< ಯಾಜಕಕಾಂಡ 13 >
1 ೧ ಯೆಹೋವನು ಮೋಶೆ ಮತ್ತು ಆರೋನರಿಗೆ,
১আর সদাপ্রভু মোশি ও হারোণকে বললেন,
2 ೨ “ಒಬ್ಬ ಮನುಷ್ಯನ ಮೈಮೇಲೆ ಬಾವಾಗಲಿ, ಗುಳ್ಳೆಯಾಗಲಿ ಅಥವಾ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕನಾದ ಆರೋನನ ಬಳಿಗೆ ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.
২যদি কোনো মানুষের শরীরের চামড়ায় শোথ কিংবা খোস কিংবা উজ্জ্বল দাগ হয়, আর তা শরীরের গুরুতর চরম রোগের ঘায়ের মতো হয়, তবে সে হারোণ যাজকের কাছে কিংবা তার ছেলে যাজকদের মধ্যে কারো কাছে আনা হবে।
3 ೩ ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ಪರೀಕ್ಷಿಸುವಾಗ ಆ ಮಚ್ಚೆಯಲ್ಲಿರುವ ರೋಮ ಬೆಳ್ಳಗಾಗಿದ್ದರೆ ಮತ್ತು ಆ ಮಚ್ಚೆ ಉಳಿದ ಚರ್ಮಕ್ಕಿಂತ ಆಳವಾಗಿದ್ದರೆ ಅದು ಕುಷ್ಠರೋಗ. ಯಾಜಕನು ಅದನ್ನು ಪರೀಕ್ಷಿಸಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
৩পরে যাজক তার শরীরের চামড়ায় অবস্থিত ঘা দেখবে; যদি ঘায়ের লোম সাদা হয়ে থাকে এবং ঘা যদি দেখতে শরীরের চামড়ার থেকে নিম্ন মনে হয়, তবে তা কুষ্ঠরোগের ঘা, তা দেখে যাজক তাকে অশুচি বলবে।
4 ೪ ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ಉಳಿದ ಚರ್ಮಕ್ಕಿಂತ ಆಳವಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗದಿದ್ದರೆ ಯಾಜಕನು ಆ ಮಚ್ಚೆಯಿದ್ದವನನ್ನು ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇರಿಸಬೇಕು.
৪আর উজ্জ্বল দাগ যদি তার শরীরের চামড়া সাদা হয়, কিন্তু দেখতে চামড়ার থেকে নিম্ন না হয় এবং তার লোম সাদা না হয়ে থাকে, তবে যার ঘা হয়েছে, যাজক তাকে সাত দিন আলাদা করে রাখবে।
5 ೫ ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ಕಾಣಿಸಿದರೆ ಯಾಜಕನು ಇನ್ನು ಏಳು ದಿನಗಳ ವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು.
৫পরে সপ্তম দিনের যাজক তাকে দেখবে; আর দেখ, যদি তার দৃষ্টিতে ঘা সেরকম থাকে, চামড়ায় ঘা ছড়িয়ে না থাকে, তবে যাজক তাকে আরও সাত দিন আলাদা করে রাখবে।
6 ೬ ಆ ಏಳು ದಿನಗಳಾದ ಮೇಲೆ ಯಾಜಕನು ಪುನಃ ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಬರೀ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.
৬আর সপ্তম দিনের যাজক তাকে আবার দেখবে; আর দেখ, যদি ঘা ভালো হয়ে থাকে ও চামড়ায় ছড়িয়ে না থাকে, তবে যাজক তাকে শুচি বলবে; এটি ফুসকুড়ি; পরে সে নিজের পোশাকে ধুয়ে শুচি হবে।
7 ೭ ಆದರೆ ಅವನು ತನ್ನ ಶುದ್ಧಿಯ ವಿಷಯದಲ್ಲಿ ತನ್ನನ್ನು ಯಾಜಕನಿಗೆ ತೋರಿಸಿಕೊಂಡನಂತರ ಆ ಗುಳ್ಳೆ ದೇಹದ ಚರ್ಮದಲ್ಲಿ ಹರಡಿಕೊಂಡರೆ ಅವನು ಪುನಃ ಯಾಜಕನಿಗೆ ತೋರಿಸಿಕೊಳ್ಳಬೇಕು.
