< ಪ್ರಲಾಪಗಳು 3 >

1 ಯೆಹೋವನ ರೌದ್ರದಂಡದ ಪೆಟ್ಟನ್ನು ತಿಂದವನು ನಾನೇ.
אֲנִ֤י הַגֶּ֙בֶר֙ רָאָ֣ה עֳנִ֔י בְּשֵׁ֖בֶט עֶבְרָתֽוֹ׃
2 ಆತನೇ ನನ್ನನ್ನು ಕರೆದುಕೊಂಡು ಹೋಗಿ ಬೆಳಕಿನಲ್ಲಿ ಅಲ್ಲ, ಕತ್ತಲಲ್ಲೇ ನಡೆಯಮಾಡಿದ್ದಾನೆ.
אוֹתִ֥י נָהַ֛ג וַיֹּלַ֖ךְ חֹ֥שֶׁךְ וְלֹא־אֽוֹר׃
3 ನಿಶ್ಚಯವಾಗಿ ಆತನು ನನಗೆ ವಿರುದ್ಧವಾಗಿದ್ದಾನೆ. ದಿನವೆಲ್ಲಾ ನನ್ನ ಮೇಲೆ ಕೈಮಾಡುತ್ತಾ ಬಂದಿದ್ದಾನೆ.
אַ֣ךְ בִּ֥י יָשֻׁ֛ב יַהֲפֹ֥ךְ יָד֖וֹ כָּל־הַיּֽוֹם׃ ס
4 ನನ್ನ ಮಾಂಸಚರ್ಮಗಳನ್ನು ಕ್ಷೀಣಿಸುವಂತೆ ಮಾಡಿ, ನನ್ನ ಎಲುಬುಗಳನ್ನು ಮುರಿದಿದ್ದಾನೆ;
בִּלָּ֤ה בְשָׂרִי֙ וְעוֹרִ֔י שִׁבַּ֖ר עַצְמוֹתָֽי׃
5 ನನ್ನ ಸುತ್ತಲು ಶ್ರಮಸಂಕಟಗಳ ದಿಬ್ಬಗಳನ್ನು ಹಾಕಿದ್ದಾನೆ.
בָּנָ֥ה עָלַ֛י וַיַּקַּ֖ף רֹ֥אשׁ וּתְלָאָֽה׃
6 ಕಾರ್ಗತ್ತಲಲ್ಲಿ ನನ್ನನ್ನು ಇರಿಸಿದ್ದಾನೆ; ಬಹುಕಾಲದ ಹಿಂದೆ ಸತ್ತವರ ಹಾಗೆ ನಾನು ಇದ್ದೇನೆ.
בְּמַחֲשַׁכִּ֥ים הוֹשִׁיבַ֖נִי כְּמֵתֵ֥י עוֹלָֽם׃ ס
7 ನಾನು ತಪ್ಪಿಸಿಕೊಂಡು ಹೋಗದಂತೆ ನನ್ನ ಸುತ್ತಲು ಗೋಡೆಯನ್ನು ಕಟ್ಟಿ, ನನಗೆ ಭಾರವಾದ ಬೇಡಿಯನ್ನು ಹಾಕಿದ್ದಾನೆ.
גָּדַ֧ר בַּעֲדִ֛י וְלֹ֥א אֵצֵ֖א הִכְבִּ֥יד נְחָשְׁתִּֽי׃
8 ಇದಲ್ಲದೆ ನಾನು ಮೊರೆಯಿಟ್ಟು ಕೂಗಿಕೊಂಡರೂ ನನ್ನ ಬಿನ್ನಹಕ್ಕೆ ಕಿವಿಗೊಡುತ್ತಿಲ್ಲ.
גַּ֣ם כִּ֤י אֶזְעַק֙ וַאֲשַׁוֵּ֔עַ שָׂתַ֖ם תְּפִלָּתִֽי׃
9 ನನ್ನ ದಾರಿಗಳಿಗೆ ಅಡ್ಡವಾಗಿ ಕೆತ್ತನೆಯ ಕಲ್ಲಿನ ಗೋಡೆಗಳನ್ನು ಹಾಕಿ, ಹಾದಿಗಳನ್ನು ಸುತ್ತುವರಿಯುವಂತೆ ಮಾಡಿದ್ದಾನೆ.
