< ನ್ಯಾಯಸ್ಥಾಪಕರು 4 >
1 ೧ ಏಹೂದನು ಮರಣಹೊಂದಿದ ನಂತರ ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾಗಿದ್ದರು.
Tukun Ehud el misa, mwet Israel elos sifilpa orekma koluk ye mutun LEUM GOD.
2 ೨ ಯೆಹೋವನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ಒಪ್ಪಿಸಿಕೊಟ್ಟನು. ಹರೋಷೆತ್ ಹಗೊಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಧಿಪತಿಯಾಗಿದ್ದನು.
Ke ma inge, LEUM GOD El eisalosyang nu inpaol Jabin, sie tokosra lun mwet Canaan su leumi siti Hazor. Mwet se ma kol mwet mweun lal an pa Sisera, su muta in acn se pangpang Harosheth-lun-mwet-Gentile.
3 ೩ ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.
Oasr chariot osra eufoko natul Jabin, ac el leumi mwet Israel ac akkeokyalos ke lusen yac longoul. Na mwet Israel elos wowoyak nu sin LEUM GOD ac siyuk kasru sel.
4 ೪ ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ, ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲರಲ್ಲಿ ನ್ಯಾಯತೀರ್ಪನ್ನು ಮಾಡುತ್ತಿದ್ದಳು.
In pacl sac Deborah, mutan kial Lappidoth, sie mutan palu, el oayapa mwet nununku se lun mwet Israel.
5 ೫ ಆಕೆ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರ ವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಕುಳಿತುಕೊಂಡಿರುತ್ತಿದ್ದಳು. ಇಸ್ರಾಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.
El ac muta ye sak palm soko, pangpang Palm lal Deborah, inmasrlon Ramah ac Bethel fineol uh in facl Ephraim, ac mwet Israel elos ac tuku nu yorol tuh elan oru nununku lal kaclos.
6 ೬ ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಬರಲು ಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ನಿನಗೆ, ‘ಎದ್ದು ನಫ್ತಾಲಿ, ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
Sie len ah el sapla nu sel Barak, wen natul Abinoam, nu in siti Kedesh in Naphtali ac fahk nu sel, “LEUM GOD lun Israel el sapkin nu sum ac fahk ouinge, ‘Eis singoul tausin mwet sin sruf lal Naphtali ac sruf lal Zebulun, ac kololos nu Fineol Tabor.
7 ೭ ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ’” ಅಂದಳು.
Nga ac fah usalu Sisera, captain lun mwet mweun lal Jabin, in mweuni kom ke Infacl Kishon. El ac us chariot ac mwet mweun lal an, tusruktu nga fah asot kutangla nu sum.”’
8 ೮ ಬಾರಾಕನು ಆಕೆಗೆ, “ನೀನು ನನ್ನ ಸಂಗಡ ಬರುವುದಾದರೆ ಹೋಗುತ್ತೇನೆ; ಇಲ್ಲವಾದರೆ ಹೋಗುವುದಿಲ್ಲ” ಅನ್ನಲು
Na Barak el topuk ac fahk, “Nga ac som kom fin wiyu, tuh kom fin tia wiyu, nga ac fah tia som.”
9 ೯ ಆಕೆಯು, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲಿ ಉಂಟಾಗುವ ಗೌರವ ನಿನಗೆ ಸಲ್ಲುವುದಿಲ್ಲ. ಯಾಕೆಂದರೆ ಒಬ್ಬ ಸ್ತ್ರೀ ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುವನು” ಎಂದು ಹೇಳಿ ದೆಬೋರಳು ಬಾರಾಕನೊಡನೆ ಕೆದೆಷಿಗೆ ಹೋದಳು.
Ac Deborah el fahk nu sel Barak, “Aok, nga ac wi kom, tusruktu kom ac fah tia akfulatyeyuk ke kutangla se inge, mweyen LEUM GOD El ac eisalang Sisera nu inpoun sie mutan.” Na Deborah el welul Barak ac som nu Kedesh.
