< ನ್ಯಾಯಸ್ಥಾಪಕರು 16 >
1 ೧ ತರುವಾಯ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.
Och Simson gick till Gasa; där fick han se en sköka och gick in till henne.
2 ೨ ಸಂಸೋನನು ಬಂದಿರುವುದು ಗಾಜದವರಿಗೆ ಗೊತ್ತಾಗಲು ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು.
När då gasiterna fingo höra att Simson hade kommit dit, omringade de platsen och lågo i försåt för honom hela natten vid stadsporten. Men hela natten höllo de sig stilla; de tänkte: "Vi vilja vänta till i morgon, när det bliver dager; då skola vi dräpa honom."
3 ೩ ಸಂಸೋನನು ಮಲಗಿ ಮಧ್ಯರಾತ್ರಿಯಲ್ಲೆದ್ದು ಊರು ಬಾಗಿಲಿನ ಕದಗಳನ್ನೂ, ಅದರ ಎರಡು ನಿಲುವುಪಟ್ಟಿಗಳನ್ನೂ, ಅಗುಳಿಗಳನ್ನೂ ಕಿತ್ತು, ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಪರ್ವತ ಶಿಖರದ ಮೇಲೆ ಇಟ್ಟನು.
Och Simson låg där intill midnatt; men vid midnattstiden stod han upp och grep tag i stadsportens dörrar och i de båda dörrposterna och ryckte loss dem jämte bommen, och lade alltsammans på sina axlar och bar upp det till toppen på det berg som ligger gent emot Hebron.
4 ೪ ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯಲ್ಲಿ ಮೋಹಿತನಾದನು.
Därefter fattade han kärlek till en kvinna som hette Delila, vid bäcken Sorek.
5 ೫ ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ, ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನೂ, ನಾವು ಅವನನ್ನೂ ಗೆದ್ದು, ಬಲವನ್ನು ಕುಂದಿಸುವುದು ಹೇಗೆಂಬುದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ರೂಪಾಯಿ ಕೊಡುವೆವು” ಎಂದು ಹೇಳಿದರು.
Då kommo filistéernas hövdingar upp till henne och sade till henne: "Locka honom till att uppenbara för dig varav det beror att han är så stark, och huru vi skola bliva honom övermäktiga, så att vi kunna binda honom och kuva honom; vi vilja då giva dig ett tusen ett hundra siklar silver var."
6 ೬ ದೆಲೀಲಳು ಸಂಸೋನನಿಗೆ, “ನಿನಗೆ ಇಂಥ ಮಹಾ ಶಕ್ತಿ ಹೇಗೆ ಬಂದಿತು? ನಿನ್ನನ್ನು ಬಲವನ್ನು ಕುಂದಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸು” ಅಂದಳು.
Då sade Delila till Simson: "Säg mig varav det beror att du är så stark, och huru man skulle kunna binda och kuva dig."
7 ೭ ಅವನು, “ಹಸಿ ನಾರಿನ ಏಳು ಎಳೆಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ಹೇಳಿದನು.
Simson svarade henne: "Om man bunde mig med sju friska sensträngar, som icke hade hunnit torka, så bleve jag svag och vore såsom en vanlig människa."
8 ೮ ಫಿಲಿಷ್ಟಿಯ ಪ್ರಭುಗಳು ಅಂಥ ಹಸೀ ನಾರಿನ ಏಳು ಎಳೆಗಳನ್ನು ಅವಳಿಗೆ ತಂದುಕೊಟ್ಟರು.
Då buro filistéernas hövdingar till henne sju friska sensträngar, som icke hade hunnit torka; och hon band honom med dem.
9 ೯ ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ನಿನ್ನ ಮೇಲೆ ಫಿಲಿಷ್ಟಿಯರು ಬಂದರು” ಎಂದು ಕೂಗಿದಳು. ಅವನು ಬೆಂಕಿತಗುಲಿದ ಸೆಣಬಿನ ದಾರವನ್ನೋ ಎಂಬಂತೇ ಆ ಎಳೆಗಳನ್ನು ಹರಿದುಬಿಟ್ಟನು; ಹೀಗೆ ಅವನ ಶಕ್ತಿಯ ರಹಸ್ಯವು ತಿಳಿಯದೆ ಹೋಯಿತು.
