< ನ್ಯಾಯಸ್ಥಾಪಕರು 18 >
1 ೧ ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ದಾನ್ ಕುಲದವರಿಗೆ ಆ ವರೆಗೂ ಇಸ್ರಾಯೇಲರಲ್ಲಿ ಸ್ವತ್ತು ದೊರಕಿರಲಿಲ್ಲ, ಅವರು ತಮಗೋಸ್ಕರ ವಾಸಸ್ಥಳವನ್ನು ಹುಡುಕುತ್ತಿದ್ದರು.
In those days there was no king in Israel; and in those days the tribe of the Danites were seeking for themselves an inheritance to dwell in; for there had not fallen to their share up to that day among the tribes of Israel a [sufficient] inheritance.
2 ೨ ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ ಲಯಿಷ್ ದೇಶವನ್ನು ಸಂಚರಿಸಿ ನೋಡಿರಿ” ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.
And the children of Dan sent from their family five men from among themselves, men of valor, from Zor'ah, and from Eshtaol, to spy out the land, and to search it; and they said unto them, Go, search the land. And they came to the mountain of Ephraim, as far as the house of Micah, and lodged there.
3 ೩ ಇವರು ಮೀಕನ ಮನೆಯ ಹತ್ತಿರದಲ್ಲಿ ಆ ಯೌವನಸ್ಥನಾದ ಲೇವಿಯನು ಮಾತನಾಡುವುದನ್ನು ಕೇಳಿ, ಗುರುತುಹಿಡಿದು, ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತೀ? ಏನು ಸಿಕ್ಕುತ್ತದೆ” ಎಂದು ಅವನನ್ನು ಕೇಳಲು ಅವನು,
They were just by the house of Micah, when they recognized the voice of the young man the Levite; and they turned in thither, and said unto him, Who brought thee hither? and what doest thou in this place? and what hast thou here?
4 ೪ ಮೀಕನು ತನಗೆ ಇಂಥಿಂಥವುಗಳನ್ನು ಸಂಬಳವಾಗಿ ಕೊಡುತ್ತಾನೆಂದೂ, ತಾನು ಅವನ ಯಾಜಕನಾಗಿದ್ದೇನೆಂದೂ ಹೇಳಿದನು.
And he said unto them, Thus and thus hath Micah done unto me; and he hired me, and I became his priest.
5 ೫ ಆಗ ಅವರು ಅವನಿಗೆ, “ದಯವಿಟ್ಟು ನಮ್ಮ ಪ್ರಯಾಣವು ಸಫಲವಾಗುವುದೋ ಇಲ್ಲವೋ ಎಂಬುದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು” ಎಂದು ಬೇಡಿಕೊಳ್ಳಲು
And they said unto him, Ask counsel, we pray thee, of God, that we may know whether our way on which we are going shall be prosperous.
6 ೬ ಅವನು, “ಸಮಾಧಾನದಿಂದ ಹೋಗಿರಿ; ಯೆಹೋವನು ನಿಮ್ಮ ಪ್ರಯಾಣವನ್ನು ಕಟಾಕ್ಷಿಸುವನು” ಅಂದನು.
And the priest said unto them, Go in peace: before the Lord is your way on which ye will go.
7 ೭ ಆ ಐದು ಮಂದಿ ಹೊರಟು ಲಯಿಷಿಗೆ ಬಂದು, ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಒಡನಾಟವಿಲ್ಲದವರು ಎಂಬುದನ್ನು ತಿಳಿದುಕೊಂಡು
And the five men departed, and came to Layish, and saw the people that were therein, dwelling in security, after the manner of the Zidonians, quiet and secure; and no one inflicted any wrong in the land, as hereditary ruler; and they were far from the Zidonians, and had no concern with any man.
