< ಯಾಜಕಕಾಂಡ 11 >
1 ೧ ಯೆಹೋವನು ಮೋಶೆ ಆರೋನರ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
And the Lord said to Moses and Aaron,
2 ೨ “ನೀವು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ಭೂಮಿಯ ಮೇಲಿರುವ ಪ್ರಾಣಿಗಳಲ್ಲಿ ಇವುಗಳ ಮಾಂಸವನ್ನು ನೀವು ತಿನ್ನಬಹುದು,
Say to the children of Israel: These are the living things which you may have for food among all the beasts on the earth.
3 ೩ ಅವು ಯಾವುವೆಂದರೆ ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲುಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.
You may have as food any beast which has a division in the horn of its foot, and whose food comes back into its mouth to be crushed again.
4 ೪ ಆದರೆ ಯಾವ ಪ್ರಾಣಿಯು ಮೆಲಕು ಹಾಕಿದರೂ ಗೊರಸು ಸೀಳಲಿರುವುದಿಲ್ಲವೋ ಮತ್ತು ಯಾವ ಪ್ರಾಣಿಯು ಗೊರಸು ಸೀಳಿದರೂ ಮೆಲಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆಯು ಮೆಲಕುಹಾಕುವಂಥದು ಸರಿ; ಆದರೂ ಅದಕ್ಕೆ ಸೀಳುಗೊರಸು ಇಲ್ಲವಾದುದರಿಂದ ನೀವು ಅದರ ಮಾಂಸವನ್ನು ಅಶುದ್ಧವೆಂದೆಣಿಸಬೇಕು.
But, at the same time, of those beasts, you may not take for food the camel, because its food comes back but the horn of its foot is not parted in two; it is unclean to you.
5 ೫ ಬೆಟ್ಟದ ಮೊಲವೂ ಮೆಲಕುಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದುದರಿಂದ ಅದು ನಿಮಗೆ ಅಶುದ್ಧ.
And the rock-badger, for the same reason, is unclean to you.
6 ೬ ಮೊಲವೂ ಮೆಲಕುಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದ ಕಾರಣ ಅದೂ ನಿಮಗೆ ಅಶುದ್ಧ.
And the hare, because the horn of its foot is not parted in two, is unclean to you.
7 ೭ ಹಂದಿಯ ಗೊರಸು ಸೀಳಿದೆ; ಆದರೂ ಅದು ಮೆಲಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ.
And the pig is unclean to you, because though the horn of its foot is parted, its food does not come back.
8 ೮ ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು; ಇವುಗಳನ್ನು ಅಶುದ್ಧವೆಂದೆಣಿಸಬೇಕು.
Their flesh may not be used for food, and their dead bodies may not even be touched; they are unclean to you.
9 ೯ “‘ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.
These you may have for food of all things living in the water: anything living in the water, in the seas or rivers, which has special parts for swimming and skin formed of thin plates, may be used for food.
10 ೧೦ ಆದರೆ ಸಮುದ್ರದಲ್ಲಿದ್ದರೂ ಅಥವಾ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ಮೈಯೂ ಇರುವುದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು.
All other things living and moving in the water, in the sea or in the rivers, are a disgusting thing to you;
11 ೧೧ ಅಂತಹವು ಸಂಪೂರ್ಣವಾಗಿ ನಿಷಿದ್ಧವಾಗಿರುವುದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಅಸಹ್ಯವಾಗಿರಬೇಕು.
They may not be used for food, and their dead bodies are disgusting to you.
12 ೧೨ ಜಲಜಂತುಗಳಲ್ಲಿ ಯಾವುದಕ್ಕೆ ರೆಕ್ಕೆಗಳೂ, ಪರೆಪರೆಯಾದ ಮೈ ಇಲ್ಲವೋ ಅವು ನಿಮಗೆ ಅಸಹ್ಯವಾಗಿರಬೇಕು.
Anything in the water which has no special parts for swimming and no thin plates on its skin is disgusting to you.
13 ೧೩ “‘ನಿಮಗೆ ನಿಷಿದ್ಧವಾದ ಮತ್ತು ಅಸಹ್ಯವಾದ ಪಕ್ಷಿಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು,
And among birds these are to be disgusting to you, and not to be used for food: the eagle and the gier-eagle and the ospray;
And the kite and the falcon, and birds of that sort;
Every raven, and birds of that sort;
16 ೧೬ ಸಕಲವಿಧವಾದ ಕಾಗೆ, ಉಷ್ಟ್ರಪಕ್ಷಿ, ಉಲೂಕ, ಕಡಲಹಕ್ಕಿ, ಸಕಲವಿಧವಾದ ಡೇಗೆ,
And the ostrich and the night-hawk and the sea-hawk, and birds of that sort;
17 ೧೭ ಗೂಬೆ, ಹೆಗ್ಗೂಬೆ, ನೀರುಕಾಗೆ,
And the little owl and the cormorant and the great owl;
18 ೧೮ ಬಿಳಿಗೂಬೆ, ಕರೇಟು, ಕಣಜ ಗೂಬೆ, ರಣಹದ್ದು, ಕಡಲ ಡೇಗೆ,
And the water-hen and the pelican and the vulture;
19 ೧೯ ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ. ಇವುಗಳ ಮಾಂಸವನ್ನು ತಿನ್ನಬಾರದು.
