< ನ್ಯಾಯಸ್ಥಾಪಕರು 9 >

1 ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿಗೆ ಹೋಗಿ ತನ್ನ ಸೋದರಮಾವಂದಿರಿಗೂ, ತಾಯಿಯ ಬಂಧುಗಳೆಲ್ಲರಿಗೂ ಹೇಳಿದ್ದೇನೆಂದರೆ,
পরে যিরুব্বালের ছেলে অবীমেলক শিখিমে নিজের মায়ের আত্মীয়দের কাছে গিয়ে তাদেরকে এবং নিজের মায়ের পিতৃকুলের সব গোষ্ঠীকে এই কথা বলল; নিবেদন করি,
2 “ನೀವು ದಯವಿಟ್ಟು ಶೆಕೆಮಿನ ಹಿರಿಯರನ್ನು ಮಾತನಾಡಿಸಿ, ‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳ್ವಿಕೆ ಮಾಡುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ?’ ಎಂದು ಅವರನ್ನು ಕೇಳಿ, ನಾನು ಅವರ ರಕ್ತಸಂಬಂಧಿಯಾಗಿದ್ದೇನೆ ಎಂಬುದನ್ನು ತಿಳಿಸಿರಿ” ಅಂದನು.
তোমরা শিখিমে সব বাড়ির লোকেদের এই কথা বল, তোমাদের পক্ষে ভাল কি? তোমাদের ওপরে যিরুব্বালের সব ছেলের অর্থাৎ সত্তর জনের কর্তৃত্ব ভাল, না এক জনের কর্তৃত্ব ভাল? আর এটাও মনে কর, আমি তোমাদের অস্থি ও তোমাদের মাংস।
3 ಅವರು ಶೆಕೆಮಿನ ಹಿರಿಯರ ಬಳಿಗೆ ಹೋಗಿ ಅಬೀಮೆಲೆಕನ ವಿಷಯದಲ್ಲಿ ಹಾಗೆಯೇ ಹೇಳಲು ಅವರು, “ಇವನು ನಮ್ಮ ಸಹೋದರನಾಗಿದ್ದಾನಲ್ಲಾ” ಅಂದುಕೊಂಡು ಅವನ ಪಕ್ಷವನ್ನು ಹಿಡಿಯುವುದಕ್ಕೆ ಒಪ್ಪಿಕೊಂಡರು.
আর তাঁর মাতার আত্মীয়েরা তাঁর পক্ষে শিখিমের সব বাড়ির লোকেদের ঐ সব কথা বললে অবীমেলকের অনুগামী হতে তাদের মনে ইচ্ছা হল; কারণ তারা বলল, উনি আমাদের আত্মীয়।
4 ಮತ್ತು ಅವರು ಬಾಳ್‍ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಕಾಕಪೋಕರನ್ನು ಕೂಡಿಸಿ,
আর তারা বাল্‌-বরীতের মন্দির থেকে তাঁকে সত্তর [থান] রূপা দিল; তাতে অবীমেলক অসার ও উৎশৃঙ্খল লোকদেরকে ঐ রূপার বেতন দিলে তারা তাঁর অনুগামী হল।
5 ಅವರ ನಾಯಕನಾಗಿ ಹೊರಟು, ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು, ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.
পরে সে অফ্রায় বাবার বাড়িতে গিয়ে নিজের ভাইদেরকে অর্থাৎ যিরুব্বালের সত্তর জন ছেলেকে এক পাথরের ওপরে হত্যা করল; কেবল যিরুব্বালের ছোট ছেলে যোথম লুকিয়ে থাকাতে বেঁচে গেল।
6 ತರುವಾಯ ಎಲ್ಲಾ ಶೆಕೆಮಿನವರೂ ಮಿಲ್ಲೋ ಕೋಟೆಯವರೂ ಶೆಕೆಮಿನ ಬಳಿಯಲ್ಲಿ ಜ್ಞಾಪಕಸ್ತಂಭವಿರುವ ಏಲೋನ್ ವೃಕ್ಷದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರು.
পরে শিখিমের সব বাড়ির লোক এবং মিল্লোর সব লোক জড়ো হয়ে শিখিমস্থ স্তম্ভের এলোন গাছের কাছে গিয়ে অবীমেলককে রাজা করল।
7 ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ, “ಶೆಕೆಮಿನ ಜನರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮ್ಮ ಮೊರೆಗೆ ಕಿವಿಗೊಡುವನು” ಎಂದನು.
