< ನ್ಯಾಯಸ್ಥಾಪಕರು 15 >

1 ಕೆಲವು ದಿನಗಳಾದ ಮೇಲೆ ಗೋದಿಯ ಸುಗ್ಗಿಯಲ್ಲಿ ಸಂಸೋನನು ಒಂದು ಹೋತಮರಿಯನ್ನು ತೆಗೆದುಕೊಂಡು ತನ್ನ ಹೆಂಡತಿಯನ್ನು ನೋಡುವುದಕ್ಕೋಸ್ಕರ ಹೊರಟುಹೋಗಿ ಆಕೆಯ ತಂದೆಗೆ, “ನಾನು ನನ್ನ ಹೆಂಡತಿಯ ಹತ್ತಿರ ಒಳಗಿನ ಕೋಣೆಗೆ ಹೋಗುತ್ತೇನೆ” ಅಂದನು. ಅದಕ್ಕೆ ಅವನು, “ಹೋಗಬಾರದು;
Quelque temps après, aux jours de la moisson des blés, Samson alla visiter sa femme, et lui porta un chevreau de lait, en disant: Je veux entrer vers ma femme, dans sa chambre. Mais le père ne lui permit pas d'y entrer.
2 ನೀನು ನಿಜವಾಗಿ ಆಕೆಯನ್ನು ಹಗೆಮಾಡುತ್ತೀಯೆಂದು ತಿಳಿದು ಅವಳನ್ನು ನಿನ್ನ ಗೆಳೆಯರಲ್ಲೊಬ್ಬನಿಗೆ ಮದುವೆಮಾಡಿಕೊಟ್ಟೆನು. ಆಕೆಯ ತಂಗಿಯು ಆಕೆಗಿಂತ ಸುಂದರಿಯಾಗಿದ್ದಾಳಲ್ಲಾ; ಈಕೆಯು ನಿನಗಿರಲಿ” ಅಂದನು.
Et le père lui dit: J'ai cru que tu avais de l'aversion pour elle; c'est pourquoi je l'ai donnée à ton compagnon. Sa jeune sœur n'est-elle pas plus belle qu'elle? Prends-la donc à sa place.
3 ಆಗ ಸಂಸೋನನು, “ಈ ಸಾರಿ ನಾನು ಫಿಲಿಷ್ಟಿಯರಿಗೆ ಕೇಡುಮಾಡುವುದಾದರೆ ತಪ್ಪು ನನ್ನದಲ್ಲ” ಎಂದುಕೊಂಡು ಹೋಗಿ
Mais Samson leur dit: Cette fois je serai innocent à l'égard des Philistins, quand je leur ferai du mal.
4 ಮುನ್ನೂರು ನರಿಗಳನ್ನು ಹಿಡಿದು, ಬಾಲಕ್ಕೆ ಬಾಲವನ್ನು ಸೇರಿಸಿ ಕಟ್ಟಿ, ಅವುಗಳ ನಡುವೆ ಒಂದೊಂದು ಪಂಜನ್ನು ಸಿಕ್ಕಿಸಿ, ಪಂಜುಗಳಿಗೆ ಬೆಂಕಿಹೊತ್ತಿಸಿ,
Samson s'en alla donc, et attrapa trois cents renards; il prit aussi des flambeaux, et il tourna les queues des renards les unes contre les autres, et il mit un flambeau entre les deux queues, au milieu.
5 ಆ ನರಿಗಳನ್ನು ಫಿಲಿಷ್ಟಿಯರ ಹೊಲಗಳಲ್ಲಿ ಬಿಟ್ಟು, ಅವರ ತೆನೆಗೂಡುಗಳನ್ನೂ, ಇನ್ನೂ ಕೊಯ್ಯದೆ ಇದ್ದ ಬೆಳೆಯನ್ನೂ, ಎಣ್ಣೆಯ ಮರಗಳ ತೋಟಗಳನ್ನೂ ಸುಟ್ಟುಬಿಟ್ಟನು.
Puis, ayant allumé les flambeaux, il lâcha les renards dans les blés des Philistins. Il brûla ainsi tant le blé qui était en gerbes que celui qui était sur pied, et jusqu'aux plantations d'oliviers.
6 ಫಿಲಿಷ್ಟಿಯರು ಇದನ್ನು ಮಾಡಿದವರು ಯಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವನು ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು, ಆಕೆಯನ್ನೂ, ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು.
Et les Philistins dirent: Qui a fait cela? Et on répondit: Samson, le gendre du Thimnien; parce qu'il lui a pris sa femme, et l'a donnée à son compagnon. Alors les Philistins montèrent et la brûlèrent, elle et son père.
7 ಸಂಸೋನನು ಅವರಿಗೆ, “ನೀವು ಹೀಗೆ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿತೀರಿಸದೆ ಬಿಡುವುದಿಲ್ಲ” ಎಂದು ಹೇಳಿ
Mais Samson leur dit: C'est ainsi que vous en usez? Cependant je ne cesserai point que je ne me sois vengé de vous.
8 ಅವರ ತೊಡೆ, ಸೊಂಟಗಳನ್ನು ಮುರಿದು, ಅವರನ್ನು ಸಂಹರಿಸಿ, ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.
Et il les battit dos et ventre, et en fit un grand carnage. Puis il descendit, et habita dans un creux du rocher d'Étam.
9 ಆಗ ಫಿಲಿಷ್ಟಿಯರು ಹೊರಟು ಯೆಹೂದಾ ಪ್ರಾಂತ್ಯದ ಲೆಹೀ ಎಂಬಲ್ಲಿಗೆ ಹೋಗಿ ಪಾಳೆಯಮಾಡಿಕೊಂಡರು.