৭কিন্তু তার পরিষ্কারের জন্যে যাজককে দেখান হলে পর যদি তার ফুসকুড়ি চামড়ায় ছড়িয়ে থাকে, তবে আবার যাজককে দেখাতে হবে।
8 ೮ ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
৮তাতে যাজক দেখবে, আর দেখ, যদি তার ফুসকুড়ি চামড়ায় ছড়িয়ে থাকে, তবে যাজক তাকে অশুচি বলবে; তা কুষ্ঠরোগ।
9 ೯ “ಕುಷ್ಠರೋಗದ ಲಕ್ಷಣಗಳು ಯಾವನಲ್ಲಾದರೂ ಕಾಣಿಸಿದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.
৯কারোর কুষ্ঠরোগের ঘা হলে সে যাজকের কাছে আসবে।
10 ೧೦ ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು.
১০পরে যাজক দেখবে; যদি তার চামড়ায় সাদা শোথ থাকে এবং তার লোম সাদা হয়ে থাকে ও শোথে কাঁচা মাংস থাকে,
11 ೧೧ ಅವನು ಅಶುದ್ಧನಾದುದರಿಂದ ಯಾಜಕನು ಅವನನ್ನು ಪ್ರತ್ಯೇಕಿಸದೆ ಅಶುದ್ಧನೆಂದು ನಿರ್ಣಯಿಸಬೇಕು.
১১তবে তা তার শরীরের চামড়ার পুরানো কুষ্ঠ, আর যাজক তাকে অশুচি বলবে; আলাদা করবে না; কারণ সে অশুচি।
12 ೧೨ “ಆದರೆ ಒಬ್ಬನ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ,
১২আর চামড়ার সর্বত্র কুষ্ঠরোগ ছড়িয়ে গেলে যদি যাজকের দৃষ্টিতে ঘা বিশিষ্ট ব্যক্তির মাথা থেকে পা পর্যন্ত সমস্ত চামড়া কুষ্ঠরোগে আচ্ছন্ন হয়ে থাকে,
13 ೧೩ ಯಾಜಕನು ಪರೀಕ್ಷಿಸುವಾಗ ಆ ತೊನ್ನು ದೇಹದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರೆ, ಅಂಥವನನ್ನು ಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅವನ ಚರ್ಮವೆಲ್ಲಾ ಬೆಳ್ಳಗಾಗಿ ಹೋದುದರಿಂದ ಅವನು ಶುದ್ಧನು.
১৩তবে যাজক তা দেখবে; আর দেখ, যদি তার সমস্ত শরীর কুষ্ঠরোগে আচ্ছন্ন হয়ে থাকে, তবে সে, যার ঘা হয়েছে, তাকে শুচি বলবে; তার সর্বাঙ্গই শুল্ক হল, সে শুচী।
14 ೧೪ ಆದರೆ ಅಂಥವನ ದೇಹದಲ್ಲಿ ಎಲ್ಲಿಯಾದರೂ ಮಾಂಸ ಕಂಡುಬಂದರೆ ಅವನು ಅಶುದ್ಧನಾಗುವನು.
১৪কিন্তু যখন তার শরীরে কাঁচা মাংস প্রকাশ পায়, তখন সে অশুচি হবে।
15 ೧೫ ಯಾಜಕನು ಆ ಮಾಂಸವನ್ನು ನೋಡಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಂತಹ ಮಾಂಸವು ಅಶುದ್ಧವೇ; ಅದು ಕುಷ್ಠವೇ.
১৫যাজক তার কাঁচা মাংস দেখে তাকে অশুচি বলবে; সেই কাঁচা মাংস অশুচি; তা কুষ্ঠ।
16 ೧೬ ಆದರೆ ಆ ಮಾಂಸವು ಅದೇ ಪ್ರಕಾರವಾಗಿ ಇರದೆ ಪುನಃ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.
১৬আর সে কাঁচা মাংস যদি আবার সাদা হয়, তবে সে যাজকের কাছে যাবে, আর যাজক তাকে দেখবে;
17 ೧೭ ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಬೆಳ್ಳಗಾಗಿಹೋಗಿದ್ದರೆ ಆ ಮನುಷ್ಯನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ಶುದ್ಧನೇ.
