< ಯಾಜಕಕಾಂಡ 12 >
L'Eternel parla aussi à Moïse, en disant:
2 ೨ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಒಬ್ಬ ಸ್ತ್ರೀ ಗಂಡುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು.
Parle aux enfants d'Israël, et leur dis: Si la femme après avoir conçu, enfante un mâle, elle sera souillée pendant sept jours; elle sera souillée comme au temps de ses mois.
3 ೩ ಎಂಟನೆಯ ದಿನದಲ್ಲಿ ಆ ಮಗುವಿಗೆ ಸುನ್ನತಿಮಾಡಿಸಬೇಕು.
Et au huitième jour on circoncira la chair du prépuce de l'enfant.
4 ೪ ಆ ಮೇಲೆ ಅವಳ ಶುದ್ಧೀಕರಣ ಪೂರ್ಣಗೊಳ್ಳಲು ಇನ್ನು ಮೂವತ್ತಮೂರು ದಿನ ಆಗುವುದು. ಅದು ಪೂರ್ಣಗೊಳ್ಳುವ ತನಕ ಅವಳು ದೇವರ ಪವಿತ್ರ ವಸ್ತುವನ್ನು ಮುಟ್ಟಬಾರದು ಅಥವಾ ದೇವಸ್ಥಾನಕ್ಕೆ ಬರಬಾರದು.
Et elle demeurera trente-trois jours au sang de sa purification, et ne touchera aucune chose sainte, et ne viendra point au Sanctuaire, jusqu'à ce que les jours de sa purification soient accomplis.
5 ೫ ಹೆಣ್ಣುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು ಮತ್ತು ಶುದ್ಧೀಕರಣ ಪೂರ್ಣಗೊಳ್ಳಲು ಅರುವತ್ತಾರು ದಿನಗಳು ಆಗುವುದು.
Que si elle enfante une fille, elle sera souillée deux semaines, comme au temps de ses mois, et elle demeurera soixante-six jours au sang de sa purification.
6 ೬ “‘ಗಂಡುಮಗುವಿಗೆ ಜನ್ಮ ನೀಡಿದರೂ ಅಥವಾ ಹೆಣ್ಣುಮಗುವಿಗೆ ಜನ್ಮ ನೀಡಿದರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
Après que le temps de sa purification sera accompli, soit pour fils, ou pour fille, elle présentera au Sacrificateur un agneau d'un an en holocauste, et un pigeonneau, ou une tourterelle, [en offrande] pour le péché, à l'entrée du Tabernacle d'assignation.
7 ೭ ಅವನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವಳಿಗೆ ರಕ್ತಸ್ರಾವದಿಂದುಂಟಾದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗಾಗಲಿ ಅಥವಾ ಹೆಣ್ಣು ಮಗುವಿಗಾಗಲಿ ಜನ್ಮ ನೀಡಿದವಳಿಗೆ ಇದೇ ನಿಯಮ.
Et le Sacrificateur offrira ces choses devant l'Eternel, et fera propitiation pour elle, et elle sera nettoyée du flux de son sang. Telle est la Loi de celle qui enfante un fils ou une fille.
8 ೮ ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು’” ಎಂಬುದೆ.
Que si elle n'a pas le moyen de trouver un agneau, alors elle prendra deux tourterelles, ou deux pigeonneaux, l'un pour l'holocauste, et l'autre [en offrande] pour le péché, et le Sacrificateur fera propitiation pour elle, et elle sera nettoyée.