< ಪ್ರಲಾಪಗಳು 1 >
1 ೧ ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.
Comment est-elle assise solitaire, la ville si peuplée! Celle qui était grande entre les nations est semblable à une veuve; la princesse des provinces est devenue tributaire!
2 ೨ ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ.
Elle pleure durant la nuit, et les larmes couvrent ses joues; de tous ceux qu'elle aimait aucun ne la console; tous ses amis ont agi perfidement contre elle, ils sont devenus ses ennemis.
3 ೩ ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಛರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.
Juda s'est exilé devant l'affliction et la grandeur de sa servitude; il demeure au milieu des nations, et il n'y trouve point de repos; tous ses persécuteurs l'ont saisi dans l'angoisse.
4 ೪ ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಕೋ ಎನ್ನುತ್ತಿವೆ; ಅದರ ಬಾಗಿಲುಗಳೆಲ್ಲಾ ಹಾಳು ಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಕನ್ಯೆಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕದಿಂದ ತುಂಬಿದೆ.
Les chemins de Sion sont dans le deuil, car personne ne vient plus aux fêtes solennelles; toutes ses portes sont désertes, ses sacrificateurs gémissent, ses vierges sont désolées, et elle est remplie d'amertume.
5 ೫ ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಅಧಿಪತಿಗಳಾಗಿದ್ದಾರೆ, ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಎಳೆಕೂಸುಗಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ.
Ses adversaires ont le dessus, ses ennemis prospèrent; car l'Éternel l'a affligée, à cause de la multitude de ses forfaits; ses petits enfants ont marché captifs devant l'ennemi.
6 ೬ ಚೀಯೋನ್ ನಗರಿಯ ವೈಭವವೆಲ್ಲಾ ಕಳೆದುಹೋಗಿದೆ; ಅಲ್ಲಿನ ಪ್ರಧಾನರು ಮೇವಿಲ್ಲದ ಜಿಂಕೆಗಳಂತೆ ಬಲಗುಂದಿ ಹಿಡಿಯಲು ಬೆನ್ನತ್ತಿದವರಿಗೆ ಬೆನ್ನುಕೊಟ್ಟು ಓಡಿಹೋಗಿದ್ದಾರೆ.
Et la fille de Sion a perdu toute sa splendeur; ses chefs sont devenus comme des cerfs qui ne trouvent point de pâture, et ils s'en vont, privés de force, devant celui qui les chasse.
7 ೭ ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ವೈಭವವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.
Aux jours de son affliction et de son exil, Jérusalem s'est souvenue de toutes les choses désirables qu'elle possédait depuis les jours anciens. Quand son peuple est tombé par la main de l'ennemi et que personne n'est venu à son aide, ses adversaires l'ont vue et se sont moqués de ses sabbats.
8 ೮ ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ.
Jérusalem a grièvement péché; c'est pourquoi elle est devenue un objet de dégoût; tous ceux qui l'honoraient la méprisent, parce qu'ils ont vu sa nudité; elle-même gémit et détourne la tête!
9 ೯ ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. “ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ” ಎಂದು ಮೊರೆಯಿಡುತ್ತಾಳೆ.
Sa souillure était dans les pans de sa robe, et elle ne s'est pas souvenue de sa fin. Elle a été prodigieusement abaissée; elle n'a point de consolateur! Regarde, ô Éternel! mon affliction; car l'ennemi triomphe.
10 ೧೦ ವಿರೋಧಿಯು ಕೈಚಾಚಿ ಅವಳ ಭೋಗ್ಯವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮ್ಲೇಚ್ಛರು ನಿನ್ನ ಸಭೆಗೆ ಸೇರಬಾರದು” ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವುದನ್ನು ಆಕೆಯು ಕಾಣಬೇಕಾಯಿತು.
L'adversaire a étendu la main sur tout ce qu'elle avait de plus désirable; car elle a vu entrer dans son sanctuaire les nations, au sujet desquelles tu avais donné cet ordre: Elles n'entreront point dans ton assemblée.
11 ೧೧ ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, “ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಛಳಾದೆನಲ್ಲಾ” ಎಂದು ಪ್ರಲಾಪಿಸುತ್ತಾಳೆ.
Tout son peuple gémit, ils cherchent du pain; ils ont donné ce qu'ils avaient de plus précieux pour de la nourriture, afin de ranimer leur vie. Vois, ô Éternel, et regarde combien je suis méprisée!
12 ೧೨ ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿ ರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.
N'êtes-vous pas touchés, vous tous qui passez par le chemin? Regardez et voyez s'il est une douleur pareille à la douleur dont j'ai été frappée, moi que l'Éternel afflige au jour de l'ardeur de sa colère.
