< ಪ್ರಲಾಪಗಳು 2 >

1 ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ನಗರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂಮಿಗೆ ತಳ್ಳಿಬಿಟ್ಟನು.
In kasrkusrak lun Leum, El afinya Zion ke lohsr matoltol. El ekulla ma wo nukewa lun acn we nu ke ma na pilasr. Finne Tempul lal, El ngetla liki pac ke len in kasrkusrak lal.
2 ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ, ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ, ರಾಜ್ಯವನ್ನೂ ಮತ್ತು ಅಲ್ಲಿನ ಸರದಾರರನ್ನೂ ಹೀನಸ್ಥಿತಿಗೆ ತಂದಿದ್ದಾನೆ.
Leum El kunausla siti srisrik nukewa in acn Judah, ac tiana pakomuta. El kunausya pot ku ma lisring acn we. El aklusrongtenye tokosrai sac ac mwet kol nukewa lun acn we.
3 ಆತನು ಶತ್ರುವಿನ ಮೇಲೆತ್ತಿದ ಬಲಗೈಯನ್ನು ಹಿಂದೆಗೆದು, ಇಸ್ರಾಯೇಲಿನ ಕೊಂಬನ್ನು ರೋಷಾಗ್ನಿಯಿಂದ ತೀರಾ ಕಡಿದುಹಾಕಿ, ಸುತ್ತಮುತ್ತಲು ನುಂಗುವ ಅಗ್ನಿಜ್ವಾಲೆಯಂತೆ ಯಾಕೋಬನ್ನು ದಹಿಸಿಬಿಟ್ಟಿದ್ದಾನೆ.
In kasrkusrak lal El kunausya ku lun Israel; El tia lungse kasrekut ke mwet lokoalok elos tuku. El kasrkusrak lain kut oana sie e su esukak ma nukewa.
4 ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ, ವಿರೋಧಿಯಂತೆ ಬಲಗೈಯೆತ್ತಿ ನಿಂತು, ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ.
El aksuwosye mwe pisr natul nu kacsr oana mwet lokoalok se; El onelosla nukewa su kut tuh lungse ac insewowokin meet. Inge in acn Jerusalem kut arulana pulakin usren kasrkusrak lal.
5 ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಪ್ರಲಾಪ ಮತ್ತು ಗೋಳಾಟವನ್ನು ಹೆಚ್ಚಿಸಿದ್ದಾನೆ.
Leum El kunausla Israel oana sie mwet lokoalok; El oru tuh pot ku ac inkul fulat sin tokosra in arulana mwesri. El use nu fin mwet Judah mwe asor su wangin saflaiya.
6 ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ, ತನ್ನ ಉತ್ಸವಸ್ಥಾನವನ್ನು ನಾಶಪಡಿಸಿದ್ದಾನೆ; ಮಹೋತ್ಸವಗಳು ಮತ್ತು ಸಬ್ಬತ್ ದಿನಗಳು ಚೀಯೋನಿನಲ್ಲಿ ಯಾರ ನೆನಪಿಗೂ ಬಾರದಂತೆ ಮಾಡಿ ಯೆಹೋವನು ಅತಿರೋಷಗೊಂಡು ರಾಜನನ್ನೂ ಮತ್ತು ಯಾಜಕರನ್ನೂ ಧಿಕ್ಕರಿಸಿದ್ದಾನೆ.
El fukulya Tempul su kut alu nu sel we nu ke ip srisrik. El tulokinya in wanginla len mutal ac len Sabbath. Tokosra ac mwet tol elos kewa pulakin kuiyen kasrkusrak lal.
7 ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ, ತನ್ನ ಪವಿತ್ರಾಲಯಕ್ಕೆ ಅಸಹ್ಯಪಟ್ಟು, ಚೀಯೋನಿನ ಅರಮನೆಗಳ ಗೋಡೆಗಳನ್ನು ಶತ್ರು ವಶಮಾಡಿದ್ದಾನೆ; ಉತ್ಸವದಿನದಲ್ಲಿ ಘೋಷಿಸುವಂತೆ ಶತ್ರುಗಳು ಯೆಹೋವನ ಮಂದಿರದಲ್ಲಿ ಜಯಘೋಷವೆತ್ತಿದ್ದಾರೆ.