আর লোকেরা যোথমকে এই সংবাদ দিলে সে গিয়ে গরিষীম পর্বতের চূড়াতে দাঁড়িয়ে জোরে চিত্কার করে ডেকে তাদেরকে বলল, হে শিখিমের বাড়ির লোক সকল, আমার কথা শোনো, শুনলে ঈশ্বর তোমাদের কথা শুনবেন।
8 “ಒಮ್ಮೆ, ಮರಗಳು ತಮಗೋಸ್ಕರ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಎಣ್ಣೆಯ ಮರದ ಬಳಿಗೆ ಬಂದು, ‘ನೀನು ಬಂದು ನಮಗೆ ಅರಸನಾಗು’ ಅಂದವು.
একবার বৃক্ষেরা নিজেদের উপরে অভিষেক করার জন্য রাজার খোঁজে গেল। তারা জিতবৃক্ষকে বলল, তুমি আমাদের উপরে রাজত্ব কর।
9 ಆಗ ಅದು ಅವುಗಳಿಗೆ, ‘ನನ್ನಲ್ಲಿರುವ ಎಣ್ಣೆಗೋಸ್ಕರ ದೇವತೆಗಳೂ, ಮನುಷ್ಯರು ನನ್ನನ್ನು ಘನಪಡಿಸುತ್ತಾರೆ; ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಅಂದಿತು.
জিতবৃক্ষ তাদেরকে বলল, আমার যে তেলের জন্য ঈশ্বর ও মানুষেরা আমার গৌরব করেন, তা ত্যাগ করে আমি কি বৃক্ষদের ওপরে দুলতে থাকব?
10 ೧೦ ತರುವಾಯ ಅವು ಅಂಜೂರ ಗಿಡದ ಬಳಿಗೆ ಹೋಗಿ ಅದಕ್ಕೆ, ‘ನೀನು ಬಂದು ನಮಗೆ ಅರಸನಾಗು’ ಎನ್ನಲು
১০পরে বৃক্ষরা ডুমুরবৃক্ষকে বলল, তুমি এসে আমাদের উপরে রাজত্ব কর।
11 ೧೧ ಅದು, ‘ನಾನು ನನ್ನ ಶ್ರೇಷ್ಠವಾದ ಮಧುರಫಲದಾನವನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು.
১১ডুমুরবৃক্ষ তাদেরকে বলল, আমি কি নিজের মিষ্টতা ও উত্তম ফল ত্যাগ করে বৃক্ষদের উপরে দুলতে থাকবে?
12 ೧೨ ಅನಂತರ ಅವು ದ್ರಾಕ್ಷಾಲತೆಯ ಬಳಿಗೆ ಹೋಗಿ, ‘ನೀನು ಬಂದು ನಮಗೆ ಅರಸನಾಗು’ ಎನ್ನಲು
১২পরে বৃক্ষরা আঙ্গুর গাছকে বলল, তুমি এসে আমাদের ওপরে রাজত্ব কর।
13 ೧೩ ಅದು ಅವುಗಳಿಗೆ, ‘ನಾನು ನನ್ನ ರಸದಿಂದ ದೇವತೆಗಳಿಗೂ ಮನುಷ್ಯರಿಗೂ ಆನಂದಕೊಡುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು.
১৩দ্রাক্ষালতা তাদেরকে বলল, আমার যে রস ঈশ্বরকে ও মানুষদেরকে খুশি করে, তা ত্যাগ করে আমি কি বৃক্ষদের ওপরে দুলতে থাকবে?
14 ೧೪ ಕೊನೆಗೆ ಎಲ್ಲಾ ಮರಗಳು ಮುಳ್ಳುಗಿಡದ ಬಳಿಗೆ ಹೋಗಿ, ‘ನೀನು ಬಂದು ನಮಗೆ ಅರಸನಾಗು’ ಅನ್ನಲು
১৪পরে সমস্ত বৃক্ষ কাঁটাযুক্ত বৃক্ষকে বলল, তুমি এসে আমাদের উপরে রাজত্ব কর।
15 ೧೫ ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.
