< ನ್ಯಾಯಸ್ಥಾಪಕರು 1 >
1 ೧ ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವನನ್ನು ಕೇಳಲು
১যিহোশূয়ের মৃত্যুর পরে ইস্রায়েলের লোকেরা সদাপ্রভুর কাছে এই কথা জিজ্ঞাসা করল, “কনানীয়দের বিরুদ্ধে, তাদের সঙ্গে যুদ্ধ করার জন্য, প্রথমে আমাদের কে যাবে?”
2 ೨ ಆತನು ಅವರಿಗೆ “ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ” ಅಂದನು.
২সদাপ্রভু বললেন, “যিহূদা যাবে; দেখ, আমি তার হাতে দেশ সমর্পণ করেছি।”
3 ೩ ಆಗ ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ನೀವು ನಮ್ಮ ಸಂಗಡ ನಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬನ್ನಿರಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬರುವೆವು” ಎಂದು ಹೇಳಿದರು.
৩পরে যিহূদা তার ভাই শিমিয়োনকে বলল, “তুমি আমার জায়গায় আমার সঙ্গে এস, আমরা কনানীয়দের সঙ্গে যুদ্ধ করি; পরে আমিও তোমার জায়গায় তোমার সঙ্গে যাব।” তাতে শিমিয়োন তার সঙ্গে গেল।
4 ೪ ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕ್ ಎಂಬ ಸ್ಥಳದಲ್ಲಿ ಹತ್ಯೆಮಾಡಿದರು.
৪যিহূদা গেলেন, আর সদাপ্রভু তাদের হাতে কনানীয় ও পরিষীয়দেরকে সমর্পণ করলেন; আর তারা বেষকে তাদের দশহাজার লোককে হত্যা করল।
5 ೫ ಅವರು ಅಲ್ಲಿ ಅದೋನೀ ಬೆಜೆಕನನ್ನು ಸಂಧಿಸಿ, ಅವನೊಡನೆ ಯುದ್ಧಮಾಡಿ ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಸೋಲಿಸಿದರು.
৫তারা বেষকে অদোনী-বেষককে পেয়ে তাঁর সঙ্গে যুদ্ধ করল এবং কনানীয় ও পরিষীয়দেরকে আঘাত করল।
6 ೬ ಅದೋನೀಬೆಜೆಕನು ಓಡಿಹೋಗಲು ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.
৬তখন অদোনী-বেষক পালিয়ে গেল; আর তারা তার পিছন পিছন দৌড়িয়ে গিয়ে তাঁকে ধরল এবং তাঁর হাত ও পায়ের বুড়ো আঙ্গুল কেটে দিল।
7 ೭ ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.
৭তখন অদোনী-বেষক বললেন, “যাদের হাত ও পায়ের বুড়ো আঙ্গুল বাদ দেওয়া হয়েছিল, এমন সত্তর জন রাজা আমার মেজের (টেবিলের) নীচে খাবার কুড়াতেন; আমি যেমন কাজ করেছি, ঈশ্বর আমাকেও সেরকম প্রতিফল দিয়েছেন।” পরে লোকেরা তাকে যিরুশালেমে আনলে তিনি সেই জায়গায় মারা গেলেন।
8 ೮ ಯೆಹೂದ್ಯರು ಯೆರೂಸಲೇಮಿನವರೊಡನೆ ಯುದ್ಧಮಾಡಿ, ಅಲ್ಲಿನ ಜನರನ್ನು ಹಿಡಿದು ಕತ್ತಿಯಿಂದ ಸಂಹರಿಸಿ ಪಟ್ಟಣಕ್ಕೆ ಬೆಂಕಿಯಿಟ್ಟರು.
৮আর যিহূদার লোকেরা যিরুশালেমের বিরুদ্ধে যুদ্ধ করে তা নিজেদের অধিকারে নিল ও তরোয়াল দিয়ে আঘাত করল এবং আগুন দিয়ে নগর পুড়িয়ে দিল।
9 ೯ ತರುವಾಯ ಯೆಹೂದ್ಯರು ಹೋಗಿ ಪರ್ವತಪ್ರದೇಶ, ದಕ್ಷಿಣಸೀಮೆ ಹಾಗೂ ಕಣಿವೆ ಪ್ರದೇಶಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.
