< ಯಾಜಕಕಾಂಡ 10 >
1 ೧ ಆರೋನನ ಮಕ್ಕಳಲ್ಲಿ ನಾದಾಬ್ ಹಾಗೂ ಅಬೀಹೂ ಎಂಬ ಇಬ್ಬರು ತಮ್ಮ ತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿದರು.
১আর হারোণের ছেলে নাদব ও অবীহূ নিজের নিজের ধুনুচি নিয়ে তাতে আগুন রাখল ও তার ওপরে ধূপ দিয়ে সদাপ্রভুর সামনে তাঁর আজ্ঞার বিপরীতে অদ্ভুত আগুন যা সদাপ্রভুর আজ্ঞা বহির্ভূত, তা উৎসর্গ করল।
2 ೨ ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.
২তাতে সদাপ্রভুর সামনে থেকে আগুন বেরিয়ে তাদেরকে গ্রাস করল, তারা সদাপ্রভুর সামনে প্রাণত্যাগ করল।
3 ೩ ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.
৩তখন মোশি হারোণকে বললেন, সদাপ্রভু তো এটাই বলেছিলেন, তিনি বলেছিলেন, যারা আমার কাছে আসে, তাদের মধ্যে আমি অবশ্য পবিত্রভাবে মান্য হব ও সব লোকের সামনে গৌরবান্বিত হব। তখন হারোণ চুপ করে থাকলেন।
4 ೪ ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫಾನನನ್ನು ಕರೆಯಿಸಿ, “ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು” ಅಂದನು.
৪পরে মোশি হারোণের বাবার মত উষীয়েলের ছেলে মীশায়েল ও ইলীষাফণকে ডেকে বললেন, কাছে এসে তোমাদের ঐ দুই জন ভাইকে তুলে পবিত্র জায়গার সামনে থেকে শিবিরের বাইরে নিয়ে যাও।
5 ೫ ಮೋಶೆಯ ಅಪ್ಪಣೆಯ ಮೇರೆಗೆ ಅವರು ಸಮೀಪಕ್ಕೆ ಬಂದು ಸತ್ತವರು ತೊಟ್ಟುಕೊಂಡಿದ್ದ ನಿಲುವಂಗಿಗಳನ್ನು ತೆಗೆಯದೆ ಅವರ ಶವಗಳನ್ನು ಎತ್ತಿ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋದರು.
৫তাতে তারা কাছে গিয়ে জামা শুদ্ধ তাদেরকে তুলে শিবিরের বাইরে নিয়ে গেল; যেমন মোশি বলেছিলেন।
6 ೬ ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.
৬পরে মোশি হারোণকে ও তাঁর দুই ছেলে ইলীয়াসর ও ঈথামরকে বললেন, তোমরা যেন মারা না পড় ও সব মণ্ডলীর প্রতি যেন রাগ না হয়, এই জন্য তোমরা নিজের নিজের মাথা ন্যাড়া কোরো না ও নিজের নিজের কাপড় ছিঁড় না; কিন্তু তোমাদের ভাইয়েরা, অর্থাৎ সমস্ত ইস্রায়েল-কুল, সদাপ্রভুর করা আগুনে শোক করুক।
7 ೭ ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು; ಹೋದರೆ ಸಾಯುವಿರಿ” ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು.
৭আর তোমরা যেন মারা না পড়, এই জন্য সমাগম-তাঁবুর দরজার বাইরে যেও না, কারণ তোমাদের গায়ে সদাপ্রভুর অভিষেক-তেল আছে। তাতে তাঁরা মোশির বাক্য অনুসারে সে রকম করলেন।
8 ೮ ಯೆಹೋವನು ಆರೋನನೊಂದಿಗೆ ಮಾತನಾಡಿ,
৮পরে সদাপ্রভু হারোণকে বললেন, তোমরা যেন মারা না পড়,
9 ೯ “ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ.