8 ೮ ಹಿಂದಿರುಗಿ ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಲ್ಲಿರುವ ತಮ್ಮ ಬಂಧುಗಳ ಬಳಿಗೆ ಬಂದರು. ಅವರ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ” ಎಂದು ಅವರನ್ನು ಕೇಳಲು
And they came unto their brethren to Zor'ah and Eshtaol: and their brethren said unto them, What [news bring] ye?
9 ೯ ಅವರು, “ಏಳಿರಿ, ಅವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮದೇಶ. ನೀವು ಸುಮ್ಮನೆ ಕುಳಿತುಕೊಳ್ಳುವುದೇಕೆ? ತಡಮಾಡದೆ ಹೊರಡಿರಿ; ಆ ದೇಶವನ್ನು ಸ್ವಾಧೀನಪಡಿಸಿಕೊಳ್ಳೋಣ.
And they said, Arise, and let us go up against them; for we have seen the land, and, behold, it is very good: and you keep still! be not slothful, to go, to enter to take possession of the land.
10 ೧೦ ನೀವು ಅಲ್ಲಿಗೆ ಹೋಗುವುದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ, ಅವರ ದೇಶವು ಬಹು ವಿಸ್ತಾರವಾಗಿದೆ ಎಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲಿ ಸಿಕ್ಕುವುದಿಲ್ಲ” ಅಂದರು.
When ye enter, ye will come unto a secure people, and the land is roomy; for God hath given it into your hand; a place where there is no want of anything that is on the earth.
11 ೧೧ ಆಗ ಚೊರ್ಗಾ ಎಷ್ಟಾವೋಲ್ ಊರುಗಳಿಂದ ಆರುನೂರು ಮಂದಿ ದಾನ್ ಕುಲದವರು ಯುದ್ಧ ಸನ್ನದ್ಧರಾಗಿ ಹೊರಟು,
And there went from there of the family of the Danites, out of Zor'ah and out of Eshtaol, six hundred men girded with weapons of war.
12 ೧೨ ಗಟ್ಟಾಹತ್ತಿ ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ಇಳಿದುಕೊಂಡರು. ಆದುದರಿಂದ ಆ ಸ್ಥಳಕ್ಕೆ ಇಂದಿನವರೆಗೂ ದಾನ್ಯರ ಪಾಳೆಯವೆಂಬ ಹೆಸರಿದೆ; ಅದು ಕಿರ್ಯತ್ಯಾರೀಮಿನ ಪಶ್ಚಿಮದಲ್ಲಿರುತ್ತದೆ.
And they went up, and encamped in Kiryath-ye'arim, in Judah; wherefore they called that place Machaneh-dan until this day; behold, it is behind Kiryath-ye'arim.
13 ೧೩ ಅವರು ಅಲ್ಲಿಂದ ಮುಂದೆ ಪ್ರಯಾಣಮಾಡಿ ಎಫ್ರಾಯೀಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರ ಬಂದರು.
And they passed thence unto the mountain of Ephraim, and came as far as the house of Micah.
14 ೧೪ ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ, “ಈ ಗ್ರಾಮದಲ್ಲಿ ಒಂದು ಏಫೋದೂ, ದೇವತಾಪ್ರತಿಮೆಗಳೂ, ಕೆತ್ತನೆಯ ಮತ್ತು ಎರಕದ ವಿಗ್ರಹಗಳೂ ಇರುತ್ತವೆಂಬುದು ನಿಮಗೆ ಗೊತ್ತುಂಟೋ?
Then commenced the five men that had gone to spy out the country of Layish, and said unto their brethren, Do ye know that there are in these houses an ephod, and teraphim, and a graven and molten image? and now consider what ye have to do.
15 ೧೫ ಈ ವಿಷಯದಲ್ಲಿ ಏನು ಮಾಡಬೇಕೆಂಬುದನ್ನು ಆಲೋಚಿಸಿರಿ” ಎಂದು ಹೇಳಿ ತಾವು ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸ ತೊಡಗಿದರು.
