< ನ್ಯಾಯಸ್ಥಾಪಕರು 3 >

1 ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವುದಕ್ಕೂ,
וְאֵ֤לֶּה הַגֹּויִם֙ אֲשֶׁ֣ר הִנִּ֣יחַ יְהוָ֔ה לְנַסֹּ֥ות בָּ֖ם אֶת־יִשְׂרָאֵ֑ל אֵ֚ת כָּל־אֲשֶׁ֣ר לֹֽא־יָדְע֔וּ אֵ֖ת כָּל־מִלְחֲמֹ֥ות כְּנָֽעַן׃
2 ಇಸ್ರಾಯೇಲ್‍ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ,
רַ֗ק לְמַ֙עַן֙ דַּ֚עַת דֹּרֹ֣ות בְּנֵֽי־יִשְׂרָאֵ֔ל לְלַמְּדָ֖ם מִלְחָמָ֑ה רַ֥ק אֲשֶׁר־לְפָנִ֖ים לֹ֥א יְדָעֽוּם׃
3 ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಗಳಲ್ಲಿಯೂ ಬಾಳ್ ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ.
חֲמֵ֣שֶׁת ׀ סַרְנֵ֣י פְלִשְׁתִּ֗ים וְכָל־הַֽכְּנַעֲנִי֙ וְהַצִּ֣ידֹנִ֔י וְהַ֣חִוִּ֔י יֹשֵׁ֖ב הַ֣ר הַלְּבָנֹ֑ון מֵהַר֙ בַּ֣עַל חֶרְמֹ֔ון עַ֖ד לְבֹ֥וא חֲמָֽת׃
4 ತಾನು ಮೋಶೆಯ ಮೂಲಕವಾಗಿ ಇವರ ಪೂರ್ವಿಕರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೈಕೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದ್ದನು.
וַֽיִּהְי֕וּ לְנַסֹּ֥ות בָּ֖ם אֶת־יִשְׂרָאֵ֑ל לָדַ֗עַת הֲיִשְׁמְעוּ֙ אֶת־מִצְוֹ֣ת יְהוָ֔ה אֲשֶׁר־צִוָּ֥ה אֶת־אֲבֹותָ֖ם בְּיַד־מֹשֶֽׁה׃
5 ಇಸ್ರಾಯೇಲರು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ,
וּבְנֵ֣י יִשְׂרָאֵ֔ל יָשְׁב֖וּ בְּקֶ֣רֶב הַֽכְּנַעֲנִ֑י הַחִתִּ֤י וְהָֽאֱמֹרִי֙ וְהַפְּרִזִּ֔י וְהַחִוִּ֖י וְהַיְבוּסִֽי׃
6 ಅವರ ಕನ್ಯೆಯರನ್ನು ತಾವು ತಂದು, ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು, ಅವರ ದೇವತೆಗಳನ್ನು ಸೇವಿಸಿದರು.
וַיִּקְח֨וּ אֶת־בְּנֹותֵיהֶ֤ם לָהֶם֙ לְנָשִׁ֔ים וְאֶת־בְּנֹותֵיהֶ֖ם נָתְנ֣וּ לִבְנֵיהֶ֑ם וַיַּעַבְד֖וּ אֶת־אֱלֹהֵיהֶֽם׃ פ
7 ಇಸ್ರಾಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ, ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.
וַיַּעֲשׂ֨וּ בְנֵי־יִשְׂרָאֵ֤ל אֶת־הָרַע֙ בְּעֵינֵ֣י יְהוָ֔ה וַֽיִּשְׁכְּח֖וּ אֶת־יְהוָ֣ה אֱלֹֽהֵיהֶ֑ם וַיַּעַבְד֥וּ אֶת־הַבְּעָלִ֖ים וְאֶת־הָאֲשֵׁרֹֽות׃
8 ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.
וַיִּֽחַר־אַ֤ף יְהוָה֙ בְּיִשְׂרָאֵ֔ל וַֽיִּמְכְּרֵ֗ם בְּיַד֙ כּוּשַׁ֣ן רִשְׁעָתַ֔יִם מֶ֖לֶךְ אֲרַ֣ם נַהֲרָ֑יִם וַיַּעַבְד֧וּ בְנֵֽי־יִשְׂרָאֵ֛ל אֶת־כּוּשַׁ֥ן רִשְׁעָתַ֖יִם שְׁמֹנֶ֥ה שָׁנִֽים׃
9 ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.