גָּדַ֤ר דְּרָכַי֙ בְּגָזִ֔ית נְתִיבֹתַ֖י עִוָּֽה׃ ס
10 ೧೦ ಆತನು ನನಗೆ ಹೊಂಚುಹಾಕುತ್ತಿರುವ ಕರಡಿಯಂತಿದ್ದಾನೆ, ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿರುವ ಸಿಂಹದ ಹಾಗಿದ್ದಾನೆ.
דֹּ֣ב אֹרֵ֥ב הוּא֙ לִ֔י אריה בְּמִסְתָּרִֽים׃
11 ೧೧ ನಾನು ನಡೆದ ದಾರಿಗಳಿಂದ ನನ್ನನ್ನು ತಪ್ಪಿಸಿದ್ದಾನೆ. ಆತನು ನನ್ನನ್ನು ದಿಕ್ಕಿಲ್ಲದವನಂತೆ ಮಾಡಿದ್ದಾನೆ.
דְּרָכַ֥י סוֹרֵ֛ר וַֽיְפַשְּׁחֵ֖נִי שָׂמַ֥נִי שֹׁמֵֽם׃
12 ೧೨ ತನ್ನ ಬಿಲ್ಲನ್ನು ಬೊಗ್ಗಿಸಿ ಬಾಣಕ್ಕೆ ನನ್ನನ್ನು ಗುರಿಮಾಡಿಕೊಂಡಿದ್ದಾನೆ.
דָּרַ֤ךְ קַשְׁתוֹ֙ וַיַּצִּיבֵ֔נִי כַּמַּטָּרָ֖א לַחֵֽץ׃ ס
13 ೧೩ ತನ್ನ ಬತ್ತಳಿಕೆಯ ಅಂಬುಗಳಿಂದ ನನ್ನ ಅಂತರಂಗಗಳನ್ನು ಇರಿದಿದ್ದಾನೆ.
הֵבִיא֙ בְּכִלְיוֹתָ֔י בְּנֵ֖י אַשְׁפָּתֽוֹ׃
14 ೧೪ ನಾನು ಸ್ವಜನರೆಲ್ಲರಿಗೂ ಹಾಸ್ಯಾಸ್ಪದನಾಗಿ, ಹಗಲೆಲ್ಲಾ ಅವರ ಗೇಲಿಯ ಮಾತು ಮತ್ತು ಹಾಡುಗಳಿಗೆ ಗುರಿಯಾಗಿದ್ದೇನೆ.
הָיִ֤יתִי שְּׂחֹק֙ לְכָל־עַמִּ֔י נְגִינָתָ֖ם כָּל־הַיּֽוֹם׃
15 ೧೫ ಆತನು ನನಗೆ ಕಹಿಯಾದ ಆಹಾರವನ್ನು ಕೊಟ್ಟು, ವಿಷ ಪಾನವನ್ನು ಕುಡಿಯಮಾಡಿದ್ದಾನೆ.
הִשְׂבִּיעַ֥נִי בַמְּרוֹרִ֖ים הִרְוַ֥נִי לַעֲנָֽה׃ ס
16 ೧೬ ನಾನು ಗರಸು ಕಲ್ಲುಚೂರುಗಳನ್ನು ಅಗೆಯುವಂತೆ ಮಾಡಿ ನನ್ನ ಹಲ್ಲುಗಳನ್ನು ಮುರಿದುಬಿಟ್ಟು, ನನ್ನನ್ನು ಬೂದಿಯಲ್ಲಿ ತಳ್ಳಿದ್ದಾನೆ.
וַיַּגְרֵ֤ס בֶּֽחָצָץ֙ שִׁנָּ֔י הִכְפִּישַׁ֖נִי בָּאֵֽפֶר׃
17 ೧೭ ನನ್ನನ್ನು ತಳ್ಳಿಹಾಕಿ ಸಮಾಧಾನಕ್ಕೆ ದೂರಮಾಡಿದ್ದಾನೆ; ನಾನು ಸಂತೋಷವನ್ನು ಮರೆಯುವಂತೆ ಮಾಡಿದ್ದಾನೆ.