Alors les Philistins montèrent, campèrent en Juda, et se répandirent à Léchi.
10 ೧೦ ನೀವು ನಮಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದೇಕೆ ಎಂದು ಯೆಹೂದ್ಯರು ಅವರನ್ನು ಕೇಳಲು ಅವರು, “ಸಂಸೋನನನ್ನು ಹಿಡಿದು ಕಟ್ಟಿ ಅವನು ನಮಗೆ ಮಾಡಿದಂತೆಯೇ ಅವನಿಗೂ ಮಾಡಬೇಕೆಂದು ಬಂದೆವು” ಎಂದು ಉತ್ತರಕೊಟ್ಟರು.
Et les hommes de Juda dirent: Pourquoi êtes-vous montés contre nous? Ils répondirent: Nous sommes montés pour lier Samson, pour lui faire comme il nous a fait.
11 ೧೧ ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ, “ಫಿಲಿಷ್ಟಿಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೋ? ಹೀಗೆ ಯಾಕೆ ಮಾಡಿದಿ?” ಎಂದು ಕೇಳಲು ಅವನು, “ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ” ಅಂದನು.
Alors trois mille hommes de Juda descendirent vers la caverne du rocher d'Étam, et dirent à Samson: Ne sais-tu pas que les Philistins dominent sur nous? Pourquoi nous as-tu fait cela? Il leur répondit: Je leur ai fait comme ils m'ont fait.
12 ೧೨ ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ” ಅನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಎಂದನು.
Ils lui dirent encore: Nous sommes descendus pour te lier, afin de te livrer entre les mains des Philistins. Et Samson leur dit: Jurez-moi que vous ne me tuerez pas.
13 ೧೩ ಅದಕ್ಕೆ ಅವರು, “ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವುದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ” ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ ಗುಡ್ಡದ ಮೇಲಿನಿಂದ ಕರತಂದರು.
Et ils répondirent, et dirent: Non, nous te lierons et nous te livrerons entre leurs mains; mais nous ne te tuerons point. Ils le lièrent donc de deux cordes neuves, et le firent sortir du rocher.
14 ೧೪ ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದ್ದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.
Or, quand il vint à Léchi, les Philistins poussèrent des cris de joie à sa rencontre. Mais l'Esprit de l'Éternel le saisit, et les cordes qu'il avait aux bras devinrent comme du lin brûlé par le feu; ses liens tombèrent de ses mains.
15 ೧೫ ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿದಾಗಿತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಸಂಹರಿಸಿಬಿಟ್ಟು,
Et, ayant trouvé une mâchoire d'âne, toute fraîche, il étendit la main, la prit, et en frappa mille hommes.
16 ೧೬ “ಕತ್ತೆಯ ದವಡೇ ಎಲುಬಿನಿಂದ ಸಾವಿರ ಜನರನ್ನು ಸಾಯಿಸಿದೆನು; ಕತ್ತೆಯ ದವಡೇ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು” ಎಂದು ಹೇಳಿ,
Alors Samson dit: Avec une mâchoire d'âne, un monceau, deux monceaux! Avec une mâchoire d'âne j'ai tué mille hommes!
17 ೧೭ ತನ್ನ ಕೈಯಲ್ಲಿದ್ದ ಎಲುಬನ್ನು ಬೀಸಾಡಿದನು. ಆ ಸ್ಥಳಕ್ಕೆ ರಾಮತ್ ಲೆಹೀ ಎಂದು ಹೆಸರಾಯಿತು.
Et quand il eut achevé de parler, il jeta de sa main la mâchoire, et nomma ce lieu-là Ramath-Léchi (la mâchoire jetée).
18 ೧೮ ಅವನು ಬಹಳ ಬಾಯಾರಿದವನಾಗಿ ಯೆಹೋವನಿಗೆ, “ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟುಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ” ಎಂದು ಮೊರೆಯಿಡಲು
Et, pressé par la soif, il cria à l'Éternel, et dit: Tu as accordé à ton serviteur cette grande délivrance; et maintenant mourrais-je de soif, et tomberais-je entre les mains des incirconcis?
19 ೧೯ ಆತನು ಲೇಹಿಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಲು ಅವನು ಅದನ್ನು ಕುಡಿದು ಪುನಃ ಚೈತನ್ಯಹೊಂದಿದನು. ಆದ್ದರಿಂದ ಅದಕ್ಕೆ ಏನ್ ಹಕ್ಕೋರೇ ಎಂದು ಹೆಸರಾಯಿತು; ಅದು ಇಂದಿನ ವರೆಗೂ ಲೆಹೀಯಲ್ಲಿರುತ್ತದೆ.
Alors Dieu fendit le rocher creux qui est à Léchi et les eaux en sortirent; et Samson but; son esprit se remit, et il reprit courage. C'est pourquoi, ce lieu, qui est à Léchi, a été appelé jusqu'à ce jour: En-Hakkoré (la source de celui qui invoque).
20 ೨೦ ಫಿಲಿಷ್ಟಿಯರ ಪ್ರಾಬಲ್ಯದಲ್ಲಿ ಸಂಸೋನನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ವರೆಗೆ ಪಾಲಿಸಿದನು.
Et il jugea Israël, au temps des Philistins, pendant vingt ans.

< ನ್ಯಾಯಸ್ಥಾಪಕರು 15 >