< ಪ್ರಲಾಪಗಳು 4 >
1 ೧ ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ! ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ.
Gold saromrom lasr arulana ohkla; Eot ke Tempul oalik na inkanek uh.
2 ೨ ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾಗಿದ ಚೀಯೋನಿನ ಪ್ರಜೆಗಳು, ಆದರೆ ಈಗ ಅವರು ಕುಂಬಾರನ ಕೈಕೆಲಸದ ಮಣ್ಣಿನ ಮಡಿಕೆಗಳೋ ಎಂಬಂತೆ ತಿರಸ್ಕರಿಸಲ್ಪಟ್ಟಿದ್ದಾರೆ.
Mukul fusr lun Zion elos tuh saok sesr oana gold, A inge pilesreyuk elos oana tup ma orek ke fohk kle.
3 ೩ ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಸಾಕುತ್ತವೆ; ಆದರೆ ನನ್ನ ಜನವೆಂಬಾಕೆಯೋ ಕಾಡಿನ ಉಷ್ಟ್ರಪಕ್ಷಿಯಷ್ಟು ಕ್ರೂರಳಾಗಿದ್ದಾಳೆ.
Finne kientop in wolf soko el ac katitii ma fusr natul, Tusruktu mwet luk elos sulallal nu sin ma fusr natulos, oana won ostrich uh.
4 ೪ ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ.
Elos fuhlela tulik fusr natulos in misa ke masrinsral ac malu; Tulik uh ngusr mwe mongo, a wangin mwet ac sang nu selos.
5 ೫ ಮೃಷ್ಟಾನ್ನವನ್ನು ಉಣ್ಣುತ್ತಿದ್ದವರು ಬೀದಿಗಳಲ್ಲಿ ದಿಕ್ಕುಗೆಟ್ಟು ಅಲೆಯುತ್ತಾರೆ; ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ಹೊದ್ದುಕೊಳ್ಳುತ್ತಿದ್ದವರಿಗೆ ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿ ಬಂತು.
Mwet ma kang mwe mongo na yuyu meet elos misa fin inkanek uh ke masrinsral; Elos su tohfla in kasrup la elos iluhsya pus uh in sukok mwe mongo.
6 ೬ ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.
Mwet luk elos kalyeiyuk upa liki na mwet ma tuh muta Sodom, Su sun ongoiya ke God El tuh kunausla acn we ke kitin pacl na srisrik.
7 ೭ ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ, ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.
Fisrak natusr elos tuh tiana akfohkfokyeyukla, ac elos nasnas oana snow; Wasri ac ku, saromrom finsroalos ke kuiyen manolos.
8 ೮ ಈಗ ಅವರ ಮುಖವು ಕಾರ್ಮೋಡದಂತೆ ಕಡುಕಪ್ಪಾಗಿದೆ, ಬೀದಿಗಳಲ್ಲಿ ಅವರ ಗುರುತು ಯಾರಿಗೂ ಸಿಕ್ಕದು. ಅವರ ಚರ್ಮವು ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ, ಒಣಗಿದ ಕಟ್ಟಿಗೆಯಂತಾಗಿದೆ.
Inge elos misa oan ke inkanek uh, tia akilenyuk elos ke sripen sroalsroalla mutalos. Kolo kaclos pulamlamla oana sak, ac arosrosak oan fin sri kaclos.
9 ೯ ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು. ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.
Wo nu selos su anwuki ke mweun liki elos su misa tok, Su wangin mwe mongo in sruokya moul lalos, pwanang elso misa ke masrinsral.
10 ೧೦ ದಯೆತೋರುವ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡು ತಿಂದಿದ್ದಾರೆ; ಯಾಕೆಂದರೆ ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಂದಿರಿಗೆ ತಿಂಡಿಯಾದವು.
Ongoiya se ma sun mwet luk inge oru sie mwe aksangeng na lulap; Nina ma saokkin tulik natulos, elos poeleak tulik natulos sifacna mwe mongo.
11 ೧೧ ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.
LEUM GOD El okoama nufon fulen kasrkusrak lal; El akosak sie e in Zion su esukak acn we nwe ke mwesri oan infohk uh.
