< ನ್ಯಾಯಸ್ಥಾಪಕರು 9 >
1 ೧ ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿಗೆ ಹೋಗಿ ತನ್ನ ಸೋದರಮಾವಂದಿರಿಗೂ, ತಾಯಿಯ ಬಂಧುಗಳೆಲ್ಲರಿಗೂ ಹೇಳಿದ್ದೇನೆಂದರೆ,
১যিৰুব্বালৰ পুত্র অবীমেলকে চিখিমলৈ নিজৰ মোমায়েকহঁতৰ ওচৰলৈ গ’ল আৰু তেওঁলোকৰ সৈতে মাকৰ পৰিয়ালৰ আনবোৰ ফৈদকে ক’লে,
2 ೨ “ನೀವು ದಯವಿಟ್ಟು ಶೆಕೆಮಿನ ಹಿರಿಯರನ್ನು ಮಾತನಾಡಿಸಿ, ‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳ್ವಿಕೆ ಮಾಡುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ?’ ಎಂದು ಅವರನ್ನು ಕೇಳಿ, ನಾನು ಅವರ ರಕ್ತಸಂಬಂಧಿಯಾಗಿದ್ದೇನೆ ಎಂಬುದನ್ನು ತಿಳಿಸಿರಿ” ಅಂದನು.
২“দয়া কৰি চিখিমৰ সকলো নেতাকে আপোনালোকে এই কথা সোধক: ‘আপোনালোকৰ কাৰণে কোনটো ভাল? যিৰুব্বালৰ সত্তৰজন পুত্র আপোনালোকৰ শাসনকর্তা হ’ব নে এজনে শাসন কৰা ভাল?’ পাহৰি নাযাব, মই আপোনালোকৰে হাড় আৰু মঙহ।”
3 ೩ ಅವರು ಶೆಕೆಮಿನ ಹಿರಿಯರ ಬಳಿಗೆ ಹೋಗಿ ಅಬೀಮೆಲೆಕನ ವಿಷಯದಲ್ಲಿ ಹಾಗೆಯೇ ಹೇಳಲು ಅವರು, “ಇವನು ನಮ್ಮ ಸಹೋದರನಾಗಿದ್ದಾನಲ್ಲಾ” ಅಂದುಕೊಂಡು ಅವನ ಪಕ್ಷವನ್ನು ಹಿಡಿಯುವುದಕ್ಕೆ ಒಪ್ಪಿಕೊಂಡರು.
৩তেতিয়া অবীমেলকৰ মাকৰ পৰিয়ালবোৰে তেওঁৰ হৈ চিখিমৰ নেতাসকলৰ আগত কথা কোৱাত তেওঁলোকে অবীমেলকৰ পক্ষত থাকিবলৈ একমত হ’ল। তেওঁলোকে ক’লে “অবীমেলক আমাৰে ভাই।”
4 ೪ ಮತ್ತು ಅವರು ಬಾಳ್ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಕಾಕಪೋಕರನ್ನು ಕೂಡಿಸಿ,
৪তেওঁলোকে বাল-বৰীৎৰ মন্দিৰৰ পৰা তেওঁক সত্তৰ চেকল ৰূপৰ মুদ্ৰা দিলে; অবীমেলকে তাৰে কেইজনমান বেপেৰুৱা দু: সাহসী লোকক ভাড়া কৰিলে অাৰু এওঁলোক তেওঁৰ সঙ্গী হ’ল।
5 ೫ ಅವರ ನಾಯಕನಾಗಿ ಹೊರಟು, ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು, ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.
৫অবীমেলকে অফ্রাত নিজৰ বাপেকৰ ঘৰলৈ গৈ তেওঁৰ সত্তৰজন ভাইক অর্থাৎ যিৰুব্বালৰ পুতেকসকলক একেটা শিলৰ ওপৰত হত্যা কৰিলে। কেৱল, যিৰুব্বালৰ সৰু পুতেক যোথম লুকাই থকা বাবে সি বাচি গ’ল।
6 ೬ ತರುವಾಯ ಎಲ್ಲಾ ಶೆಕೆಮಿನವರೂ ಮಿಲ್ಲೋ ಕೋಟೆಯವರೂ ಶೆಕೆಮಿನ ಬಳಿಯಲ್ಲಿ ಜ್ಞಾಪಕಸ್ತಂಭವಿರುವ ಏಲೋನ್ ವೃಕ್ಷದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರು.
৬তাৰ পাছত চিখিমৰ আৰু বৈৎ-মিল্লোৰ নেতাসকলে একেলগে আহি চিখিমৰ স্তম্ভৰ ওচৰত থকা ওক গছজোপাৰ কাষলৈ গৈ অবীমেলকক ৰজা পাতিলে।
7 ೭ ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ, “ಶೆಕೆಮಿನ ಜನರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮ್ಮ ಮೊರೆಗೆ ಕಿವಿಗೊಡುವನು” ಎಂದನು.