וַתִּזְנַ֧ח מִשָּׁל֛וֹם נַפְשִׁ֖י נָשִׁ֥יתִי טוֹבָֽה׃
18 ೧೮ “ಅಯ್ಯೋ, ನನ್ನ ಶಕ್ತಿಯೆಲ್ಲಾ ಹಾಳಾಯಿತು, ಯೆಹೋವನು ನನಗೆ ದಯಪಾಲಿಸಿದ ನಿರೀಕ್ಷೆಯೂ ವ್ಯರ್ಥವಾಯಿತು” ಅಂದುಕೊಂಡೆನು.
וָאֹמַר֙ אָבַ֣ד נִצְחִ֔י וְתוֹחַלְתִּ֖י מֵיְהוָֽה׃ ס
19 ೧೯ ನಾನು ಅಲೆದು ಕಷ್ಟಪಟ್ಟದ್ದನ್ನು ನೆನಪಿಗೆ ತಂದುಕೋ, ಕಹಿಯಾದ ನನ್ನ ಆಹಾರಪಾನಗಳನ್ನು ಜ್ಞಾಪಕಮಾಡಿಕೋ.
זְכָר־עָנְיִ֥י וּמְרוּדִ֖י לַעֲנָ֥ה וָרֹֽאשׁ׃
20 ೨೦ ನನ್ನ ಆತ್ಮವು ಇವುಗಳನ್ನು ನಿತ್ಯವೂ ಜ್ಞಾಪಿಸಿಕೊಳ್ಳುತ್ತಾ ನನ್ನೊಳಗೆ ಕುಗ್ಗಿದೆ.
זָכ֣וֹר תִּזְכּ֔וֹר ותשיח עָלַ֖י נַפְשִֽׁי׃
21 ೨೧ ಹೀಗಿರಲು ನಾನು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ, ಅದರಿಂದ ನನಗೆ ನಿರೀಕ್ಷೆಯುಂಟಾಗುತ್ತದೆ!
זֹ֛את אָשִׁ֥יב אֶל־לִבִּ֖י עַל־כֵּ֥ן אוֹחִֽיל׃ ס
22 ೨೨ ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು.
חַֽסְדֵ֤י יְהוָה֙ כִּ֣י לֹא־תָ֔מְנוּ כִּ֥י לֹא־כָל֖וּ רַחֲמָֽיו׃
23 ೨೩ ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು!
חֲדָשִׁים֙ לַבְּקָרִ֔ים רַבָּ֖ה אֱמוּנָתֶֽךָ׃
24 ೨೪ “ಯೆಹೋವನೇ ನನ್ನ ಪಾಲು, ಆದಕಾರಣ ಆತನನ್ನು ನಿರೀಕ್ಷಿಸುವೆನು” ಎಂದು ನನ್ನ ಅಂತರಾತ್ಮವು ಅಂದುಕೊಳ್ಳುತ್ತದೆ.
חֶלְקִ֤י יְהוָה֙ אָמְרָ֣ה נַפְשִׁ֔י עַל־כֵּ֖ן אוֹחִ֥יל לֽוֹ׃ ס
25 ೨೫ ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ.
ט֤וֹב יְהוָה֙ לְקוָֹ֔ו לְנֶ֖פֶשׁ תִּדְרְשֶֽׁנּוּ׃
26 ೨೬ ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೇಯದು.
ט֤וֹב וְיָחִיל֙ וְדוּמָ֔ם לִתְשׁוּעַ֖ת יְהוָֽה׃
27 ೨೭ ಯೌವನದಲ್ಲಿ ನೊಗಹೊರುವುದು ಮನುಷ್ಯನಿಗೆ ಹಿತಕರ.
ט֣וֹב לַגֶּ֔בֶר כִּֽי־יִשָּׂ֥א עֹ֖ל בִּנְעוּרָֽיו׃ ס
28 ೨೮ ನನ್ನ ಮೇಲೆ ಇದನ್ನು ಹೊರಿಸಿದವನು ಯೆಹೋವನೇ ಎಂದು ಅವನು ಒಂಟಿಗನಾಗಿ ಕುಳಿತು ಮೌನವಾಗಿರಲಿ.