12 ೧೨ ವೈರಿಗಳೂ ಮತ್ತು ಎದುರಾಳಿಗಳೂ ಯೆರೂಸಲೇಮಿನ ಬಾಗಿಲುಗಳಲ್ಲಿ ಹೆಜ್ಜೆಯಿಡುವರೆಂದು ಅರಸರು ಅಥವಾ ಭೂನಿವಾಸಿಗಳಲ್ಲಿ ಯಾರೂ ನಂಬಿರಲಿಲ್ಲ.
Wangin sie mwet in kutena acn, finne mwet leum lun mutunfacl saya, Tuh lulalfongi mu oasr mwet mweun ku in utyak ke mutunpot lun Jerusalem.
13 ೧೩ ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.
Tusruktu ma inge sikyak, mweyen mwet palu we elos orekma koluk, ac mwet tol uh oasr mwatalos Ke elos pwanang misa lun mwet wangin mwata.
14 ೧೪ ಆಹಾ, ಆ ಯಾಜಕ ಮತ್ತು ಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ, ಅವರ ಬಟ್ಟೆಯನ್ನು ಯಾರೂ ಮುಟ್ಟರು.
Mwet kol lun acn we elos foroht forma inkanek uh oana mwet kun. Elos arulana srahfon, oru wangin mwet lungse pusralulos.
15 ೧೫ ಅವರನ್ನು ನೋಡುವವರು, “ತೊಲಗಿರಿ, ಅಶುದ್ಧರು ನೀವು, ತೊಲಗಿರಿ, ತೊಲಗಿರಿ, ಮುಟ್ಟಬೇಡಿರಿ” ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು, “ಇವರು ಇನ್ನು ಇಲ್ಲಿ ವಾಸಿಸಬಾರದು” ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ.
Mwet ah wowoyak ac fahk, “Tiok! Komtal fohkfok! Nimet pusralyu!” Ouinge elos takusrkusr som liki mutunfacl nu ke mutunfacl, a wangin mwet lohang nu selos.
16 ೧೬ ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.
Wanginla nunak lun LEUM GOD kaclos; El sifacna luseloselik. Wangin nunak lal ke mwet tol ac mwet kol lasr.
17 ೧೭ ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಬುರುಜುಗಳಲ್ಲಿ ಕಾದುಕೊಂಡಿದ್ದೇವಲ್ಲಾ.
Kut sukok kasru nwe wanginla ku lasr in sifilpa suk, a wanginna kasru tuku nu sesr. Kut tupanna mu mutunfacl se ac tuku kasrekut, a tiana tuku.
18 ೧೮ ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿಮಾಡಿಕೊಂಡಿರುವುದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರ ಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು; ಹೌದು, ನಮಗೆ ಅಂತ್ಯವು ಬಂದೇ ಬಂತು.
Mwet lokoalok lasr elos tawi kut; kut tiana ku in forfor innek uh. Len lasr uh safla; pacl safla lasr uh tuku tari.
19 ೧೯ ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.
Elos ukwekuti, mui liki ke eagle uh ac pwesrouli nu facsr lucng me uh. Elos lol acn kut fahsr we fin inging uh, ac kasriki kut ac sruokkuti in acn mwesis.
20 ೨೦ ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.
Elos sruokya kuiyen moul lasr, aok tokosra su LEUM GOD El sulela; El su kut tuh lulalfongi mu ac langoekut liki kutena mwet ma ac utyak in mweuni kut uh.
21 ೨೧ ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.
Mwet Edom ac mwet Uz, kowos in israsr na; engan ke srak oasr pacl in engan lowos uh. Pacl in ongoiya lowos ac fah tuku pac; kowos ac fah koflufolla ac tukulkulwot tukulkulme ke mwekin.
22 ೨೨ ಚೀಯೋನೆಂಬ ಕನ್ಯೆಯೇ, ನಿನ್ನ ದೋಷಫಲವೆಲ್ಲಾ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು. ಎದೋಮೆಂಬ ಕನ್ಯೆಯೇ, ನಿನ್ನ ದೋಷದ ನಿಮಿತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು.
Zion el eis tari molin ma koluk lal; LEUM GOD El ac tia filikuti in sruoh nwe tok. Tusruktu mwet Edom, LEUM GOD El ac fah kai kowos; El ac fah akkalemyela orekma koluk lowos.