৭যোথমক এই কথা জনোৱাত তেওঁ গৰিজ্জীম পৰ্ব্বতৰ টিঙলৈ উঠি গৈ চিঞঁৰি চিঞঁৰি ক’বলৈ ধৰিলে, “হে চিখিমৰ নেতাসকল, মোৰ কথা শুনা, তাতে ঈশ্বৰেও আপোনালোকৰ কথা শুনিব।
8 ೮ “ಒಮ್ಮೆ, ಮರಗಳು ತಮಗೋಸ್ಕರ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಎಣ್ಣೆಯ ಮರದ ಬಳಿಗೆ ಬಂದು, ‘ನೀನು ಬಂದು ನಮಗೆ ಅರಸನಾಗು’ ಅಂದವು.
৮এবাৰ গছবোৰে নিজৰ কাৰণে এজন ৰজাক অভিষেক কৰিবৰ অৰ্থে বাহিৰ ওলাই গ’ল। সিহঁতে জিত গছক ক’লে, ‘তুমি আমাৰ ৰজা হোৱা।’
9 ೯ ಆಗ ಅದು ಅವುಗಳಿಗೆ, ‘ನನ್ನಲ್ಲಿರುವ ಎಣ್ಣೆಗೋಸ್ಕರ ದೇವತೆಗಳೂ, ಮನುಷ್ಯರು ನನ್ನನ್ನು ಘನಪಡಿಸುತ್ತಾರೆ; ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಅಂದಿತು.
৯কিন্তু জিত গছে সিহঁতক ক’লে, ‘মোৰ যি তেল ঈশ্বৰ আৰু মানুহক সন্মান কৰিবলৈ ব্যৱহাৰ হয়, তাক এৰি মই কি আন গছবোৰৰ ওপৰত কেৱল দুলি থাকিবলৈকে যামনে?’
10 ೧೦ ತರುವಾಯ ಅವು ಅಂಜೂರ ಗಿಡದ ಬಳಿಗೆ ಹೋಗಿ ಅದಕ್ಕೆ, ‘ನೀನು ಬಂದು ನಮಗೆ ಅರಸನಾಗು’ ಎನ್ನಲು
১০গছবোৰে ডিমৰু গছক ক’লে, ‘আহাঁ তুমিয়েই আমাৰ ৰজা হোৱা।’
11 ೧೧ ಅದು, ‘ನಾನು ನನ್ನ ಶ್ರೇಷ್ಠವಾದ ಮಧುರಫಲದಾನವನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು.
১১কিন্তু ডিমৰু গছে সিহঁতক ক’লে, ‘মই জানো মোৰ মিঠা সোৱাদ আৰু উত্তম ফল ত্যাগ কৰি আন গছবোৰৰ ওপৰত দুলি থাকিবলৈ যাম?’
12 ೧೨ ಅನಂತರ ಅವು ದ್ರಾಕ್ಷಾಲತೆಯ ಬಳಿಗೆ ಹೋಗಿ, ‘ನೀನು ಬಂದು ನಮಗೆ ಅರಸನಾಗು’ ಎನ್ನಲು
১২পাছে গছবোৰে দ্ৰাক্ষালতাক ক’লে, ‘তুমিয়েই আহি আমাৰ ৰজা হোৱা।’
13 ೧೩ ಅದು ಅವುಗಳಿಗೆ, ‘ನಾನು ನನ್ನ ರಸದಿಂದ ದೇವತೆಗಳಿಗೂ ಮನುಷ್ಯರಿಗೂ ಆನಂದಕೊಡುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು.
১৩কিন্তু দ্ৰাক্ষালতাই সিহঁতক ক’লে, ‘মোৰ যি ন-ৰসে ঈশ্বৰ আৰু মানুহক সন্তোষ দিয়ে, তাক এৰি মই আন গছবোৰৰ ওপৰত দুলি থাকিবলৈ যামনে?
14 ೧೪ ಕೊನೆಗೆ ಎಲ್ಲಾ ಮರಗಳು ಮುಳ್ಳುಗಿಡದ ಬಳಿಗೆ ಹೋಗಿ, ‘ನೀನು ಬಂದು ನಮಗೆ ಅರಸನಾಗು’ ಅನ್ನಲು
১৪তেতিয়া আটাই গছবোৰে কাঁইট গছক ক’লে, ‘তুমিয়েই আহি আমাৰ ৰজা হোৱা।’
15 ೧೫ ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.
১৫কাঁইট গছে গছবোৰক ক’লে, ‘তোমালোকে তোমালোকৰ ৰজা হ’বলৈ মোক যদি সঁচাকৈ অভিষেক কৰিব বিচাৰা, তেন্তে আহাঁ আৰু মোৰ ছাঁত আশ্রয় লোৱা। তাকে যদি নকৰা, তেন্তে কাঁইট গছৰ পৰা জুই ওলাব আৰু লিবানোনৰ এৰচ গছবোৰকো পুৰি পেলাব।’
16 ೧೬ “ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ನ್ಯಾಯವೋ? ಅದು ಧರ್ಮಕಾರ್ಯವೋ? ಯೆರುಬ್ಬಾಳನು ನಿಮಗೆ ಮಾಡಿದ ಉಪಕಾರಕ್ಕೋಸ್ಕರ ನೀವು ಅವನಿಗೂ ಅವನ ಮನೆಯವರಿಗೂ ಪ್ರತ್ಯುಪಕಾರಮಾಡಿದಿರೋ?
