< ನ್ಯಾಯಸ್ಥಾಪಕರು 5 >

1 ಆ ದಿನದಲ್ಲಿ ದೆಬೋರಳೂ ಅಬೀನೋವಮನ ಮಗನಾದ ಬಾರಾಕನೂ ಈ ಗೀತೆಯನ್ನು ಹಾಡಿದರು:
Debora kple Barak, Abinoam vi la, dzi ha sia tso woƒe dziɖuɖu wɔnuku la ŋuti.
2 “ಇಸ್ರಾಯೇಲರಲ್ಲಿ ಸೇನಾ ನಾಯಕರು ಎದ್ದಿದ್ದಾರೆ; ಜನರು ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ.
“Mikafu Yehowa! Israel ƒe kplɔlawo dze ŋgɔ dzideƒotɔe. Ameawo kplɔ wo ɖo dzidzɔtɔe! Ɛ̃, mikafu Yehowa!
3 “ಅರಸರೇ, ಕೇಳಿರಿ! ಪ್ರಭುಗಳೇ, ಕಿವಿಗೊಡಿರಿ! ನಾನು ಯೆಹೋವನನ್ನು ಕೀರ್ತಿಸುವೆನು; ನಾನು ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತುತಿ ಗೀತೆ ಹಾಡುವೆನು.
“Miɖo to, mi fiawo kple fiaviwo, mele ha dzi ge tso Yehowa ŋu, tso Israel ƒe Mawu la ŋu.
4 “ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತ್ಯವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶವು ನಡುಗಿತು; ಮೇಘಮಂಡಲವು ಮಳೆಗರೆಯಿತು.
Esi nèkplɔ mí do goe tso Seir Heto Edom ƒe anyigba dzi la, anyigba dzo nyanyanya, dziƒo nu ʋu eye tsi dza.
5 ಯೆಹೋವನ ಮುಂದೆ ಪರ್ವತಗಳು ಕರಗಿಹೋದವು, ಇಸ್ರಾಯೇಲಿನ ದೇವರಾದ ಯೆಹೋವನ ಎದುರಿಗೆ ಆ ಸೀನಾಯಿಬೆಟ್ಟವೂ ನೀರಾಯಿತು.
Ɛ̃, towo ʋuʋu, Sinai to la gɔ̃ hã ʋuʋu kpekpekpe le Yehowa, Israel ƒe Mawu la ŋkume!
6 “ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ, ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತುಹೋಯಿತು. ಪ್ರಯಾಣಿಕರು ಅಂಕುಡೊಂಕಾದ ದಾರಿಹಿಡಿದು ಹೋದರು.
“Le Samgar, Anat ƒe vi kple Yael ƒe ɣeyiɣiawo me, asitsalawo mezɔa mɔ ma dzi o. Mɔzɔlawo wɔa axadzimɔ xaxɛ gɔdɔ̃ewo ŋu dɔ.
7 ದೆಬೋರಳಾದ ನಾನು ಇಸ್ರಾಯೇಲರಲ್ಲಿ ತಾಯಿಯಂತೆ ಎದ್ದುಬರುವವರೆಗೆ ಇಸ್ರಾಯೇಲ್ ಗ್ರಾಮಗಳು ಹಾಳುಬಿದ್ದಿದ್ದವು.
Israelviwo ƒe duwo zu aƒedo. Va se ɖe esime nye Debora mezu Israel dada.
8 ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಉರುಬಾಗಿಲವರೆಗೂ ಬಂದಿತ್ತು. ಇಸ್ರಾಯೇಲರ ನಲ್ವತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ.
Esime Israel dze mawu bubuwo yome la, futɔwo ho aʋa ɖe wo ŋu. Míaƒe kplɔlawo mena akpoxɔnu alo akplɔ mí o womekpɔ aʋawɔnu aɖeke kura le Israelvi akpe blaene dome o!
9 ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ, ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತದೆ; ಅವರಿಗೋಸ್ಕರ ಯೆಹೋವನನ್ನು ಕೊಂಡಾಡುತ್ತೇವೆ.
Metso aseye ŋutɔ ɖe Israel ƒe kplɔlawo ta, ame siwo tsɔ wo ɖokui na faa! Mikafu Yehowa!
10 ೧೦ “ಬಿಳೀ ಕತ್ತೆಗಳ ಮೇಲೆ ಸವಾರಿಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತುಕೊಳ್ಳುವವರೇ, ಕಾಲ್ನಡಿಗೆಯಲ್ಲಿ ಪ್ರಯಾಣಿಸುವವರೇ, ಗಾನಮಾಡಿರಿ.
