< ನ್ಯಾಯಸ್ಥಾಪಕರು 5 >
1 ೧ ಆ ದಿನದಲ್ಲಿ ದೆಬೋರಳೂ ಅಬೀನೋವಮನ ಮಗನಾದ ಬಾರಾಕನೂ ಈ ಗೀತೆಯನ್ನು ಹಾಡಿದರು:
Na mokolo wana, Debora mpe Baraki, mwana mobali ya Abinoami, bayembaki nzembo oyo:
2 ೨ “ಇಸ್ರಾಯೇಲರಲ್ಲಿ ಸೇನಾ ನಾಯಕರು ಎದ್ದಿದ್ದಾರೆ; ಜನರು ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ.
Lokola na Isalaele, bakonzi batambolaki liboso, mpe bato bamipesaki mobimba na bitumba, tika ete bokumisa Yawe!
3 ೩ “ಅರಸರೇ, ಕೇಳಿರಿ! ಪ್ರಭುಗಳೇ, ಕಿವಿಗೊಡಿರಿ! ನಾನು ಯೆಹೋವನನ್ನು ಕೀರ್ತಿಸುವೆನು; ನಾನು ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತುತಿ ಗೀತೆ ಹಾಡುವೆನು.
Bino bakonzi, boyoka! Bino bakambi, boyoka malamu! Nalingi koyembela Yawe, nalingi koyemba nzembo mpo na Yawe, Nzambe ya Isalaele.
4 ೪ “ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತ್ಯವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶವು ನಡುಗಿತು; ಮೇಘಮಂಡಲವು ಮಳೆಗರೆಯಿತು.
Eh Yawe, tango obimaki na Seiri, tango ozalaki kotambola wuta na mokili ya Edomi, mabele eninganaki, likolo enyangwanaki, mapata esopaki mayi.
5 ೫ ಯೆಹೋವನ ಮುಂದೆ ಪರ್ವತಗಳು ಕರಗಿಹೋದವು, ಇಸ್ರಾಯೇಲಿನ ದೇವರಾದ ಯೆಹೋವನ ಎದುರಿಗೆ ಆ ಸೀನಾಯಿಬೆಟ್ಟವೂ ನೀರಾಯಿತು.
Bangomba eninganaki liboso ya Yawe, mpe ngomba Sinai, liboso ya Yawe, Nzambe ya Isalaele.
6 ೬ “ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ, ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತುಹೋಯಿತು. ಪ್ರಯಾಣಿಕರು ಅಂಕುಡೊಂಕಾದ ದಾರಿಹಿಡಿದು ಹೋದರು.
Na mikolo ya Shamagari, mwana mobali ya Anati; mpe na mikolo ya Yaeli, nzela etikalaki lisusu na bato te, bato ya mobembo batambolaki na nzela ya nyoka-nyoka.
7 ೭ ದೆಬೋರಳಾದ ನಾನು ಇಸ್ರಾಯೇಲರಲ್ಲಿ ತಾಯಿಯಂತೆ ಎದ್ದುಬರುವವರೆಗೆ ಇಸ್ರಾಯೇಲ್ ಗ್ರಾಮಗಳು ಹಾಳುಬಿದ್ದಿದ್ದವು.
Bamboka nyonso ya mike-mike ya Isalaele etikalaki lisusu na bato te, ezalaki lisusu na bato te kino ngai Debora natelemaki, kino natelemaki lokola mama kati na Isalaele.
8 ೮ ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಉರುಬಾಗಿಲವರೆಗೂ ಬಂದಿತ್ತು. ಇಸ್ರಾಯೇಲರ ನಲ್ವತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ.
Tango baponaki banzambe ya sika, bitumba mpe ekomaki na bikuke ya engumba, kasi ata nguba moko te to likonga moko te emonanaki kati na basoda nkoto tuku minei kati na Isalaele.
9 ೯ ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ, ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತದೆ; ಅವರಿಗೋಸ್ಕರ ಯೆಹೋವನನ್ನು ಕೊಂಡಾಡುತ್ತೇವೆ.
Motema na ngai ezali elongo na bakambi ya Isalaele, elongo na ba-oyo bamipesaki mobimba na bitumba. Bokumisa Yawe!
10 ೧೦ “ಬಿಳೀ ಕತ್ತೆಗಳ ಮೇಲೆ ಸವಾರಿಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತುಕೊಳ್ಳುವವರೇ, ಕಾಲ್ನಡಿಗೆಯಲ್ಲಿ ಪ್ರಯಾಣಿಸುವವರೇ, ಗಾನಮಾಡಿರಿ.