Leum El ngetla liki loang in orek kisa lal, ac som liki Tempul mutal sel. El lela mwet lokoalok in ikruiya pot kac. Ke elos kutangla, elos sasa in acn ma kut tuh engan in alu we meet.
8 ಯೆಹೋವನು ಚೀಯೋನ್ ನಗರಿಯ ಕೋಟೆಯನ್ನು ನಾಶಪಡಿಸಬೇಕೆಂದು ನೂಲನ್ನು ಎಳೆದಿದ್ದಾನೆ; ಹಾಳು ಮಾಡುತ್ತಿರುವ ತನ್ನ ಕೈಯನ್ನು ಹಿಂದೆಗೆಯದೆ ಪೌಳಿಗೋಡೆಯೂ ಮತ್ತು ಕೋಟೆಯೂ ಮೊರೆಯುವಂತೆ ಮಾಡಿದ್ದಾನೆ; ಅವೆರಡೂ ಕುಸಿದುಹೋಗಿವೆ.
LEUM GOD El otela mu pot Zion enenu na in ikori. El srikeya in kalem na pwaye lupan acn ma ac kunausyukla. Tower ac pot in kalkal uh tukeni na oan musalla.
9 ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ.
Mutunpot kac pukpuki oan mokutkuti, ac osra kac uh kipatpat uh. Inge tokosra ac mwet leum uh kewa elos oasr in sruoh. Ma Sap uh tia sifil lutiyuk, ac wanginla aruruma lun mwet palu ma tuku sin LEUM GOD.
10 ೧೦ ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು, ಗೋಣಿ ತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇಮಿನ ಕನ್ಯೆಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.
Mwet matu lun Jerusalem elos muta infohk uh tia kas. Kutkut oan fin sifalos ac elos nukum nuknuk yohk eoa. Mutan fusr elos srimi nwe infohk uh.
11 ೧೧ ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.
Mutuk totola ke tung, ac insiuk keoklana. Nga foroti in asor luk ke mwet luk su kunausyukla. Tulik fusr ac tulik srisrik uh mulalla na oan fin inkanek in siti uh.
12 ೧೨ ಮಕ್ಕಳು ಗಾಯಪಟ್ಟವರಂತೆ ಪಟ್ಟಣದ ಚೌಕಗಳಲ್ಲಿ ಮೂರ್ಛೆಹೋಗಿ ತಾಯಿಯ ಎದೆಯ ಮೇಲೆ ಬಿದ್ದು, “ಅಮ್ಮಾ ತಿನ್ನಲಿಕ್ಕೆ ಧಾನ್ಯ ಇಲ್ಲವೋ? ಕುಡಿಯಲಿಕ್ಕೆ ದ್ರಾಕ್ಷಿಯರಸ ಇಲ್ಲವೋ?” ಎಂದು ಗೋಳಿಡುತ್ತವೆ.
Elos tung nu sin nina kialos ke elos masrinsral ac malu; Elos ikor fin inkanek uh oana in fakfuki elos. Ac kuiyalos sriksrikeni nwe ke na elos misa inpoun nina kialos.
13 ೧೩ ಯೆರೂಸಲೇಮ್ ಕನ್ಯೆಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಸಮಾಧಾನಕರ ಮಾತುಗಳನ್ನು ಎಲ್ಲಿಂದ ತರಲಿ? ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು?
O Jerusalem, Jerusalem saok sik, mea nga ku in fahk? Nga ac akwoye kom fuka? Wangin mwet nu pulakin keok ouinge. Ongoiya nu sum inge yoklana, oana lupan meoa uh. Wanginna finsrak in sifil akwoyeyuk kom.
