< ನ್ಯಾಯಸ್ಥಾಪಕರು 21 >
1 ೧ ಇಸ್ರಾಯೇಲರೆಲ್ಲರೂ ಮಿಚ್ಪೆಯಲ್ಲಿದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವುದಿಲ್ಲವೆಂದು ಆಣೆಯಿಟ್ಟಿದ್ದರು.
ইস্রায়েলী লোকজন মিস্পাতে এক শপথ নিয়েছিল: “আমাদের মধ্যে কেউই তার মেয়ের সঙ্গে বিন্যামীন গোষ্ঠীভুক্ত কোনও ছেলের বিয়ে দেবে না।”
2 ೨ ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತು, ಗಟ್ಟಿಯಾಗಿ ಅಳುತ್ತಾ,
লোকেরা বেথেলে গেল, এবং সন্ধ্যা পর্যন্ত তারা ঈশ্বরের সামনে বসে জোর গলায় প্রচণ্ড কান্নাকাটি করল।
3 ೩ “ಯೆಹೋವನೇ, ಇಸ್ರಾಯೇಲ್ಯರ ದೇವರೇ, ನಮ್ಮಲ್ಲಿ ಹೀಗೆ ಯಾಕೆ ಆಯಿತು? ಇಸ್ರಾಯೇಲರ ಒಂದು ಕುಲವು ಹಾಳಾಗಿ ಹೋಯಿತಲ್ಲಾ” ಎಂದು ಕೂಗಿದರು.
“ইস্রায়েলের ঈশ্বর, হে সদাপ্রভু,” তারা চিৎকার করে বলল, “ইস্রায়েলের মধ্যে এমন ঘটনা কেন ঘটল? আজ কেন ইস্রায়েল থেকে একটি গোষ্ঠী বিলুপ্ত হতে চলেছে?”
4 ೪ ಮರುದಿನ ಅವರು ಬೆಳಿಗ್ಗೆ ಎದ್ದು ಯಜ್ಞವೇದಿಯನ್ನು ಕಟ್ಟಿ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
পরদিন ভোরবেলায় লোকেরা এক যজ্ঞবেদি নির্মাণ করল এবং হোমবলি ও মঙ্গলার্থক-নৈবেদ্য উৎসর্গ করল।
5 ೫ ಮತ್ತು ಯೆಹೋವನ ಮುಂದೆ ಸಭೆ ಸೇರಿದಾಗ, ಬಾರದೆ ಇದ್ದಂಥ ಇಸ್ರಾಯೇಲರು ಯಾರಾರೆಂದು ವಿಚಾರಮಾಡಿದರು. ಯಾಕೆಂದರೆ ಮಿಚ್ಪೆಯಲ್ಲಿ, “ಯೆಹೋವನ ಸನ್ನಿಧಿಗೆ ಬಾರದವರನ್ನು ಕೊಂದು ಹಾಕುವೆವು” ಎಂದು ಆಣೆಯಿಟ್ಟು ಪ್ರಮಾಣಮಾಡಿದ್ದರು.
পরে ইস্রায়েলীরা জিজ্ঞাসা করল, “ইস্রায়েলের সব গোষ্ঠীর মধ্যে কারা সদাপ্রভুর সামনে সমবেত হয়নি?” কারণ তারা এক আনুষ্ঠানিক শপথ নিয়েছিল যে মিস্পাতে যদি কেউ সদাপ্রভুর সামনে না আসে তবে তাকে মেরে ফেলা হবে।
6 ೬ ಇಸ್ರಾಯೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ಕಂಡು ದುಃಖದಿಂದ, “ಅಯ್ಯೋ, ಇಸ್ರಾಯೇಲರಾದ ನಮ್ಮಲ್ಲಿ ಒಂದು ಕುಲವು ಕಡಿಮೆಯಾಯಿತಲ್ಲಾ;
ইত্যবসরে ইস্রায়েলীরা তাদের স্বজাতীয় বিন্যামীন গোষ্ঠীর জন্য শোকসন্তপ্ত হল। “আজ ইস্রায়েল থেকে একটি গোষ্ঠী বিচ্ছিন্ন হল,” তারা বলল।
7 ೭ ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವುದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವುದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟಿದ್ದೇವಲ್ಲಾ” ಎಂದು ಗೋಳಾಡಿದರು.
