< ಯಾಜಕಕಾಂಡ 1 >

1 ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತನಾಡಿ ಹೀಗೆಂದನು,
וַיִּקְרָ֖א אֶל־מֹשֶׁ֑ה וַיְדַבֵּ֤ר יְהוָה֙ אֵלָ֔יו מֵאֹ֥הֶל מוֹעֵ֖ד לֵאמֹֽר׃
2 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅವನು ಅದನ್ನು ಹಿಂಡಿನ ದನಗಳಿಂದಾಗಲಿ ಅಥವಾ ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಸಮರ್ಪಿಸಬೇಕು.
דַּבֵּ֞ר אֶל־בְּנֵ֤י יִשְׂרָאֵל֙ וְאָמַרְתָּ֣ אֲלֵהֶ֔ם אָדָ֗ם כִּֽי־יַקְרִ֥יב מִכֶּ֛ם קָרְבָּ֖ן לַֽיהוָ֑ה מִן־הַבְּהֵמָ֗ה מִן־הַבָּקָר֙ וּמִן־הַצֹּ֔אן תַּקְרִ֖יבוּ אֶת־קָרְבַּנְכֶֽם ׃
3 “‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.
אִם־עֹלָ֤ה קָרְבָּנוֹ֙ מִן־הַבָּקָ֔ר זָכָ֥ר תָּמִ֖ים יַקְרִיבֶ֑נּוּ אֶל־פֶּ֝תַח אֹ֤הֶל מוֹעֵד֙ יַקְרִ֣יב אֹת֔וֹ לִרְצֹנ֖וֹ לִפְנֵ֥י יְהוָֽה׃
4 ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.
וְסָמַ֣ךְ יָד֔וֹ עַ֖ל רֹ֣אשׁ הָעֹלָ֑ה וְנִרְצָ֥ה ל֖וֹ לְכַפֵּ֥ר עָלָֽיו׃
5 “‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.
וְשָׁחַ֛ט אֶת־בֶּ֥ן הַבָּקָ֖ר לִפְנֵ֣י יְהוָ֑ה וְ֠הִקְרִיבוּ בְּנֵ֨י אַהֲרֹ֤ן הַֽכֹּֽהֲנִים֙ אֶת־הַדָּ֔ם וְזָרְק֨וּ אֶת־הַדָּ֤ם עַל־הַמִּזְבֵּ֙חַ֙ סָבִ֔יב אֲשֶׁר־פֶּ֖תַח אֹ֥הֶל מוֹעֵֽד׃
6 ಅನಂತರ ಅವನು ಆ ಯಜ್ಞಪಶುವಿನ ಚರ್ಮವನ್ನು ಸುಲಿದು ಅದರ ದೇಹವನ್ನು ತುಂಡು ತುಂಡಾಗಿ ಕಡಿಯಬೇಕು.
וְהִפְשִׁ֖יט אֶת־הָעֹלָ֑ה וְנִתַּ֥ח אֹתָ֖הּ לִנְתָחֶֽיהָ׃
7 ಆರೋನನ ವಂಶದವರಾದ ಯಾಜಕರು ಯಜ್ಞವೇದಿಯ ಮೇಲೆ ಬೆಂಕಿಯನ್ನಿಟ್ಟು, ಅದರ ಮೇಲೆ ಕಟ್ಟಿಗೆಯನ್ನು ಕೂಡಿಸಿ ಇಡಬೇಕು.
וְ֠נָתְנוּ בְּנֵ֨י אַהֲרֹ֧ן הַכֹּהֵ֛ן אֵ֖שׁ עַל־הַמִּזְבֵּ֑חַ וְעָרְכ֥וּ עֵצִ֖ים עַל־הָאֵֽשׁ׃
8 ಆಮೇಲೆ ಯಾಜಕರು ಅಂದರೆ ಆರೋನನ ಮಕ್ಕಳು, ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಅದರ ಮೇಲೆ ಕ್ರಮವಾಗಿ ಇಡಬೇಕು.
וְעָרְכ֗וּ בְּנֵ֤י אַהֲרֹן֙ הַכֹּ֣הֲנִ֔ים אֵ֚ת הַנְּתָחִ֔ים אֶת־הָרֹ֖אשׁ וְאֶת־הַפָּ֑דֶר עַל־הָעֵצִים֙ אֲשֶׁ֣ר עַל־הָאֵ֔שׁ אֲשֶׁ֖ר עַל־הַמִּזְבֵּֽחַ׃
9 ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.
וְקִרְבּ֥וֹ וּכְרָעָ֖יו יִרְחַ֣ץ בַּמָּ֑יִם וְהִקְטִ֨יר הַכֹּהֵ֤ן אֶת־הַכֹּל֙ הַמִּזְבֵּ֔חָה עֹלָ֛ה אִשֵּׁ֥ה רֵֽיחַ־נִיח֖וֹחַ לַֽיהוָֽה׃ ס
10 ೧೦ “‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.