৯পরে যিহূদা সন্তানরা কনানীয়দের বিরুদ্ধে যুদ্ধ করতে নেমে গেল যারা পাহাড়ের দক্ষিণ দিকে এবং পশ্চিমীয় পাদদেশে বাস করত।
10 ೧೦ ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು.
১০আর যিহূদা হিব্রোণবাসী কনানীয়দের বিরুদ্ধে যাত্রা করে শেশয়, অহীমান ও তলময়কে আঘাত করল; আগে ঐ হিব্রোণের নাম কিরিয়ৎ সেফর ছিল।
11 ೧೧ ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮೊದಲು ಕಿರ್ಯತಸೇಫೆರ್ ಎಂಬ ಹೆಸರಿತ್ತು.
১১সেখান থেকে সে দবীরবাসীদের বিরুদ্ধে যাত্রা করল; আগে দবীরের নাম কিরিয়ৎ-সেফর ছিল।
12 ೧೨ ಕಿರ್ಯತಸೇಫೆರ ಎಂಬ ಪಟ್ಟಣವನ್ನು ವಶಪಡಿಸಿಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಡುತ್ತೇನೆಂದು ಕಾಲೇಬನು ಹೇಳಿದನು.
১২আর কালেব বললেন, “যে কেউ কিরিয়ৎ-সেফরকে আঘাত করে নিজের অধিকারে আনবে, তার সঙ্গে আমি নিজের মেয়ে অক্ষার বিয়ে দেব।”
13 ೧೩ ಅವನ ತಮ್ಮನೂ, ಕೆನಜನ ಮಗನೂ ಆದ ಒತ್ನೀಯೇಲನು ಕಿರ್ಯತ್ ಸೇಫೆರನ್ನು ವಶಪಡಿಸಿಕೊಂಡನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿಕೊಟ್ಟನು.
১৩এবং কালেবের ছোট ছেলে কনসের ছেলে অৎনীয়েল তা নিজের অধিকারে আনলে তিনি তার সঙ্গে নিজের মেয়ে অক্ষার বিয়ে দিলেন।
14 ೧೪ ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಹೊಲವನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯಿಂದ ಇಳಿದಳು. ಕಾಲೇಬನು, “ನಿನಗೇನು ಬೇಕು?” ಎಂದು ಆಕೆಯನ್ನು ಕೇಳಲು
১৪আর ঐ মেয়ে এসে তার বাবার কাছে একখানি জমি চাইতে স্বামীকে পরামর্শ দিল এবং সে গাধার পিঠ থেকে নামল; কালেব তাকে বললেন, “তুমি কি চাও?”
15 ೧೫ ಆಕೆಯು, “ನನಗೊಂದು ದಾನಕೊಡಬೇಕು; ನೀನು ನನ್ನನ್ನು ದಕ್ಷಿಣ ಪ್ರಾಂತ್ಯಕ್ಕೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಅಂದಳು. ಆಗ ಅವನು ಆಕೆಗೆ ಮೇಲಣ ಬುಗ್ಗೆ ಮತ್ತು ಕೆಳಗಣ ಪ್ರದೇಶದ ಬುಗ್ಗೆಗಳನ್ನು ಕೊಟ್ಟನು.
১৫সে তাকে বলল, “আপনি আমাকে এক উপহার দিন; দক্ষিণাঞ্চল ভূমি আমাকে দিয়েছেন, জলের উনুইগুলিও আমাকে দিন।” তাতে কালেব তাকে উচ্চতর উনুইগুলি ও নিম্নতর উনুইগুলি দিলেন।
16 ೧೬ ಮೋಶೆಯ ಮಾವನಾದ ಕೇನ್ಯನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.
১৬পরে মোশির সম্বন্ধীয় কেনীয়ের লোকেরা যিহূদার লোকদের সঙ্গে খর্জ্জূরপুর থেকে অরাদের দক্ষিণদিকে অবস্থিত যিহূদা মরুপ্রান্তে উঠে গেল; তারা গিয়ে লোকদের মধ্যে বাস করল।
17 ೧೭ ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚೆಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ, ಆ ಪಟ್ಟಣವನ್ನು ಹಾಳುಮಾಡಿ ಅದನ್ನು ಹೊರ್ಮಾ ಎಂದು ಕರೆದರು.
১৭আর যিহূদা নিজের ভাই শিমিয়োনের সঙ্গে গেল এবং তারা সফাৎবাসী কনানীয়দেরকে আঘাত করে ওই নগর নিঃশেষে বিনষ্ট করল। আর সেই নগরের নাম হর্মা [বিনষ্ট] হল।
18 ೧೮ ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.