10 ೧೦ ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಯಿಸಿದನು. ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು, ದೆಬೋರಳೂ ಅವರೊಂದಿಗೆ ಹೋದಳು.
Barak el pangonma mwet in sruf lal Naphtali ac sruf lal Zebulun nu Kedesh, ac oasr tausin singoul mwet welul. Ac Deborah el welul som.
11 ೧೧ (ಕೇನ್ಯನಾದ) ಹೆಬೆರನು ಉಳಿದ ಕೇನ್ಯರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು. ಕೇನ್ಯರು ಮೋಶೆಯ ಮಾವನಾದ ಹೋಬಾಬನ ವಂಶದವರು. ಹೆಬೆರನು ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದ ವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.
In pacl se inge Heber mwet Ken el tulokunak lohm nuknuk sel apkuran nu Kedesh, fototo nu ke sak oak soko in acn Zanannim. El tuh srengla liki mwet Ken wial ah, su fwil natul Hobab, sou lun mutan kial Moses.
12 ೧೨ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ
Ke Sisera el lohng mu Barak el fahsryak nu Fineol Tabor,
13 ೧೩ ಅವನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನೂ, ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಅನ್ಯಜನರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.
el pangoneni chariot osra eufoko ac mwet lal nukewa, ac supwalosla liki acn Harosheth-lun-mwet-Gentile nu Infacl Kishon.
14 ೧೪ ಆಗ ದೆಬೋರಳು ಬಾರಾಕನಿಗೆ, “ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇಂದೇ. ನಿಶ್ಚಯವಾಗಿ ಆತನು ತಾನೇ ನಿನಗೆ ಮುಂದಾಗಿ ಯುದ್ಧಕ್ಕೆ ಹೊರಡುವನು” ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದ ಇಳಿದನು.
Na Deborah el fahk nu sel Barak, “Fahsrot tuh LEUM GOD El kol kom. Misenge El asot kutangla nu sum facl Sisera.” Na Barak el tufoki Fineol Tabor me wi tausin singoul mwet mweun lal.
15 ೧೫ ಯೆಹೋವನು ಸೀಸೆರನನ್ನು ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಗೊಳಿಸಿ, ಕತ್ತಿಗೆ ತುತ್ತಾಗಿಸಿದನು. ಸೀಸೆರನು ರಥದಿಂದ ಇಳಿದು ಓಡಿಹೋದನು.
Ke Barak ac mwet mweun lal elos mweun, LEUM GOD El arulana akfohsyalak Sisera ac mwet mweun lal wi chariot natulos. Na Sisera el srola liki chariot natul ac kasrusr kaing.
16 ೧೬ ಬಾರಾಕನು ಅವನ ಸೈನ್ಯರಥಗಳನ್ನು ಅನ್ಯಜನರ ಹರೋಷೆತಿನ ವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲರೂ ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.
Barak el ukwe chariot inge ac mwet mweun inge nwe ke na sun acn Harosheth-lun-mwet-Gentile, ac mwet lal Sisera nukewa anwuki ac wangin sie lula.
17 ೧೭ ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದುದರಿಂದ ಸೀಸೆರನು ಕಾಲುನಡಿಗೆಯಿಂದ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳ ಗುಡಾರದ ಕಡೆಗೆ ಹೋದನು.
Sisera el kaing nwe sun lohm nuknuk sel Jael, mutan kial Heber mwet Ken, mweyen oasr aetui inmasrlol Tokosra Jabin ac sou lal Heber.
18 ೧೮ ಯಾಯೇಲಳು ಹೊರಗೆ ಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ, “ಸ್ವಾಮೀ, ಒಳಗೆ ಬನ್ನಿರಿ; ಹೆದರಬೇಡಿರಿ, ನಮ್ಮಲ್ಲಿಗೆ ಬನ್ನಿರಿ” ಅನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆಯು ಅವನನ್ನು ಕಂಬಳಿಯಿಂದ ಮುಚ್ಚಿದಳು.