১৫কাঁটাযুক্ত বৃক্ষ সেই বৃক্ষদেরকে বলল, তোমরা যদি নিজেদের ওপরে সত্যিই আমাকে রাজা বলে অভিষেক কর, তবে এসে আমার ছায়ার শরণ নাও, তবে এই কাঁটাযুক্ত বৃক্ষ থেকে আগুন বের হয়ে লিবানোনের এরস বৃক্ষদেরকে পুড়িয়ে দিক।
16 ೧೬ “ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ನ್ಯಾಯವೋ? ಅದು ಧರ್ಮಕಾರ್ಯವೋ? ಯೆರುಬ್ಬಾಳನು ನಿಮಗೆ ಮಾಡಿದ ಉಪಕಾರಕ್ಕೋಸ್ಕರ ನೀವು ಅವನಿಗೂ ಅವನ ಮನೆಯವರಿಗೂ ಪ್ರತ್ಯುಪಕಾರಮಾಡಿದಿರೋ?
১৬এখন অবীমেলককে রাজা করাতে তোমরা যদি সত্য ও যথার্থ আচরণ করে থাক এবং যদি যিরুব্বালের ও তাঁর কুলের প্রতি ভালো আচরণ করে থাক, ও তাঁর হাতের উপকারানুসারে তাঁর প্রতি ব্যবহার করে থাক;
17 ೧೭ ನನ್ನ ತಂದೆಯು ತನ್ನ ಜೀವದ ಆಶೆಯನ್ನು ತೊರೆದು, ಹೋರಾಡಿ, ನಿಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದನಲ್ಲಾ.
১৭কারণ আমার বাবা তোমাদের জন্য যুদ্ধ করেছিলেন, ও প্রাণপণ চেষ্টা করে মিদিয়নের হাত থেকে তোমাদেরকে উদ্ধার করেছিলেন;
18 ೧೮ ಆದರೆ ನೀವು ಈಗ ನನ್ನ ತಂದೆಯ ಮನೆಗೆ ವಿರೋಧವಾಗಿ ನಿಂತು, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಒಂದೇ ಬಂಡೆಯ ಮೇಲೆ ವಧಿಸಿ, ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ನಮ್ಮ ಬಂಧುವೆಂದು ಹೇಳಿ, ಶೆಕೆಮಿನ ಅರಸನನ್ನಾಗಿ ಮಾಡಿಕೊಂಡಿದ್ದೀರಿ.
১৮কিন্তু তোমরা আজ আমার পিতৃকুলের বিরুদ্ধে উঠে এক পাথরের ওপরে তার সত্তর জন ছেলেকে হত্যা করলে, ও তাঁর দাসীর ছেলে অবীমেলককে নিজেদের ভাই বলে শিকিমের নেতাদের ওপরে রাজা করলে;
19 ೧೯ ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ, ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲಿ ಆನಂದಿಸಿರಿ; ಅವನು ನಿಮ್ಮಲ್ಲಿ ಆನಂದಿಸಲಿ.
১৯আজ যদি তোমরা যিরুব্বালের ও তাঁর কুলের প্রতি সত্য ও যথার্থ আচরণ করে থাক, তবে অবীমেলকের বিষয়ে আনন্দ কর এবং সেও তোমাদের বিষয় আনন্দ করুন।
20 ೨೦ ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ, ಮಿಲ್ಲೋ ಕೋಟೆಯವರನ್ನೂ ದಹಿಸಿಬಿಡಲಿ; ಶೆಕೆಮಿನವರಿಂದಲೂ, ಮಿಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ” ಎಂದನು.
২০কিন্তু তা যদি না হয়, তবে অবীমেলক থেকে আগুন বেরিয়ে শিখিমের লোকদেরকে ও মিল্লোর লোকদেরকে পুড়িয়ে দিক; আবার শিখিমের লোকদের থেকে মিল্লোর লোকদের থেকে আগুন বের হয়ে অবীমেলককে পুড়িয়ে দিক।
21 ೨೧ ಯೋತಾಮನು ಇಷ್ಟು ಹೇಳಿ ತನ್ನ ಸಹೋದರನಾದ ಅಬೀಮೆಲೆಕನಿಂದ ತಪ್ಪಿಸಿಕೊಂಡು ಬೇರಕ್ಕೆ ಓಡಿಹೋಗಿ ಅಲ್ಲೇ ವಾಸಮಾಡಿದನು.
২১পরে যোথম দৌড়িয়ে পালিয়ে গেল, সে বেরে গেল এবং তার ভাই অবীমেলকের ভয়ে সেই জায়গায় বাস করল।
22 ೨೨ ಅಬೀಮೆಲೆಕನು ಇಸ್ರಾಯೇಲರನ್ನು ಮೂರು ವರ್ಷ ಆಳಿದ ನಂತರ
২২অবীমেলক ইস্রায়েলের উপরে তিন বছর কর্তৃত্ব করল।
23 ೨೩ ಯೆಹೋವನು ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು.