The stork and the heron, and birds of that sort, and the hoopoe and the bat.
20 ೨೦ “‘ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ನಿಷಿದ್ಧವಾಗಿರಬೇಕು.
Every winged four-footed thing which goes on the earth is disgusting to you;
21 ೨೧ ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವುದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನಬಹುದು.
But of the winged four-footed things, those which have long legs for jumping on the earth you may have for food;
22 ೨೨ ಸಕಲವಿಧವಾದ ಮಿಡತೆಗಳನ್ನು, ಬೋಳುಮಿಡತೆಗಳನ್ನು, ಜಿಟ್ಟಿಮಿಡತೆಗಳನ್ನು ಮತ್ತು ಸಣ್ಣಮಿಡತೆ ಇವುಗಳನ್ನೆಲ್ಲಾ ತಿನ್ನಬಹುದು.
Such as all the different sorts of locust.
23 ೨೩ ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲವಿಧವಾದ ಕ್ರಿಮಿಕೀಟಗಳು ನಿಮಗೆ ನಿಷಿದ್ಧವಾಗಿವೆ.
But all other winged four-footed things which go on the earth are disgusting to you.
24 ೨೪ “‘ಅದಲ್ಲದೆ ಮುಂದೆ ಹೇಳಿರುವ ಪ್ರಾಣಿಗಳಿಂದ ನಿಮಗೆ ಅಪವಿತ್ರತೆ ಉಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
By these you will be made unclean; anyone touching their dead bodies will be unclean till evening:
25 ೨೫ ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.
Whoever takes away the dead body of one of them is to have his clothing washed, and will be unclean till evening.
26 ೨೬ ಅವು ಯಾವುವೆಂದರೆ, ಯಾವ ಪಶುವಿನ ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗೊರಸಾಗಿಲ್ಲವೋ ಮತ್ತು ಮೆಲಕುಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಯಾರನ್ನು ಅವು ಸೋಂಕುವವೋ ಅವನು ಅಶುದ್ಧನಾಗುವನು.
Every beast, in the horn of whose foot there is not a complete division, and whose food does not come back, is unclean to you: anyone touching one of these will be unclean.
27 ೨೭ ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವ ಎಲ್ಲವುಗಳು ನಿಮಗೆ ಅಶುದ್ಧವಾಗಿರುವವು; ಅವುಗಳ ಹೆಣವನ್ನು ಯಾರು ಮುಟ್ಟುವರೋ ಅವರು ಆ ದಿನದ ಸಾಯಂಕಾಲದ ವರೆಗೂ ಅಶುದ್ಧರಾಗಿರುವರು.
Any four-footed beast which goes on the ball of its foot, is unclean to you: anyone touching the dead body of one of these will be unclean till evening.
28 ೨೮ ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.
Anyone who takes away the dead body of one of these is to have his clothing washed and be unclean till evening.
29 ೨೯ “‘ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ನಿಮಗೆ ಅಶುದ್ಧವಾದವುಗಳು ಯಾವುವೆಂದರೆ ಮುಂಗುಸಿ, ಇಲಿ, ಸಕಲವಿಧವಾದ ಉಡ,
And these are unclean to you among things which go low down on the earth; the weasel and the mouse and the great lizard, and animals of that sort;
30 ೩೦ ಹಾವರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ, ಚಿಟ್ಟಿಲಿ ಇವೇ.
And the ferret and the land crocodile and the lizard and the sand-lizard and the chameleon.
31 ೩೧ ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವನ್ನು ಮುಟ್ಟುವವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
All these are unclean to you: anyone touching them when they are dead will be unclean till evening.
32 ೩೨ ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತುವು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ, ಚರ್ಮವಾಗಲಿ ಅಥವಾ ಗೋಣಿಯಾಗಲಿ ಅದು ಎಂಥದಾದರೂ, ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಆ ಸಾಯಂಕಾಲದ ವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.
The dead body of any of these, falling on anything, will make that thing unclean; if it is any vessel of wood, or clothing, or skin, or bag, whatever it is, if it is used for any purpose, it will have to be put into water, and will be unclean till evening; after that it will be clean.