১৭আর দেখ, যদি তার ঘা সাদা হয়ে থাকে, তবে যাজক, যার ঘা হয়েছে, তাকে, শুচি বলবে; সে শুচী।
18 ೧೮ “ಒಬ್ಬನ ದೇಹದ ಚರ್ಮದಲ್ಲಿ ಹುಣ್ಣು ಆಗಿದ್ದು ಅದು ವಾಸಿಯಾದ ಮೇಲೆ,
১৮আর শরীরের চামড়ায় ঘা হয়ে ভাল হলে পর,
19 ೧೯ ಅದು ಇದ್ದ ಸ್ಥಳದಲ್ಲಿ ಬಿಳಿ ಬಾವಾಗಲಿ ಅಥವಾ ಕೆಂಪು ಬಿಳುಪು ಮಿಶ್ರವಾಗಿ ಹೊಳೆಯುವ ಕಲೆಯಾಗಲಿ ಉಂಟಾದರೆ ಅವನು ತನ್ನನ್ನು ಯಾಜಕನಿಗೆ ತೋರಿಸಿಕೊಳ್ಳಬೇಕು.
১৯যদি সেই ঘায়ের জায়গায় সাদা শোথ কিংবা সাদা ও ঈষৎ রক্তবর্ণ চিক্কণ চিহ্ন হয়, তবে যাজকের কাছে তা দেখাতে হবে।
20 ೨೦ ಯಾಜಕನು ಪರೀಕ್ಷಿಸುವಾಗ ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿ ಕಂಡರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠ ಹುಟ್ಟಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.
২০আর যাজক তা দেখবে, আর দেখ, যদি তার দৃষ্টিতে তা চামড়ার থেকে নিম্ন বোধ হয় ও তার লোম সাদা হয়ে থাকে, তবে যাজক তাকে অশুচি বলবে; তা স্ফোটকে উৎপন্ন কুষ্ঠরোগের ঘা।
21 ೨೧ ಆದರೆ ಯಾಜಕನು ಪರೀಕ್ಷಿಸುವಾಗ ಅದರಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿರದೆ ಮೊಬ್ಬಾಗಿದ್ದರೆ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.
২১কিন্তু যদি যাজক তাতে সাদা লোম না দেখে এবং তা চামড়ার থেকে নিম্ন বোধ না হয় ও মলিন হয়, তবে যাজক তাকে সাত দিন আবদ্ধ করে রাখবে।
22 ೨೨ ತರುವಾಯ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು; ಅದು ಕುಷ್ಠರೋಗವೇ.
২২পরে তা যদি চামড়ায় ছড়িয়ে যায়, তবে যাজক তাকে অশুচি বলবে; ওটা ঘা।
23 ೨೩ ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳಿದುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.
২৩কিন্তু যদি চিক্কণ চিহ্ন নিজের জায়গায় ও না বাড়ে, তবে তা স্ফোটকের দাগ; যাজক তাকে শুচি বলবে।
24 ೨೪ “ಒಬ್ಬನ ದೇಹದ ಚರ್ಮದಲ್ಲಿ ಬೆಂಕಿಯಿಂದುಂಟಾದ ಬೊಬ್ಬೆ ಇರಲಾಗಿ ಆ ಬೊಬ್ಬೆಯ ಸ್ಥಳವು ಹೊಳೆಯುವ ಕಲೆಯಾಗಿ ಬೆಳ್ಳಗಾಗಿಯಾಗಲಿ ಕೆಂಪು ಬಿಳುಪು ಮಿಶ್ರವಾಗಿ ಇದ್ದರೆ ಯಾಜಕನು ಅದನ್ನು ನೋಡಬೇಕು.
২৪আর যদি শরীরের চামড়া আগুনে পুড়ে যায় ও সেই পুড়ে যাওয়া জায়গায় ঈষৎ লালচে সাদা কিংবা কেবল সাদা দাগ হয়, তবে যাজক তা দেখবে;
25 ೨೫ ಅವನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಕಲೆಯು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
২৫আর দেখ, দাগে অবস্থিত লোম যদি সাদা হয় ও দেখতে চামড়ার থেকে নিম্ন বোধ হয়, তবে তা আগুনে পুড়ে উৎপন্ন কুষ্ঠরোগ; অতএব যাজক তাকে অশুচি বলবে, তা কুষ্ঠরোগের ঘা।
26 ೨೬ ಆದರೆ ಯಾಜಕನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆ, ಮೊಬ್ಬಾಗಿ ಹೋಗಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.