১৬এতিয়া সেয়ে শুনক, অবীমেলকক ৰজা পাতি আপোনালোকে জানো সত্যতা আৰু বিশ্বস্ততাৰ কার্য কৰিছে? আপোনালোকে জানো যিৰুব্বাল আৰু তেওঁৰ পৰিয়ালৰ প্রতি সুবিচাৰ কৰিছে?
17 ೧೭ ನನ್ನ ತಂದೆಯು ತನ್ನ ಜೀವದ ಆಶೆಯನ್ನು ತೊರೆದು, ಹೋರಾಡಿ, ನಿಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದನಲ್ಲಾ.
১৭মোৰ পিতৃয়ে আপোনালোকৰ কাৰণে যুদ্ধ কৰিলে, তেওঁ নিজৰ প্ৰাণকো তুচ্ছ জ্ঞান কৰি মিদিয়নীয়াসকলৰ হাতৰ পৰা আপোনালোকক উদ্ধাৰ কৰিলে;
18 ೧೮ ಆದರೆ ನೀವು ಈಗ ನನ್ನ ತಂದೆಯ ಮನೆಗೆ ವಿರೋಧವಾಗಿ ನಿಂತು, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಒಂದೇ ಬಂಡೆಯ ಮೇಲೆ ವಧಿಸಿ, ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ನಮ್ಮ ಬಂಧುವೆಂದು ಹೇಳಿ, ಶೆಕೆಮಿನ ಅರಸನನ್ನಾಗಿ ಮಾಡಿಕೊಂಡಿದ್ದೀರಿ.
১৮কিন্তু আজি আপোনালোকে মোৰ পিতৃ-বংশৰ বিৰুদ্ধে বিদ্রোহ কৰিছে; একেটা শিলৰ ওপৰতে তেওঁৰ সত্তৰজন পুত্রক বধ কৰিলে আৰু তেওঁৰ দাসীৰ পুত্র অবীমেলকক চিখিমৰ লোক সকলৰ ওপৰত ৰজা পাতিলে, কাৰণ তেওঁ আপোনালোকৰ আত্মীয়।
19 ೧೯ ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ, ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲಿ ಆನಂದಿಸಿರಿ; ಅವನು ನಿಮ್ಮಲ್ಲಿ ಆನಂದಿಸಲಿ.
১৯আজি যদি আপোনালোকে যিৰুব্বাল আৰু তেওঁৰ বংশলৈ ন্যায়পৰায়ণতা আৰু সততাৰে কার্য কৰি থাকে, তেন্তে অবীমেলকত যেন আপোনালোকে আনন্দ কৰে আৰু তেৱোঁ আপোনালোকত আনন্দ কৰক।
20 ೨೦ ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ, ಮಿಲ್ಲೋ ಕೋಟೆಯವರನ್ನೂ ದಹಿಸಿಬಿಡಲಿ; ಶೆಕೆಮಿನವರಿಂದಲೂ, ಮಿಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ” ಎಂದನು.
২০কিন্তু আপোনালোকে যদি ইয়াকে নকৰে, তেনেহ’লে অবীমেলকৰ পৰা যেন জুই ওলাই আহি আপোনালোকৰ অর্থাৎ চিখিম আৰু বৈৎ-মিল্লোৰ লোকসকলক পুৰি পেলাওক; আৰু আপোনালোকৰ অর্থাৎ চিখিম আৰু বৈৎ-মিল্লোৰ লোকসকলৰ মাজৰ পৰাও যেন জুই বাহিৰ হৈ অবীমেলকক পুৰি পেলাওক।”
21 ೨೧ ಯೋತಾಮನು ಇಷ್ಟು ಹೇಳಿ ತನ್ನ ಸಹೋದರನಾದ ಅಬೀಮೆಲೆಕನಿಂದ ತಪ್ಪಿಸಿಕೊಂಡು ಬೇರಕ್ಕೆ ಓಡಿಹೋಗಿ ಅಲ್ಲೇ ವಾಸಮಾಡಿದನು.
২১ইয়াকে কৈ যোথমে ল’ৰ মাৰি বেৰ নামৰ এখন ঠাইলৈ পলাই গ’ল। তেওঁ নিজৰ ভায়েক অবীমেলকৰ ভয়ত সেই ঠাইতে বাস কৰিলে।
22 ೨೨ ಅಬೀಮೆಲೆಕನು ಇಸ್ರಾಯೇಲರನ್ನು ಮೂರು ವರ್ಷ ಆಳಿದ ನಂತರ
২২অবীমেলকে ইস্ৰায়েলৰ ওপৰত তিনিবছৰ শাসন কৰিলে।
23 ೨೩ ಯೆಹೋವನು ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು.
