< ನ್ಯಾಯಸ್ಥಾಪಕರು 7 >
1 ೧ ಆನಂತರ ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ, ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಬಿಡಾರ ಹಾಕಿಕೊಂಡರು. ಇವರ ಉತ್ತರದಿಕ್ಕಿನಲ್ಲಿ ಮೋರೆಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು.
Тогава Ероваал (който е Гедеон) стана рано, и всичките люде, които бяха с него, та разположиха стана си при извора Арод; а стана на мадиамците беше на север от тях, в долината до хълма Море.
2 ೨ ಆಗ ಯೆಹೋವನು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ. ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಾರು.
И Господ каза на Гедеона: Людете, които са с тебе, са твърде много, за да предам мадиамците в ръката им, да не би да се възгордее Израил против Мене и да каже: Моята ръка ме избави.
3 ೩ ಆದುದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, ‘ಧೈರ್ಯವಿಲ್ಲದವರೂ, ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು’” ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.
Сега, прочее, иди, прогласи на всеослушание пред людете тия думи: Който се страхува е трепери, нека се върне и си отиде от галаадската гора. И върнаха се от людете двадесет и две хиляди души, и останаха десет хиляди.
4 ೪ ಯೆಹೋವನು ತಿರುಗಿ ಗಿದ್ಯೋನನಿಗೆ, “ನಿನ್ನ ಬಳಿಯಲ್ಲಿರುವ ಜನರು ಇನ್ನೂ ಹೆಚ್ಚಾಗಿದ್ದಾರೆ; ನೀನು ಅವರನ್ನು ಹಳ್ಳಕ್ಕೆ ಕರೆದುಕೊಂಡು ಹೋಗು; ನಾನು, ಅಲ್ಲಿ ಈ ಜನರ ಸಂಖ್ಯೆಯನ್ನು ಕಡಿಮೆಮಾಡಿ ನಿನಗೆ ಕೊಡುವೆನು. ಯಾರು ನಿನ್ನ ಸಂಗಡ ಹೋಗಬಹುದೆಂದು ಹೇಳುವೆನೋ ಅವರು ಮಾತ್ರ ಹೋಗಲಿ; ಯಾರಿಗೆ ಹೋಗಬಾರದೆಂದು ಹೇಳುವೆನೋ ಅವರು ಹೋಗದಿರಲಿ” ಅಂದನು.
Но Господ каза на Гедеона: Людете пак са много; заведи ги при водата, и там ще ти ги пресея; и за когото ти кажа: Тоя да отиде с тебе, той нека отиде с тебе; а за когото ти кажа: Той да не отиде с тебе, той нека не отиде.
5 ೫ ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಯೆಹೋವನು ಅವನಿಗೆ, “ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ, ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲಿಸು” ಎಂದು ಹೇಳಿದನು.
И той, заведе людете при водата; и Господа каза на Гедеона: Всеки, който полочи с езика си от водата, както лочи куче, него да поставиш отделно, така и всеки, който се наведе на коленете си, за да пие.
6 ೬ ಕೈಯಿಂದ ನೀರನ್ನು ಬಾಯಿಗೆ ತೆಗೆದುಕೊಂಡು ನೆಕ್ಕಿಕುಡಿದವರ ಸಂಖ್ಯೆ ಮುನ್ನೂರು. ಇತರ ಜನರು ಮೊಣಕಾಲೂರಿ ಕುಡಿದವರು.
И числото на ония, които полочиха, като поднесоха ръка до устата си, беше триста мъже; а всичките останали люде се наведоха на коленете си, за да пият вода.
7 ೭ ಆಗ ಯೆಹೋವನು ಗಿದ್ಯೋನನಿಗೆ, “ನೀರನ್ನು ನೆಕ್ಕಿಕುಡಿದ ಆ ಮುನ್ನೂರು ಜನರಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ” ಎಂದು ಆಜ್ಞಾಪಿಸಿದನು.
Тогава Господ каза на Гедеона: Чрез тия триста мъже, които полочиха, ще ви избавя, и ще предам мадиамците в ръката ти; а всичките останали люде нека си отидат, всеки на мястото си.