יֵשֵׁ֤ב בָּדָד֙ וְיִדֹּ֔ם כִּ֥י נָטַ֖ל עָלָֽיו׃
29 ೨೯ ಒಂದು ವೇಳೆ ಯೆಹೋವನಿಂದ ಸುಗತಿಯಾದೀತೆಂಬ ನಿರೀಕ್ಷೆಯಿಂದ ತನ್ನ ಮುಖವನ್ನು ಕೊಳಕಿನ ಮೇಲೆ ಹಾಕಲಿ.
יִתֵּ֤ן בֶּֽעָפָר֙ פִּ֔יהוּ אוּלַ֖י יֵ֥שׁ תִּקְוָֽה׃
30 ೩೦ ಹೊಡೆಯುವವನಿಗೆ ತನ್ನ ಕೆನ್ನೆಯನ್ನು ಕೊಟ್ಟು ಅವಮಾನವನ್ನು ಹೊಟ್ಟೆತುಂಬಾ ತಿನ್ನಲಿ.
יִתֵּ֧ן לְמַכֵּ֛הוּ לֶ֖חִי יִשְׂבַּ֥ע בְּחֶרְפָּֽה׃ ס
31 ೩೧ ಕರ್ತನು ನಿರಂತರಕ್ಕೂ ಕೈ ಬಿಡುವವನಲ್ಲ.
כִּ֣י לֹ֥א יִזְנַ֛ח לְעוֹלָ֖ם אֲדֹנָֽי׃
32 ೩೨ ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು.
כִּ֣י אִם־הוֹגָ֔ה וְרִחַ֖ם כְּרֹ֥ב חסדו׃
33 ೩೩ ನರಜನ್ಮದವರನ್ನು ಬಾಧಿಸಿ, ವ್ಯಥೆಗೊಳಿಸುವುದು ಆತನಿಗೆ ಇಷ್ಟವಿಲ್ಲ.
כִּ֣י לֹ֤א עִנָּה֙ מִלִּבּ֔וֹ וַיַּגֶּ֖ה בְנֵי־אִֽישׁ׃ ס
34 ೩೪ ಲೋಕದ ಸೆರೆಯವರನ್ನೆಲ್ಲಾ ತನ್ನ ಕಾಲುಗಳ ಕೆಳಗೆ ತುಳಿದುಬಿಡುವುದೂ,
לְדַכֵּא֙ תַּ֣חַת רַגְלָ֔יו כֹּ֖ל אֲסִ֥ירֵי אָֽרֶץ׃
35 ೩೫ ಪರಾತ್ಪರನಾದ ದೇವರ ಸನ್ನಿಧಿಯಲ್ಲಿ ನ್ಯಾಯವನ್ನು ತಪ್ಪಿಸುವುದೂ,
לְהַטּוֹת֙ מִשְׁפַּט־גָּ֔בֶר נֶ֖גֶד פְּנֵ֥י עֶלְיֽוֹן׃
36 ೩೬ ವ್ಯಾಜ್ಯವನ್ನು ಅನ್ಯಾಯವಾಗಿ ತೀರಿಸುವುದೂ, ಇವುಗಳನ್ನು ಕರ್ತನು ಲಕ್ಷ್ಯಕ್ಕೆ ತಾರನೇ?
לְעַוֵּ֤ת אָדָם֙ בְּרִיב֔וֹ אֲדֹנָ֖י לֹ֥א רָאָֽה׃ ס
37 ೩೭ ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?
מִ֣י זֶ֤ה אָמַר֙ וַתֶּ֔הִי אֲדֹנָ֖י לֹ֥א צִוָּֽה׃
38 ೩೮ ಪರಾತ್ಪರನಾದ ದೇವರ ಬಾಯಿಯ ಮಾತಿನಿಂದಲೇ ಮೇಲು ಮತ್ತು ಕೇಡುಗಳು ಸಂಭವಿಸುತ್ತವಲ್ಲಾ.
מִפִּ֤י עֶלְיוֹן֙ לֹ֣א תֵצֵ֔א הָרָע֖וֹת וְהַטּֽוֹב׃
39 ೩೯ ಮನುಷ್ಯನಿಗೆ ಜೀವ ವರವಿರಲು ತನ್ನ ಪಾಪದ ಶಿಕ್ಷೆಗಾಗಿ ಗುಣುಗುಟ್ಟುವುದೇಕೆ?