“আমরা কীভাবে তবে যারা এখনও অবশিষ্ট আছে তাদের জন্য স্ত্রীর বিধান করব, যেহেতু আমরা তো সদাপ্রভুর নামে শপথ নিয়েছি যে তাদের সঙ্গে আমাদের মেয়েদের বিয়ে দেব না।”
8 ೮ ಮಿಚ್ಪೆಯಲ್ಲಿ ಯೆಹೋವನ ಮುಂದೆ ಸಭೆ ಸೇರಿದಾಗ, ಅದಕ್ಕೆ ಬಾರದಿದ್ದ ಇಸ್ರಾಯೇಲರು ಯಾರಾದರೂ ಇದ್ದಾರೋ ಎಂದು ವಿಚಾರಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.
পরে তারা জিজ্ঞাসা করল, “ইস্রায়েলের গোষ্ঠীগুলির মধ্যে কোন গোষ্ঠী মিস্পাতে সদাপ্রভুর সামনে আসেনি?” তারা জানতে পারল যে যাবেশ-গিলিয়দ থেকে কেউ সেই সভায় যোগ দেওয়ার জন্য শিবিরে আসেনি।
9 ೯ ಜನರನ್ನು ಲೆಕ್ಕಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಯಾರೂ ಬರಲಿಲ್ಲವೆಂಬುದು ದೃಢವಾಯಿತು.
কারণ তারা যখন লোকগণনা করল, তখন দেখা গেল যে যাবেশ-গিলিয়দের লোকদের মধ্যে কেউ সেখানে নেই।
10 ೧೦ ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರ ಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ, “ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲಾ ನಿವಾಸಿಗಳನ್ನೂ, ಸ್ತ್ರೀಯರನ್ನೂ, ಚಿಕ್ಕ ಮಕ್ಕಳನ್ನೂ ಬಿಡದೆ ಸಂಹರಿಸಬೇಕು;
অতএব জনসমাজ 12,000 যোদ্ধাকে নির্দেশ দিয়ে পাঠাল যেন তারা যাবেশ-গিলিয়দে যায় এবং মহিলা ও শিশুসহ সেখানে বসবাসকারী সব লোককে তরোয়াল দিয়ে হত্যা করে।
11 ೧೧ ಹೇಗೂ ಪುರುಷರನ್ನು, ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲಮಾಡುವುದು ನಿಮ್ಮ ಕೆಲಸ” ಎಂದು ಆಜ್ಞಾಪಿಸಿ ಕಳುಹಿಸಿದರು.
“তোমাদের এরকম করতে হবে,” তারা বলল। “প্রত্যেক পুরুষমানুষকে এবং যে কুমারী নয়, এমন প্রত্যেক মহিলাকে হত্যা কোরো।”
12 ೧೨ ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರಿದ್ದರು. ಪಟ್ಟಣವನ್ನು ಸಂಹರಿಸುವುದಕ್ಕೆ ಹೋದವರು ಇವರನ್ನು ಉಳಿಸಿ, ಕಾನಾನ್ ದೇಶದ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು.
যাবেশ-গিলিয়দে বসবাসকারী লোকদের মধ্যে তারা এমন 400 জন তরুণীর খোঁজ পেল, যারা কোনো পুরুষমানুষের সঙ্গে কখনও শোয়নি, এবং তারা তাদের কনান দেশের শীলোতে অবস্থিত শিবিরে নিয়ে এল।
13 ೧೩ ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನ ವಾಕ್ಯವನ್ನು ಪ್ರಕಟಿಸಲು ಅವರು ತಿರುಗಿ ಬಂದರು.
পরে সমগ্র জনসমাজ রিম্মোণ পাষাণ-পাথরে বসবাসকারী বিন্যামীন গোষ্ঠীভুক্ত লোকদের কাছে এক শান্তি-প্রস্তাব দিয়ে পাঠাল।
14 ೧೪ ಇಸ್ರಾಯೇಲರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿ ತಂದ ಕನ್ಯೆಯರನ್ನು ಅವರಿಗೆ ಮದುವೆಮಾಡಿಕೊಟ್ಟರು; ಆದರೂ ಅನೇಕರಿಗೆ ಕನ್ಯೆಯರು ದೊರೆಯಲಿಲ್ಲ.
