< ನ್ಯಾಯಸ್ಥಾಪಕರು 8 >
1 ೧ ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ, “ನೀನು ಹೀಗೆ ಯಾಕೆ ಮಾಡಿದಿ? ಮಿದ್ಯಾನ್ಯರೊಡನೆ ಯುದ್ಧಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?” ಎಂದು ಉಗ್ರಕೋಪದಿಂದ ಜಗಳವಾಡಿದರು.
To, mutanen Efraim suka ce wa Gideyon, “Me ya sa ka yi mana haka? Me ya sa ba ka kira mu lokacin da ka tafi yaƙi da Midiyawa ba?” Suka zarge shi sosai.
2 ೨ ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸಮಾನವಾಗುವಂತದ್ದು ನಾನೇನು ಮಾಡಿದೆ? ಅಬೀಯೆಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ, ಎಫ್ರಾಯೀಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ?
Amma ya ce musu, “Me na yi da za a iya kwatanta da abin da kuka yi? Ashe, kalar inabin da Efraim ta yi bai fi dukan girbin inabin da Abiyezer suka yi ba?
3 ೩ ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿ ಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ?” ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು.
Allah ya ba da Oreb da Zeyib, shugabannin Midiyawa a hannuwanku. Me na yi da ya fi naku? Da ya faɗi haka sai hankalinsu ya kwanta.”
4 ೪ ಗಿದ್ಯೋನನು ಅವನ ಸಂಗಡ ಇದ್ದ ಮುನ್ನೂರು ಜನರು ಬಹಳ ದಣಿದವರಾಗಿದ್ದರೂ, ಹಿಂದಟ್ಟುತ್ತಾ ಯೊರ್ದನನ್ನು ದಾಟಿ ಸುಖೋತಿಗೆ ಬಂದರು.
Gideyon da mutanensa ɗari uku, sun gaji, duk da haka suka yi ta fafarar, suka zo Urdun suka haye shi.
5 ೫ ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನರನ್ನು ಹಿಂದಟ್ಟುತ್ತಾ ಇದ್ದೇನೆ” ಅಂದನು.
Ya ce wa mutanen Sukkot, “Ku ba wa mutanena burodi; sun gaji, har yanzu ina fafarar Zeba da Zalmunna, sarakunan Midiyawa.”
6 ೬ ಆದರೆ ಸುಖೋತಿನ ಮುಖಂಡರು ಅವನಿಗೆ, “ನಾವು ನಿನ್ನ ಸೈನಿಕರಿಗೆ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ನೀನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ?” ಎಂದು ಉತ್ತರಕೊಟ್ಟರು.
Amma shugabannin Sukkot suka ce, “Ka kama Zeba da Zalmunna ko ne? Don me za mu ba wa mayaƙanka burodi?”
7 ೭ ಆಗ ಗಿದ್ಯೋನನು ಅವರಿಗೆ, “ಒಳ್ಳೇದು, ಯೆಹೋವನು ಜೆಬಹ, ಚಲ್ಮುನ್ನರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟ ತರುವಾಯ ನಾನು ನಿಮ್ಮನ್ನು ಕಾಡಿನಲ್ಲಿರುವ ಜಾಲಿಮುಳ್ಳುಗಳಿಂದಲೂ, ಕಾರೆಗಿಡಗಳಿಂದಲೂ ಹೊಡಿಸುವೆನು” ಎಂದು ಹೇಳಿದನು.
Sai Gideyon ya ce, “Haka ko? To, sa’ad da Ubangiji ya ba da Zeba da Zalmunna a hannuna, zan tsattsaga jikinku da ƙayayyuwan jeji.”
8 ೮ ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು.
Daga nan ya wuce zuwa Fenuwel ya yi irin roƙon nan, amma suka amsa yadda mutanen Sukkot suka yi.
9 ೯ ಗಿದ್ಯೋನನು ಅವರಿಗೆ, “ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ ಈ ಬುರುಜನ್ನು ಕೆಡವಿಬಿಡುವೆನು” ಅಂದನು.
Saboda haka sai ya ce wa mutanen Fenuwel, “Sa’ad da na dawo da nasara zan rushe wannan hasumiya.”
10 ೧೦ ಜೆಬಹ, ಚಲ್ಮುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.