וְאִם־מִן־הַצֹּ֨אן קָרְבָּנ֧וֹ מִן־הַכְּשָׂבִ֛ים א֥וֹ מִן־הָעִזִּ֖ים לְעֹלָ֑ה זָכָ֥ר תָּמִ֖ים יַקְרִיבֶֽנּוּ׃
11 ೧೧ ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರ ಭಾಗದಲ್ಲಿ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಹಾಕಬೇಕು.
וְשָׁחַ֨ט אֹת֜וֹ עַ֣ל יֶ֧רֶךְ הַמִּזְבֵּ֛חַ צָפֹ֖נָה לִפְנֵ֣י יְהוָ֑ה וְזָרְק֡וּ בְּנֵי֩ אַהֲרֹ֨ן הַכֹּהֲנִ֧ים אֶת־דָּמ֛וֹ עַל־הַמִּזְבֵּ֖חַ סָבִֽיב׃
12 ೧೨ ಅವನು ಆ ಪಶುವಿನ ದೇಹವನ್ನು ತುಂಡು ತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
וְנִתַּ֤ח אֹתוֹ֙ לִנְתָחָ֔יו וְאֶת־רֹאשׁ֖וֹ וְאֶת־פִּדְר֑וֹ וְעָרַ֤ךְ הַכֹּהֵן֙ אֹתָ֔ם עַל־הָֽעֵצִים֙ אֲשֶׁ֣ר עַל־הָאֵ֔שׁ אֲשֶׁ֖ר עַל־הַמִּזְבֵּֽחַ׃
13 ೧೩ ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
וְהַקֶּ֥רֶב וְהַכְּרָעַ֖יִם יִרְחַ֣ץ בַּמָּ֑יִם וְהִקְרִ֨יב הַכֹּהֵ֤ן אֶת־הַכֹּל֙ וְהִקְטִ֣יר הַמִּזְבֵּ֔חָה עֹלָ֣ה ה֗וּא אִשֵּׁ֛ה רֵ֥יחַ נִיחֹ֖חַ לַיהוָֽה׃ פ
14 ೧೪ “‘ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು.
וְאִ֧ם מִן־הָע֛וֹף עֹלָ֥ה קָרְבָּנ֖וֹ לַֽיהוָ֑ה וְהִקְרִ֣יב מִן־הַתֹּרִ֗ים א֛וֹ מִן־בְּנֵ֥י הַיּוֹנָ֖ה אֶת־קָרְבָּנֽוֹ׃
15 ೧೫ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು, ಕುತ್ತಿಗೆ ಮುರಿದು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹರಿಯುವಂತೆ ಮಾಡಿ ಹಿಂಗಿಸಬೇಕು.
וְהִקְרִיב֤וֹ הַכֹּהֵן֙ אֶל־הַמִּזְבֵּ֔חַ וּמָלַק֙ אֶת־רֹאשׁ֔וֹ וְהִקְטִ֖יר הַמִּזְבֵּ֑חָה וְנִמְצָ֣ה דָמ֔וֹ עַ֖ל קִ֥יר הַמִּזְבֵּֽחַ׃
16 ೧೬ ಅದರ ಕರುಳುಗಳನ್ನು ಮತ್ತು ರೆಕ್ಕೆಗಳನ್ನು ತೆಗೆದುಬಿಟ್ಟು ಯಜ್ಞವೇದಿಯ ಪೂರ್ವದಿಕ್ಕಿನಲ್ಲಿರುವ ಬೂದಿಯ ಸ್ಥಳದಲ್ಲಿ ಹಾಕಬೇಕು.
וְהֵסִ֥יר אֶת־מֻרְאָת֖וֹ בְּנֹצָתָ֑הּ וְהִשְׁלִ֨יךְ אֹתָ֜הּ אֵ֤צֶל הַמִּזְבֵּ֙חַ֙ קֵ֔דְמָה אֶל־מְק֖וֹם הַדָּֽשֶׁן׃
17 ೧೭ ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
וְשִׁסַּ֨ע אֹת֣וֹ בִכְנָפָיו֮ לֹ֣א יַבְדִּיל֒ וְהִקְטִ֨יר אֹת֤וֹ הַכֹּהֵן֙ הַמִּזְבֵּ֔חָה עַל־הָעֵצִ֖ים אֲשֶׁ֣ר עַל־הָאֵ֑שׁ עֹלָ֣ה ה֗וּא אִשֵּׁ֛ה רֵ֥יחַ נִיחֹ֖חַ לַיהוָֽה׃ ס

< ಯಾಜಕಕಾಂಡ 1 >