וַיִּזְעֲק֤וּ בְנֵֽי־יִשְׂרָאֵל֙ אֶל־יְהוָ֔ה וַיָּ֨קֶם יְהוָ֥ה מֹושִׁ֛יעַ לִבְנֵ֥י יִשְׂרָאֵ֖ל וַיֹּֽושִׁיעֵ֑ם אֵ֚ת עָתְנִיאֵ֣ל בֶּן־קְנַ֔ז אֲחִ֥י כָלֵ֖ב הַקָּטֹ֥ן מִמֶּֽנּוּ׃
10 ೧೦ ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.
וַתְּהִ֨י עָלָ֥יו רֽוּחַ־יְהוָה֮ וַיִּשְׁפֹּ֣ט אֶת־יִשְׂרָאֵל֒ וַיֵּצֵא֙ לַמִּלְחָמָ֔ה וַיִּתֵּ֤ן יְהוָה֙ בְּיָדֹ֔ו אֶת־כּוּשַׁ֥ן רִשְׁעָתַ֖יִם מֶ֣לֶךְ אֲרָ֑ם וַתָּ֣עָז יָדֹ֔ו עַ֖ל כּוּשַׁ֥ן רִשְׁעָתָֽיִם׃
11 ೧೧ ದೇಶದಲ್ಲಿ ನಲ್ವತ್ತು ವರ್ಷಗಳ ಕಾಲ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು.
וַתִּשְׁקֹ֥ט הָאָ֖רֶץ אַרְבָּעִ֣ים שָׁנָ֑ה וַיָּ֖מָת עָתְנִיאֵ֥ל בֶּן־קְנַֽז׃ פ
12 ೧೨ ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.
וַיֹּסִ֙פוּ֙ בְּנֵ֣י יִשְׂרָאֵ֔ל לַעֲשֹׂ֥ות הָרַ֖ע בְּעֵינֵ֣י יְהוָ֑ה וַיְחַזֵּ֨ק יְהוָ֜ה אֶת־עֶגְלֹ֤ון מֶֽלֶךְ־מֹואָב֙ עַל־יִשְׂרָאֵ֔ל עַ֛ל כִּֽי־עָשׂ֥וּ אֶת־הָרַ֖ע בְּעֵינֵ֥י יְהוָֽה׃
13 ೧೩ ಇವನು ಅಮ್ಮೋನಿಯರನ್ನೂ, ಅಮಾಲೇಕ್ಯರನ್ನೂ ಕೂಡಿಸಿಕೊಂಡು ಹೊರಟು ಬಂದು ಇಸ್ರಾಯೇಲರನ್ನು ಸೋಲಿಸಿ ಖರ್ಜೂರನಗರವನ್ನು ಹಿಡಿದನು.
וַיֶּאֱסֹ֣ף אֵלָ֔יו אֶת־בְּנֵ֥י עַמֹּ֖ון וַעֲמָלֵ֑ק וַיֵּ֗לֶךְ וַיַּךְ֙ אֶת־יִשְׂרָאֵ֔ל וַיִּֽירְשׁ֖וּ אֶת־עִ֥יר הַתְּמָרִֽים׃
14 ೧೪ ಇಸ್ರಾಯೇಲರು ಅವನಿಗೆ ಹದಿನೆಂಟು ವರ್ಷ ದಾಸರಾಗಿದ್ದರು.
וַיַּעַבְד֤וּ בְנֵֽי־יִשְׂרָאֵל֙ אֶת־עֶגְלֹ֣ון מֶֽלֶךְ־מֹואָ֔ב שְׁמֹונֶ֥ה עֶשְׂרֵ֖ה שָׁנָֽה׃ ס
15 ೧೫ ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.