To, Zeba da Zalmunna suna a Karkor da mayaƙa wajen dubu goma sha biyar, abin da ya rage ke nan na mayaƙan gabashi; mayaƙa masu takobi dubu ɗari da ashirin ne suka mutu.
11 ೧೧ ಗಿದ್ಯೋನನು ಕಾಡುಗೊಲ್ಲರ ಪ್ರದೇಶಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳುಕೊಂಡಿದ್ದ ಆ ಪಾಳೆಯದ ಮೇಲೆ ಬಿದ್ದನು.
Gideyon ya haura ta hanyar makiyaya, gabas da Noba, da kuma Yogbeha, ya fāɗa wa mayaƙan ta yadda ba su zata ba.
12 ೧೨ ಜೆಬಹನೂ ಮತ್ತು ಚಲ್ಮುನ್ನನೂ ಓಡಿಹೋಗಲಾಗಿ, ಅವರನ್ನು ಹಿಂದಟ್ಟಿ ಹಿಡಿದು, ಅವರ ಸೈನ್ಯವನ್ನು ಚದರಿಸಿಬಿಟ್ಟನು.
Zeba da Zalmunna, sarakunan biyu na Midiyawa suka tsere, amma ya bi su ya kama, ya fatattaki dukan mayaƙansu.
13 ೧೩ ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹೆರೆಸಿನ ಗಟ್ಟದ ಮಾರ್ಗವಾಗಿ ಹಿಂದಿರುಗಿ ಬಂದು,
Sa’an nan Gideyon ɗan Yowash ya komo daga yaƙi ta Hanyar Heres.
14 ೧೪ ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು, ಆ ಊರಿನ ಮುಖಂಡರೂ, ಹಿರಿಯರೂ ಯಾರಾರೆಂದು ವಿಚಾರಿಸಲು ಅವನು ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರೆದುಕೊಟ್ಟನು.
Ya kama wani saurayin Sukkot ya tambaye shi, saurayin kuwa ya rubuta masa dukan sunayen shugabanni saba’in da bakwai na Sukkot, da dattawan garin.
15 ೧೫ ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ, “ನಾವು ದಣಿದಿರುವ ನಿನ್ನ ಸೈನಿಕರಿಗೋಸ್ಕರ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ಕೈಕಟ್ಟಿ ಸ್ವಾಧೀನಮಾಡಿಕೊಂಡಿದ್ದೀಯೋ? ಎಂದು ನನ್ನನ್ನು ನಿಂದಿಸಿದಿರಲ್ಲಾ;
Sa’an nan Gideyon ya zo ya ce wa mutanen Sukkot, “To, ga Zeba da Zalmunna, waɗanda kuka yi mini ba’a kuna cewa, ‘Ka kama Zeba da Zalmunna ko ne? Me zai sa mu ba mutanenka da suka gaji burodi?’”
16 ೧೬ ನೋಡಿರಿ, ಅವರು ಇಲ್ಲಿರುತ್ತಾರೆ” ಎಂದು ಹೇಳಿ ಊರಿನ ಹಿರಿಯರನ್ನೂ, ಮುಖಂಡರನ್ನೂ, ಜಾಲಿಮುಳ್ಳುಗಳಿಂದಲೂ, ಕಾರೆಗಿಡಗಳಿಂದಲೂ ಹೊಡಿಸಿ ಸುಖೋತಿನವರಿಗೆ ಬುದ್ಧಿಕಲಿಸಿದನು.
Ya kwashe dattawan garin ya koya wa mutanen Sukkot hankali ta wurin hukunta su da ƙayayyuwan hamada.
17 ೧೭ ಮತ್ತು ಪೆನೂವೇಲಿನ ಬುರುಜನ್ನು ಕೆಡವಿಬಿಟ್ಟು ಆ ಊರಿನ ಜನರನ್ನು ಸಂಹರಿಸಿದನು.
Ya rushe hasumiyar Fenuwel ya kuma karkashe mutanen garin.
18 ೧೮ ಅವನು ಜೆಬಹ, ಚಲ್ಮುನ್ನರನ್ನು, “ನೀವು ತಾಬೋರದಲ್ಲಿ ಕೊಂದುಹಾಕಿದ ಮನುಷ್ಯರು ಹೇಗಿದ್ದರು?” ಎಂದು ಕೇಳಲಾಗಿ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು” ಎಂದು ಉತ್ತರಕೊಟ್ಟರು.