২৬কিন্তু যদি যাজক দেখে, দাগে অবস্থিত লোম সাদা নয় ও চিহ্ন চামড়ার থেকে নিম্ন নয়, কিন্তু মলিন, তবে যাজক তাকে সাত দিন আবদ্ধ করে রাখবে।
27 ೨೭ ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠರೋಗವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
২৭পরে সপ্তম দিনের যাজক তাকে দেখবে; যদি চামড়ায় ঐ রোগ ছড়িয়ে থাকে, তবে যাজক তাকে অশুচি বলবে; তা কুষ্ঠরোগের ঘা।
28 ೨೮ ಆ ಹೊಳೆಯುವ ಕಲೆಯು ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಿನಂತೆಯೇ ಇದ್ದು ಮೊಬ್ಬಾಗಿಹೋಗಿದ್ದರೆ ಅದು ಬೆಂಕಿಸುಟ್ಟ ಬೊಬ್ಬೆಯೆಂದು ತಿಳಿದು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬೆಂಕಿಯಿಂದ ಸುಟ್ಟ ಕಲೆಯೇ ಹೊರತು ಮತ್ತೇನೂ ಅಲ್ಲ.
২৮আর যদি দাগ নিজের জায়গায় থাকে, চামড়ায় বৃদ্ধি না পায়, কিন্তু মলিন হয়, তবে তা পুড়ে যাওয়া জায়গার শোথ; যাজক তাকে শুচি বলবে, কারণ তা আগুনে পোড়া ক্ষতের চিহ্ন।
29 ೨೯ “ಹೆಂಗಸಿನ ತಲೆಯಲ್ಲಿ ಆಗಲಿ, ಗಂಡಸಿನ ತಲೆಯಲ್ಲಿ ಆಗಲಿ ಅಥವಾ ಗಡ್ಡದ ಮೇಲೆ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಬೇಕು.
২৯আর পুরুষের কিংবা স্ত্রীর মাথায় বা দাড়িতে ঘা হলে যাজক সেই ঘা দেখবে;
30 ೩೦ ಆಗ ಅದು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಅಥವಾ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವ ಲಕ್ಷಣವಿದ್ದರೆ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
৩০আর দেখ যদি তা দেখতে চামড়ার থেকে নিম্ন বোধ হয় ও হলুদ রঙের সূক্ষ্ম লোম থাকে, তবে যাজক তাকে অশুচি বলবে; ওটা ছুলি, ওটা মাথার বা দাড়ির কুষ্ঠ।
31 ೩೧ ಯಾಜಕನು ಆ ಗಾಯವನ್ನು ನೋಡುವಾಗ ಅದು ಬೇರೆ ಚರ್ಮಕ್ಕಿಂತ ಆಳವಾಗಿ ಕಾಣದೆ ಹೋದಾಗ್ಯೂ, ಅದು ಇರುವ ಭಾಗದಲ್ಲಿ ಕಪ್ಪು ಕೂದಲು ಇಲ್ಲದಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.
৩১আর যাজক যদি ছুলির ঘা দেখে, আর দেখ, তার দৃষ্টিতে তা চামড়ার থেকে নিম্ন না হয় ও তাতে কালো লোম নাই, তবে যাজক সেই ছুলির ঘা বিশিষ্ট ব্যক্তিকে সাত দিন আবদ্ধ করে রাখবে।
32 ೩೨ ಏಳನೆಯ ದಿನದಲ್ಲಿ ಯಾಜಕನು ಪರೀಕ್ಷಿಸುವಾಗ ಆ ಗಾಯ ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಭಾಗದಲ್ಲಿ ಹಳದಿ ಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆಹೋದರೆ,
৩২পরে সপ্তম দিনের যাজক ঘা দেখবে; আর দেখ, যদি সেই ছুলি বেড়ে না থাকে ও তাতে হলুদ রঙের লোম না হয়ে থাকে এবং দেখতে চামড়ার থেকে ছুলি নিম্ন বোধ না হয়,
33 ೩೩ ಅವನು ಕ್ಷೌರಮಾಡಿಸಿಕೊಳ್ಳಬೇಕು. ಆ ಗಾಯ ಇರುವ ಭಾಗವನ್ನು ಮಾತ್ರ ಕ್ಷೌರಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನು ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು.