8 ೮ ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ, ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ಮಿದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳಿದುಕೊಂಡಿತ್ತು.
И тъй людете взеха храна в ръцете си, и тръбите си; и той изпрати всичките израилтяни, всеки в шатъра му, а тристата мъже задържа при себе си. А мадиамският стан беше под него в долината.
9 ೯ ಅದೇ ದಿನದ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ಎದ್ದು ಹೋಗಿ, ಶತ್ರುಗಳ ಪಾಳೆಯದ ಮೇಲೆ ಬೀಳು. ಅದನ್ನು ನಿನಗೆ ಒಪ್ಪಿಸಿಕೊಡುತ್ತೇನೆ.
И в същата нощ Господ му каза: Стани слез в стана, защото го предадох в ръката ти.
10 ೧೦ ಆದರೆ ನೀನು ಅವರ ಮೇಲೆ ಬೀಳುವುದಕ್ಕೆ ಹೆದರುತ್ತೀಯಾದರೆ ಮೊದಲು ನಿನ್ನ ಸೇವಕನಾದ ಪುರನ ಸಂಗಡ ಅಲ್ಲಿಗೆ ಹೋಗಿ ಅವರು ಮಾತನಾಡಿಕೊಳ್ಳುವುದನ್ನು ಲಾಲಿಸು;
Но ако те е страх да слезеш, слез със слугата си Фура в стана,
11 ೧೧ ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯಬರುವುದು” ಅಂದನು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರುಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.
и ще чуеш какво говорят; и след това ръцете ти ще се подкрепят, за да слезеш в стана. И тъй, той слезе със слугата си Фура до външните части на въоръжените в стана.
12 ೧೨ ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣ ದೇಶದವರೂ ಮಿಡತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.
А мадиамците и амаличаните и всичките източни жители бяха разпрострени в долината по множество като скакалци; и камилите им по множество бяха безбройни, като пясъка край морето.
13 ೧೩ ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು, ಒಂದು ಡೇರೆಗೆ ತಗಲಿ, ಅದನ್ನು ಬುಡಮೇಲು ಮಾಡಿ ಬೀಳಿಸಿಬಿಟ್ಟಿತು” ಎಂದು ಹೇಳಿದನು
И като пристигна Гедеон, ето, един човек разказваше сън на другаря си, като говореше: Ето, видях сън, и ето, пита от ечемичен хляб, като се търкаляшие в мадиамския стан, дойде до шатъра и го удари, та падна; и прекатури го така, че шатърът се събори.
14 ೧೪ ಆಗ ಅವನ ಜೊತೆಗಾರನು, “ಇದು ಇಸ್ರಾಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಅಂದನು.
И другарят му в отговор рече: Това не е друго освен сабята на Гедеона Иоасовия син, израилтянина; Бог предаде в ръката му Мадиама и цялото ни множество.
15 ೧೫ ಗಿದ್ಯೋನನು ಆ ಕನಸನ್ನೂ, ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು, ಇಸ್ರಾಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ, “ಏಳಿರಿ, ಯೆಹೋವನು ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಅಂದನು.
И като чу това Гедеон разказа на съня и тълкуването му поклони се; и като се върна в Израилевия стан, рече: Станете, защото Господ предаде в ръката ви мадиамското множество.
16 ೧೬ ಮತ್ತು ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ, ಉರಿಯುವ ಪಂಜು ಇರುವ ಬರಿಕೊಡವನ್ನೂ ಕೊಟ್ಟು ಅವರಿಗೆ,
И раздели тристата мъже на три дружини, и даде тръби в ръцете на всичките, тоже и празни водоноси, с факли във водоносите.
17 ೧೭ “ನನ್ನನ್ನೇ ನೋಡುತ್ತಾ ನಾನು ಮಾಡುವ ಹಾಗೆ ಮಾಡಿರಿ. ನಾನು ಪಾಳೆಯದ ಅಂಚಿಗೆ ಬಂದಾಗ ಹೇಗೆ ಮಾಡುತ್ತೇನೋ ಹಾಗೆ ನೀವೂ ಮಾಡಬೇಕು.