וַיִּזְעֲק֣וּ בְנֵֽי־יִשְׂרָאֵל֮ אֶל־יְהוָה֒ וַיָּקֶם֩ יְהוָ֨ה לָהֶ֜ם מֹושִׁ֗יעַ אֶת־אֵה֤וּד בֶּן־גֵּרָא֙ בֶּן־הַיְמִינִ֔י אִ֥ישׁ אִטֵּ֖ר יַד־יְמִינֹ֑ו וַיִּשְׁלְח֨וּ בְנֵי־יִשְׂרָאֵ֤ל בְּיָדֹו֙ מִנְחָ֔ה לְעֶגְלֹ֖ון מֶ֥לֶךְ מֹואָֽב׃
16 ೧೬ ಅವನು ತನಗೋಸ್ಕರ ಒಂದು ಗುದ್ದುಮೊಳ ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ
וַיַּעַשׂ֩ לֹ֨ו אֵה֜וּד חֶ֗רֶב וְלָ֛הּ שְׁנֵ֥י פֵיֹ֖ות גֹּ֣מֶד אָרְכָּ֑הּ וַיַּחְגֹּ֤ר אֹותָהּ֙ מִתַּ֣חַת לְמַדָּ֔יו עַ֖ל יֶ֥רֶךְ יְמִינֹֽו׃
17 ೧೭ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಒಪ್ಪಿಸಿದನು. ಎಗ್ಲೋನನು ಬಹಳ ದಪ್ಪನಾದ ವ್ಯಕ್ತಿ.
וַיַּקְרֵב֙ אֶת־הַמִּנְחָ֔ה לְעֶגְלֹ֖ון מֶ֣לֶךְ מֹואָ֑ב וְעֶגְלֹ֕ון אִ֥ישׁ בָּרִ֖יא מְאֹֽד׃
18 ೧೮ ಏಹೂದನು ಕಪ್ಪಕಾಣಿಕೆಯನ್ನು ಒಪ್ಪಿಸಿದ ಮೇಲೆ ಅದನ್ನು ಹೊತ್ತುಕೊಂಡು ಬಂದಿದ್ದ ಆಳುಗಳನ್ನು ಕಳುಹಿಸಿಬಿಟ್ಟು,
וַֽיְהִי֙ כַּאֲשֶׁ֣ר כִּלָּ֔ה לְהַקְרִ֖יב אֶת־הַמִּנְחָ֑ה וַיְשַׁלַּח֙ אֶת־הָעָ֔ם נֹשְׂאֵ֖י הַמִּנְחָֽה׃
19 ೧೯ ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಿರುಗಿ ಎಗ್ಲೋನನ ಬಳಿಗೆ ಬಂದು, “ಅರಸನೇ, ನಿನಗೆ ತಿಳಿಸತಕ್ಕದ್ದೊಂದು ರಹಸ್ಯವಿದೆ” ಅಂದನು. ಆಗ ಅರಸನು, “ನಿಶ್ಯಬ್ದ” ಅನ್ನಲು ಅವನ ಸೇವಕರೆಲ್ಲರೂ ಹೊರಗೆ ಹೋದರು.
וְה֣וּא שָׁ֗ב מִן־הַפְּסִילִים֙ אֲשֶׁ֣ר אֶת־הַגִּלְגָּ֔ל וַיֹּ֕אמֶר דְּבַר־סֵ֥תֶר לִ֛י אֵלֶ֖יךָ הַמֶּ֑לֶךְ וַיֹּ֣אמֶר הָ֔ס וַיֵּֽצְאוּ֙ מֵֽעָלָ֔יו כָּל־הָעֹמְדִ֖ים עָלָֽיו׃
20 ೨೦ ಅರಸನು ತನ್ನ ತಂಪಾದ ಮೇಲಂತಸ್ತಿನ ಕೋಣೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಹೋಗಿ, “ನಿನಗೆ ಹೇಳಬೇಕಾದದ್ದೊಂದು ದೈವೋಕ್ತಿಯಿದೆ” ಅನ್ನಲು ಅವನು ತನ್ನ ಸಿಂಹಾಸನದಿಂದ ಎದ್ದನು.