Men hon hade lagt folk i försåt i den inre kammaren. Sedan ropade hon till honom: "Filistéerna äro över dig, Simson!" Då slet han sönder sensträngarna så lätt som en blångarnssnodd slites sönder, när den kommer intill elden. Alltså hade man ingenting fått veta om hans styrka.
10 ೧೦ ದೆಲೀಲಳು ತಿರುಗಿ ಸಂಸೋನನಿಗೆ, “ನೀನು ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ದಯವಿಟ್ಟು ನನಗೆ ತಿಳಿಸು” ಎಂದಳು.
Då sade Delila till Simson: "Du har ju bedragit mig och ljugit för mig. Men säg mig nu huru man skulle kunna binda dig."
11 ೧೧ ಅವನು ಅವಳಿಗೆ, “ಯಾವುದಕ್ಕೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯರಂತಾಗುವೆನು” ಅಂದನು.
Han svarade henne: "Om man bunde mig med nya tåg, som ännu icke hade blivit begagnade till något, så bleve jag svag och vore såsom en vanlig människa."
12 ೧೨ ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ, ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು.
Då tog Delila nya tåg och band honom med dem och ropade så till honom: "Filistéerna äro över dig, Simson!"; och folk låg i försåt i den inre kammaren. Men han slet tågen av sina armar, såsom hade det varit trådar.
13 ೧೩ ಆಗ ದೆಲೀಲಳು ಸಂಸೋನನಿಗೆ “ನೀನು ತಿರುಗಿ ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂದು ತಿಳಿಸು” ಅನ್ನಲು ಅವನು, “ನನ್ನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯಿದರೆ ಸಾಕು” ಎಂದು ಹೇಳಿದನು.
Då sade Delila till Simson: "Hittills har du bedragit mig och ljugit för mig; säg mig nu huru man skulle kunna binda dig." Han svarade henne: "Jo, om du vävde in de sju flätorna på mitt huvud i ränningen till din väv."
14 ೧೪ ಅವಳು ಅವನ ತಲೆಕೂದಲಿನ ಏಳು ಜಡೆಗಳನ್ನು ಗೂಟಕ್ಕೆ ಭದ್ರಮಾಡಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಿದಳು. ಅವನು ನಿದ್ರೆಯಿಂದ ಎಚ್ಚೆತ್ತು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು.
Hon slog alltså fast dem med pluggen och ropade sedan till honom: "Filistéerna äro över dig, Simson!" När han då vaknade upp ur sömnen, ryckte han loss vävpluggen jämte ränningen till väven.
15 ೧೫ ಆಕೆಯು ತಿರುಗಿ ಅವನಿಗೆ, “ನನ್ನನ್ನು ಪ್ರೀತಿಸುತ್ತೇನೆಂದು ನೀನು ನನಗೆ ಹೇಗೆ ಹೇಳುವೇ? ನಿನ್ನ ಮನಸ್ಸು ನನ್ನ ಮೇಲೆ ಇಲ್ಲವಲ್ಲಾ; ಮೂರು ಸಾರಿ ನನ್ನನ್ನು ವಂಚಿಸಿದಿ. ನಿನಗೆ ಇಂಥ ಮಹಾ ಶಕ್ತಿ ಯಾವುದರಿಂದ ಬಂದಿತೆಂಬುದನ್ನು ನನಗೆ ತಿಳಿಸಲಿಲ್ಲ” ಅಂದಳು.
Då sade hon till honom: "Huru kan du säga att du har mig kär, du som icke är uppriktig mot mig? Tre gånger har du nu bedragit mig och icke velat säga mig varpå det beror att du är så stark."
16 ೧೬ ಇದಲ್ಲದೆ ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸಿದ್ದರಿಂದ ಅವನಿಗೆ ಸಾಯುವುದು ಒಳ್ಳೆಯದು ಎನ್ನುವಷ್ಟು ಬೇಸರವಾಯಿತು.