২৩তাৰ পাছত ঈশ্বৰে অবিমেলক আৰু চিখিমৰ নেতাসকলৰ মাজত এক দুষ্ট আত্মা পঠাই দিলে। তাতে চিখিমৰ নেতাসকলে অবীমেলকলৈ থকা ভাৰসাক বিশ্বাসঘাটকতা কৰিলে।
24 ೨೪ ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೆಯೂ ಬರುವುದಕ್ಕೆ ಕಾರಣವಾಯಿತು.
২৪ঈশ্বৰে এই কার্য কৰিলে যাতে যিৰুব্বালৰ সত্তৰজন পুত্রলৈ ৰক্তপাতৰ যি অন্যায় কৰা হ’ল, তাৰ দ্বাৰা তেওঁলোকৰ ভায়েক অবীমেলকৰ ওপৰত আৰু তেওঁলোকক বধ কৰা কার্যত তেওঁৰ আৰু তেওঁৰ সহায়কাৰী চিখিমৰ লোকসকলৰ ওপৰত প্রতিশোধ লোৱা হয়।
25 ೨೫ ಶೆಕೆಮಿನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲಿಗೆ ಮಾಡಿಕೊಳ್ಳುತ್ತಿದ್ದರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.
২৫সেয়ে চিখিমৰ লোকসকলে অবীমেলকৰ বিৰুদ্ধে পাহাৰৰ ওপৰত মানুহ ৰাখিলে আৰু তেওঁলোকে লুকাই থাকি সেই পথেৰে যিসকল লোক যায় তেওঁলোকক লুট-পাট কৰে। এই বিষয়ে অবীমেলকক জনোৱা হ’ল।
26 ೨೬ ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬುವನು ತನ್ನ ಬಂಧುಗಳೊಡನೆ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಅವನಲ್ಲಿ ಭರವಸವಿಟ್ಟರು.
২৬সেই সময়ত এবদৰ পুত্ৰ গালে নিজৰ জ্ঞাতি-কুতুম্বসকলৰ সৈতে চিখিমলৈ আহিল আৰু চিখিমৰ নেতাসকলে তেওঁৰ ওপৰত বিশ্বাস স্থাপন কৰিলে।
27 ೨೭ ಆ ಊರಿನವರು ಒಂದಾನೊಂದು ದಿನ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು, ಆಲೆಗಳಲ್ಲಿ ರಸತೆಗೆದು, ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ, ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.
২৭তেওঁলোকে খেতিলৈ গৈ দ্ৰাক্ষাবাৰীৰ পৰা আঙুৰ চপাই গছকিলে আৰু তাৰ ৰসেৰে উৎসৱ কৰিলে। তেওঁলোকে তেওঁলোকৰ দেৱতাৰ মন্দিৰলৈ গৈ ভোজন-পান কৰি অবীমেলকক শাও দিলে।
28 ೨೮ ಎಬೆದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು, “ಅಬೀಮೆಲೆಕನು ಎಷ್ಟರವನು? ಶೆಕೆಮಿನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನನ್ನು ಯಾಕೆ ಸೇವಿಸಬೇಕು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪುರಾಧಿಕಾರಿಯು ಜೆಬುಲನಲ್ಲವೋ? ನಾವು ಅವನನ್ನು ಯಾಕೆ ಸೇವಿಸಬೇಕು? ಶೆಕೆಮನ ತಂದೆಯಾದ ಹಮೋರನ ವಂಶದವರ ಸೇವೆಯನ್ನು ಮಾಡಲಿ.
২৮এবদৰ পুতেক গালে ক’লে, “অবীমেলক কোন যে আমি চিখিমৰ লোকসকল তেওঁৰ অধীনত থাকিম? তেওঁ জানো যিৰুব্বালৰ পুতেক নহয়? জবুল জানো তেওঁৰ শাসনাধিপতি নহয়? আপোনালোকে বৰং চিখিমৰ বাপেক হমোৰৰ বংশধৰসকলৰ অধীন হৈ থাকক; কিয় আমি অবীমেলকৰ অধীনত থাকিম?
29 ೨೯ ಈ ಜನರ ಮೇಲೆ ನನಗೆ ಅಧಿಕಾರವಿದ್ದಿದ್ದರೆ ಅಬೀಮೆಲೆಕನನ್ನು ಓಡಿಸಿಬಿಡುತ್ತಿದ್ದೆನು” ಎಂದು ಹೇಳಿ, “ಎಲಾ, ಅಬೀಮೆಲೆಕನೇ, ಸೈನ್ಯವನ್ನು ತೆಗೆದುಕೊಂಡು ನನ್ನೊಡನೆ ಯುದ್ಧಕ್ಕೆ ಬಾ” ಎಂದು ಕೊಚ್ಚಿಕೊಂಡನು.