И рече им: Гледайте мене; и каквото правя аз, правете и вие подобно; и, ето, когато стигна при външните части на стана, то каквото направя аз, това да направите и вие.
18 ೧೮ ನಾನೂ ನನ್ನ ಸಂಗಡ ಇದ್ದವರೂ ಕೊಂಬುಗಳನ್ನು ಊದಲು ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ, ‘ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ ಎಂದು ಕೂಗಿರಿ’” ಎಂದು ಹೇಳಿದನು.
Когато засвиря с тръбата, аз и всичките, които са с мене, тогава да засвирите и вие с тръбите от всяка страна на целия стан, и да извикате: За Господа и за Гедеона!
19 ೧೯ ರಾತ್ರಿಯ ಎರಡನೆಯ ಜಾವದಲ್ಲಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ (ಶತ್ರುಗಳ) ಪಾಳೆಯದ ಅಂಚಿಗೆ ಬಂದು, ಕೊಂಬುಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.
И тъй, Гедеон и стоте мъже, които бяха с него, дойдоха при външната част на стана, около началото на средната стража, тъкмо когато бяха поставили часовите; и засвириха с тръбите и строшиха водоносите, които бяха в ръцете им.
20 ೨೦ ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು, ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಆಗಿದೆ” ಎಂದು ಕೂಗಿ
Па и трите дружини зесвириха с тръбите и, като строшиха водоносите, държаха факлите в левите си ръце, за да свирят; и викаха: Сабя Господна и Гедеонова!
21 ೨೧ ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು. ಪಾಳೆಯದವರಾದರೋ ಕೂಗುತ್ತಾ ಓಡಿಹೋದರು.
Всеки застана на мястото си около стана; и целият стан се разтича, като викаха и бягаха.
22 ೨೨ ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.
Защото, като засвириха с тристата тръби, Господ обърна сабята на всеки човек против ближния му в целия стан; и войската избяга до Ветасета към Зерерат, до околностите на Авелмеола при Тават.
23 ೨೩ ಇಸ್ರಾಯೇಲ್ಯರಾದ ನಫ್ತಾಲಿ, ಆಶೇರ್ ಕುಲಗಳವರೂ, ಮನಸ್ಸೆ ಕುಲದ ಎಲ್ಲಾ ಜನರೂ ಕೂಡಿ ಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.
Тогава израилтяните от Нефталима, от Асира и от целия Манасия се събраха та преследваха Мадиама.
24 ೨೪ ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಕಳುಹಿಸಿ ಅಲ್ಲಿನವರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು ಬೇತ್ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ವಶಪಡಿಸಿಕೊಳ್ಳಿರಿ” ಎಂದು ಹೇಳಿಕಳುಹಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಒಟ್ಟಾಗಿ ಬೇತ್ಬಾರದವರೆಗಿರುವ ಪ್ರವಾಹಗಳಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಮತ್ತು ಯೊರ್ದನ್ ಹೊಳೆಯನ್ನೂ ಹಿಡಿದರು.
И Гедеон прати вестители по цялата Ефремова хълмиста земя да кажат: Слезте против Мадиама и ловете пред тях водите на Иордан до Вет-вара. И тъй, всичките ефремци се събраха та заловиха водите на Иордан до Вет-вара.
25 ೨೫ ಇದಲ್ಲದೆ ಅವರು ಮಿದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬುವರನ್ನು ಹಿಡಿದು ಓರೇಬನನ್ನು, ಓರೇಬನ ಬಂಡೆಯ ಮೇಲೆಯೂ, ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ಮಿದ್ಯಾನ್ಯರನ್ನು ಹಿಂದಟ್ಟುತ್ತಾ ಯೊರ್ದನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು.
И хванаха двамата мадиамски началници, Орива и Зива, Орива убиха при скалата Орив, а Зива убиха при лина Зив. И гониха Мадиама. И донесоха главите на Орива и Зива на Гедеона оттатък Иордан.