২৩পরে ঈশ্বর অবীমেলকের ও শিখিমের লোকদের মধ্যে এক মন্দ আত্মা পাঠালেন, তাতে শিখিমের লোকেরা অবীমেলকের প্রতি বিশ্বাসঘাতকতা করল;
24 ೨೪ ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೆಯೂ ಬರುವುದಕ್ಕೆ ಕಾರಣವಾಯಿತು.
২৪যেন যিরুব্বালের সত্তরটি ছেলের প্রতি করা অত্যাচারের প্রতিফল ঘটে এবং তাদেরকে হত্যা করেছিল যে তাদের ভাই অবীমেলক, তার ওপরে এবং ভাই হত্যায় যারা তাকে সাহায্য করেছিল, সেই শিখিমস্থ লোকদের ওপরে ঐ রক্তপাতের অপরাধে অপরাধী হয়।
25 ೨೫ ಶೆಕೆಮಿನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲಿಗೆ ಮಾಡಿಕೊಳ್ಳುತ್ತಿದ್ದರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.
২৫আর শিখিমের লোকেরা তার জন্য কোন কোন পর্বতশৃঙ্গে গোপনে লোক বসিয়ে গেল, সবারই দ্রব্যাদি তারা লুট করল; আর অবীমেলক তার সংবাদ পেল।
26 ೨೬ ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬುವನು ತನ್ನ ಬಂಧುಗಳೊಡನೆ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಅವನಲ್ಲಿ ಭರವಸವಿಟ್ಟರು.
২৬পরে এবদের ছেলে গাল নিজের ভাইদেরকে সঙ্গে নিয়ে শিখিমে আসল; আর শিখিমের লোকেরা তাকে বিশ্বাস করল।
27 ೨೭ ಆ ಊರಿನವರು ಒಂದಾನೊಂದು ದಿನ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು, ಆಲೆಗಳಲ್ಲಿ ರಸತೆಗೆದು, ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ, ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.
২৭আর তারা বের হয়ে নিজের নিজের দ্রাক্ষাক্ষেত্রে ফল তুলল ও তা মাড়াই করল এবং উৎসব করল, আর নিজেদের দেবতার মন্দিরে গিয়ে ভোজন পান করে অবীমেলককে অভিশাপ দিল।
28 ೨೮ ಎಬೆದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು, “ಅಬೀಮೆಲೆಕನು ಎಷ್ಟರವನು? ಶೆಕೆಮಿನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನನ್ನು ಯಾಕೆ ಸೇವಿಸಬೇಕು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪುರಾಧಿಕಾರಿಯು ಜೆಬುಲನಲ್ಲವೋ? ನಾವು ಅವನನ್ನು ಯಾಕೆ ಸೇವಿಸಬೇಕು? ಶೆಕೆಮನ ತಂದೆಯಾದ ಹಮೋರನ ವಂಶದವರ ಸೇವೆಯನ್ನು ಮಾಡಲಿ.
২৮আর এবদের ছেলে গাল বলল, অবীমেলক কে, সে শিখিমীয় কে, যে আমরা তার দাসত্ব করব? সে কি যিরুব্বালের ছেলে না? সবূল কি তার সেনাপতি না? তোমরা বরং শিখিমের বাবা হমোরের লোকদের দাসত্ব কর;
29 ೨೯ ಈ ಜನರ ಮೇಲೆ ನನಗೆ ಅಧಿಕಾರವಿದ್ದಿದ್ದರೆ ಅಬೀಮೆಲೆಕನನ್ನು ಓಡಿಸಿಬಿಡುತ್ತಿದ್ದೆನು” ಎಂದು ಹೇಳಿ, “ಎಲಾ, ಅಬೀಮೆಲೆಕನೇ, ಸೈನ್ಯವನ್ನು ತೆಗೆದುಕೊಂಡು ನನ್ನೊಡನೆ ಯುದ್ಧಕ್ಕೆ ಬಾ” ಎಂದು ಕೊಚ್ಚಿಕೊಂಡನು.