৩৩তবে সে ন্যাড়া হবে, কিন্তু ছুলির জায়গা ন্যাড়া করা যাবে না; পরে যাজক ঐ ছুলি বিশিষ্ট ব্যক্তিকে আর সাত দিন আবদ্ধ করে রাখবে।
34 ೩೪ ಏಳನೆಯ ದಿನದಲ್ಲಿ ಯಾಜಕನು ಪುನಃ ಆ ಗಾಯವನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ಉಳಿದ ಚರ್ಮಕ್ಕಿಂತ ಆಳವಾಗಿ ತೋರದೆ ಇದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು.
৩৪আর সাত দিনের যাজক সেই ছুলি দেখবে; আর দেখ, যদি সেই ছুলি চামড়ায় বেড়ে না থাকে ও দেখতে চামড়ার থেকে নিম্ন না হয়ে থাকে, তবে যাজক তাকে শুচি বলবে; পরে সে নিজের পোশাক ধুয়ে শুচি হবে।
35 ೩೫ ಆದರೆ ಅವನು ಶುದ್ಧನೆಂದು ನಿರ್ಣಯಿಸಲ್ಪಟ್ಟ ಮೇಲೆ ಆ ಗಾಯ ಚರ್ಮದಲ್ಲಿ ಹರಡಿಕೊಂಡರೆ,
৩৫আর শুচি হলে পর যদি তার চামড়ায় সেই ছুলি ছড়িয়ে যায়, তবে যাজক তাকে দেখবে;
36 ೩೬ ಯಾಜಕನು ಅವನನ್ನು ಪರೀಕ್ಷಿಸಬೇಕು; ಆದರೆ ಹಳದಿಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ; ಅವನು ಅಶುದ್ಧನೇ.
৩৬আর দেখ, যদি তার চামড়ায় ছুলি বেড়ে থাকে, তবে যাজক হলুদ রঙের লোমের খোঁজ করবে না; সে অশুচি।
37 ೩೭ ಆ ಗಾಯ ಮೊದಲು ಇದ್ದಂತೆಯೇ ಇದ್ದು ಅದರಲ್ಲಿ ಕಪ್ಪು ಕೂದಲು ಹುಟ್ಟಿದ್ದರೆ ಅದು ವಾಸಿಯಾಯಿತು. ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.
৩৭কিন্তু তার দৃষ্টিতে যদি ছুলি না বেড়ে থাকে ও তাতে কালো লোম উঠে থাকে, তবে সেই ছুলির উপশম হয়েছে, সে শুচী; যাজক তাকে শুচি বলবে।
38 ೩೮ “ಪುರುಷನಿಗಾಗಲಿ ಅಥವಾ ಸ್ತ್ರೀಗಾಗಲಿ ಚರ್ಮದಲ್ಲಿ ಹೊಳೆಯುವ ಬಿಳುಪಾದ ಕಲೆಗಳು ಅಲ್ಲಲ್ಲಿ ಹುಟ್ಟಿದ್ದರೆ ಯಾಜಕನು ಅವುಗಳನ್ನು ಪರೀಕ್ಷಿಸಬೇಕು.
৩৮আর যদি কোনো পুরুষের কিংবা স্ত্রীর শরীরের চামড়ার জায়গায় দাগ অর্থাৎ সাদা দাগ হয়, তবে যাজক তা দেখবে;
39 ೩೯ ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು; ಅವನು ಶುದ್ಧನು.
৩৯আর দেখ, যদি তার চামড়া থেকে বের হওয়া দাগ মলিন সাদা হয়, তবে তা চামড়ায় উৎপন্ন নির্দোষ স্ফোটক; সে শুচী।
40 ೪೦ “ಯಾವನ ತಲೆಯ ಕೂದಲು ಉದುರಿ ಹೋಗಿ ಅವನು ಬೋಳುತಲೆಯವನಾದರೂ ಅವನು ಶುದ್ಧನೇ.
৪০আর যে মানুষের চুল মাথা থেকে ঝরে পড়ে, সে নেড়া, সে শুচী।
41 ೪೧ ಮುಂದಲೆಯ ಕೂದಲು ಉದುರಿದರೆ ಅವನು ಪಟ್ಟೆತಲೆಯವನಾದರೂ ಶುದ್ಧನೇ.
৪১আর যার চুল মাথার শেষ থেকে ঝরে পড়ে, সে কপালে নেড়া, সে শুচী।
42 ೪೨ ಆದರೆ ಬೋಳುತಲೆಯಲ್ಲಾಗಲಿ ಅಥವಾ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪು ಮಿಶ್ರವಾದ ಮಚ್ಚೆ ಹುಟ್ಟಿದರೆ ಅದು ಕುಷ್ಠವೇ.