Bino oyo bozali kotambola likolo ya ba-ane ya pembe, bino oyo bozali kovanda likolo ya batapi, bino oyo bozali kotambola na nzela, bokanisa!
11 ೧೧ ಸೇದುವ ಬಾವಿಗಳ ಬಳಿಯಲ್ಲಿ ಬಿಲ್ಲುಗಾರರ ಧ್ವನಿಗಿಂತ ಗಟ್ಟಿಯಾಗಿ ಯೆಹೋವನ ನೀತಿಸಾಧನೆಯ ವರ್ಣನೆಯನ್ನು ಕೇಳಿರಿ. ಆತನು ತನ್ನ ಪ್ರಜೆಗಳಾಗಿರುವ ಇಸ್ರಾಯೇಲ್ ಗ್ರಾಮಸ್ಥರ ನ್ಯಾಯವನ್ನು ಸ್ಥಾಪಿಸಿದ್ದಾನಲ್ಲಾ. ಆ ಕಾಲದಲ್ಲಿ ಯೆಹೋವನ ಜನರು ಊರುಬಾಗಿಲುಗಳಿಗೆ ಇಳಿದು ಬಂದರು.
Bokumisa mingongo ya bayembi, na bisika oyo batokaka mayi, pene ya bitima ya mayi; kuna, mingongo ya bakaboli mayi ezali kosanzola misala ya bosembo ya Yawe, misala na Ye ya bosembo na bamboka mike nyonso ya Isalaele. Bato ya Yawe bakiti kino na bikuke ya engumba.
12 ೧೨ ‘ಎಚ್ಚರವಾಗು, ದೆಬೋರಳೇ! ಎಚ್ಚರವಾಗು, ಎಚ್ಚರವಾಗು, ಎಚ್ಚರವಾಗಿ ಗಾನಮಾಡು. ಬಾರಾಕನೇ, ಏಳು; ಅಬೀನೋವಮನ ಮಗನೇ, ನೀನು ಸೆರೆಹಿಡಿದವರನ್ನು ಸಾಗಿಸಿಕೊಂಡು ಹೋಗು.’
Debora, lamuka! Lamuka! Lamuka, lamuka, yemba nzembo ya bitumba! Eh Baraki, telema, zongisa bakangami na yo; mwana mobali ya Abinoami!
13 ೧೩ “ಆಗ ಚದರಿಹೋದವರು ನಾಯಕರ ಬಳಿಗೆ ಕೂಡಿಬಂದರು. ಯೆಹೋವನ ಜನರು ವೀರರಾಗಿ ನನ್ನ ಸಹಾಯಕ್ಕೆ ನೆರೆದು ಬಂದರು.
Ndambo ya batikali bakiti epai ya balongi, bato ya Yawe bakiti mpo na ngai kati na bilombe ya bitumba.
14 ೧೪ ಅಮಾಲೇಕ್ಯರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಯರೂ ಅವರ ಜೊತೆಯಲ್ಲಿ ಬೆನ್ಯಾಮೀನ್ಯರೂ ಬಂದರು. ಮಾಕೀರನ ಗೋತ್ರದಿಂದ ಪ್ರಧಾನರೂ ಜೆಬುಲೂನ್ ಕುಲದಿಂದ ದಂಡಧಾರಿಗಳಾದ ಸೇನಾನಾಯಕರೂ
Bato ya Amaleki bawutaki na Efrayimi. Sima na yo, Benjame akitaki elongo na mampinga. Bakonzi ya mampinga babimelaki na Makiri, mpe bato oyo basimbaka lingenda ya bokonzi babimelaki na Zabuloni.
15 ೧೫ ದೆಬೋರಳ ಜೊತೆಯಲ್ಲಿ ಇಸ್ಸಾಕಾರ್ ಕುಲಪ್ರಭುಗಳೂ ಇಸ್ಸಾಕಾರರೊಡನೆ ಬಾರಾಕನೂ ಆಗಮಿಸಿದರು. ಇವರೆಲ್ಲರೂ ಬಾರಾಕನ ಹೆಜ್ಜೆಹಿಡಿದು ತಟ್ಟನೆ ತಗ್ಗಿನ ಪ್ರದೇಶಕ್ಕೆ ಬಂದರು. ರೂಬೇನ್ಯರ ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ
Bakambi ya Isakari bazalaki elongo na Debora; ndenge moko lokola Baraki, Isakari alandaki ye mbangu na makolo kino na lubwaku. Kasi kati na libota ya Ribeni, mitema etondaki mingi na makanisi.