14 ೧೪ ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದ ಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವುದಕ್ಕೆ ಆಸ್ಪದವಾದವು.
Wangin ma mwet palu lom tuh fahk nu sum sayen kikiap mukena. Kas in luti lalos nu sum kiapwekomla, mweyen elos tia fahkak ma koluk lom. Elos oru kom nunku mu kom tia enenu in auliyak.
15 ೧೫ ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, “ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ.
Mwet ma fahsryak in siti uh ngetot liye kom ac srengak sum. Elos usruk sifalos ac isrun musalla lun Jerusalem, ac fahk, “Ku siti na kato sac pa inge? Ku pa inge wo se ma faclu yukin uh?”
16 ೧೬ ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ವ್ಯಂಗ್ಯವಾದ ನಗುವಿನಿಂದ ಟೀಕಿಸುತ್ತಾರೆ, ಛೀಗುಟ್ಟಿ, ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ, ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ, ಈಗ ಬಂದೊದಗಿತು, ಅದನ್ನು ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ.
Mwet lokoalok lom nukewa aksruksrukye kom ac sracsralik liye kom ke srunga lalos. Elos sralak ngoasrolos ac fahk, “Kut kunausulla! Pa inge len se kut muta soano ah!”
17 ೧೭ ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.
LEUM GOD El tufahna orala ma se El tuh aksangengye kut fahk mu El ac oru ah; El kunauskutla ac wanginna pakomuta lal nu sesr, oana ke El tuh fahk nu sesr pacl loeloes somla ah. El sang kutangla nu sin mwet lokoalok lasr, ac akenganyalos ke kunausyukla kut uh.
18 ೧೮ ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯಿಟ್ಟಿದ್ದಾರೆ; “ಚೀಯೋನ್ ನಗರಿಯ ಕೋಟೆಯವರೇ, ನಿಮ್ಮ ಕಣ್ಣೀರು ಹಗಲಿರುಳೂ ತೊರೆಯಂತೆ ಹರಿಯಲಿ, ನಿಮಗೆ ವಿರಾಮವೇ ಬೇಡ, ಅದು ನಿಮ್ಮ ನೇತ್ರದಿಂದ ನಿಲ್ಲದೆ ಸುರಿಯಲಿ;
O Jerusalem, lela pot ku lom in wowoyak nu sin Leum! Lela sroninmotom in sororla oana infacl ke len ac fong. Oru nwe ke na kom mwemelilla ke tung ac asor.
19 ೧೯ ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದು ಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.”
Lela kom in tukaki tukakyak ac pang nu sin Leum ke fong nufon se; Fahkak nufon ma oan in nunak lom an nu sel, ac kwafe sel Elan pakoten nu sin tulik nutum Su masrinsral ac apkuran in misa ke insruwasrik in inkanek nukewa!
20 ೨೦ ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ! ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?
Ngetma, O LEUM GOD! Efu kom ku kalyei kut ange? Mutan elos kang monin tulik natulos su elos kuloi! Mwet tol ac mwet palu elos anwuki na in Tempul!
21 ೨೧ ಯುವಕರು ಮತ್ತು ವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣಿಯರು ಹಾಗು ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಸಂಹರಿಸಿದಿ.
Mwet fusr ac mwet matu uh kewa misa oan inkanek uh. Mukul fusr ac mutan fusr anwuki ke cutlass nutin mwet lokoalok. Kom onelosi ac tiana pakomutalos ke len in kasrkusrak lom.
22 ೨೨ ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು ನನ್ನ ಸುತ್ತುಮುತ್ತಲು ಕರೆಯಿಸಿದ್ದೀ; ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ.
Kom solama mwet lokoalok luk in tuh akpwaryalos ke mwe aksangeng rauniyula, Ac wangin mwet ku in kaingla ke len in kasrkusrak se lom uh. Elos akmuseya tulik nutik su nga tufahla ac kuloi.

< ಪ್ರಲಾಪಗಳು 2 >