৯এই জন্য যে দিনের তুমি কিংবা তোমার ছেলেরা সমাগম-তাঁবুতে ঢুকবে, সে দিনের আঙ্গুর রস কি মদ পান কোরো না; এটা পুরুষানুক্রমে তোমাদের পালনীয় চিরস্থায়ী বিধি।
10 ೧೦ ಅದಲ್ಲದೆ ದೇವರಿಗೆ ಮೀಸಲಾದ ವಸ್ತುಗಳನ್ನು ಅಲ್ಲದ ವಸ್ತುಗಳನ್ನು, ಶುದ್ಧವಾದವುಗಳನ್ನು, ಅಶುದ್ಧವಾದವುಗಳನ್ನು ವಿವೇಚಿಸುವುದೂ,
১০তাতে তোমরা পবিত্র ও সামান্য বিষয়ের এবং শুচি ও অশুচি বিষয়ের তফাৎ করতে
11 ೧೧ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವುದೂ ನಿಮ್ಮ ಕರ್ತವ್ಯವಾಗಿದೆ” ಎಂದು ಹೇಳಿದನು.
১১এবং সদাপ্রভু মোশির মাধ্যমে ইস্রায়েল-সন্তানদেরকে যে সব বিধি দিয়েছেন, তাদেরকে শিক্ষা দিতে পারবে।
12 ೧೨ ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೆ, “ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ಉಳಿದಿರುವ ಧಾನ್ಯನೈವೇದ್ಯ ದ್ರವ್ಯವನ್ನು ತೆಗೆದುಕೊಂಡು, ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ, ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು. ಅದು ಮಹಾಪರಿಶುದ್ಧವಾಗಿದೆ.
১২পরে মোশি হারোণকে ও তাঁর অবশিষ্ট দুই ছেলে ইলীয়াসর ও ঈথামরকে বললেন, সদাপ্রভুর উদ্দেশ্যে আগুনের তৈরী উপহারের অবশিষ্ট যে খাওয়ার নৈবেদ্য আছে, তা নিয়ে গিয়ে তোমরা বেদির পাশে বিনা তাড়ীতে খাও, কারণ তা অতি পবিত্র।
13 ೧೩ ಪವಿತ್ರಸ್ಥಳದೊಳಗೇ ಅದನ್ನು ಊಟಮಾಡಬೇಕು. ಜನರು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳಲ್ಲಿ ಅದು ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲತಕ್ಕದ್ದೆಂದು ಅಪ್ಪಣೆಯಾಗಿದೆ.
১৩কোন পবিত্র জায়গায় তা খাবে; কারণ সদাপ্রভুর উদ্দেশ্যে আগুনে তৈরী উপহারের মধ্যে তাই তোমার ও তোমার ছেলেদের পাওনা অংশ; কারণ আমি এই আজ্ঞা পেয়েছি।
14 ೧೪ ನೀವು ನೈವೇದ್ಯ ಮಾಡಿದ ಎದೆಯ ಭಾಗವನ್ನು, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ತೊಡೆಯನ್ನು ಯಾವುದಾದರೂ ಒಂದು ಶುದ್ಧಸ್ಥಳದಲ್ಲಿ ಊಟಮಾಡಬಹುದು. ನೀನೂ, ನಿನ್ನ ಗಂಡುಮಕ್ಕಳೂ ಹಾಗು ಹೆಣ್ಣುಮಕ್ಕಳೂ ಅದನ್ನು ತಿನ್ನಬಹುದು. ಏಕೆಂದರೆ ಇಸ್ರಾಯೇಲರು ಸಮರ್ಪಿಸುವ ಸಮಾಧಾನಯಜ್ಞದ್ರವ್ಯಗಳಲ್ಲಿ ಇವೇ ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.
১৪আর উন্নীত বুক ও উরু তুমি ও তোমার ছেলে মেয়েরা কোনো শুচি জায়গায় খাবে, কারণ ইস্রায়েল-সন্তানদের মঙ্গলের জন্য বলিদান থেকে তা তোমার ও তোমার ছেলেদের পাওনা অংশ বলে দেওয়া হয়েছে।
15 ೧೫ ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗೆಲ್ಲಾ ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕಾದ ಆ ತೊಡೆಯನ್ನು ನೈವೇದ್ಯವಾಗಿ ನಿವಾಳಿಸಬೇಕಾದ ಆ ಎದೆಯ ಭಾಗವನ್ನು ಯೆಹೋವನ ಸನ್ನಿಧಿಯಲ್ಲಿ ತರಬೇಕು. ಯೆಹೋವನು ಆಜ್ಞಾಪಿಸಿದಂತೆ ಅವು ನಿನಗೂ ಮತ್ತು ನಿನ್ನ ವಂಶದವರಿಗೂ ಸಲ್ಲತಕ್ಕದ್ದು; ಇದು ಶಾಶ್ವತನಿಯಮ” ಎಂದು ಹೇಳಿದನು.