16 ೧೬ ರೂಬೇನ್ಯರೇ, ನೀವು ಕುರಿಹಟ್ಟಿಗಳಲ್ಲಿ, ಮಂದೆಗಳ ಮಧ್ಯದಲ್ಲಿ ಕೊಳಲೂದುವುದನ್ನು ಕೇಳಬೇಕೆಂದು ಅಲ್ಲಿಯೇ ಕುಳಿತಿರುವುದೇಕೆ? ರೂಬೇನ್ಯರು ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ.
Mpo na nini avandi kati na lopango? Ezali mpo na kaka koyoka kolela ya bibwele? Kati na libota ya Ribeni, bazali bobele kolekisa tango pamba na kokanisa.
17 ೧೭ ಗಿಲ್ಯಾದ್ಯರು ಯೊರ್ದನಿನ ಆಚೆಯಲ್ಲೇ ಉಳಿದರು. ದಾನ್ ಕುಲದವರು ಹಡಗುಗಳಲ್ಲಿಯೇ ಉಳಿದದ್ದೇಕೆ? ಆಶೇರ್ ಕುಲದವರು ತಮ್ಮ ರೇವುಗಳನ್ನು ಬಿಡದೆ ಸಮುದ್ರ ತೀರದಲ್ಲಿ ಸುಮ್ಮನೆ ಕುಳಿತುಬಿಟ್ಟರು.
Galadi atikali na ngambo mosusu ya Yordani. Mpo na nini Dani azali kowumela kati na masuwa? Aseri atikali pembeni ya ebale, avandi pembeni ya libongo na ye.
18 ೧೮ ಜೆಬುಲೂನ್ಯರು ತಮ್ಮ ಜೀವವನ್ನು ಮರಣದ ಆಪತ್ತಿಗೆ ಒಪ್ಪಿಸಲು ಸಿದ್ಧರಿದರು, ನಫ್ತಾಲ್ಯರು ಸಹ ರಣರಂಗದಲ್ಲಿಯೇ ಇದ್ದರು.
Bato ya Zabuloni bateki milimo na bango na kufa, bato ya Nefitali, na basonge ya bangomba, kuna na esika ya bitumba.
19 ೧೯ “ಅರಸರು ಬಂದು ಯುದ್ಧಮಾಡಿದರು; ಕಾನಾನ್ಯ ರಾಜರು ಮೆಗಿದ್ದೋ ನೀರಿನ ಕಾಲುವೆಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಹೋರಾಡಿದರು. ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ.
Bakonzi oyo bazali banguna bayaki mpe babundisaki biso; bakonzi ya Kanana babundisaki biso na mboka Taanaki, pene ya mayi ya Megido, kasi bamemaki te bomengo ya bitumba, ata palata.
20 ೨೦ ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು.
Wuta na likolo, minzoto ebundaki; na nzela na yango oyo etambolaka, minzoto ebundisaki Sisera.
21 ೨೧ ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಕೊಚ್ಚಿಕೊಂಡು ಹೋಯಿತು. ನನ್ನ ಮನವೇ ನೀನು ಧೈರ್ಯದಿಂದ ಮುಂದಕ್ಕೆ ಹೊರಡು.
Mayi moke ya Kishoni ememaki bango, mayi moke ya tango ya kala, mayi moke ya Kishoni. Tika ete molimo na ngai etambola na nguya!
22 ೨೨ ಆಗ ಅತಿವೇಗವಾಗಿ ಓಡುತ್ತಿದ್ದ ಅವರ ಬಲವಾದ ಕುದುರೆಗಳ ಗೊರಸುಗಳ ಪೆಟ್ಟಿನಿಂದ ನೆಲವು ಕಂಪಿಸಿತು.
Makolo ya bampunda enyataki mabele, na kopumbwa na mbangu makasi, na kolanda bankolo na yango, bato na nguya.
23 ೨೩ ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ‘ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ. ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ!’
Bolakela mboka ya Merozi mabe, elobi anjelu ya Yawe. Bolakela, bolakela mabe bato oyo bavandi kuna! Pamba te bayei te kosunga Yawe; bayei te kosunga bilombe ya bitumba!
24 ೨೪ “ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳೆ ಭಾಗ್ಯವಂತಳು. ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಯೇ ಆಶೀರ್ವದಿಸಲ್ಪಟ್ಟವಳು.