২৯আমরা ওর দাসত্ব কেন স্বীকার করব? আহা, এই সব লোক আমার অধিকারে এলে আমি অবীমেলককে দূর করে দিই। পরে সে অবীমেলকের উদ্দেশ্যে বলল, তুমি দলবল বৃদ্ধি করে বের হয়ে এস দেখি।
30 ೩೦ ಪುರಾಧಿಕಾರಿಯಾದ ಜೆಬುಲನು ಎಬೆದನ ಮಗನಾದ ಗಾಳನ ಮಾತುಗಳನ್ನು ಕೇಳಿ, ಕೋಪಗೊಂಡು ಯಾರಿಗೂ ತಿಳಿಯದಂತೆ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿ,
৩০এবদের ছেলে গালের সেই কথা নগরের কর্তা সবূল শুনে সে ক্রোধে প্রজ্বলিত হয়ে উঠল;
31 ೩೧ “ಇಗೋ, ಎಬೆದನ ಮಗನಾದ ಗಾಳನೂ ಅವನ ಬಂಧುಗಳೂ ಇಲ್ಲಿಗೆ ಬಂದು ಶೆಕೆಮಿನವರೆಲ್ಲರನ್ನೂ ನಿನಗೆ ವಿರೋಧವಾಗಿ ಹುರಿದುಂಬಿಸುತ್ತಿದ್ದಾರೆ.
৩১আর সে কৌশল করে অবীমেলকের কাছে দূত পাঠিয়ে বলল, দেখুন, এবদের ছেলে গাল ও তার ভাইরা শিখিমে এসেছে; আর দেখুন, তারা আপনার বিরুদ্ধে নগরে কুকথা বলছে।
32 ೩೨ ಆದುದರಿಂದ ನೀನು ಈ ರಾತ್ರಿಯೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು. ಸೂರ್ಯನು ಉದಯಿಸುತ್ತಲೇ ಎದ್ದು ಪಟ್ಟಣದ ಮೇಲೆ ಬೀಳು. ಅವನೂ ಅವನ ಜೊತೆಯಲ್ಲಿರುವವರೂ
৩২অতএব আপনি ও আপনার সঙ্গে যে সব লোক আছে, আপনারা রাতে উঠে গিয়ে মাঠে লুকিয়ে থাকুন।
33 ೩೩ ನಿನಗೆ ವಿರೋಧವಾಗಿ ಹೊರಟು ಬಂದಾಗ ನಿನಗೆ ಅನುಕೂಲ ತೋರಿದ ಹಾಗೆ ಮಾಡು” ಎಂದು ಹೇಳಿಸಿದನು.
৩৩পরে ভোরবেলায় সূর্য্যোদয় হওয়ামাত্র আপনি উঠে নগর আক্রমণ করবেন; আর দেখুন, সে ও তার সঙ্গী লোকেরা আপনার বিরুদ্ধে বের হবে, তখন আপনার হাত যা করতে পারবে, তা করবেন।
34 ೩೪ ಅಬೀಮೆಲೆಕನೂ, ಅವನ ಜನರೂ ರಾತ್ರಿಯಲ್ಲೇ ಹೊರಟು ಬಂದು ನಾಲ್ಕು ಗುಂಪಾಗಿ ಶೆಕೆಮಿನವರನ್ನು ಹೊಂಚಿಕಾಯುತ್ತಿದ್ದರು.
৩৪পরে অবীমেলক ও তার সঙ্গী সমস্ত লোক রাত্রিতে উঠে চারটে দল ভাগ হয়ে শিখিমের বিরুদ্ধে লুকিয়ে থাকল।
35 ೩೫ ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಊರಬಾಗಿಲಲ್ಲಿ ನಿಂತುಕೊಂಡಾಗ ಅಬೀಮೆಲೆಕನೂ ಅವನ ಜನರೂ ತಾವು ಹೊಂಚಿನೋಡುತ್ತಿದ್ದ ಸ್ಥಳದಿಂದ ಎದ್ದು ಬಂದರು.
৩৫আর এবদের ছেলে গাল বাইরে গিয়ে নগরের দরজার প্রবেশের মুখে দাঁড়াল; পরে অবীমেলক ও তার সঙ্গী লোকেরা গোপন জায়গা থেকে উঠল।
36 ೩೬ ಗಾಳನು ಅವರನ್ನು ಕಂಡು ಜೆಬುಲನಿಗೆ, “ಇಗೋ, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ” ಎಂದು ಹೇಳಿದನು. ಜೆಬುಲನು ಅವನಿಗೆ, “ನೀನು ಬೆಟ್ಟದ ನೆರಳನ್ನು ನೋಡಿ ಜನರೆಂದು ಭಾವಿಸುತ್ತೀ” ಅನ್ನಲು
৩৬আর গাল সেই লোকদেরকে দেখে সবূলকে বলল, দেখ, পর্বতশৃঙ্গ থেকে লোকসকল নেমে আসছে। সবূল তাকে বলল, তুমি মানুষের ভুল পথের পর্বতের ছায়া দেখছ।
37 ೩೭ ಅವನು ತಿರುಗಿ, “ನೋಡು, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ; ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ” ಅಂದನು.