“Israelviwo katã, hotsuitɔwo kple ahetɔwo siaa, hotsuitɔ siwo doa tedzi ɣiwo ɖoa afɔ afɔɖodzinu xɔasiwo dzi kple ame dahe, afɔzɔlawo siaa, mikpe ta, miakafui.
11 ೧೧ ಸೇದುವ ಬಾವಿಗಳ ಬಳಿಯಲ್ಲಿ ಬಿಲ್ಲುಗಾರರ ಧ್ವನಿಗಿಂತ ಗಟ್ಟಿಯಾಗಿ ಯೆಹೋವನ ನೀತಿಸಾಧನೆಯ ವರ್ಣನೆಯನ್ನು ಕೇಳಿರಿ. ಆತನು ತನ್ನ ಪ್ರಜೆಗಳಾಗಿರುವ ಇಸ್ರಾಯೇಲ್ ಗ್ರಾಮಸ್ಥರ ನ್ಯಾಯವನ್ನು ಸ್ಥಾಪಿಸಿದ್ದಾನಲ್ಲಾ. ಆ ಕಾಲದಲ್ಲಿ ಯೆಹೋವನ ಜನರು ಊರುಬಾಗಿಲುಗಳಿಗೆ ಇಳಿದು ಬಂದರು.
Hadzila siwo le kɔƒewo me, ƒoa ƒu ɖe kɔƒea ƒe vudo gbɔ dzia ha tso Yehowa ƒe dziɖuɖu ŋuti. Wodzia ha enuenu tso ale si Yehowa ɖe Israel kple aʋawɔla siwo nye agbledelawo ŋu! Yehowa ƒe amewo zɔ to agbo la me!
12 ೧೨ ‘ಎಚ್ಚರವಾಗು, ದೆಬೋರಳೇ! ಎಚ್ಚರವಾಗು, ಎಚ್ಚರವಾಗು, ಎಚ್ಚರವಾಗಿ ಗಾನಮಾಡು. ಬಾರಾಕನೇ, ಏಳು; ಅಬೀನೋವಮನ ಮಗನೇ, ನೀನು ಸೆರೆಹಿಡಿದವರನ್ನು ಸಾಗಿಸಿಕೊಂಡು ಹೋಗು.’
Oo, Debora, nyɔ eye nàdzi ha! Oo, Barak, tsi tsitre! Oo, Abinoam ƒe vi, kplɔ wò aʋaléleawo dzoe!
13 ೧೩ “ಆಗ ಚದರಿಹೋದವರು ನಾಯಕರ ಬಳಿಗೆ ಕೂಡಿಬಂದರು. ಯೆಹೋವನ ಜನರು ವೀರರಾಗಿ ನನ್ನ ಸಹಾಯಕ್ಕೆ ನೆರೆದು ಬಂದರು.
“Tete nuteƒewɔlawo va woƒe kplɔlawo gbɔ; Yehowa ƒe amewo va hena aʋawɔwɔ.
14 ೧೪ ಅಮಾಲೇಕ್ಯರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಯರೂ ಅವರ ಜೊತೆಯಲ್ಲಿ ಬೆನ್ಯಾಮೀನ್ಯರೂ ಬಂದರು. ಮಾಕೀರನ ಗೋತ್ರದಿಂದ ಪ್ರಧಾನರೂ ಜೆಬುಲೂನ್ ಕುಲದಿಂದ ದಂಡಧಾರಿಗಳಾದ ಸೇನಾನಾಯಕರೂ
Wotso Efraimnyigba dzi va balimea le Benyamin ƒe viwo megbe. Aʋakplɔlawo va tso Makir aʋalɔgonunɔlawo va tso Zebulon
15 ೧೫ ದೆಬೋರಳ ಜೊತೆಯಲ್ಲಿ ಇಸ್ಸಾಕಾರ್ ಕುಲಪ್ರಭುಗಳೂ ಇಸ್ಸಾಕಾರರೊಡನೆ ಬಾರಾಕನೂ ಆಗಮಿಸಿದರು. ಇವರೆಲ್ಲರೂ ಬಾರಾಕನ ಹೆಜ್ಜೆಹಿಡಿದು ತಟ್ಟನೆ ತಗ್ಗಿನ ಪ್ರದೇಶಕ್ಕೆ ಬಂದರು. ರೂಬೇನ್ಯರ ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ
Isaka ƒe fiaviwo, Debora kple Barak, ɖiɖi ɖe balime la le Mawu ƒe ɖoɖo nu. Ke Ruben ƒe viwo ya meyi o.