২৯এই লোকসকল মোৰ বশত থকাহেতেঁন কেনে ভাল হ’লহেতেন! তেতিয়াতো মই অবীমেলকক দুৰ কৰি দিলোঁহেঁতেন। তেওঁ অবীমেলকক সকলো সৈন্য লৈ আহিবলৈ ক’লে।”
30 ೩೦ ಪುರಾಧಿಕಾರಿಯಾದ ಜೆಬುಲನು ಎಬೆದನ ಮಗನಾದ ಗಾಳನ ಮಾತುಗಳನ್ನು ಕೇಳಿ, ಕೋಪಗೊಂಡು ಯಾರಿಗೂ ತಿಳಿಯದಂತೆ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿ,
৩০এবদৰ পুতেক গালৰ সেই কথা নগৰৰ শাসনাধিপতি জবুলৰ কাণত পৰিল আৰু তেওঁ ক্ৰোধত জ্বলি উঠিল।
31 ೩೧ “ಇಗೋ, ಎಬೆದನ ಮಗನಾದ ಗಾಳನೂ ಅವನ ಬಂಧುಗಳೂ ಇಲ್ಲಿಗೆ ಬಂದು ಶೆಕೆಮಿನವರೆಲ್ಲರನ್ನೂ ನಿನಗೆ ವಿರೋಧವಾಗಿ ಹುರಿದುಂಬಿಸುತ್ತಿದ್ದಾರೆ.
৩১তেতিয়া তেওঁ অবীমেলকৰ গুৰিলৈ বার্তাবাহকৰ দ্বাৰাই কৈ পঠালে, “এবদৰ পুতেক গাল আৰু তেওঁৰ জ্ঞাতি-কুতুম্বসকলে চিখিমলৈ আহি আপোনাৰ বিৰুদ্ধে নগৰৰ লোকসকলক উত্তেজিত কৰি তুলিছে।
32 ೩೨ ಆದುದರಿಂದ ನೀನು ಈ ರಾತ್ರಿಯೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು. ಸೂರ್ಯನು ಉದಯಿಸುತ್ತಲೇ ಎದ್ದು ಪಟ್ಟಣದ ಮೇಲೆ ಬೀಳು. ಅವನೂ ಅವನ ಜೊತೆಯಲ್ಲಿರುವವರೂ
৩২সেয়ে, আপুনি আৰু আপোনাৰ সৈন্যসকলে ৰাতিতে উঠি আহি খেতিৰ মাজত লুকাই থাকিব।
33 ೩೩ ನಿನಗೆ ವಿರೋಧವಾಗಿ ಹೊರಟು ಬಂದಾಗ ನಿನಗೆ ಅನುಕೂಲ ತೋರಿದ ಹಾಗೆ ಮಾಡು” ಎಂದು ಹೇಳಿಸಿದನು.
৩৩পাছদিনা ৰাতিপুৱা সুৰ্য্য উদয় হোৱা মাত্ৰেই আপোনালোকে উঠি আহি নগৰ আক্ৰমণ কৰিব; যেতিয়া গাল আৰু তেওঁৰ লোকসকল আপোনাৰ বিৰুদ্ধে ওলাই আহিব, তেতিয়া আপোনালোকে যিহকে কৰিব পাৰে তাকে তেওঁলোকলৈ কৰিব।”
34 ೩೪ ಅಬೀಮೆಲೆಕನೂ, ಅವನ ಜನರೂ ರಾತ್ರಿಯಲ್ಲೇ ಹೊರಟು ಬಂದು ನಾಲ್ಕು ಗುಂಪಾಗಿ ಶೆಕೆಮಿನವರನ್ನು ಹೊಂಚಿಕಾಯುತ್ತಿದ್ದರು.
৩৪যেতিয়া, অবীমেলক আৰু তেওঁৰ সকলো সৈন্যদলে ৰাতিতে উঠিল আৰু চাৰিটা দলত ভাগ হৈ চিখিমৰ ওচৰত লুকাই থকিল।
35 ೩೫ ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಊರಬಾಗಿಲಲ್ಲಿ ನಿಂತುಕೊಂಡಾಗ ಅಬೀಮೆಲೆಕನೂ ಅವನ ಜನರೂ ತಾವು ಹೊಂಚಿನೋಡುತ್ತಿದ್ದ ಸ್ಥಳದಿಂದ ಎದ್ದು ಬಂದರು.