וְאֵה֣וּד ׀ בָּ֣א אֵלָ֗יו וְהֽוּא־יֹ֠שֵׁב בַּעֲלִיַּ֨ת הַמְּקֵרָ֤ה אֲשֶׁר־לֹו֙ לְבַדֹּ֔ו וַיֹּ֣אמֶר אֵה֔וּד דְּבַר־אֱלֹהִ֥ים לִ֖י אֵלֶ֑יךָ וַיָּ֖קָם מֵעַ֥ל הַכִּסֵּֽא׃
21 ೨೧ ಆಗ ಏಹೂದನು ಎಡಗೈ ಚಾಚಿ ಬಲಗಡೆಯ ಸೊಂಟಕ್ಕೆ ಕಟ್ಟಿದ್ದ ಕತ್ತಿಯನ್ನು ಹಿರಿದು ಅವನ ಹೊಟ್ಟೆಯಲ್ಲಿ ತಿವಿದನು.
וַיִּשְׁלַ֤ח אֵהוּד֙ אֶת־יַ֣ד שְׂמֹאלֹ֔ו וַיִּקַּח֙ אֶת־הַחֶ֔רֶב מֵעַ֖ל יֶ֣רֶךְ יְמִינֹ֑ו וַיִּתְקָעֶ֖הָ בְּבִטְנֹֽו׃
22 ೨೨ ಆ ಕತ್ತಿ ಹಿಡಿಯ ಸಮೇತ ಹೊಟ್ಟೆಯೊಳಗೆ ಹೊಕ್ಕಿತು. ಅವನು ಕತ್ತಿಯನ್ನು ಹೊರಗೆ ತೆಗೆಯದಿದ್ದುದರಿಂದ ಕೊಬ್ಬು ಕತ್ತಿಯನ್ನು ಸುತ್ತಿಕೊಂಡಿತು; ಕೊಬ್ಬು ಬೆನ್ನಿನಿಂದ ಹೊರಗೆ ಬಂದಿತು.
וַיָּבֹ֨א גַֽם־הַנִּצָּ֜ב אַחַ֣ר הַלַּ֗הַב וַיִּסְגֹּ֤ר הַחֵ֙לֶב֙ בְּעַ֣ד הַלַּ֔הַב כִּ֣י לֹ֥א שָׁלַ֛ף הַחֶ֖רֶב מִבִּטְנֹ֑ו וַיֵּצֵ֖א הֽ͏ַפַּרְשְׁדֹֽנָה׃
23 ೨೩ ಏಹೂದನು ಪಡಸಾಲೆಗೆ ಬಂದು, ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ ಬೀಗಹಾಕಿ ಹೊರಟು ಹೋದನು.
וַיֵּצֵ֥א אֵה֖וּד הַֽמִּסְדְּרֹ֑ונָה וַיִּסְגֹּ֞ר דַּלְתֹ֧ות הָעַלִיָּ֛ה בַּעֲדֹ֖ו וְנָעָֽל׃
24 ೨೪ ತರುವಾಯ ಸೇವಕರು ಅಲ್ಲಿ ಬಂದು ಬಾಗಿಲಿಗೆ ಬೀಗಹಾಕಿರುವುದನ್ನು ಕಂಡು, ಅರಸನು ತಂಪಾದ ಕೋಣೆಗೆ ಸೇರಿದ ಪಾಯಖಾನೆಗೆ ಹೋಗಿರಬೇಕು ಅಂದುಕೊಂಡು
וְה֤וּא יָצָא֙ וַעֲבָדָ֣יו בָּ֔אוּ וַיִּרְא֕וּ וְהִנֵּ֛ה דַּלְתֹ֥ות הָעֲלִיָּ֖ה נְעֻלֹ֑ות וַיֹּ֣אמְר֔וּ אַ֣ךְ מֵסִ֥יךְ ה֛וּא אֶת־רַגְלָ֖יו בַּחֲדַ֥ר הַמְּקֵרָֽה׃
25 ೨೫ ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಕದಗಳು ತೆರೆಯಲ್ಪಡದೆ ಇರುವುದನ್ನು ನೋಡಿ ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆಯಲು, ಇಗೋ, ಅವರ ಒಡೆಯನು ಸತ್ತುಬಿದ್ದಿದ್ದನು.