And they turned thitherward, and came to the house of the young man the Levite, unto the house of Micah, and asked him after his welfare.
16 ೧೬ ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರುನೂರು ಮಂದಿ ದಾನ್ಯರು ಬಂದು ಬಾಗಿಲಲ್ಲಿ ನಿಂತರು.
And the six hundred men who were of the children of Dan, girded with their weapons of war, remained standing by the entrance of the gate.
17 ೧೭ ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ, ಆ ಐದು ಮಂದಿ ಮನೆಯನ್ನು ಹೊಕ್ಕು, ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ, ಏಫೋದನ್ನೂ, ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು.
And the five men that had gone to spy out the land went up, and came in thither, and took the graven image, and the ephod, and the teraphim, and the molten image; and the priest stood in the entrance of the gate with the six hundred men that were girded with the weapons of war.
18 ೧೮ ಅವರು ಮೀಕನ ಮನೆಯನ್ನು ಹೊಕ್ಕು ಅವುಗಳನ್ನು ತೆಗೆದುಕೊಂಡು ಬರುವಾಗ ಯಾಜಕನು ಅದನ್ನು ಕಂಡು ಅವರಿಗೆ, “ನೀವು ಮಾಡಿದ್ದೇನು” ಅಂದನು.
And these went into Micah's house, and took the graven image, the ephod, and the teraphim, and the molten image; and the priest said unto them, What are ye doing?
19 ೧೯ ಅವರು ಅವನಿಗೆ, “ಸುಮ್ಮನಿರು; ಬಾಯಿ ಮುಚ್ಚಿಕೊಂಡು; ನಮ್ಮ ಜೊತೆಯಲ್ಲಿ ಬಂದು ನಮಗೆ ತಂದೆಯೂ, ಯಾಜಕನೂ ಆಗಿರು. ಒಂದು ಮನೆಗೆ ಯಾಜಕನಾಗಿರುವುದು ಉತ್ತಮವೋ ಅಥವಾ ಇಸ್ರಾಯೇಲ್ಯರ ಒಂದು ಕುಲಕ್ಕೂ, ಗೋತ್ರಕ್ಕೂ ಯಾಜಕನಾಗಿರುವುದು ಉತ್ತಮವೋ?” ಎಂದು ಕೇಳಿದರು.
And they said unto him, Be still, lay thy hand upon thy mouth, and go with us, and become to us a father and a priest: is it better that thou be a priest unto the house of one man, or that thou be a priest unto a tribe and a family in Israel?
20 ೨೦ ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ, ಕೆತ್ತನೆಯ ವಿಗ್ರಹವನ್ನೂ, ತೆಗೆದುಕೊಂಡು ಅವರ ಬಳಿಗೆ ಬಂದನು.
And the priest's heart became glad, and he took the ephod, and the teraphim, and the graven image, and came into the midst of the people.
21 ೨೧ ತರುವಾಯ ಅವರು ತಮ್ಮ ಹೆಂಡತಿ ಮಕ್ಕಳನ್ನೂ, ಕುರಿದನ ಮೊದಲಾದ ಸೊತ್ತನ್ನೂ ಮುಂದಾಗಿ ಕಳುಹಿಸಿ ತಾವು ಹಿಂದಿನಿಂದ ಹೊರಟರು.
And they turned and went away, and placed the little ones and the cattle and the heavy things before them.
22 ೨೨ ಅವರು ಮೀಕನ ಮನೆಯಿಂದ ದೂರವಾದ ಮೇಲೆ ಮೀಕನೂ ಅವನ ನೆರೆಹೊರೆಯವರೆಲ್ಲರೂ ದಾನ್ಯರನ್ನು ಹಿಂದಟ್ಟಿ
When they were at a distance from the house of Micah, the men that were in the houses near to Micah's house were called together, and they overtook the children of Dan.