16 ೧೬ ರೂಬೇನ್ಯರೇ, ನೀವು ಕುರಿಹಟ್ಟಿಗಳಲ್ಲಿ, ಮಂದೆಗಳ ಮಧ್ಯದಲ್ಲಿ ಕೊಳಲೂದುವುದನ್ನು ಕೇಳಬೇಕೆಂದು ಅಲ್ಲಿಯೇ ಕುಳಿತಿರುವುದೇಕೆ? ರೂಬೇನ್ಯರು ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ.
Nu ka ta mietsi aƒe le miaƒe alẽkplɔlawo gbɔ be miaɖo to alẽkplɔlawo woanɔ woƒe dzewo kum? Mama ɖo Ruben ƒe viwo dome: ɖe woayia? Ɖe woagbe yiyia?
17 ೧೭ ಗಿಲ್ಯಾದ್ಯರು ಯೊರ್ದನಿನ ಆಚೆಯಲ್ಲೇ ಉಳಿದರು. ದಾನ್ ಕುಲದವರು ಹಡಗುಗಳಲ್ಲಿಯೇ ಉಳಿದದ್ದೇಕೆ? ಆಶೇರ್ ಕುಲದವರು ತಮ್ಮ ರೇವುಗಳನ್ನು ಬಿಡದೆ ಸಮುದ್ರ ತೀರದಲ್ಲಿ ಸುಮ್ಮನೆ ಕುಳಿತುಬಿಟ್ಟರು.
Nu ka ta Gilead ƒe viwo tsi Yɔdan godo Dan ƒe viwo tsi woƒe tɔdziʋuwo gbɔ? Nu ka ta Aser ƒe viwo drã ɖe ƒuta dzidzemetɔe le woƒe ʋudzeƒewo?
18 ೧೮ ಜೆಬುಲೂನ್ಯರು ತಮ್ಮ ಜೀವವನ್ನು ಮರಣದ ಆಪತ್ತಿಗೆ ಒಪ್ಪಿಸಲು ಸಿದ್ಧರಿದರು, ನಫ್ತಾಲ್ಯರು ಸಹ ರಣರಂಗದಲ್ಲಿಯೇ ಇದ್ದರು.
Ke Zebulon ƒe viwo kple Naftali ƒe viwo tsɔ wo ɖokui ke le aʋagbedzi.
19 ೧೯ “ಅರಸರು ಬಂದು ಯುದ್ಧಮಾಡಿದರು; ಕಾನಾನ್ಯ ರಾಜರು ಮೆಗಿದ್ದೋ ನೀರಿನ ಕಾಲುವೆಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಹೋರಾಡಿದರು. ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ.
Kanaan fiawo wɔ aʋa le Taanak kple Megido vudowo gbɔ, ke womeɖu futɔwo dzi o.
20 ೨೦ ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು.
Dziƒo ŋutɔ ƒe ɣletiviwo wɔ aʋa kple Sisera.
21 ೨೧ ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಕೊಚ್ಚಿಕೊಂಡು ಹೋಯಿತು. ನನ್ನ ಮನವೇ ನೀನು ಧೈರ್ಯದಿಂದ ಮುಂದಕ್ಕೆ ಹೊರಡು.
Kison tɔsisi la ƒe tsi sisiwo kplɔ wo dzoe. Nye luʋɔ, yi ŋgɔ kple ŋusẽ!
22 ೨೨ ಆಗ ಅತಿವೇಗವಾಗಿ ಓಡುತ್ತಿದ್ದ ಅವರ ಬಲವಾದ ಕುದುರೆಗಳ ಗೊರಸುಗಳ ಪೆಟ್ಟಿನಿಂದ ನೆಲವು ಕಂಪಿಸಿತು.
Se futɔwo ƒe sɔwo ƒe afɔzi ɖa! Kpɔ woƒe sɔwo ƒe duƒuƒu ɖa!
23 ೨೩ ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ‘ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ. ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ!’
Gblɔ be, ‘Miƒo fi de wo elabena womeva kpe ɖe Yehowa ŋu wɔ aʋa kple futɔwo o.’
24 ೨೪ “ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳೆ ಭಾಗ್ಯವಂತಳು. ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಯೇ ಆಶೀರ್ವದಿಸಲ್ಪಟ್ಟವಳು.
“Woayra Yael, Heber, Kenitɔ la srɔ̃ woyrae wu nyɔnu siwo nɔa agbadɔ te.
25 ೨೫ ನೀರು ಕೇಳಿದನು, ಹಾಲು ಕೊಟ್ಟಳು; ಉತ್ತಮ ಪಾತ್ರೆಯಲ್ಲಿ ಮಜ್ಜಿಗೆ ಕೊಟ್ಟಳು.