Tika ete Yaeli, mwasi ya Eberi, moto ya Keni, apambolama kati na basi nyonso! Tika ete apambolama kati na basi nyonso oyo bazali kovanda na se ya ndako ya kapo.
25 ೨೫ ನೀರು ಕೇಳಿದನು, ಹಾಲು ಕೊಟ್ಟಳು; ಉತ್ತಮ ಪಾತ್ರೆಯಲ್ಲಿ ಮಜ್ಜಿಗೆ ಕೊಟ್ಟಳು.
Sisera asengaki mayi, kasi ye apesaki miliki; kati na kopo ya bato ya lokumu, apesaki ye miliki ya kilo.
26 ೨೬ ಕೈಚಾಚಿ ಗೂಟವನ್ನು ತೆಗೆದುಕೊಂಡಳು; ಬಲಗೈಯಲ್ಲಿ ದೊಡ್ಡ ಸುತ್ತಿಗೆಯನ್ನು ಹಿಡಿದಳು; ಆ ಸುತ್ತಿಗೆಯಿಂದ ಸೀಸೆರನ ತಲೆಯನ್ನು ಒಡೆದುಬಿಟ್ಟಳು. ಅವನ ನೆತ್ತಿಗೆ ತಿವಿದು ಜಡಿದಳು.
Na loboko na ye ya mwasi, azwaki pike ya nzete; mpe na loboko na ye ya mobali, marto ya basali. Abetaki Sisera mpe apanzaki ye moto, atobolaki ye litoyi mpe apanzaki yango nyonso.
27 ೨೭ ಅವನು ಆಕೆಯ ಕಾಲುಗಳ ಬಳಿಯಲ್ಲಿ ಉರುಳಿ ಬಿದ್ದನು; ಅವನು ಆಕೆಯ ಕಾಲುಗಳ ಬಳಿಯಲ್ಲಿ ಮುದುರಿಕೊಂಡು ಉರುಳಿದನು. ಅವನು ಬಿದ್ದಲ್ಲೇ ಸತ್ತನು.
Sisera akweyaki na makolo na ye, alembaki; akweyaki na makolo na ye mpe akufaki.
28 ೨೮ “ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ‘ಅವನ ರಥವು ಬರುವುದಕ್ಕೆ ಏಕೆ ಇಷ್ಟುಹೊತ್ತಾಯಿತು! ಅವನ ಕುದುರೆಗಳ ಗೊರಸುಗಳಿಗೆ ಇಷ್ಟು ಸಾವಕಾಶವೇಕೆ’ ಅಂದಳು.
Mama ya Sisera abandaki kotala na lininisa, na sima ya bibende, mpe abandaki koganga: « Mpo na nini shar na ye ezali kowumela boye? Mpo na nini bashar na ye ezali koya malembe? »
29 ೨೯ ಬುದ್ಧಿವಂತೆಯರಾದ ಸ್ತ್ರೀಯರು ಕೊಟ್ಟ ಉತ್ತರವನ್ನೇ ಈಕೆಯು ತನ್ನಲ್ಲಿ ತಾನೇ ಅಂದುಕೊಳ್ಳುತ್ತಿದ್ದದ್ದು ಏನೆಂದರೆ,
Moko kati na basi ya mayele mpe ya lokumu ayanoli ye, mpe ye moko amilobeli:
30 ೩೦ ‘ನಿಶ್ಚಯವಾಗಿ ಅವರಿಗೆ ಕೊಳ್ಳೆ ಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರಲ್ಲವೋ? ಪ್ರತಿಯೊಬ್ಬ ಪುರುಷನಿಗೆ ಒಬ್ಬಿಬ್ಬರು ಹೆಂಗಸರೂ, ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ, ವಿಚಿತ್ರವಾಗಿ ಕಸೂತಿಹಾಕಿದ ಎರಡು ವಸ್ತ್ರಗಳೂ, ಕಂಠಮಾಲೆಯೂ ದೊರಕಿರುತ್ತವೆ.’
« Ezali te mpo bazwi mpe bakaboli bomengo ya bitumba: Elenge mwasi moko to bilenge basi mibale mpo na soda moko, bilamba ya langi mpo na Sisera, bilamba, bilamba ya langi, mpe bilamba oyo batia bililingi, mpo na balongi? »
31 ೩೧ ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.
Yawe, tika ete banguna na Yo nyonso bakufa bongo! Tika ete bato oyo balingaka Yo bangenga makasi lokola moyi ya midi! Mokili ezalaki na kimia mibu tuku minei.