৩৭পরে গাল আবার বলল, দেখ, উচ্চ দেশ থেকে লোকসকল নেমে আসছে এবং গণকদের এলোন বৃক্ষের পথ দিয়ে এক দল আসছে।
38 ೩೮ ಆಗ ಜೆಬುಲನು ಅವನಿಗೆ, “ಈಗ ನಿನ್ನ ಬಾಯೆಲ್ಲಿದೆ? ಅಬೀಮೆಲೆಕನು ಎಷ್ಟರವನು? ನಾವು ಅವನನ್ನು ಯಾಕೆ ಸೇವಿಸಬೇಕು ಎಂದು ಕೊಚ್ಚಿಕೊಂಡಿಯಲ್ಲಾ; ಅವರು ನೀನು ತಿರಸ್ಕರಿಸಿದ ಜನರಲ್ಲವೋ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ” ಎಂದು ಹೇಳಿದನು.
৩৮সবূল তাকে বলল, কোথায় এখন তোমার সেই মুখ, যে মুখে বলেছিলে, অবীমেলক কে যে আমরা তার দাসত্ব স্বীকার করি? তুমি যে লোকদেরকে তুচ্ছ করেছিলে, ওরা কি সেই লোক না? এখন যাও, বের হয়ে ওর সঙ্গে যুদ্ধ কর।
39 ೩೯ ಗಾಳನು ಶೆಕೆಮಿನವರ ನಾಯಕನಾಗಿ ಹೊರಟು ಅಬೀಮೆಲೆಕನೊಡನೆ ಕಾದಾಡಿದನು.
৩৯পরে গাল শিখিমের লোকদের আগে আগে বেরিয়ে য়ে গিয়ে অবীমেলকের সঙ্গে যুদ্ধ করল।
40 ೪೦ ಆದರೆ ಅಬೀಮೆಲೆಕನಿಗೆ ಬೆನ್ನು ತೋರಿಸಿ ಓಡಿಹೋಗಲು, ಅವನು ಇವನನ್ನು ಹಿಂದಟ್ಟಿದನು. ಊರುಬಾಗಿಲಿನವರೆಗೆ ಅನೇಕ ಮಂದಿ ಹತರಾಗಿ ಬಿದ್ದರು.
৪০তাতে অবীমেলক তাকে তাড়া করল ও সে তার সামনে থেকে পালিয়ে গেল এবং প্রবেশ দ্বারের জায়গা পর্যন্ত অনেক লোক আহত হয়ে পড়ল।
41 ೪೧ ಅನಂತರ ಅಬೀಮೆಲೆಕನು ಹೋಗಿ ಅರೂಮದಲ್ಲಿ ವಾಸಮಾಡಿದನು. ಇತ್ತ ಜೆಬುಲನು ಗಾಳನನ್ನೂ ಅವನ ಬಂಧುಗಳನ್ನೂ ಶೆಕೆಮಿನಿಂದ ಓಡಿಸಿಬಿಟ್ಟನು.
৪১পরে অবীমেলক অরূমায় থাকল এবং সবূল গালকে ও তার ভাইদেরকে তাড়িয়ে দিল, তারা আর শিখিমে বাস করতে পারল না।
42 ೪೨ ಮರುದಿನ ಜನರು ಬೈಲಿಗೆ ಹೊರಟು ಬಂದರು;
৪২পর দিন লোকেরা বের হয়ে মাঠে যাচ্ছিল, আর অবীমেলক তার সংবাদ পেল।
43 ೪೩ ಇದು ಅಬೀಮೆಲೆಕನಿಗೆ ಗೊತ್ತಿದ್ದುದರಿಂದ ಅವನು ತನ್ನ ಜನರನ್ನು ಮೂರು ಗುಂಪು ಮಾಡಿ ಅವರನ್ನು ಕರೆದುಕೊಂಡು ಬಂದು ಹೊಲಗಳಲ್ಲಿ ಹೊಂಚಿ ನೋಡುತ್ತಿದ್ದನು. ಜನರು ಪಟ್ಟಣದಿಂದ ಹೊರಟು ಬರುವುದನ್ನು ಇವನು ಕಾಣುತ್ತಲೇ, ಅಲ್ಲಿಂದ ಎದ್ದು ಅವರನ್ನು ಹೊಡೆದನು.