Sa’an nan ya ce wa Zeba da Zalmunna, “Waɗanne irin mutane ne kuka karkashe a Tabor.” Suka ce, “Mutane kamar ka ne kowane kamar ɗan sarki.”
19 ೧೯ ಆಗ ಅವನು, “ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಯೆಹೋವನಾಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿ
Gideyon ya ce, “Waɗannan’yan’uwana ne,’ya’yan mahaifiyata. Muddin Ubangiji yana a raye, da a ce kun bar su da rai, da ba zan kashe ku ba.”
20 ೨೦ ತನ್ನ ಹಿರೀ ಮಗನಾದ ಎತೆರನಿಗೆ, “ನೀನೆದ್ದು ಇವರನ್ನು ಕೊಂದುಹಾಕು” ಅಂದನು. ಆದರೆ ಅವನು ಇನ್ನೂ ಹುಡುಗನಾಗಿದ್ದರಿಂದ ಭಯಪಟ್ಟು ಕತ್ತಿಯನ್ನು ಹಿರಿಯಲೇ ಇಲ್ಲ.
Da ya juya wajen Yeter, ɗan farinsa, sai ya ce, “Ka kashe su!” Amma Yeter bai zāre takobinsa ba, domin shi yaro ne kawai kuma yana tsoro.
21 ೨೧ ಆಗ ಜೆಬಹನೂ ಮತ್ತು ಚಲ್ಮುನ್ನನೂ ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮನ್ನು ಕೊಂದುಹಾಕು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ” ಅನ್ನಲು ಅವನೆದ್ದು ಜೆಬಹ, ಚಲ್ಮುನ್ನರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಿನಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.
Zeba da Zalmunna suka ce masa, “Zo, ka yi da kanka. ‘Yadda mutum yake haka ƙarfinsa.’” Ta haka Gideyon ya matso gaba ya kashe su, ya ɗauki kayan ado daga wuyar raƙumansu.
22 ೨೨ ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ, ನಿನ್ನ ಮಗನೂ, ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು” ಎಂದರು.
Isra’ilawa suka ce wa Gideyon, “Ka yi mulkinmu, kai, ɗanka da jikanka, domin ka cece mu daga hannun Midiyawa.”
23 ೨೩ ಅವನು ಅವರಿಗೆ, “ನಾನಾಗಲಿ, ನನ್ನ ಮಗನಾಗಲಿ ನಿಮ್ಮನ್ನು ಆಳುವುದಿಲ್ಲ; ಯೆಹೋವನೇ ನಿಮ್ಮ ಅರಸನಾಗಿರುವನು.
Amma Gideyon ya ce musu, “Ni, ko ɗana, ba za mu yi mulkinku ba. Ubangiji ne zai yi mulkinku.”
24 ೨೪ ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಲಿ” ಅಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದರಿಂದ ಅವರ ಬಳಿಯಲ್ಲಿ ಬಂಗಾರದ ಓಲೆಗಳು ಇದ್ದವು.
Kuma ya ce, “Ina da roƙo guda ɗaya, cewa kowannenku ya ba ni’yan kunne daga rabon ganima.” (Al’adar mutanen Ishmayel ce su sa’yan kunnen zinariya.)
25 ೨೫ ಗಿದ್ಯೋನನ ಬಿನ್ನಹಕ್ಕೆ ಇಸ್ರಾಯೇಲ್ಯರು, “ನಾವು ಸಂತೋಷದಿಂದ ಕೊಡುವೆವು” ಎಂದು ಹೇಳಿ, ಅಲ್ಲಿ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ತಾವು ಕೊಳ್ಳೆಯಾಗಿ ತಂದ ಓಲೆಗಳನ್ನು ಇಟ್ಟುಬಿಟ್ಟರು.
Suka ce, “Za mu yi farin cikin ba ka su.” Saboda haka suka shimfiɗa mayafi, kowanne ya sa ɗan kunne ɗaya daga ganimar.
26 ೨೬ ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ, ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಓಲೆಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು.
