< ನ್ಯಾಯಸ್ಥಾಪಕರು 17 >
1 ೧ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕನೆಂಬ ಒಬ್ಬ ಮನುಷ್ಯನಿದ್ದನು. ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ರೂಪಾಯಿಗಳಿಗೋಸ್ಕರ ನೀನು ನನಗೆ ಕೇಳಿಸುವಂತೆ ಶಪಿಸಿದಿಯಲ್ಲಾ;
A był niektóry mąż z góry Efraim, imieniem Michas.
2 ೨ ಇಗೋ, ಆ ಸಾವಿರದ ನೂರು ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು” ಎಂದು ಹೇಳಿದನು. ಆಕೆಯು, “ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಅಂದಳು.
Ten rzekł do matki swojej: Tysiąc i sto srebrników, któreć było ukradziono, o któreś przeklinała, i mówiłaś, gdym i ja słyszał, oto srebro to u mnie jest, jam je wziął. I rzekł matka jego: Błogosławionyś, synu mój, od Pana.
3 ೩ ಅವನು ಆ ಸಾವಿರದ ನೂರು ರೂಪಾಯಿಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಡಲು ಆಕೆಯು, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಯೆಹೋವನಿಗೆ ಹರಕೆಮಾಡಿದ್ದೇನೆ; ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುವೆನು” ಎಂದು ಹೇಳಿ,
A tak wrócił tysiąc i sto srebrników matce swojej; i rzekła matka jego: Zaiste poświęciłam to srebro Panu z ręki mojej dla ciebie, synu mój, aby uczyniono z niego ryty i lany obraz, przetoż teraz oddawam ci je.
4 ೪ ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು.
I wrócił ono srebro matce swojej. Tedy wziąwszy matka jego dwieście srebrników, dała je złotnikowi; i uczynił z nich obraz ryty i lany, który był w domu Michasowym.
5 ೫ ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ, ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು, ತನ್ನ ಮಕ್ಕಳಲ್ಲಿ ಒಬ್ಬನನ್ನು ಅರ್ಚಕ ಸೇವೆಗಾಗಿ ಪ್ರತಿಷ್ಠಿಸಿದನು.
A miał ten Michas kaplicę bogów, sprawił też był Efod i Terafim, a poświęcił ręce jednego z synów swych, aby mu był za kapłana.
6 ೬ ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ಮನಸ್ಸಿಗೆ ಬಂದ ಹಾಗೆಯೇ ನಡೆದುಕೊಳ್ಳುತ್ತಿದ್ದನು.
W one dni nie było króla w Izraelu; każdy, co był dobrego w oczach jego, czynił.
7 ೭ ಯೆಹೂದದ ಬೇತ್ಲೆಹೇಮಿನವನೂ, ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿಯು ಉಪಜೀವನಕ್ಕೆ ಅನುಕೂಲವಾಗುವಂತೆ
I był młodzieniec z Betlehem Juda, które było w pokoleniu Juda, a ten będąc Lewitą był tam przychodniem.
8 ೮ ವಾಸಮಾಡಲು ತನ್ನ ಸ್ವಂತ ಊರನ್ನು ಬಿಟ್ಟು, ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದನು.
Wyszedł tedy on mąż z miasta Betlehem Juda, aby mieszkał, gdzieby mu się trafiło; i przyszedł na górę Efraim aż do domu Michasowego, idąc drogą swoją.
9 ೯ “ನೀನು ಎಲ್ಲಿಂದ ಬಂದಿ” ಎಂದು ಮೀಕನು ಅವನನ್ನು ಕೇಳಲು ಅವನು, “ನಾನು ಯೆಹೂದದ ಬೇತ್ಲೆಹೇಮಿನವನಾದ ಲೇವಿಯನು; ಉಪಜೀವನಕ್ಕೆ ಅನುಕೂಲವಾದ ವಾಸಸ್ಥಳವನ್ನು ಹುಡುಕಿಕೊಂಡು ಹೊರಟಿದ್ದೇನೆ” ಎಂದು ಉತ್ತರಕೊಟ್ಟನು.
Tedy rzekł do niego Michas: Skąd idziesz? I odpowiedział mu: Jam jest Lewita z Betlehem Juda, a idę, abym mieszkał gdzieby mi się trafiło.
10 ೧೦ ಮೀಕನು ಅವನಿಗೆ, “ನೀನು ನಮ್ಮಲ್ಲಿರು; ನಮಗೆ ತಂದೆಯೂ, ಯಾಜಕನೂ ಆಗು. ನಿನಗೆ ವರ್ಷಕ್ಕೆ ಹತ್ತು ಬೆಳ್ಳಿ ನಾಣ್ಯಗಳನ್ನೂ, ಬಟ್ಟೆಯನ್ನೂ, ಆಹಾರವನ್ನೂ ಕೊಡುತ್ತೇನೆ” ಅನ್ನಲು
I rzekł mu Michas: Zostań u mnie, a bądź mi za ojca i za kapłana, a jać dam dziesięć srebrników do roku, i dwie szaty, i pożywienie twoje; i szedł za nim on Lewita.
11 ೧೧ ಆ ಲೇವಿಯನು ಒಪ್ಪಿಕೊಂಡು ಅಲ್ಲೇ ವಾಸಮಾಡಿದನು; ಹೀಗೆ ಆ ಯೌವನಸ್ಥನು ಅವನ ಮಕ್ಕಳಲ್ಲೊಬ್ಬನಂತಾದನು.
I upodobało się Lewicie mieszkać z mężem onym; a był przy nim on młodzieniec jako jeden z synów jego.
12 ೧೨ ಮೀಕನು ಯೌವನಸ್ಥನಾದ ಆ ಲೇವಿಯನನ್ನು ಯಾಜಕಸೇವೆಗೋಸ್ಕರ ಪ್ರತಿಷ್ಠಿಸಿ ತನ್ನ ಮನೆಯಲ್ಲಿಟ್ಟುಕೊಂಡು,
I poświęcił Michas ręce Lewity, i był mu on młodzieniec za kapłana, i mieszkał w domu Michasowym.
13 ೧೩ “ಒಬ್ಬ ಲೇವಿಯು ನನ್ನ ಮನೆಯಲ್ಲಿ ಯಾಜಕನಾಗಿರುವುದರಿಂದ ಯೆಹೋವನು ನನ್ನನ್ನು ಆಶೀರ್ವದಿಸುವನೆಂದು ಬಲ್ಲೆನು” ಅಂದುಕೊಂಡನು.
Tedy rzekł Michas: Teraz wiem, że mi będzie Pan błogosławił, gdyż mam Lewitę za kapłana.