৩৫নগৰৰ পৰা ওলাই আহি এবদৰ পুতেক গাল প্রৱেশদ্বাৰৰ ওচৰত থিয় হৈ আছিল। তেনেতে অবীমেলক আৰু তেওঁৰ সৈন্যসকল লুকাই থকা ঠাইৰ পৰা ওলাই আহিল।
36 ೩೬ ಗಾಳನು ಅವರನ್ನು ಕಂಡು ಜೆಬುಲನಿಗೆ, “ಇಗೋ, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ” ಎಂದು ಹೇಳಿದನು. ಜೆಬುಲನು ಅವನಿಗೆ, “ನೀನು ಬೆಟ್ಟದ ನೆರಳನ್ನು ನೋಡಿ ಜನರೆಂದು ಭಾವಿಸುತ್ತೀ” ಅನ್ನಲು
৩৬গালে তেওঁলোকক দেখি জবুলক ক’লে, “চাওঁক, পাহাৰৰ ওপৰৰ পৰা লোক সমূহ নামি আহিছে!” জবুলে উত্তৰত ক’লে, “আপুনি পাহাৰৰ ছাঁবোৰকে মানুহ যেন দেখিছে।”
37 ೩೭ ಅವನು ತಿರುಗಿ, “ನೋಡು, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ; ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ” ಅಂದನು.
৩৭কিন্তু গালে পুনৰায় ক’লে, “চাওঁক, লোকসকল দেশৰ মধ্যস্থানলৈ নামি আহিছে; আৰু এটা দল মোনইনীমৰ বাটেদি আহিছে।”
38 ೩೮ ಆಗ ಜೆಬುಲನು ಅವನಿಗೆ, “ಈಗ ನಿನ್ನ ಬಾಯೆಲ್ಲಿದೆ? ಅಬೀಮೆಲೆಕನು ಎಷ್ಟರವನು? ನಾವು ಅವನನ್ನು ಯಾಕೆ ಸೇವಿಸಬೇಕು ಎಂದು ಕೊಚ್ಚಿಕೊಂಡಿಯಲ್ಲಾ; ಅವರು ನೀನು ತಿರಸ್ಕರಿಸಿದ ಜನರಲ್ಲವೋ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ” ಎಂದು ಹೇಳಿದನು.
৩৮তেতিয়া জবুলে তেওঁক ক’লে, “এতিয়া আপোনাৰ সেই ডাঙৰ ডাঙৰ কথাবোৰ কলৈ গ’ল? আপুনিয়ে কৈছিলে, ‘অবীমেলক কোন যে আমি তেওঁৰ অধীনত থাকিম?’ এই লোকসকলকেই আপুনি তুচ্ছ জ্ঞান কৰা নাছিল নে? এতিয়া ওলাই গৈ তেওঁলোকৰে সৈতে যুদ্ধ কৰক।”
39 ೩೯ ಗಾಳನು ಶೆಕೆಮಿನವರ ನಾಯಕನಾಗಿ ಹೊರಟು ಅಬೀಮೆಲೆಕನೊಡನೆ ಕಾದಾಡಿದನು.
৩৯তেতিয়া চিখিমৰ নেতা গালে লোকসকলক পৰিচালনা কৰি বাহিৰলৈ ওলাই গ’ল, আৰু অবীমেলকেৰে সৈতে যুদ্ধ কৰিলে।
40 ೪೦ ಆದರೆ ಅಬೀಮೆಲೆಕನಿಗೆ ಬೆನ್ನು ತೋರಿಸಿ ಓಡಿಹೋಗಲು, ಅವನು ಇವನನ್ನು ಹಿಂದಟ್ಟಿದನು. ಊರುಬಾಗಿಲಿನವರೆಗೆ ಅನೇಕ ಮಂದಿ ಹತರಾಗಿ ಬಿದ್ದರು.
৪০অবীমেলকে গালৰ পাছে পাছে খেদি যোৱাত তেওঁ পলাই গ’ল; আৰু তেওঁৰ দলৰ অনেকেই নগৰৰ প্ৰৱেশ দুৱাৰত সোমোৱাৰ আগতেই আঘাত পাই ঢলি পৰিল।
41 ೪೧ ಅನಂತರ ಅಬೀಮೆಲೆಕನು ಹೋಗಿ ಅರೂಮದಲ್ಲಿ ವಾಸಮಾಡಿದನು. ಇತ್ತ ಜೆಬುಲನು ಗಾಳನನ್ನೂ ಅವನ ಬಂಧುಗಳನ್ನೂ ಶೆಕೆಮಿನಿಂದ ಓಡಿಸಿಬಿಟ್ಟನು.
৪১অবীমেলক অৰূমাত থাকিল আৰু জবুলে চিখিমৰ পৰা গাল আৰু তেওঁৰ জ্ঞাতি-কুটুম্বসকলক খেদি বাহিৰ কৰি দিলে।
42 ೪೨ ಮರುದಿನ ಜನರು ಬೈಲಿಗೆ ಹೊರಟು ಬಂದರು;
৪২পাছদিনাখন চিখিমৰ লোকসকলে নগৰৰ বাহিৰ ওলাই খেতিলৈ গ’ল আৰু এই বাতৰি অবীমেলকক জনোৱা হ’ল।
43 ೪೩ ಇದು ಅಬೀಮೆಲೆಕನಿಗೆ ಗೊತ್ತಿದ್ದುದರಿಂದ ಅವನು ತನ್ನ ಜನರನ್ನು ಮೂರು ಗುಂಪು ಮಾಡಿ ಅವರನ್ನು ಕರೆದುಕೊಂಡು ಬಂದು ಹೊಲಗಳಲ್ಲಿ ಹೊಂಚಿ ನೋಡುತ್ತಿದ್ದನು. ಜನರು ಪಟ್ಟಣದಿಂದ ಹೊರಟು ಬರುವುದನ್ನು ಇವನು ಕಾಣುತ್ತಲೇ, ಅಲ್ಲಿಂದ ಎದ್ದು ಅವರನ್ನು ಹೊಡೆದನು.