অতএব বিন্যামীন গোষ্ঠীভুক্ত লোকেরা সেই সময় ফিরে এল এবং যাবেশ-গিলিয়দের যে মেয়েদের বাঁচিয়ে রাখা হয়েছিল, তাদের সঙ্গে সেই লোকদের বিয়ে দেওয়া হল। কিন্তু তাদের সবার জন্য যথেষ্ট সংখ্যক মেয়ে পাওয়া গেল না।
15 ೧೫ ಯೆಹೋವನು ಇಸ್ರಾಯೇಲಿನ ಕುಲಗಳಲ್ಲಿ ಬೆನ್ಯಾಮೀನರನ್ನು ಬೇರ್ಪಡಿಸಿದ್ದರಿಂದ ಜನರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.
লোকেরা বিন্যামীনের জন্য মনঃক্ষুণ্ণ হল, কারণ সদাপ্রভু ইস্রায়েলের গোষ্ঠীগুলির মধ্যে এক ফাঁক তৈরি করলেন।
16 ೧೬ ಸಭೆಯ ಹಿರಿಯರು, “ಉಳಿದಿರುವ ಬೆನ್ಯಾಮೀನ್ಯರಿಗೋಸ್ಕರ ಹೆಂಡತಿಯರನ್ನು ದೊರಕಿಸಿ ಕೊಡುವುದು ಹೇಗೆ? ಅವರ ಸ್ತ್ರೀಯರೆಲ್ಲಾ ಸಂಹಾರವಾದರಲ್ಲಾ.
আর জনসমাজের প্রাচীনেরা বললেন, “বিন্যামীন গোষ্ঠীভুক্ত মহিলারা ধ্বংস হয়ে গিয়েছে, এখন অবশিষ্ট পুরুষমানুষদের জন্য আমরা কীভাবে স্ত্রীর ব্যবস্থা করব?
17 ೧೭ ಇಸ್ರಾಯೇಲ್ಯರ ಒಂದು ಪೂರ್ಣ ಕುಲವು ಅಳಿದುಹೋಗಬಾರದು; ತಪ್ಪಿಸಿಕೊಂಡು ಉಳಿದಿರುವ ಬೆನ್ಯಾಮೀನರಿಗೆ ಬಾಧ್ಯಸ್ಥರು ಹುಟ್ಟುಬೇಕಲ್ಲಾ.
বিন্যামীন গোষ্ঠীভুক্ত প্রাণে বেঁচে যাওয়া লোকদের বংশরক্ষাও তো করতে হবে,” তাঁরা বললেন, “যেন ইস্রায়েলের একটি গোষ্ঠী নিশ্চিহ্ন হয়ে না যায়।
18 ೧೮ ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಾಯೇಲರು ಶಾಪಗ್ರಸ್ತರಾಗಲಿ ಎಂದು ಆಣೆಯಿಟ್ಟುಕೊಂಡಿದ್ದ ಕಾರಣ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಕ್ಕಾಗುವುದಿಲ್ಲ” ಎಂದು ಮಾತನಾಡಿಕೊಳ್ಳುತ್ತಿದ್ದರು.
আমরা তো আমাদের মেয়েদের সঙ্গে তাদের বিয়ে দিতে পারব না, যেহেতু আমরা, ইস্রায়েলীরা এই শপথ নিয়েছি: ‘যে কেউ বিন্যামীন গোষ্ঠীভুক্ত কাউকে কন্যাদান করবে, সে অভিশপ্ত হোক।’
19 ೧೯ ಆಗ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬುದು ಅವರ ನೆನಪಿಗೆ ಬಂದಿತು. (ಶೀಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ, ಲೆಬೋನದ ದಕ್ಷಿಣಕ್ಕೂ ಇರುತ್ತದೆ.)
