< ಪ್ರಲಾಪಗಳು 5 >
1 ೧ ಯೆಹೋವನೇ, ನಮಗಾದ ದುರ್ಗತಿಯನ್ನು ನೆನಪಿಗೆ ತಂದುಕೋ; ನಾವು ಗುರಿಯಾಗಿರುವ ಅವಮಾನವನ್ನು ದೃಷ್ಟಿಸಿ ನೋಡು.
HERRE, kom vor skæbne i Hu, sku ned og se vor skændsel!
2 ೨ ನಮ್ಮ ಸ್ವತ್ತು ಪರರ ಪಾಲಾಗಿದೆ, ನಮ್ಮ ಮನೆಗಳು ಪರರ ಕೈವಶವಾಗಿವೆ.
Vor Arvelod tilfaldt fremmede, Udlændinge fik vore Huse.
3 ೩ ನಾವು ತಂದೆಯಿಲ್ಲದ ಅನಾಥರು, ನಮ್ಮ ತಾಯಂದಿರು ವಿಧವೆಯರಾಗಿದ್ದಾರೆ.
Forældreløse, faderløse er vi, som Enker er vore Mødre.
4 ೪ ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತೇವೆ; ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತೇವೆ.
Vort Drikkevand må vi købe, betale må vi vort Brænde.
5 ೫ ನಮ್ಮನ್ನು ಹಿಂದಟ್ಟುವವರು ನಮ್ಮ ಕುತ್ತಿಗೆಯನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ.
Åget trykker vor Nakke, vi trættes og finder ej Hvile.
6 ೬ ಹೇಗಾದರೂ ಹೊಟ್ಟೆ ತುಂಬಾ ಅನ್ನ ತಿನ್ನೋಣ ಎಂದು ಐಗುಪ್ತ್ಯರಿಗೂ ಮತ್ತು ಅಶ್ಶೂರ್ಯರಿಗೂ ಅಧೀನರಾದೆವು.
Ægypten rakte vi Hånd, Assur, for at mættes med Brød.
7 ೭ ನಮ್ಮ ಪೂರ್ವಿಕರು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು.
Vore Fædre, som synded, er borte, og vi må bære deres Skyld.
8 ೮ ಗುಲಾಮರಾಗಿದ್ದವರು ನಮಗೆ ದಣಿಗಳಾದರು, ಅವರ ಕೈಯಿಂದ ನಮ್ಮನ್ನು ಬಿಡಿಸುವವರೇ ಇಲ್ಲ.
Over os råder Trælle, ingen frier os fra dem.
9 ೯ ಆಹಾರಕ್ಕೋಸ್ಕರ ಬೆಳೆಯನ್ನು ಕೊಯ್ಯುತ್ತಿರುವಾಗ ಅರಣ್ಯದವರ ಕತ್ತಿಯಿಂದ ಪ್ರಾಣಾಪಾಯಕ್ಕೆ ಗುರಿಯಾಗಿದ್ದೇವೆ.
Med Livsfare henter vi vort Brød, udsatte for Ørkenens Sværd.
10 ೧೦ ಕ್ಷಾಮಕಾಲದ ಭೀಕರ ಜ್ವರದಿಂದ ನಮ್ಮ ಚರ್ಮವು ಒಲೆಯಂತೆ ಸುಡುತ್ತದೆ.
Vor Hud er sværtet som en Ovn af Hungerens svidende Lue.
11 ೧೧ ಚೀಯೋನಿನ ಸತಿಯರ ಮತ್ತು ಯೆಹೂದದ ಊರುಗಳ ಕನ್ಯೆಯರ ಅತ್ಯಾಚಾರವಾಗುತ್ತಿದೆ.
De skændede kvinder i Zion, Jomfruer i Judas Byer.
12 ೧೨ ರಾಜಪುತ್ರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ; ವೃದ್ಧರು ಮಾನಭಂಗಪಟ್ಟರು.
Fyrster greb de og hængte, tog intet Hensyn til gamle.
13 ೧೩ ಯುವಭಟರಿಗೆ ಬೀಸುವ ಕಲ್ಲನ್ನು ಹೊರುವ ಗತಿ ಬಂತು; ಮಕ್ಕಳು ಸೌದೆಹೊರೆ ಹೊತ್ತು ಮುಗ್ಗರಿಸಬೇಕಾಯಿತು.
Ynglinge sattes til Kværnen, under Brændeknippet segnede Drenge.
14 ೧೪ ವೃದ್ಧರು ಇನ್ನು ಚಾವಡಿಯಲ್ಲಿ ಸೇರರು, ಯುವಕರು ಇನ್ನು ವಾದ್ಯಬಾರಿಸರು.
De gamle forsvandt fra Porten, de unge fra Strengenes Leg.
15 ೧೫ ನಮ್ಮ ಹೃದಯಾನಂದವು ತೀರಿತು, ನಮ್ಮ ನಾಟ್ಯ ನಲಿವುಗಳು ದುಃಖವಾಗಿ ಮಾರ್ಪಟ್ಟಿವೆ.
Vort Hjertes Glæde er borte, vor Dans er vendt til Sorg.
16 ೧೬ ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ!
Kronen faldt af vort Hoved, ve os, at vi har syndet!
17 ೧೭ ನಮ್ಮ ಹೃದಯವು ಕುಂದಿದೆ ಮತ್ತು ನಮ್ಮ ಕಣ್ಣುಗಳು ಮೊಬ್ಬಾಗಿವೆ.
Vort Hjerte blev derfor sygt, derfor vort Øje mørkt:
18 ೧೮ ಯಾಕೆಂದರೆ ನರಿಗಳು ಹಾಳಾಗಿರುವ ಚೀಯೋನ್ ಪರ್ವತದ ಬಳಿ ಸಂಚರಿಸುತ್ತವೆ.
For Zions Bjerg, som er øde, Ræve tumler sig der.
19 ೧೯ ಆದರೆ ಯೆಹೋವನೇ, ನೀನು ಶಾಶ್ವತವಾಗಿ ನೆಲೆಗೊಂಡಿದ್ದೀ, ತಲತಲಾಂತರಕ್ಕೂ ನಿನ್ನ ಸಿಂಹಾಸನವು ಸ್ಥಿರವಾಗಿರುವುದು.
Du, HERRE, troner for evigt, fra Slægt til Slægt står din trone.
20 ೨೦ ನೀನು ನಮ್ಮನ್ನು ಸಂಪೂರ್ಣವಾಗಿ ಮರೆತಿರುವುದೇಕೆ? ಏಕೆ ನಮ್ಮನ್ನು ಇಷ್ಟುಕಾಲ ಕೈಬಿಟ್ಟಿದ್ದೀ?
Hvi glemmer du os bestandig og svigter os alle dage?
21 ೨೧ ಯೆಹೋವನೇ, ನೀನು ನಮ್ಮ ಮೇಲೆ ಬಲು ಸಿಟ್ಟುಗೊಂಡು ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ?
Omvend os, HERRE, til dig, så vender vi om, giv os nye Dage, som fordum!
22 ೨೨ ಪೂರ್ವಕಾಲದ ಸುಸ್ಥಿತಿಯನ್ನು ನಮಗೆ ಮತ್ತೆ ದಯಪಾಲಿಸು. ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ನೀನು ತಿರುಗಿಸಿದ ಹಾಗೆ ತಿರುಗುವೆವು;
Eller har du helt stødt os bort, er din Vrede mod os uden Ende?