৪৩অবীমেলকে তেওঁৰ লোকসকলক লৈ তিনিটা দলত ভাগ কৰি খেতিৰ মাজত লুকাই থাকিল; যেতিয়া নগৰৰ পৰা লোক সমূহক বাহিৰ হৈ অহা দেখিলে, তেতিয়া তেওঁ তেওঁলোকক আক্রমণ কৰি বধ কৰিলে।
44 ೪೪ ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿ ಬಂದು ಊರು ಬಾಗಿಲಲ್ಲಿ ನಿಂತರು; ಉಳಿದ ಎರಡು ಗುಂಪಿನವರು ಬೈಲಿನಲ್ಲಿದ್ದ ಶೆಕೆಮಿನವರ ಮೇಲೆ ಬಿದ್ದು ಅವರನ್ನು ಹತಮಾಡಿದರು.
৪৪অবীমেলকে তেওঁৰ দলটোৰে সৈতে গৈ নগৰৰ প্রৱেশ-দুৱাৰৰ ওচৰত থিয় হৈ থাকিল; আন দুটা দলে খেতিত থকা সকলো লোকক আক্ৰমণ কৰি বধ কৰিলে।
45 ೪೫ ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ, ಪಟ್ಟಣವನ್ನು ಸ್ವಾಧೀನಮಾಡಿಕೊಂಡು, ಅದರ ಜನರನ್ನೆಲ್ಲಾ ಸಂಹರಿಸಿ, ಊರನ್ನು ಕೆಡವಿಬಿಟ್ಟು, ಅಲ್ಲಿ ಉಪ್ಪನ್ನು ಎರಚಿಬಿಟ್ಟನು.
৪৫সেইদিনা ওৰে দিনটো অবীমেলকে নগৰৰ বিৰুদ্ধে যুদ্ধ কৰিলে আৰু সেই ঠাইৰ লোক সমূহক বধ কৰি নগৰ অধিকাৰ কৰিলে। তাৰ পাছত নগৰৰ দেৱাল ধ্বংস কৰি তাৰ ওপৰত নিমখ চতিয়াই দিলে।
46 ೪೬ ಶೆಕೆಮಿನ ಕೋಟೆಯವರು ಇದನ್ನು ಕೇಳಿ ಏಲ್ಬೆರೀತೆ ಎಂಬ ದೇವರ ಗುಡಿಯ ನೆಲಮನೆಯಲ್ಲಿ ಅಡಗಿಕೊಂಡರು.
৪৬এই খবৰ শুনি চিখিমৰ দুৰ্গৰ নেতাসকলে এল-বৰীৎ দেৱতাৰ মন্দিৰৰ ভিতৰত সোমালগৈ।
47 ೪೭ ಕೋಟೆಯವರೆಲ್ಲರೂ ಅಲ್ಲಿ ಅಡಗಿಕೊಂಡಿದ್ದಾರೆಂಬುದು ಅಬೀಮೆಲೆಕನಿಗೆ ಗೊತ್ತಾದಾಗ
৪৭অবীমেলকে যেতিয়া শুনিলে যে লোকসকলে চিখিমৰ দুৰ্গলৈ গৈ একেলগ হৈছে,
48 ೪೮ ಅವನು ಕೊಡಲಿಯನ್ನು ತೆಗೆದುಕೊಂಡು ತನ್ನ ಜನರೆಲ್ಲರೊಡನೆ ಚಲ್ಮೋನ್ ಗುಡ್ಡವನ್ನೇರಿ ತನ್ನವರಿಗೆ, “ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ” ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊತ್ತುಕೊಳ್ಳಲು
৪৮তেতিয়া তেওঁ নিজৰ লোকসকলক লগত লৈ চলমোন পৰ্ব্বতলৈ উঠি গ’ল। তেওঁ কুঠাৰ ললে আৰু গছৰ পৰা এটা ডাল কাটি নিজৰ কান্ধত তুলি ল’লে। তাৰ পাছত তেওঁৰ লগত থকা লোকসকলক আদেশ দিলে, “তোমালোকে মোক যি যি কৰা দেখিলা, তোমালোকেও শীঘ্রে তেনেকুৱা কৰিবা।”
49 ೪೯ ಅವರೂ ಅದರಂತೆಯೇ ಮಾಡಿ, ಅವನ ಹಿಂದೆ ಹೋಗಿ, ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ, ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್ ಕೋಟೆಯವರೆಲ್ಲರೂ ಸತ್ತರು. ಅವರ ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.