Jael el illa in sonol Sisera ac el fahk nu sel, “Utyak, leum se. Utyak nu in lohm nuknuk sik, ac nimet sangeng.” Na Sisera el utyak, ac Jael el okanulla ye nuknuk se.
19 ೧೯ ಅವನು ಆಕೆಗೆ, “ದಯವಿಟ್ಟು ಸ್ವಲ್ಪ ನೀರನ್ನು ಕೊಡು, ನನಗೆ ಬಹಳ ಬಾಯಾರಿಕೆಯಾಗಿದೆ” ಅಂದನು. ಆಕೆಯು ಬುದ್ದಲಿಯನ್ನು ಬಿಚ್ಚಿ ಹಾಲನ್ನು ಕುಡಿಯಲು ಕೊಟ್ಟು ಅವನನ್ನು ಪುನಃ ಮುಚ್ಚಿದಳು.
Sisera el fahk nu sel Jael, “Nga malu. Nunak munas ase kutu kof an nimuk.” Jael el ikasla sie pak orekla ke kulun kosro mwe neinyuk milk, ac sang Sisera el nimya, na el sifil okanulla.
20 ೨೦ ಅವನು ಆಕೆಗೆ, “ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು ‘ಇಲ್ಲಿ ಒಬ್ಬ ಮನುಷ್ಯನಿದ್ದಾನೆಯೇ ಎಂದು ವಿಚಾರಿಸಿದರೆ’ ಇಲ್ಲ ಎಂದು ಹೇಳು” ಎಂದು ಹೇಳಿದನು.
Ac Sisera el fahk nu sel Jael, “Tu na mutunoa an. Fin oasr mwet tuku ac siyuk lah oasr mwet inge, kom fah fahk mu wangin.”
21 ೨೧ ಹೆಬೆರನ ಹೆಂಡತಿಯಾದ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ, ಒಂದು ಸುತ್ತಿಗೆಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ, ಮೆಲ್ಲಗೆ ಹತ್ತಿರ ಹೋಗಿ, ಅವನ ತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು.
Sisera el arulana totola, oru el topla na motulla. Jael el eis sie hammer ac soko kwi ma sang sruok lohm nuknuk ah, na el mahsrikyak nu yorol. El sang kwi soko ah patikya ke la sifal Sisera nwe ke sasla ke layen saya ke sifal nu infohk uh. Na el misa.
22 ೨೨ ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿಗೆ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು, “ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆ” ಎಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತು ಬಿದ್ದದ್ದನ್ನು ಕಂಡನು. ಅವನ ಕಣ್ತಲೆಯಲ್ಲಿ ಗೂಟವು ಜಡಿದಿತ್ತು.
Ke Barak el tuku in sokol Sisera, Jael el tufoki in sonol ac fahk nu sel, “Fahsru, nga ac fahkak mwet se su kom suk an.” Na Barak el welul utyak, ac liyal Sisera ke el misa oan infohk uh, ac kwi soko ah sasla ke sifal.
23 ೨೩ ಆ ದಿನದಲ್ಲಿ ದೇವರು ಕಾನಾನ್ಯ ರಾಜನಾದ ಯಾಬೀನನನ್ನು ಇಸ್ರಾಯೇಲರ ಮುಂದೆ ತಗ್ಗಿಸಿದನು.
In len sac, God El sang kutangla nu sin Israel facl Jabin, tokosra lun mwet Canaan.
24 ೨೪ ಇಸ್ರಾಯೇಲರ ಹಸ್ತವು ಹೆಚ್ಚು ಹೆಚ್ಚು ಬಲಗೊಂಡದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು.
Mwet Israel elos kui ac arulana liksreni lainul Jabin, tokosra lun mwet Canaan, nwe ke na elos kunausulla.