Då hon nu dag efter dag hårt ansatte honom med denna sin begäran och plågade honom därmed, blev han så otålig att han kunde dö,
17 ೧೭ ಆಗ ಅವನು, “ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ; ನಾನು ಮಾತೃಗರ್ಭದಿಂದಲೇ ದೇವರಿಗೆ ಪ್ರತಿಷ್ಠಿತನಾದವನು (ನಾಜೀರನು). ನನ್ನ ತಲೆಯನ್ನು ಕ್ಷೌರಮಾಡುವುದಾದರೆ ನನ್ನ ಶಕ್ತಿಯು ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು.
och yppade så för henne hela sin hemlighet och sade till henne: "Ingen rakkniv har kommit på mitt huvud, ty jag är en Guds nasir allt ifrån min moders liv. Därför, om man rakar håret av mig, viker min styrka ifrån mig, så att jag bliver svag och är såsom alla andra människor."
18 ೧೮ ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಪ್ರಭುಗಳ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿರಿ: ಅವನು ನನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆ” ಎಂದು ಹೇಳಿ, ಕರೆಕಳುಹಿಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.
Då nu Delila insåg att han hade yppat för henne hela sin hemlighet, sände hon bud och kallade till sig filistéernas hövdingar; hon lät säga: "Kommen hitupp ännu en gång, ty han har nu yppat för mig hela sin hemlighet." Då kommo filistéernas hövdingar ditupp till henne och förde med sig penningarna.
19 ೧೯ ಆಕೆಯು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ, ಅವನನ್ನು ದುರ್ಬಲಪಡಿಸಿದಳು. ಅವನ ಶಕ್ತಿಯು ಅವನನ್ನು ಬಿಟ್ಟು ಹೋಯಿತು,
Nu lagade hon så, att han somnade in på hennes knän; och sedan hon hade kallat till sig en man som på hennes befallning skar av de sju flätorna på hans huvud, begynte hon att få makt över honom, och hans styrka vek ifrån honom.
20 ೨೦ ಆಗ ಅವಳು, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನು ಎಚ್ಚೆತ್ತು, ಮುಂಚಿನಂತೆ ಈಗಲೂ ಕೊಸರಿಕೊಂಡು ಹೋಗುವೆನು ಅಂದುಕೊಂಡನು; ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬದು ಅವನಿಗೆ ತಿಳಿಯಲಿಲ್ಲ.
Därefter ropade hon: "Filistéerna äro över dig, Simson!" När han då vaknade upp ur sömnen, tänkte han: "Jag gör mig väl fri, nu såsom de förra gångerna, och skakar mig lös"; ty han visste icke att HERREN hade vikit ifrån honom.
21 ೨೧ ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಹಿಟ್ಟನ್ನು ಬೀಸುವುದಕ್ಕೆ ಇರಿಸಿದರು.
Men filistéerna grepo honom och stucko ut ögonen på honom. Därefter förde de honom ned till Gasa och bundo honom med kopparfjättrar, och han måste mala i fängelset.
22 ೨೨ ಅಷ್ಟರಲ್ಲಿ ಅವನ ತಲೆಯ ಕೂದಲುಗಳು ಬೆಳೆಯ ತೊಡಗಿದವು.
Men hans huvudhår begynte åter växa ut, sedan det hade blivit avrakat.
23 ೨೩ ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಒಟ್ಟಾಗಿ ಸೇರಿಬಂದರು.
Och filistéernas hövdingar församlade sig för att anställa en stor offerfest åt sin gud Dagon och göra sig glada, ty de sade: "Vår gud har givit vår fiende Simson i vår hand."
24 ೨೪ ಜನರು ಸಂಸೋನನನ್ನು ನೋಡಿದಾಗ, “ನಮ್ಮ ದೇಶವನ್ನು ಹಾಳುಮಾಡಿ ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ ಈ ಶತ್ರುವನ್ನು ನಮ್ಮ ದೇವರು ನಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಎಂದು ಹಾಡು ಹಾಡಿ ಸಂತೋಷಿಸಿದರು.