Sisera bia tsii eye wòna nyinotsii eye wòtsɔ nyinotsi babla ɖe gagbɛ si dze bubumewo la me vɛ nɛ.
26 ೨೬ ಕೈಚಾಚಿ ಗೂಟವನ್ನು ತೆಗೆದುಕೊಂಡಳು; ಬಲಗೈಯಲ್ಲಿ ದೊಡ್ಡ ಸುತ್ತಿಗೆಯನ್ನು ಹಿಡಿದಳು; ಆ ಸುತ್ತಿಗೆಯಿಂದ ಸೀಸೆರನ ತಲೆಯನ್ನು ಒಡೆದುಬಿಟ್ಟಳು. ಅವನ ನೆತ್ತಿಗೆ ತಿವಿದು ಜಡಿದಳು.
Edo eƒe asi ɖa tsɔ tsyoti eye wòtsɔ eƒe nuɖusi tsɔ dɔwɔlawo ƒe zu, edae ɖe Sisera dzi hegbã ta nɛ, eŋɔ eye wògbã eƒe glãƒu
27 ೨೭ ಅವನು ಆಕೆಯ ಕಾಲುಗಳ ಬಳಿಯಲ್ಲಿ ಉರುಳಿ ಬಿದ್ದನು; ಅವನು ಆಕೆಯ ಕಾಲುಗಳ ಬಳಿಯಲ್ಲಿ ಮುದುರಿಕೊಂಡು ಉರುಳಿದನು. ಅವನು ಬಿದ್ದಲ್ಲೇ ಸತ್ತನು.
Sisera dze anyi ɖe Yael ƒe afɔ nu etsi afi si wòdze anyi ɖo. Emu, dze to ɖe eƒe afɔ nu, afi si wòmu ɖo la, afi mae wòdze anyi ɖo eye afi mae wòku ɖo.
28 ೨೮ “ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ‘ಅವನ ರಥವು ಬರುವುದಕ್ಕೆ ಏಕೆ ಇಷ್ಟುಹೊತ್ತಾಯಿತು! ಅವನ ಕುದುರೆಗಳ ಗೊರಸುಗಳಿಗೆ ಇಷ್ಟು ಸಾವಕಾಶವೇಕೆ’ ಅಂದಳು.
“Sisera dada nɔ fesre nu kpɔm tso fesrenuvɔ la megbe edo ɣli be, ‘Nu ka ta eƒe tasiaɖam meva ɖo kpɔ o? Nu ka ta míese tasiaɖam la ƒe afɔzi o?’
29 ೨೯ ಬುದ್ಧಿವಂತೆಯರಾದ ಸ್ತ್ರೀಯರು ಕೊಟ್ಟ ಉತ್ತರವನ್ನೇ ಈಕೆಯು ತನ್ನಲ್ಲಿ ತಾನೇ ಅಂದುಕೊಳ್ಳುತ್ತಿದ್ದದ್ದು ಏನೆಂದರೆ,
Eƒe nyɔnu ɖeka si dze nunya wu wo katã la, ɖo eŋu nɛ, vavã, enɔ gbɔgblɔm na eɖokui ɣe sia ɣi be,
30 ೩೦ ‘ನಿಶ್ಚಯವಾಗಿ ಅವರಿಗೆ ಕೊಳ್ಳೆ ಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರಲ್ಲವೋ? ಪ್ರತಿಯೊಬ್ಬ ಪುರುಷನಿಗೆ ಒಬ್ಬಿಬ್ಬರು ಹೆಂಗಸರೂ, ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ, ವಿಚಿತ್ರವಾಗಿ ಕಸೂತಿಹಾಕಿದ ಎರಡು ವಸ್ತ್ರಗಳೂ, ಕಂಠಮಾಲೆಯೂ ದೊರಕಿರುತ್ತವೆ.’
‘Ɖe menye afunyinu geɖe lɔm wole hele mamam nyɔnuvi ɖeka alo eve na ŋutsu ɖe sia ɖe, atsyɔ̃ɖowuwo na Sisera abe nuhaha ene, atsyɔ̃ɖowu siwo to wolɔ̃ nu ɖo, wolɔ̃ nu ɖe wo to nyuie be woadze kɔme nam eye esiawo katã nanye nuhaha oa?’
31 ೩೧ ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.
“Oo, Yehowa, na wò futɔwo katã natsrɔ̃ nenema ke ame siwo lɔ̃a Yehowa ya la, na be woanɔ abe ɣe ene ne edze le eƒe ŋusẽ me!” Tete anyigba la kpɔ ŋutifafa ƒe blaene.

< ನ್ಯಾಯಸ್ಥಾಪಕರು 5 >