১৮আর যিহূদা ঘসা ও তার অঞ্চল, অস্কিলোন ও তার অঞ্চল এবং ইক্রোণ ও তার অঞ্চল অধিকার করল।
19 ೧೯ ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.
১৯সদাপ্রভু যিহূদার সহবর্ত্তী ছিলেন, সে পাহাড়ী অঞ্চলগুলি অধিকার করল; কিন্তু সে তলভূমি-নিবাসীদেরকে অধিকার থেকে বঞ্চিত করতে পারল না, কারণ তাদের লোহার রথ ছিল।
20 ೨೦ ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು. ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.
২০আর মোশি যেমন বলেছিলেন, সেই অনুসারে তারা কালেবকে হিব্রোণ দিল এবং তিনি সেখান থেকে অনাকের তিন ছেলেকে তাড়িয়ে দিলেন।
21 ೨೧ ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ.
২১কিন্তু বিন্যামীনের লোকেরা যিরুশালেম-নিবাসী যিবূষীয়দেরকে তাড়ালো না; যিবূষীয়েরা আজ পর্যন্ত যিরুশালেমে বিন্যামীন লোকদের সঙ্গে বাস করছে।
22 ೨೨ ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.
২২আর যোষেফের বংশও বৈথেলের বিরুদ্ধে যাত্রা করল এবং সদাপ্রভু তাদের সহবর্ত্তী ছিলেন।
23 ೨೩ ಅವರು ಲೂಜ್ ಎಂದು ಕರೆಯುತ್ತಿದ್ದ ಬೇತೇಲ್ ಊರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದರು.
২৩যোষেফের লোকেরা বৈথেলের খোঁজ-খবর নিতে লোক পাঠালেন। আগে ঐ নগরের নাম লূস ছিল।
24 ೨೪ ಅವರು ಆ ಊರೊಳಗಿನಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆತೋರಿಸುವೆವು” ಎಂದು ಹೇಳಲು ಅವನು ಅವರಿಗೆ ಆ ದಾರಿಯನ್ನು ತೋರಿಸಿದನು.
২৪আর সেই গুপ্তচরেরা ঐ নগর থেকে এক জনকে বাইরে আসতে দেখে তাকে বলল, “অনুরোধ করি, নগর প্রবেশের পথ আমাদেরকে দেখিয়ে দাও; দিলে আমরা তোমার প্রতি দয়া করব।”
25 ೨೫ ಆಗ ಅವರು ಆ ಪಟ್ಟಣವನ್ನು ಕತ್ತಿಯಿಂದ ಸಂಹರಿಸಿದರು. ಆದರೆ ಆ ಮನುಷ್ಯನನ್ನೂ ಅವನ ಕುಟುಂಬವನ್ನೂ ಏನು ಮಾಡದೆ ಕಳುಹಿಸಿಬಿಟ್ಟರು.
২৫তাতে সে তাদেরকে নগরে প্রবেশ করার রাস্তা দেখিয়ে দিল, আর তারা খড়গের আঘাতে সেই নগরবাসীদেরকে আঘাত করল, কিন্তু ঐ ব্যক্তিকে ও তার সমস্ত পরিবারকে ছেড়ে দিল।
26 ೨೬ ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜ್ ಎಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.
২৬পরে ঐ ব্যক্তি হিত্তীয়দের দেশে গিয়ে এক নগর সৃষ্টি করে তার নাম লূস রাখল; তা আজ পর্যন্ত সেই নামে পরিচিত আছে।
27 ೨೭ ಮನಸ್ಸೆಯವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು.
২৭আর মনঃশি গ্রামগুলোর সঙ্গে বৈৎ-শান, গ্রামগুলোর সঙ্গে তানক, গ্রামগুলোর সঙ্গে দোর, গ্রামগুলোর সঙ্গে যিব্লিয়ম, ও গ্রামগুলোর সঙ্গে মগিদ্দো, এই সব জায়গার বসবাসকারীদের তাড়াল না; কনানীয়েরা সে দেশে বাস করতে দৃঢ়প্রতিজ্ঞ ছিল।
28 ೨೮ ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಓಡಿಸಲಿಲ್ಲ.