מַה־יִּתְאוֹנֵן֙ אָדָ֣ם חָ֔י גֶּ֖בֶר עַל־חטאו׃ ס
40 ೪೦ ನಮ್ಮ ನಡತೆಯನ್ನು ಶೋಧಿಸಿ, ಪರೀಕ್ಷಿಸಿಕೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳೋಣ.
נַחְפְּשָׂ֤ה דְרָכֵ֙ינוּ֙ וְֽנַחְקֹ֔רָה וְנָשׁ֖וּבָה עַד־יְהוָֽה׃
41 ೪೧ ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕೈಗಳೊಡನೆ ಮನಸ್ಸನ್ನೂ ತಿರುಗಿಸಿ ಸ್ತುತಿಸೋಣ.
נִשָּׂ֤א לְבָבֵ֙נוּ֙ אֶל־כַּפָּ֔יִם אֶל־אֵ֖ל בַּשָּׁמָֽיִם׃
42 ೪೨ “ನಾವು ಅವಿಧೇಯರಾಗಿ ದ್ರೋಹಮಾಡಿದ್ದೇವೆ; ನೀನು ಕ್ಷಮಿಸಲಿಲ್ಲ.
נַ֤חְנוּ פָשַׁ֙עְנוּ֙ וּמָרִ֔ינוּ אַתָּ֖ה לֹ֥א סָלָֽחְתָּ׃ ס
43 ೪೩ ನೀನು ರೋಷವನ್ನು ಹೊದ್ದುಕೊಂಡು ನಮ್ಮನ್ನು ಹಿಂದಟ್ಟಿದ್ದೀ; ಕನಿಕರಿಸದೆ ಕೊಂದು ಹಾಕಿದ್ದೀ.
סַכֹּ֤תָה בָאַף֙ וַֽתִּרְדְּפֵ֔נוּ הָרַ֖גְתָּ לֹ֥א חָמָֽלְתָּ׃
44 ೪೪ ನಮ್ಮ ಪ್ರಾರ್ಥನೆಯು ನಿನಗೆ ಮುಟ್ಟಬಾರದೆಂದು ಮೋಡವನ್ನು ಮರೆಮಾಡಿಕೊಂಡಿದ್ದೀ.
סַכּ֤וֹתָה בֶֽעָנָן֙ לָ֔ךְ מֵעֲב֖וֹר תְּפִלָּֽה׃
45 ೪೫ ನಮ್ಮನ್ನು ಜನಾಂಗಗಳ ಮಧ್ಯದಲ್ಲಿ ಕಸವನ್ನಾಗಿಯೂ ಮತ್ತು ಹೊಲಸನ್ನಾಗಿಯೂ ಹಾಕಿಬಿಟ್ಟಿದ್ದೀ.
סְחִ֧י וּמָא֛וֹס תְּשִׂימֵ֖נוּ בְּקֶ֥רֶב הָעַמִּֽים׃ ס
46 ೪೬ ನಮ್ಮ ಶತ್ರುಗಳೆಲ್ಲಾ ನಮ್ಮನ್ನು ನೋಡಿ ಹಾಸ್ಯಮಾಡುತ್ತಾರೆ.
פָּצ֥וּ עָלֵ֛ינוּ פִּיהֶ֖ם כָּל־אֹיְבֵֽינוּ׃
47 ೪೭ ಭಯವೂ, ಗುಂಡಿಯೂ, ಸಂಹಾರವೂ ಮತ್ತು ಭಂಗವೂ ನಮಗೆ ಕಾದಿವೆ.”
פַּ֧חַד וָפַ֛חַת הָ֥יָה לָ֖נוּ הַשֵּׁ֥את וְהַשָּֽׁבֶר׃
48 ೪೮ ಸ್ವಜನರು ನಾಶವಾದ ಕಾರಣ ನನ್ನ ಕಣ್ಣೀರು ಹೊಳೆಹೊಳೆಯಾಗಿ ಹರಿಯುವುದು.