Nauyin’yan kunnen zinariyar ya kai shekel ɗari goma sha bakwai, ban da kayan ado, abin wuya da tufafin shunayya waɗanda sarakuna Midiyawa suke sawa ko sarƙoƙin da suke wuyar raƙumansu.
27 ೨೭ ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಆದ್ದರಿಂದ ಇಸ್ರಾಯೇಲರೆಲ್ಲರೂ ಅದನ್ನು ಪೂಜಿಸುತ್ತಿದ್ದುದರಿಂದ ದೈವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.
Gideyon ya efod da zinariyar, wanda ya ajiye a Ofra, garinsa. Dukan Isra’ila suka shiga yin karuwanci ta wurin yin sujada a can, ya kuwa zama wa Gideyon da dukan iyalinsa tarko.
28 ೨೮ ಮಿದ್ಯಾನ್ಯರು ಇಸ್ರಾಯೇಲ್ಯರ ಮುಂದೆ ಬಹಳವಾಗಿ ತಗ್ಗಿಸಲ್ಪಟ್ಟರು; ಅವರು ಪುನಃ ತಲೆಯೆತ್ತಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಲ್ವತ್ತು ವರ್ಷಗಳ ಕಾಲ ದೇಶದಲ್ಲಿ ಸಮಾಧಾನವಿತ್ತು.
Da haka Isra’ilawa suka mallaki Midiyawa ba su kuma sāke tā da kai ba. A zamanin Gideyon ƙasar ta sami zaman lafiya har shekara arba’in.
29 ೨೯ ಯೋವಾಷನ ಮಗ ಯೆರುಬ್ಬಾಳನು ಹೋಗಿ ತನ್ನ ಮನೆಯಲ್ಲಿ ವಾಸವಾಗಿದ್ದನು.
Yerub-Ba’al ɗan Yowash ya koma gida don yă zauna.
30 ೩೦ ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದುದರಿಂದ ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು.
Yana da’ya’ya saba’in maza da ya haifa, gama yana da mata da yawa.
31 ೩೧ ಅವನಿಗೆ ಶೆಕೆಮಿನಲ್ಲಿದ್ದ ತನ್ನ ಉಪಪತ್ನಿಯಲ್ಲಿ ಇನ್ನೊಬ್ಬ ಮಗನು ಹುಟ್ಟಲು, ಆ ಮಗನಿಗೆ ಅಬೀಮೆಲೆಕನೆಂದು ಹೆಸರಿಟ್ಟನು.
Yana kuma da ƙwarƙwara wadda take Shekem, ita ma ta haifa masa ɗa wanda ya ba shi suna Abimelek.
32 ೩೨ ಯೋವಾಷನ ಮಗನಾದ ಗಿದ್ಯೋನನು ದಿನತುಂಬಿದ ಮುದುಕನಾಗಿ ಮರಣ ಹೊಂದಲು, ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿಯು ಅವನ ತಂದೆಯಾದ ಯೋವಾಷನದಾಗಿತ್ತು.
Gideyon ɗan Yowash ya rasu da kyakkyawan tsufa aka kuma binne shi a kabarin Yowash mahaifinsa a Ofra na mutanen Abiyezer.
33 ೩೩ ಗಿದ್ಯೋನನು ಸತ್ತನಂತರ ಇಸ್ರಾಯೇಲರು ದೈವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್‌ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.
Ba a daɗe da rasuwar Gideyon ba, sai Isra’ila ta sāke shiga karuwanci suna bauta wa Ba’al. Suka kafa Ba’al-Berit yă zama musu allahnsu ba kuma
34 ೩೪ ಸುತ್ತಣ ಎಲ್ಲಾ ಶತ್ರುಗಳಿಂದ ತಮ್ಮನ್ನು ಬಿಡಿಸಿದ ದೇವರಾದ ಯೆಹೋವನನ್ನು ಮರೆತುಬಿಟ್ಟರು.
tuna da Ubangiji Allahnsu, wanda ya cece su daga hannuwan abokan gābansu a kowane gefe ba.
35 ೩೫ ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ಅವರು ನೆನಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.
Suka kāsa nuna alheri ga gidan Yerub-Ba’al (wato, Gideyon) saboda abubuwa masu alherin da ya yi musu.