וַיָּחִ֣ילוּ עַד־בֹּ֔ושׁ וְהִנֵּ֛ה אֵינֶ֥נּוּ פֹתֵ֖חַ דַּלְתֹ֣ות הָֽעֲלִיָּ֖ה וַיִּקְח֤וּ אֶת־הַמַּפְתֵּ֙חַ֙ וַיִּפְתָּ֔חוּ וְהִנֵּה֙ אֲדֹ֣נֵיהֶ֔ם נֹפֵ֥ל אַ֖רְצָה מֵֽת׃
26 ೨೬ ಅವರು ಅರಸನಿಗಾಗಿ ಕಾಯುತ್ತಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ಹೊಳೆದಾಟಿ ಸೆಯೀರಾ ಎಂಬಲ್ಲಿಗೆ ಬಂದು,
וְאֵה֥וּד נִמְלַ֖ט עַ֣ד הִֽתְמַהְמְהָ֑ם וְהוּא֙ עָבַ֣ר אֶת־הַפְּסִילִ֔ים וַיִּמָּלֵ֖ט הַשְּׂעִירָֽתָה׃
27 ೨೭ ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು.
וַיְהִ֣י בְּבֹואֹ֔ו וַיִּתְקַ֥ע בַּשֹּׁופָ֖ר בְּהַ֣ר אֶפְרָ֑יִם וַיֵּרְד֨וּ עִמֹּ֧ו בְנֵֽי־יִשְׂרָאֵ֛ל מִן־הָהָ֖ר וְה֥וּא לִפְנֵיהֶֽם׃
28 ೨೮ ಅವನು ಅವರ ನಾಯಕನಾಗಿ, “ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.
וַיֹּ֤אמֶר אֲלֵהֶם֙ רִדְפ֣וּ אַחֲרַ֔י כִּֽי־נָתַ֨ן יְהוָ֧ה אֶת־אֹיְבֵיכֶ֛ם אֶת־מֹואָ֖ב בְּיֶדְכֶ֑ם וַיֵּרְד֣וּ אַחֲרָ֗יו וַֽיִּלְכְּד֞וּ אֶת־מַעְבְּרֹ֤ות הַיַּרְדֵּן֙ לְמֹואָ֔ב וְלֹֽא־נָתְנ֥וּ אִ֖ישׁ לַעֲבֹֽר׃
29 ೨೯ ಅವರು ಆ ಕಾಲದಲ್ಲಿ ಪುಷ್ಟರೂ ಪರಾಕ್ರಮಿಗಳೂ ಆದ ಸುಮಾರು ಹತ್ತು ಸಾವಿರ ಮಂದಿ ಮೋವಾಬ್ಯರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದಂತೆ ಹತ್ಯೆಮಾಡಿದರು.
וַיַּכּ֨וּ אֶת־מֹואָ֜ב בָּעֵ֣ת הַהִ֗יא כַּעֲשֶׂ֤רֶת אֲלָפִים֙ אִ֔ישׁ כָּל־שָׁמֵ֖ן וְכָל־אִ֣ישׁ חָ֑יִל וְלֹ֥א נִמְלַ֖ט אִֽישׁ׃
30 ೩೦ ಆ ದಿನದಲ್ಲಿ ಮೋವಾಬ್ಯರು ಇಸ್ರಾಯೇಲ್ಯರಿಂದ ತಗ್ಗಿಸಲ್ಪಟ್ಟರು. ದೇಶದಲ್ಲಿ ಎಂಭತ್ತು ವರ್ಷ ಸಮಾಧಾನವಿತ್ತು.
וַתִּכָּנַ֤ע מֹואָב֙ בַּיֹּ֣ום הַה֔וּא תַּ֖חַת יַ֣ד יִשְׂרָאֵ֑ל וַתִּשְׁקֹ֥ט הָאָ֖רֶץ שְׁמֹונִ֥ים שָׁנָֽה׃ ס
31 ೩೧ ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ತಿವಿಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಾಯೇಲರನ್ನು ರಕ್ಷಿಸಿದನು.
וְאַחֲרָ֤יו הָיָה֙ שַׁמְגַּ֣ר בֶּן־עֲנָ֔ת וַיַּ֤ךְ אֶת־פְּלִשְׁתִּים֙ שֵֽׁשׁ־מֵאֹ֣ות אִ֔ישׁ בְּמַלְמַ֖ד הַבָּקָ֑ר וַיֹּ֥שַׁע גַּם־ה֖וּא אֶת־יִשְׂרָאֵֽל׃ ס

< ನ್ಯಾಯಸ್ಥಾಪಕರು 3 >