פַּלְגֵי־מַ֙יִם֙ תֵּרַ֣ד עֵינִ֔י עַל־שֶׁ֖בֶר בַּת־עַמִּֽי׃ ס
49 ೪೯ ಯೆಹೋವನು ಆಕಾಶದಿಂದ ಕಟಾಕ್ಷಿಸಿ ನೋಡುವ ತನಕ
עֵינִ֧י נִגְּרָ֛ה וְלֹ֥א תִדְמֶ֖ה מֵאֵ֥ין הֲפֻגֽוֹת׃
50 ೫೦ ನನ್ನ ಕಣ್ಣುಗಳು ನಿರಂತರವಾಗಿ ಅಶ್ರುಧಾರೆ ಸುರಿಸುವುದನ್ನು, ಎಂದಿಗೂ ಬಿಡದು.
עַד־יַשְׁקִ֣יף וְיֵ֔רֶא יְהוָ֖ה מִשָּׁמָֽיִם׃
51 ೫೧ ನನ್ನ ಪಟ್ಟಣದ ಕನ್ಯೆಯರಿಗಾಗಿ ಅಳುತ್ತಿರುವ ನಾನು ಕಣ್ಣುರಿಯಿಂದ ಪೀಡಿತನಾಗಿದ್ದೇನೆ.
עֵינִי֙ עֽוֹלְלָ֣ה לְנַפְשִׁ֔י מִכֹּ֖ל בְּנ֥וֹת עִירִֽי׃ ס
52 ೫೨ ನಿಷ್ಕಾರಣವಾಗಿ ನನ್ನ ವೈರಿಗಳು ಪಕ್ಷಿಯನ್ನೋ ಎಂಬಂತೆ ನನ್ನನ್ನು ಆತುರದಿಂದ ಹಿಂದಟ್ಟಿದರು.
צ֥וֹד צָד֛וּנִי כַּצִּפּ֖וֹר אֹיְבַ֥י חִנָּֽם׃
53 ೫೩ ನನ್ನನ್ನು ನೆಲಮಾಳಿಗೆಯಲ್ಲಿ ಇಳಿಸಿ ಕಲ್ಲುಮುಚ್ಚಿ ನನ್ನ ಪ್ರಾಣವನ್ನು ತೆಗೆದುಬಿಟ್ಟರು
צָֽמְת֤וּ בַבּוֹר֙ חַיָּ֔י וַיַּדּוּ־אֶ֖בֶן בִּֽי׃
54 ೫೪ ಪ್ರವಾಹವು ನನ್ನನ್ನು ಮುಣುಗಿಸಿತು; ಆಗ ಸತ್ತೆನು ಅಂದುಕೊಂಡೆನು.
צָֽפוּ־מַ֥יִם עַל־רֹאשִׁ֖י אָמַ֥רְתִּי נִגְזָֽרְתִּי׃ ס
55 ೫೫ ಯೆಹೋವನೇ, ಅಗಾಧವಾದ ನೆಲಮಾಳಿಗೆಯಲ್ಲಿ ನಿನ್ನ ಹೆಸರೆತ್ತಿ ಪ್ರಾರ್ಥಿಸಿದೆನು.
קָרָ֤אתִי שִׁמְךָ֙ יְהוָ֔ה מִבּ֖וֹר תַּחְתִּיּֽוֹת׃
56 ೫೬ ನೀನು ನನ್ನ ಧ್ವನಿಯನ್ನು ಕೇಳಿದಿ; ನನ್ನ ನಿಟ್ಟುಸಿರಿಗೂ ಮತ್ತು ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ!
קוֹלִ֖י שָׁמָ֑עְתָּ אַל־תַּעְלֵ֧ם אָזְנְךָ֛ לְרַוְחָתִ֖י לְשַׁוְעָתִֽי׃
57 ೫೭ ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು “ಭಯಪಡಬೇಡ” ಎಂದು ಅಭಯವಚನ ನೀಡಿದೆ.
קָרַ֙בְתָּ֙ בְּי֣וֹם אֶקְרָאֶ֔ךָּ אָמַ֖רְתָּ אַל־תִּירָֽא׃ ס
58 ೫೮ ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ, ನನ್ನ ಪ್ರಾಣವನ್ನು ಉಳಿಸಿದ್ದೀ.