33 ೩೩ ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.
And if one of them gets into any vessel of earth, whatever is in the vessel will be unclean and the vessel will have to be broken.
34 ೩೪ ಅದರಲ್ಲಿರುವ ತಿನ್ನತಕ್ಕ ಪದಾರ್ಥವೆಲ್ಲಾ ನೀರಿನಿಂದ ನೆನದರೆ ಅಶುದ್ಧವಾಗುವುದು. ಪಾನ ದ್ರವ್ಯವು ಆ ಪಾತ್ರೆಯಲ್ಲಿದ್ದರೆ ಅದೂ ಅಶುದ್ಧವಾಗುವುದು.
Any food in it, and anything on which water from it comes, will be unclean: any drink taken from such a vessel will be unclean.
35 ೩೫ ಆ ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಆ ಸಾಮಾನು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಅಥವಾ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ.
Any part of the dead body of one of these, falling on anything, will make it unclean; if it is an oven or a cooking-pot it will have to be broken: they are unclean and will be unclean to you.
36 ೩೬ ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು.
But at the same time a fountain or a place where water is stored for use will be clean; but anyone touching their dead bodies will be unclean.
37 ೩೭ ಬಿತ್ತಬೇಕಾದ ಬೀಜದ ಮೇಲೆ ಈ ಜಂತುಗಳ ಹೆಣ ಬಿದ್ದರೆ ಆ ಬೀಜವು ಅಶುದ್ಧವಾಗುವುದಿಲ್ಲ.
If any part of the dead body of one of these gets on to any seed for planting, it is clean;
38 ೩೮ ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣ ಬಿದ್ದರೆ ಅದು ನಿಮಗೆ ಅಶುದ್ಧ.
But if water is put on the seed, and any part of the dead body gets on to it, it will be unclean to you.
39 ೩೯ “‘ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
And if any beast which may be used for food comes to a natural death, anyone touching its dead body will be unclean till evening.
40 ೪೦ ಆ ಹೆಣದಲ್ಲಿ ಸ್ವಲ್ಪವಾಗಿ ತಿಂದರೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
And he who makes use of any part of its body for food is to have his clothing washed and be unclean till evening; and anyone taking away its body is to have his clothing washed and be unclean till evening.
41 ೪೧ “‘ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಅಸಹ್ಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.
Everything which goes flat on its body on the earth is disgusting, and is not to be used for food.
42 ೪೨ ಹೊಟ್ಟೆಯಿಂದ ಹರಿದು ಹೋಗುವುದನ್ನು, ಕಾಲಿನಿಂದ ಹರಿದಾಡುವಂಥದನ್ನು, ಬಹಳ ಕಾಲುಳ್ಳದ್ದನ್ನು ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನು ನೀವು ತಿನ್ನಬಾರದು; ಅವು ಅಸಹ್ಯವಾಗಿವೆ.
Whatever goes on its stomach or on four feet or has a great number of feet, even all those going flat on the earth, may not be used for food, for they are disgusting.
43 ೪೩ ನೀವು ಅಂತಹ ಯಾವ ಸಣ್ಣ ಜೀವಿಯನ್ನು ತಿಂದು ನಿಮ್ಮನ್ನು ನೀವೇ ಹೇಸಿಗೆಮಾಡಿಕೊಂಡು ಅಶುದ್ಧರಾಗಬಾರದು.
You are not to make yourselves disgusting with anything which goes about flat on the earth; you may not make yourselves unclean with them, in such a way that you are not holy to me.
44 ೪೪ ಏಕೆಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತೆ ಇರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.
For I am the Lord your God: for this reason, make and keep yourselves holy, for I am holy; you are not to make yourselves unclean with any sort of thing which goes about flat on the earth.
45 ೪೫ ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನು ನಾನೇ; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.
For I am the Lord, who took you out of the land of Egypt, to be your God; so be you holy, for I am holy.
46 ೪೬ “‘ಇದೇ ಪಶು, ಪಕ್ಷಿ, ಜಲಚರ ಮತ್ತು ಕ್ರಿಮಿಕೀಟಗಳ ವಿಷಯವಾದ ನಿಯಮ.
This is the law about beasts and birds and every living thing moving in the waters, and every living thing which goes flat on the earth:
47 ೪೭ ಇದರಿಂದ ಶುದ್ಧ ಹಾಗು ಅಶುದ್ಧಗಳನ್ನು, ತಿನ್ನಬಹುದಾದ ಜೀವಿಗಳು ಮತ್ತು ತಿನ್ನಬಾರದಾದ ಜೀವಿಗಳ ಕುರಿತು ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು.’”
Marking out the unclean from the clean, and the living thing which may be used for food from that which may not.