কিন্তু দেখো, সেই শীলোতে সদাপ্রভুর উদ্দেশে প্রতি বছর এক উৎসব হয়, যা বেথেলের উত্তরে, এবং বেথেল থেকে শিখিমের দিকে চলে যাওয়া পথের পূর্বদিকে, এবং লবোনার দক্ষিণ দিকে অবস্থিত।”
20 ೨೦ ಆಗ ಅವರು ಬೆನ್ಯಾಮೀನ್ಯರನ್ನು ಕರೆದು ಅವರಿಗೆ, “ಇಗೋ, ನೀವು ದ್ರಾಕ್ಷಿತೋಟಗಳಲ್ಲಿ ಅಡಗಿಕೊಳ್ಳಿರಿ;
অতএব তাঁরা বিন্যামীন গোষ্ঠীভুক্ত লোকদের নির্দেশ দিয়ে বললেন, “যাও ও দ্রাক্ষাক্ষেতে লুকিয়ে থাকো
21 ೨೧ ಶೀಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ, ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶೀಲೋವಿನ ಕನ್ಯೆಯರಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಸೀಮೆಗೆ ಓಡಿಹೋಗಿರಿ.
এবং লক্ষ্য রাখো। শীলোর তরুণীরা যখন দল বেঁধে নাচ করতে করতে বেরিয়ে আসবে, তখন দ্রাক্ষাক্ষেত থেকে তাড়াতাড়ি বেরিয়ে এসে তোমরা প্রত্যেকে তাদের মধ্যে এক একজনকে নিজেদের স্ত্রী করে নিয়ো। পরে বিন্যামীন দেশে ফিরে যেয়ো।
22 ೨೨ ಅವರ ತಂದೆಗಳೂ, ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಅಂದರು.
তাদের বাবারা বা ভাইরা যখন আমাদের কাছে অভিযোগ জানাবে, তখন আমরা তাদের বলব, ‘তাদের সাহায্য করার মাধ্যমে আমাদের একটু উপকার করো, কারণ যুদ্ধের সময় আমরা তাদের জন্য স্ত্রী পাইনি। তোমরা তোমাদের শপথ ভাঙার দোষে দোষী হবে না, কারণ তোমরা তো তোমাদের মেয়েদের তাদের হাতে তুলে দাওনি।’”
23 ೨೩ ಅದರಂತೆಯೇ ಬೆನ್ಯಾಮೀನ್ಯರು ನೃತ್ಯಮಾಡುತ್ತ ಹೊರಗೆ ಬಂದಿದ್ದ ಕನ್ಯೆಯರಲ್ಲಿ ತಮ್ಮ ಸಂಖ್ಯೆಗೆ ಸರಿಯಾಗುವಷ್ಟು ಮಂದಿಯನ್ನು ಹೆಂಡತಿಯರನ್ನಾಗಿ ಹಿಡಿದುಕೊಂಡು ತಮ್ಮ ಸ್ವಾಧೀನವಾದ ಭೂಮಿಗೆ ಹೋಗಿ ಅಲ್ಲಿ ಪಟ್ಟಣಗಳನ್ನು ಕಟ್ಟಿ ವಾಸಮಾಡಿದರು.
অতএব বিন্যামীন গোষ্ঠীভুক্ত লোকেরা সেরকমই করল। সেই তরুণীরা যখন নাচছিল, তখন প্রত্যেকজন পুরুষমানুষ এক একজনকে ধরে তার স্ত্রী হওয়ার জন্য তাকে তুলে নিয়ে গেল। পরে তারা তাদের অধিকারভুক্ত এলাকায় ফিরে গেল এবং নগরগুলি পুনর্নির্মাণ করে সেগুলিতে বসতি স্থাপন করল।
24 ೨೪ ಅನಂತರ ಇಸ್ರಾಯೇಲರು ತಮ್ಮ ತಮ್ಮ ಕುಲಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂದಿರುಗಿ ಹೋದರು.
সেই সময় ইস্রায়েলীরা সেই স্থান ত্যাগ করে প্রত্যেকে তাদের নিজস্ব অধিকার অনুসারে তাদের গোষ্ঠী ও বংশভুক্ত এলাকায়, নিজেদের ঘরে ফিরে গেল।
25 ೨೫ ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.
সেই সময় ইস্রায়েলে কোনও রাজা ছিলেন না; প্রত্যেকে, তাদের যা ভালো বলে মনে হত, তাই করত।