১৫তারা হবনীয় মেদের সঙ্গে উন্নত উরু ও বুক নৈবেদ্য বলে সদাপ্রভুর সামনে দোলাবার জন্য আনবে; তা তোমার ও তোমার ছেলেদের চিরস্থায়ী অধিকার হবে; যেমন সদাপ্রভু আজ্ঞা করেছেন।
16 ೧೬ ಜನರೆಲ್ಲರಿಗೋಸ್ಕರ ದೋಷಪರಿಹಾರ ಮಾಡಲು ಸಮರ್ಪಿತವಾದ ಹೋತದ ವಿಷಯದಲ್ಲಿ ಅದು ಏನಾಯಿತೆಂದು ಮೋಶೆ ವಿಚಾರಿಸಲಾಗಿ ಅದನ್ನು ಸುಟ್ಟುಬಿಟ್ಟರೆಂದು ತಿಳಿಯಬಂತು. ಇದನ್ನು ಕೇಳಿದಾಗ ಅವನು ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡು,
১৬পরে মোশি যত্নপূর্ব্বক পাপের জন্য ছাগলের খোঁজ করলেন, আর দেখ, তা পুড়িয়ে দেওয়া হয়েছিল; সেই জন্য তিনি হারোণের বাকি দুই ছেলে ইলীয়াসর ও ঈথামরের ওপর রেগে গিয়ে বললেন,
17 ೧೭ “ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?
১৭সেই পাপের জন্য দেওয়া বলি তোমরা পবিত্র জায়গায় খাওনি কেন? তা তো অতি পবিত্র এবং মণ্ডলীর অপরাধ বহন করে সদাপ্রভুর সামনে প্রায়শ্চিত্ত করার জন্য তা তিনি তোমাদেরকে দিয়েছেন।
18 ೧೮ ಅದರ ರಕ್ತವು ಪವಿತ್ರಸ್ಥಾನದೊಳಗೆ ತರಬಾರದಾಗಿತ್ತು, ನಾನು ಆಜ್ಞಾಪಿಸಿದಂತೆ ನೀವು ದೇವಸ್ಥಾನದ ಪ್ರಾಕಾರದೊಳಗೆ ಅದನ್ನು ತಿನ್ನಬೇಕಾಗಿತ್ತು” ಅಂದನು.
১৮দেখ, ভিতরে পবিত্র জায়গায় তাঁর রক্ত আনা হয়নি; আমার আজ্ঞানুসারে পবিত্র জায়গায় তা খাওয়া তোমাদের কর্তব্য ছিল।
19 ೧೯ ಅದಕ್ಕೆ ಆರೋನನು ಮೋಶೆಗೆ, “ಇವರು ಈ ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಯಜ್ಞವನ್ನು ಮತ್ತು ಸರ್ವಾಂಗಹೋಮವನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಈ ಹೊತ್ತು ಊಟಮಾಡಿದ್ದರೆ ಅದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋರುತ್ತಿತ್ತೋ?”
১৯তখন হারোণ মোশিকে বললেন, দেখ, ওরা আজ সদাপ্রভুর উদ্দেশ্যে নিজের নিজের পাপের জন্য বলি ও নিজের নিজের হোমবলি উৎসর্গ করেছে, আর আমার ওপর এ রকম হল; যদি আমি আজ পাপের জন্য দেওয়া বলি খেতাম, তবে সদাপ্রভুর চোখে তা কি ভাল বোধ হত?
20 ೨೦ ಎಂದು ಉತ್ತರಕೊಡಲಾಗಿ ಮೋಶೆ ಆ ಮಾತನ್ನು ಕೇಳಿ ತೃಪ್ತಿಗೊಂಡನು.
২০মোশি যখন এটা শুনলেন, তাঁর চোখে ভাল বোধ হল।