২৮পরে ইস্রায়েল যখন শক্তিশালী হল, তখন সেই কনানীয়দেরকে তাদের দাস করল, কিন্তু সম্পূর্ণভাবে তাড়াল না।
29 ೨೯ ಎಫ್ರಾಯೀಮ್ಯರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದ್ದರಿಂದ ಕಾನಾನ್ಯರು ಎಫ್ರಾಯೀಮ್ಯರ ಮಧ್ಯದಲ್ಲೇ ವಾಸಿಸುವವರಾದರು.
২৯আর ইফ্রয়িম গেষর-নিবাসী কনানীয়দেরকে বঞ্চিত করল না; কনানীয়েরা গেষরে তাদের মধ্যে বাস করতে লাগল।
30 ೩೦ ಜೆಬುಲೂನ್ಯರು ಕಿತ್ರೋನ್, ನಹಲೋಲ್ ಎಂಬ ಪಟ್ಟಣಗಳ ನಿವಾಸಿಗಳನ್ನು ಓಡಿಸಲಿಲ್ಲ. ಇದರಿಂದ ಕಾನಾನ್ಯರು ಅವರ ಮಧ್ಯದಲ್ಲೇ ವಾಸಮಾಡುವವರಾದರು. ಆದರೆ ಜೆಬುಲೂನ್ಯರು ಕಾನಾನ್ಯರನ್ನು ಗುಲಾಮರನ್ನಾಗಿ ಮಾಡಿಕೊಂಡರು.
৩০সবূলূন কিটরোণ ও নহলোল নিবাসীদেরকে তাড়াল না; কনানীয়েরা তাদের মধ্যে বাস করতে লাগল, আর তাদের দাস হল।
31 ೩೧ ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ಪಟ್ಟಣಗಳಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿಬಿಡಲಿಲ್ಲ;
৩১আশের অক্কো, সীদোন, অহলব, অকষীব, হেল্বা, অফীক ও রহোব নিবাসীদের বঞ্চিত করল না।
32 ೩೨ ಹೀಗಾಗಿ ಆಶೇರ್ಯರು ಕಾನಾನ್ಯರನ ಮಧ್ಯದಲ್ಲೇ ವಾಸಮಾಡಿದರು.
৩২আশেরীয়েরা কনানীয়দের মধ্যে বাস করল, কারণ তারা তাদেরকে তাড়াল না।
33 ೩೩ ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳಲ್ಲಿ ಸ್ವಾಧೀನ ಮಾಡಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು ಮತ್ತು ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು.
৩৩নপ্তালি বৈৎ-শেমশের ও বৈৎ-অনাত-নিবাসীদেরকে তাড়িয়ে দিল না; তারা কনানীয়দের মধ্যে বাস করল, আর বৈৎ-শেমশের ও বৈৎ-অনাতনিবাসীরা তাদের দাস হল।
34 ೩೪ ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು.
৩৪আর ইমোরীয়েরা দানের বংশদেরকে পাহাড়ী অঞ্চলে থাকতে বাধ্য করল, উপত্যকা নেমে আসতে দিল না;
35 ೩೫ ಹೀಗೆ ಅಮೋರಿಯರು ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳ ಬಳಿ ಇದ್ದ ಹರ್ ಹೆರೆಸ್ ಎಂಬ ಬೆಟ್ಟದ ಹತ್ತಿರ ವಾಸಿಸಲು ನಿರ್ಧಾರಮಾಡಿಕೊಂಡರು. ಆದರೆ ಯೋಸೇಫನ ಕುಲದವರು ಅವರನ್ನು ಸೋಲಿಸಿ ಗುಲಾಮರನ್ನಾಗಿ ಮಾಡಿಕೊಂಡರು.
৩৫ইমোরীয়েরা হেরস পর্বত, অয়ালোনে ও শালবীমে বসবাস করতে থাকল; কিন্তু যোষেফ-কুল তাদের পরাজিত করল, তাতে তারা তাদের দাস হল।
36 ೩೬ ಅಮೋರಿಯರ ಮೇರೆಯು ಅಕ್ರಬ್ಬೀಮ್ ಮೇಲುದಿಣ್ಣೆಯಿಂದ ಸೇಲಾ ಊರಿನಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ.
৩৬অক্রব্বীম পাহাড়ী অঞ্চল থেকে সেলা পর্যন্ত উপরের দিকে ইমোরীয়দের অধিকারে ছিল।