৪৯সেয়ে সকলোৱে এটা এটা ডাল কাটি লৈ অবীমেলকৰ পাছে পাছে গ’ল। তাৰ পাছত তেওঁলোকে সেই ডালবোৰ আনি মন্দিৰৰ মাটিৰ তলত থকা সেই ঘৰটোৰ ওপৰত জাপি দি জুই লগাই দিলে; এইদৰে চিখিমৰ দুৰ্গত থকা সকলো লোক মৰিল; তাত প্রায় এক হাজাৰ পুৰুষ আৰু মহিলা আছিল।
50 ೫೦ ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ ಮುತ್ತಿಗೆಹಾಕಿ ಅದನ್ನು ಹಿಡಿದನು.
৫০তাৰ পাছত অবীমেলক তেবেচলৈ গৈ তাৰ বিৰুদ্ধে ছাউনি পাতি তাক অধিকাৰ কৰি ল’লে।
51 ೫೧ ಆ ಊರಿನ ಮಧ್ಯದಲ್ಲಿ ಒಂದು ಭದ್ರವಾದ ಬುರುಜು ಇತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ, ಅದರೊಳಗೆ ಹೊಕ್ಕು, ಬಾಗಿಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು.
৫১সেই নগৰৰ ভিতৰত এটা দৃঢ় দুৰ্গ আছিল; সকলো পুৰুষ, মহিলা আৰু নগৰৰ নেতাসকল তালৈ পলাই গৈ দুৱাৰ বন্ধ কৰি নিজকে ভিতৰত আবদ্ধ কৰিলে। তাৰ পাছত তেওঁলোক দুর্গৰ চালৰ ওপৰত উঠিলগৈ।
52 ೫೨ ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಬುರುಜಿನ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋಗಲು,
৫২অবীমেলকে সেই দুর্গৰ ওচৰলৈ আহি তাৰ বিৰুদ্ধে যুদ্ধ কৰিলে; তেওঁ দুৰ্গত জুই লগাবৰ বাবে দুৰ্গৰ দুৱাৰৰ ওচৰলৈকে আহিল।
53 ೫೩ ಒಬ್ಬ ಸ್ತ್ರೀಯು ಮೇಲಿನಿಂದ ಒಂದು ಬೀಸುವ ಕಲ್ಲನ್ನು ಬೀಳಿಸಿ, ಅವನ ತಲೆಬುರುಡೆಯನ್ನು ಒಡೆದುಬಿಟ್ಟಳು.
৫৩কিন্তু তাত এগৰাকী মহিলাই জাঁতৰ ওপৰৰ শিলচটা লৈ অবীমেলকৰ মূৰৰ ওপৰত পেলাই দি তেওঁৰ মূৰৰ খোলা ভাঙিলে।
54 ೫೪ ಅವನು ಕೂಡಲೆ ತನ್ನ ಆಯುಧ ಹೊರುವವನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ನಾನು ಹೆಂಗಸಿನ ಕೈಯಿಂದ ಸತ್ತನೆಂದು ಜನರು ಹೇಳಾರು” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.
৫৪তেতিয়া অবীমেলকে ততাতৈয়াকৈ নিজৰ অস্ত্রবহনকাৰী যুবকক মাতি ক’লে, “তোমাৰ তৰোৱাল উলিয়াই মোক বধ কৰা যাতে কোনেও মোৰ বিষয়ে এইদৰে ক’ব নোৱাৰে যে ‘এগৰাকী মহিলাই মোক বধ কৰিলে’।” তেতিয়া সেই যুবকে তেওঁক তৰোৱালেৰে খুচিলে আৰু তেওঁৰ মৃত্যু হ’ল।
55 ೫೫ ಅಬೀಮೆಲೆಕನು ಸತ್ತು ಹೋದದ್ದನ್ನು ಕಂಡು ಇಸ್ರಾಯೇಲರು ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗಿದರು.
৫৫অবীমেলকৰ মৃত্যু হোৱা দেখি ইস্ৰায়েলীয়াসকলে নিজৰ ঘৰলৈ উলটি গ’ল।
56 ೫೬ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ, ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯಿತೀರಿಸಿದನು.
৫৬এই দৰে সত্তৰজন ভায়েকক বধ কৰি অবীমেলকে নিজৰ বাপেকৰ বিৰুদ্ধে যি কুকৰ্ম কৰিলে, ঈশ্বৰে তাৰ সমুচিত দণ্ড তেওঁক দিলে।
57 ೫೭ ಶೆಕೆಮಿನವರಿಗಾದರೋ ಅವರ ದುಷ್ಟತನವನ್ನು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು.
৫৭চিখিমৰ লোকসকলে যি সকলো অন্যায় কৰিছিল, তেওঁলোকৰ নিজৰ মূৰৰ ওপৰত ঈশ্বৰে দণ্ড আনিলে; যিৰুব্বালৰ পুতেক যোথমৰ শাও তেওঁলোকৰ ওপৰত পৰিল।