Och när folket såg honom, lovade de likaledes sin gud och sade: "Vår gud har givit vår fiende i vår hand honom som förödde vårt land och slog så många av oss ihjäl."
25 ೨೫ ಅವರು ಸಂಭ್ರಮದಲ್ಲಿದ್ದಾಗ, “ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರೆದುಕೊಂಡು ಬನ್ನಿರಿ” ಅಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದ ಮಾಡಬೇಕಾಯಿತು.
Då nu deras hjärtan hade blivit glada, sade de: "Låt hämta Simson, för att han må förlusta oss." Och Simson blev hämtad ur fängelset och måste vara dem till förlustelse. Och de hade ställt honom mellan pelarna.
26 ೨೬ ಆಗ ಸಂಸೋನನು ತನ್ನನ್ನು ಕೈಹಿಡಿದು ನಡೆಸುವ ಹುಡುಗನಿಗೆ, “ನನ್ನ ಕೈಗಳನ್ನು ಬಿಡು; ನಾನು ಕೈಯಾಡಿಸಿ ಮನೆಗೆ ಆಧಾರವಾಗಿರುವ ಸ್ತಂಭಗಳನ್ನು ಹುಡುಕಿ ಅವುಗಳಿಗೆ ಸ್ವಲ್ಪ ಒರಗಿಕೊಳ್ಳುತ್ತೇನೆ” ಅಂದನು.
Men Simson sade till den gosse som höll honom vid handen: "Släpp mig och låt mig komma intill pelarna som huset vilar på, så att jag får luta mig mot dem."
27 ೨೭ ಆ ಮನೆಯು ಸ್ತ್ರೀಪುರುಷರಿಂದ ಕಿಕ್ಕಿರಿದು ಹೋಗಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು; ಸಂಸೋನನ ವಿನೋದವನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು.
Och huset var fullt med män och kvinnor, och filistéernas alla hövdingar voro där; och på taket voro vid pass tre tusen män och kvinnor, som sågo på, huru Simson förlustade dem.
28 ೨೮ ಆಗ ಸಂಸೋನನು ಯೆಹೋವನಿಗೆ, “ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು” ಎಂದು ಮೊರೆಯಿಟ್ಟು,
Men Simson ropade till HERREN och sade: "Herre, HERRE, tänk på mig och styrk mig allenast denna gång, o Gud, så att jag får taga hämnd på filistéerna för ett av mina båda ögon."
29 ೨೯ ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ, ಇನ್ನೊಂದನ್ನು ಎಡಗೈಯಿಂದಲೂ ಹಿಡಿದು, ಅವುಗಳನ್ನು ಒತ್ತಿ,
Därefter fattade Simson i de båda mittelpelare som huset vilade på, och tog fast tag mot dem; han fattade i den ena med högra handen och i den andra med vänstra.
30 ೩೦ “ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆಗ ಅ ಕಟ್ಟಡವು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಾಗಿತ್ತು.
Och Simson sade: "Må jag nu själv dö med filistéerna." Sedan böjde han sig framåt med sådan kraft, att huset föll omkull över hövdingarna och allt folket som fanns där. Och de som han så dödade vid sin död voro flera än de som han hade dödat, medan han levde.
31 ೩೧ ಅವನ ಬಂಧುಗಳೂ, ತಂದೆಯ ಮನೆಯವರೆಲ್ಲರೂ ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿದ್ದ ಅವನ ತಂದೆಯಾದ ಮಾನೋಹನ ಸಮಾಧಿಯಲ್ಲಿ ಹೂಣಿಟ್ಟರು. ಅವನು ಇಸ್ರಾಯೇಲರನ್ನು ಇಪ್ಪತ್ತು ವರ್ಷ ಪಾಲಿಸಿದ್ದನು.
Och hans bröder och hela hans familj kommo ditned och togo honom upp med sig och begrovo honom mellan Sorga och Estaol, i hans fader Manoas grav. Han hade då i tjugu år varit domare i Israel.