৪৩সে লোকদেরকে নিয়ে তিনটে দল করে মাঠের মধ্যে লুকিয়ে থাকল; পরে সে চেয়ে দেখল, আর দেখ, লোকেরা নগর থেকে বের হয়ে আসছিল; তখন সে তাদের বিরুদ্ধে উঠে তাদেরকে আঘাত করল।
44 ೪೪ ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿ ಬಂದು ಊರು ಬಾಗಿಲಲ್ಲಿ ನಿಂತರು; ಉಳಿದ ಎರಡು ಗುಂಪಿನವರು ಬೈಲಿನಲ್ಲಿದ್ದ ಶೆಕೆಮಿನವರ ಮೇಲೆ ಬಿದ್ದು ಅವರನ್ನು ಹತಮಾಡಿದರು.
৪৪পরে অবীমেলক ও তার সঙ্গীদল সকল তাড়াতাড়ি এগিয়ে গিয়ে নগর-দ্বার-প্রবেশের জায়গায় দাঁড়িয়ে থাকল এবং দুটি দল মাঠের সব লোককে আক্রমণ করে আঘাত করল।
45 ೪೫ ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ, ಪಟ್ಟಣವನ್ನು ಸ್ವಾಧೀನಮಾಡಿಕೊಂಡು, ಅದರ ಜನರನ್ನೆಲ್ಲಾ ಸಂಹರಿಸಿ, ಊರನ್ನು ಕೆಡವಿಬಿಟ್ಟು, ಅಲ್ಲಿ ಉಪ್ಪನ್ನು ಎರಚಿಬಿಟ್ಟನು.
৪৫আর অবীমেলক সেই সব দিন ঐ নগরের বিরুদ্ধে যুদ্ধ করল; আর নগর অধিকার করে সেখানকার লোকদেরকে হত্যা করল এবং নগর সমভূমি করে তার ওপরে লবণ ছড়িয়ে দিল।
46 ೪೬ ಶೆಕೆಮಿನ ಕೋಟೆಯವರು ಇದನ್ನು ಕೇಳಿ ಏಲ್‌ಬೆರೀತೆ ಎಂಬ ದೇವರ ಗುಡಿಯ ನೆಲಮನೆಯಲ್ಲಿ ಅಡಗಿಕೊಂಡರು.
৪৬পরে শিখিমের দূর্গে অবস্থিত লোকেরা সব এই কথা শুনে এল্‌-বরীৎএর দূর্গে এক গৃহে প্রবেশ করল।
47 ೪೭ ಕೋಟೆಯವರೆಲ್ಲರೂ ಅಲ್ಲಿ ಅಡಗಿಕೊಂಡಿದ್ದಾರೆಂಬುದು ಅಬೀಮೆಲೆಕನಿಗೆ ಗೊತ್ತಾದಾಗ
৪৭পরে শিখিমের দূর্গে অবস্থিত সব গৃহস্থ জড়ো হয়েছে, এই কথা অবীমেলক শুনল।
48 ೪೮ ಅವನು ಕೊಡಲಿಯನ್ನು ತೆಗೆದುಕೊಂಡು ತನ್ನ ಜನರೆಲ್ಲರೊಡನೆ ಚಲ್ಮೋನ್ ಗುಡ್ಡವನ್ನೇರಿ ತನ್ನವರಿಗೆ, “ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ” ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊತ್ತುಕೊಳ್ಳಲು
৪৮তখন অবীমেলক ও তার সঙ্গীরা সকলে সল্‌মোন পর্বতে উঠল। আর অবীমেলক কুঠার হাতে নিয়েছিল; সে বৃক্ষ থেকে একটা ডাল কেটে নিয়ে নিজের কাঁধে রাখল এবং নিজের সঙ্গী লোকদেরকে বলল, তোমরা আমাকে যা করতে দেখলে, তাড়াতাড়ি সেরকম কর।
49 ೪೯ ಅವರೂ ಅದರಂತೆಯೇ ಮಾಡಿ, ಅವನ ಹಿಂದೆ ಹೋಗಿ, ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ, ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್‌ ಕೋಟೆಯವರೆಲ್ಲರೂ ಸತ್ತರು. ಅವರ ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.