רַ֧בְתָּ אֲדֹנָ֛י רִיבֵ֥י נַפְשִׁ֖י גָּאַ֥לְתָּ חַיָּֽי׃
59 ೫೯ ಯೆಹೋವನೇ, ನನಗಾದ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯತೀರಿಸು.
רָאִ֤יתָה יְהוָה֙ עַוָּ֣תָתִ֔י שָׁפְטָ֖ה מִשְׁפָּטִֽי׃
60 ೬೦ ನನ್ನ ವೈರಿಗಳು ನನ್ನ ಮೇಲೆ ತೀರಿಸಿದ ಹಗೆಯನ್ನೂ ಮತ್ತು ಕಲ್ಪಿಸಿಕೊಂಡ ಯುಕ್ತಿಗಳನ್ನೂ ನೋಡಿದ್ದೀಯಲ್ಲಾ.
רָאִ֙יתָה֙ כָּל־נִקְמָתָ֔ם כָּל־מַחְשְׁבֹתָ֖ם לִֽי׃ ס
61 ೬೧ ಯೆಹೋವನೇ, ಅವರು ನನಗೆ ವಿರುದ್ಧವಾಗಿ ಮಾಡಿದ ದೂಷಣೆಯೂ, ನನ್ನ ಹಾನಿಗಾಗಿ ಕಲ್ಪಿಸಿದ ಕುಯುಕ್ತಿಗಳೂ,
שָׁמַ֤עְתָּ חֶרְפָּתָם֙ יְהוָ֔ה כָּל־מַחְשְׁבֹתָ֖ם עָלָֽי׃
62 ೬೨ ನಿತ್ಯ ನಡಿಸುತ್ತಿರುವ ತಂತ್ರೋಪಾಯವೂ ಮತ್ತು ನನ್ನ ಎದುರಾಳಿಗಳ ನಿಂದೆಯೂ ನಿನ್ನ ಕಿವಿಗೆ ಬಿದ್ದಿವೆಯಷ್ಟೆ.
שִׂפְתֵ֤י קָמַי֙ וְהֶגְיוֹנָ֔ם עָלַ֖י כָּל־הַיּֽוֹם׃
63 ೬೩ ಅವರು ಕುಳಿತುಕೊಳ್ಳಲಿ, ಏಳಲಿ ನೋಡುತ್ತಲೇ ಇರು; ನಾನು ಅವರ ಗೇಲಿಯ ಹಾಡಿಗೆ ಗುರಿಯಾಗಿದ್ದೇನೆ.
שִׁבְתָּ֤ם וְקִֽימָתָם֙ הַבִּ֔יטָה אֲנִ֖י מַנְגִּינָתָֽם׃ ס
64 ೬೪ ಯೆಹೋವನೇ, ಅವರ ದುಷ್ಕೃತ್ಯಗಳಿಗೆ ಸರಿಯಾದ ಪ್ರತಿಫಲವನ್ನು ನೀನು ಅವರಿಗೆ ಕೊಡುವಿ;
תָּשִׁ֨יב לָהֶ֥ם גְּמ֛וּל יְהוָ֖ה כְּמַעֲשֵׂ֥ה יְדֵיהֶֽם׃
65 ೬೫ ಅವರ ಮನಸ್ಸಿನಲ್ಲಿ ಭಯಹುಟ್ಟಿಸುವಿ, ನಿನ್ನ ಶಾಪವು ಅವರ ಮೇಲಿರಲಿ!
תִּתֵּ֤ן לָהֶם֙ מְגִנַּת־לֵ֔ב תַּאֲלָֽתְךָ֖ לָהֶֽם׃
66 ೬೬ ನೀನು ಕೋಪಗೊಂಡು ಅವರನ್ನು ಹಿಂದಟ್ಟಿ ಅವರು ನಿನ್ನ ಕೈಕೆಲಸವಾಗಿರುವ ಆಕಾಶದ ಕೆಳಗೆ ಉಳಿಯದಂತೆ ಅಳಿಸಿಬಿಡುವಿ.
תִּרְדֹּ֤ף בְּאַף֙ וְתַשְׁמִידֵ֔ם מִתַּ֖חַת שְׁמֵ֥י יְהוָֽה׃ פ

< ಪ್ರಲಾಪಗಳು 3 >