23 ೨೩ ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ, “ನಿನಗೇನಾಯಿತು? ಗುಂಪನ್ನು ಕೂಡಿಸಿಕೊಂಡು ಬಂದದ್ದೇಕೆ” ಎಂದು ಕೇಳಲು
And they called unto the children of Dan, who turned their faces, and said unto Micah, What aileth thee, that thou hast called out thy people?
24 ೨೪ ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು.
And he said, My god which I made have ye taken away, and the priest, and are gone away; and what have I more? and what is this ye say unto me, What aileth thee?
25 ೨೫ ದಾನ್ಯರು ಅವನಿಗೆ, “ನಮ್ಮಲ್ಲಿ ಕೆಲವರು ತುಂಬಾ ಕೋಪಿಸಿಕೊಳ್ಳುವವರಿದ್ದಾರೆ; ಅವರು ನಿಮ್ಮ ಮೇಲೆ ಬಿದ್ದರೆ ನೀನೂ, ನಿನ್ನ ಮನೆಯವರೂ ಪ್ರಾಣವನ್ನು ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಬಾಯಿಮುಚ್ಚಿಕೊಂಡು ಹೋಗು” ಎಂದು ಹೇಳಿ ಮುಂದೆ ನಡೆದರು.
And the children of Dan said unto him, Cause not thy voice to be heard among us, lest men of an embittered spirit assail thee, and thou lose thy life, with the life of thy household.
26 ೨೬ ಅವರು ತನಗಿಂತ ಬಲಿಷ್ಠರೆಂದು ತಿಳಿದುಕೊಂಡು ಮೀಕನು ಹಿಂದಿರುಗಿ ಮನೆಗೆ ಹೋದನು.
And the children of Dan went on their way; and when Micah saw that they were too strong for him, he turned and went back unto his house.
27 ೨೭ ದಾನ್ಯರು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು ಲಯಿಷಿಗೆ ಹೋಗಿ ಸುಖದಿಂದಲೂ, ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು, ಅವರನ್ನು ಕತ್ತಿಯಿಂದ ಸಂಹರಿಸಿ, ಅವರ ಪಟ್ಟಣವನ್ನು ಸುಟ್ಟುಬಿಟ್ಟರು.
And they took what Micah had made, and the priest whom he had had, and came over Layish, over a people that were quiet and secure; and they smote them with the edge of the sword, and the city they burnt with fire.
28 ೨೮ ಆ ಪಟ್ಟಣವು ಚೀದೋನಿಗೆ ದೂರವಾಗಿದ್ದುದರಿಂದಲೂ, ಸಮೀಪದಲ್ಲಿ ಪರಿಚಯಸ್ಥರು ಯಾರು ಇಲ್ಲದೆ ಇದ್ದುದರಿಂದಲೂ, ಅವರಿಗೆ ಸಹಾಯದೊರಕಲಿಲ್ಲ. ಬೇತ್‌ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು.
And there was no deliverer; because it was far from Zidon, and the people had no business with any man; and it was in the valley that lieth by Beth-rechob. And they rebuilt the city, and dwelt therein.
29 ೨೯ ಮೊದಲು ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ದಾನ್ ಎಂದು ಹೆಸರಿಟ್ಟರು. ದಾನ್ ಎಂಬುದು ಇವರ ಮೂಲಪುರುಷನೂ ಇಸ್ರಾಯೇಲನ ಮಗನೂ ಆದ ದಾನನ ಹೆಸರು.
And they called the name of the city, Dan, after the name of Dan their father, who was born unto Israel: nevertheless, Layish was the name of the city at first.
30 ೩೦ ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.
And the children of Dan erected for themselves the graven image: and Jonathan, the son of Gershom, the son of Menasseh, he and his sons were priests to the tribe of Dan until the day of the exile of the land.
31 ೩೧ ಶೀಲೋವಿನಲ್ಲಿ ದೇವದರ್ಶನ ಗುಡಾರವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.
And they set up for themselves Micah's graven image, which he had made, all the time that the house of God was in Shiloh.