13 ೧೩ ಆತನು ಮೇಲಣ ಲೋಕದಿಂದ ಬೆಂಕಿಯನ್ನು ಕಳುಹಿಸಿದ್ದಾನೆ, ಅದು ನನ್ನ ಎಲುಬುಗಳನೆಲ್ಲಾ ವ್ಯಾಪಿಸಿದೆ; ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ, ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ, ನಾನು ಹಾಳುಬಿದ್ದು ಸದಾ ಬಳಲುವಂತೆ ಮಾಡಿದ್ದಾನೆ.
D'en haut, il a envoyé dans mes os un feu qui s'en est rendu maître; il a tendu un filet sous mes pieds, et m'a fait tomber en arrière. Il m'a mise dans la désolation, dans une langueur de tous les jours.
14 ೧೪ ಆತನ ಕೈ, ನನ್ನ ದ್ರೋಹಗಳನ್ನು ನನ್ನ ಮೇಲೆ ನೊಗವು ಇರುವಂತೆ ನನ್ನನ್ನು ಬಿಗಿದಿದೆ. ಆ ದ್ರೋಹಗಳು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ.
Le joug de mes iniquités est lié par sa main. Elles sont entrelacées et pèsent sur mon cou; il a fait fléchir ma force; le Seigneur m'a livrée à des mains auxquelles je ne puis résister.
15 ೧೫ ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ. ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಕನ್ಯೆಯನ್ನು ತೊಟ್ಟಿಯಲ್ಲಿನ ದ್ರಾಕ್ಷಿಯ ಹಾಗೆ ತುಳಿದಿದ್ದಾನೆ.
Le Seigneur a renversé au milieu de moi tous les hommes vaillants; il a convoqué contre moi une assemblée, pour mettre en pièces mes jeunes gens d'élite. Le Seigneur a foulé au pressoir la vierge, fille de Juda!
16 ೧೬ ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.
C'est pour cela que je pleure, et que mon œil, mon œil se fond en eau; car le consolateur qui ranimait mon âme s'est éloigné de moi; mes enfants sont dans la désolation, parce que l'ennemi a été le plus fort.
17 ೧೭ ಚೀಯೋನ್ ನಗರಿಯು ಕೈಚಾಚಿ ಅಂಗಲಾಚಿದರೂ ಯಾರೂ ಸಂತೈಸರು; ಯಾಕೋಬಿನ ನೆರೆಹೊರೆಯವರು ಅದಕ್ಕೆ ವಿರೋಧಿಗಳಾಗಿರಲಿ ಎಂದು ಯೆಹೋವನು ತೀರ್ಮಾನಿಸಿದ್ದಾನೆ; ಯೆರೂಸಲೇಮು ಅವರ ನಡುವೆ ಹೊಲೆಯಾಗಿ ಬಿದ್ದಿದೆ.
Sion étend ses mains, et personne ne la console; l'Éternel a ordonné aux ennemis de Jacob de l'entourer de toutes parts. Jérusalem est devenue parmi eux comme un objet d'horreur.
18 ೧೮ ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರಲ್ಲಾ!
L'Éternel est juste; car j'ai été rebelle à sa parole. Peuples, écoutez tous, je vous prie, et regardez ma douleur! Mes vierges et mes jeunes gens sont allés en captivité.
19 ೧೯ ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಮತ್ತು ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವುದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು.
J'ai appelé mes amis, mais ils m'ont trompée. Mes sacrificateurs et mes anciens ont expiré dans la ville, lorsqu'ils cherchaient de la nourriture pour ranimer leur vie.
20 ೨೦ ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತಿದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ.
Regarde, ô Éternel! car je suis dans la détresse: mes entrailles bouillonnent, mon cœur est bouleversé au-dedans de moi, car j'ai été fort rebelle. Au-dehors, l'épée fait ses ravages; au-dedans, c'est la mort!
21 ೨೧ ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ!
Ils m'entendent gémir; et personne ne me console. Tous mes ennemis ont appris mon malheur; ils se réjouissent de ce que tu l'as fait. Tu feras venir le jour que tu as annoncé, et ils seront semblables à moi.
22 ೨೨ ಅವರು ಮಾಡಿದ ಕೆಡುಕೆಲ್ಲಾ ನಿನ್ನ ಚಿತ್ತಕ್ಕೆ ಮುಟ್ಟಲಿ; ನೀನು ನನ್ನ ಎಲ್ಲಾ ದ್ರೋಹಗಳಿಗೆ ಪ್ರತಿಯಾಗಿ ನನಗೆ ಮಾಡಿದಂತೆ ಅವರಿಗೂ ಮಾಡು; ನನ್ನ ನರಳಾಟವು ಬಹಳವಾಗಿದೆ, ನನ್ನ ಎದೆಯು ಕುಂದಿಹೋಗಿದೆ.
Que toute leur malice vienne devant toi, et traite-les comme tu m'as traitée, à cause de toutes mes transgressions; car mes gémissements sont en grand nombre, et mon cœur est languissant.