৪৯তাতে সব লোক প্রত্যেকে এক একটা ডাল কেটে নিয়ে অবীমেলকের পিছন পিছন চলল; পরে সেই সমস্ত ডাল ঐ উঁচু বাড়ীর গায়ে রেখে সেই বাড়িতে আগুন লাগিয়ে দিল; এই ভাবে শিখিমের দুর্গে অবস্থিত সমস্ত লোকও মারা গেল; তারা স্ত্রী ও পুরুষ অনুমান হাজার লোক ছিল।
50 ೫೦ ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ ಮುತ್ತಿಗೆಹಾಕಿ ಅದನ್ನು ಹಿಡಿದನು.
৫০পরে অবীমেলক তেবেসে চলে গেল, ও তেবেসের বিরুদ্ধে শিবির তৈরী করে তা দখল করল।
51 ೫೧ ಆ ಊರಿನ ಮಧ್ಯದಲ್ಲಿ ಒಂದು ಭದ್ರವಾದ ಬುರುಜು ಇತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ, ಅದರೊಳಗೆ ಹೊಕ್ಕು, ಬಾಗಿಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು.
৫১কিন্তু ঐ নগরের মধ্যে এক শক্তিশালী দূর্গ ছিল, অতএব সমস্ত পুরুষ ও স্ত্রী এবং নগরের সমস্ত লোকেরা পালিয়ে তার মধ্যে গিয়ে দরজা বন্ধ করে দূর্গের ছাদের ওপরে উঠল।
52 ೫೨ ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಬುರುಜಿನ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋಗಲು,
৫২পরে অবীমেলক সেই দূর্গের কাছে গিয়ে তার বিরুদ্ধে যুদ্ধ করল এবং তা আগুন দিয়ে পুড়িয়ে দেবার জন্য দূর্গের দরজা পর্যন্ত গেল।
53 ೫೩ ಒಬ್ಬ ಸ್ತ್ರೀಯು ಮೇಲಿನಿಂದ ಒಂದು ಬೀಸುವ ಕಲ್ಲನ್ನು ಬೀಳಿಸಿ, ಅವನ ತಲೆಬುರುಡೆಯನ್ನು ಒಡೆದುಬಿಟ್ಟಳು.
৫৩তখন একটি স্ত্রীলোক যাঁতার উপরের পাথরটি নিয়ে অবীমেলকের মাথার ওপরে ছুঁড়ে তার মাথার খুলি ভেঙে দিল।
54 ೫೪ ಅವನು ಕೂಡಲೆ ತನ್ನ ಆಯುಧ ಹೊರುವವನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ನಾನು ಹೆಂಗಸಿನ ಕೈಯಿಂದ ಸತ್ತನೆಂದು ಜನರು ಹೇಳಾರು” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.
৫৪তাতে সে তাড়াতাড়ি নিজের অস্ত্রবাহক যুবককে ডেকে বলল, তুমি তরোয়াল বের করে আমাকে হত্যা কর; যদি লোকে আমার বিষয়ে বলে, একটা স্ত্রীলোক ওকে হত্যা করেছে। তখন সেই যুবক তাকে বিদ্ধ করলে সে মরে গেল।
55 ೫೫ ಅಬೀಮೆಲೆಕನು ಸತ್ತು ಹೋದದ್ದನ್ನು ಕಂಡು ಇಸ್ರಾಯೇಲರು ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗಿದರು.
৫৫পরে অবীমেলক মারা গিয়েছে দেখে ইস্রায়েলীয়রা প্রত্যেকে নিজের নিজের জায়গায় চলে গেল।
56 ೫೬ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ, ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯಿತೀರಿಸಿದನು.
৫৬এই ভাবে অবীমেলক নিজের সত্তর জন ভাইকে হত্যা করে নিজের বাবার বিরুদ্ধে যে দুষ্কর্ম্ম করেছিল, ঈশ্বর তার সঠিক শাস্তি তাকে দিলেন;
57 ೫೭ ಶೆಕೆಮಿನವರಿಗಾದರೋ ಅವರ ದುಷ್ಟತನವನ್ನು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು.
৫৭আবার শিখিমের লোকদের মাথায় ঈশ্বর তাদের সমস্ত দুষ্কর্ম্মের প্রতিফল দিলেন; তাতে যিরুব্বালের ছেলে যোথমের অভিশাপ তাদের ওপরে পড়ল।

< ನ್ಯಾಯಸ್ಥಾಪಕರು 9 >