপ্তাহের শেষ পর্যন্ত তাঁর কাছে কাঁদল; পরে তিনি সপ্তম দিনের তাকে বলে দিলেন; কারণ সে তাঁকে ক্রমাগত খোসামোদ করেছিল। পরে ঐ স্ত্রী স্বজাতীয়দেরকে ধাঁধার অর্থ বলে দিল।
18 ೧೮ ಅವರು ಏಳನೆಯ ದಿನ ಸೂರ್ಯ ಮುಳುಗುವುದಕ್ಕಿಂತ ಮೊದಲು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು? ಸಿಂಹಕ್ಕಿಂತ ಬಲಿಷ್ಠವಾದದ್ದು ಯಾವುದು?” ಎಂದು ಹೇಳಲು ಅವನು, “ನೀವು ನನ್ನ ಕಡಸಿನಿಂದ ಉಳದೇ ಹೋಗಿದ್ದರೆ ಒಗಟನ್ನು ಬಿಚ್ಚುವುದು ನಿಮ್ಮಿಂದಾಗುತ್ತಿರಲಿಲ್ಲ” ಅಂದನು.
১৮পরে সপ্তম দিনের সূর্য্য অস্ত যাবার আগে ঐ নগরের লোকেরা তাঁকে বলল, “মধু থেকে মিষ্ট আর কি? আর সিংহের থেকে বলবান্ কি?” তিনি তাদেরকে বললেন, “তোমরা যদি আমার গাভী দিয়ে চাষ না করতে, তবে আমার ধাঁধার অর্থ খুঁজে পেতে না।”
19 ೧೯ ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು, ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ಕೋಪಗೊಂಡವನಾಗಿ ತನ್ನ ತಂದೆಯ ಮನೆಗೆ ಹೋದನು.
১৯পরে সদাপ্রভুর আত্মা তাঁর ওপরে সবলে আসলেন, আর তিনি অস্কিলোনে (শহরে) নেমে গিয়ে সেখানকার ত্রিশ জনকে আঘাত করে তাদের বস্ত্র খুলে নিয়ে ধাঁধার অর্থকারীদেরকে জোড়া জোড়া বস্ত্র দিলেন। আর সে প্রচন্ড রেগে গেল; তিনি পিতার বাড়িতে উঠে গেলেন।
20 ೨೦ ಇತ್ತ ಸಂಸೋನನ ಹೆಂಡತಿಯನ್ನು ಆ ಮೂವತ್ತು ಮಂದಿಯಲ್ಲಿ ಅವನಿಗೆ ಸ್ನೇಹಿತನಾಗಿದ್ದವನಿಗೆ ಮದುವೆಮಾಡಿಕೊಟ್ಟರು.
২০পরে শিম্শোনের যে প্রিয় বন্ধু তার কাছে এসেছিল, তাকে তাঁর স্ত্রী দেওয়া হল।