৪২কিন্তু যদি নেড়া মাথায় কি নেড়া কপালে ঈষৎ রক্তমিশ্রিত সাদা ঘা হয়, তবে তা তার নেড়া মাথায় কিংবা নেড়া কপালে বের হওয়া কুষ্ঠ।
43 ೪೩ ಯಾಜಕನು ಅವನನ್ನು ಪರೀಕ್ಷಿಸಬೇಕು. ಆಗ ಅದರಿಂದುಂಟಾದ ಬಾವು ಕೆಂಪು ಬಿಳುಪು ಮಿಶ್ರವಾಗಿ ಚರ್ಮದಲ್ಲಿನ ಕುಷ್ಠದಂತೆ ತೋರಿದರೆ,
৪৩যাজক তাকে দেখবে; আর দেখ, যদি শরীরের চামড়ায় অবস্থিত কুষ্ঠের মতো নেড়া মাথায় কিংবা নেড়া কপালে ঈষৎ রক্তমিশ্রিত সাদা ঘা হয়ে থাকে, তবে সে কুষ্ঠী, সে অশুচি;
44 ೪೪ ಅವನು ಕುಷ್ಠರೋಗಿ ಮತ್ತು ಅಶುದ್ಧನು. ಅವನ ತಲೆಯ ಮೇಲೆ ಕುಷ್ಠದ ಗುರುತು ಕಾಣಿಸಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.
৪৪যাজক তাকে অবশ্য অশুচি বলবে; তার তার মাথায় ঘায়ের কারণে।
45 ೪೫ “ಯಾರಲ್ಲಿ ಕುಷ್ಠದ ಗುರುತು ಕಾಣಿಸಿತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯನ್ನು ಕೆದರಿಕೊಂಡು, ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು ‘ನಾನು ಅಶುದ್ಧನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು.
৪৫আর যে কুষ্ঠীর ঘা হয়েছে, তার পোশাক চেরা যাবে ও তার মাথা চুল ছাড়া থাকবে ও সে নিজের ঠোঁট পোশাক দিয়ে ঢেকে “অশুচি, অশুচি” এই শব্দ করবে।
46 ೪೬ ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.
৪৬যত দিন তার গায়ে ঘা থাকবে, তত দিন সে অশুচি থাকবে; সে অশুচি; সে একা বাস করবে, শিবিরের বাইরে তার বাসস্থান হবে।
47 ೪೭ “ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡು ಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ ಅಥವಾ ನಾರಿನ ಬಟ್ಟೆಯಾಗಲಿ,
৪৭আর লোমের পোশাকে কিংবা মসীনার পোশাকে যদি কুষ্ঠরোগের কলঙ্ক হয়,
48 ೪೮ ನಾರಿನ ಅಥವಾ ಉಣ್ಣೆಯ ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಇಲ್ಲವೆ ತೊಗಲಿನಲ್ಲಾಗಲಿ, ತೊಗಲಿನಿಂದ ಮಾಡಲ್ಪಟ್ಟ ವಸ್ತುವಿನಲ್ಲಾಗಲಿ,
৪৮লোমের কিম্বা মসীনার বোনাতে বা সংযুক্ত করাতে যদি হয়, কিংবা চামড়া কি চামড়ার তৈরী কোনো জিনিসে যদি হয়
49 ೪೯ ಆ ಬಟ್ಟೆ, ತೊಗಲು, ಹಾಸು, ಹೆಣಿಗೆ, ತೊಗಲಿನ ಸಾಮಾನುಗಳಲ್ಲಿ ಹಸುರಾಗಿ ಇಲ್ಲವೆ ಕೆಂಪಾಗಿ ಮಚ್ಚೆಕಾಣಿಸಿದರೆ ಅದು ಕುಷ್ಠದ ಗುರುತು; ಅದನ್ನು ಯಾಜಕನಿಗೆ ತೋರಿಸಬೇಕು.
৪৯এবং পোশাকে কিংবা চামড়ায় বোনাতে বা সংযুক্ত করাতে কিম্বা চামড়ার তৈরী কোনো জিনিসে যদি ঈষৎ শ্যামবর্ণ কিংবা লাল রঙয়ের কলঙ্ক হয়, তবে তা কুষ্ঠরোগের কলঙ্ক; তা যাজককে দেখাতে হবে;
50 ೫೦ ಯಾಜಕನು ಅದನ್ನು ಪರೀಕ್ಷಿಸಿ ನೋಡಿ ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇಡಿಸಬೇಕು.
৫০পরে যাজক ঐ কলঙ্ক দেখে কলঙ্কযুক্ত জিনিস সাত দিন আবদ্ধ করে রাখবে।
51 ೫೧ ಏಳನೆಯ ದಿನದಲ್ಲಿ ಅವನು ಅದನ್ನು ಪರೀಕ್ಷಿಸುವಾಗ ಆ ಬಟ್ಟೆಯ ಹಾಸಿನಲ್ಲಾಗಲಿ ಅಥವಾ ಹೆಣಿಗೆಯಲ್ಲಾಗಲಿ ಇಲ್ಲವೆ ಯಾವುದಾದರೂ ಒಂದು ಕೆಲಸಕ್ಕೆ ಉಪಯೋಗವಾಗಿರುವ ಆ ತೊಗಲಿನಲ್ಲಿ ಆ ಮಚ್ಚೆ ಹರಡಿಕೊಂಡಿದ್ದರೆ ಅದು ಪ್ರಾಣಕ್ಕೆ ಅಪಾಯಕರವಾದ ಕುಷ್ಠವೇ, ಆ ವಸ್ತುವು ಅಶುದ್ಧ.
৫১পরে সপ্তম দিনের যাজক ঐ কলঙ্ক দেখবে, যদি পোশাকে কিংবা বোনাতে বা সংযুক্ত করাতে কিংবা চামড়া কিংবা চামড়ার তৈরী জিনিসে সেই কলঙ্ক বেড়ে থাকে, তবে তা সংহারক কুষ্ঠ; তা অশুচি।
52 ೫೨ ಆ ವಸ್ತುವು ಬಟ್ಟೆಯಾದರೂ, ಹಾಸಾದರೂ, ಹೊಕ್ಕಾದರೂ, ಉಣ್ಣೆಯದಾದರೂ, ನಾರಿನದಾದರೂ ಅಥವಾ ತೊಗಲಿನದಾದರೂ ಅದರಲ್ಲಿ ಪ್ರಾಣಕ್ಕೆ ಅಪಾಯಕರವಾದ ಕುಷ್ಠವಿರುವುದರಿಂದ ಅದನ್ನು ಬೆಂಕಿಯಿಂದ ಸುಡಿಸಿಬಿಡಬೇಕು.
৫২অতএব পোশাক কিংবা লোমকৃত কি মসীনাকৃত বোনা বা সংযুক্ত করা কিংবা চামড়ার তৈরী জিনিস, যে কিছুতে সেই কলঙ্ক হয়, তা সে পুড়িয়ে দেবে; কারণ তা ক্ষতিকর কুষ্ঠ, তা আগুনে পুড়িয়ে দিতে হবে।
53 ೫೩ ಆದರೆ ಯಾಜಕನು ಪರೀಕ್ಷಿಸುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ಹಾಸು, ಹೆಣಿಗೆ, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ,
৫৩কিন্তু যাজক দেখবে; আর দেখ, যদি সেই কলঙ্ক পোশাকে কিংবা বোনা বা সংযুক্ত করাতে কিংবা চামড়ার তৈরী জিনিসে বেড়ে না ওঠে,
54 ೫೪ ಅದನ್ನು ನೀರಿನಿಂದ ತೊಳೆಯಬೇಕೆಂದು ಯಾಜಕನು ಅಪ್ಪಣೆಕೊಟ್ಟು ಇನ್ನು ಏಳು ದಿನಗಳ ತನಕ ಅದನ್ನು ಪ್ರತ್ಯೇಕವಾಗಿ ಇಡಿಸಬೇಕು.
৫৪তবে যাজক সেই কলঙ্কবিশিষ্ট জিনিস ধুতে আদেশ দেবে এবং আর সাত দিন তা আবদ্ধ করে রাখবে।
55 ೫೫ ಆ ಮಚ್ಚೆ ಇದ್ದ ವಸ್ತುಗಳನ್ನು ತೊಳೆಸಿದ ಮೇಲೆ ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ಆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲ್ಭಾಗದಿಂದಾಗಲಿ ಅಥವಾ ಕೆಳಭಾಗದಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದ್ದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
৫৫ধোয়া হলে পর যাজক সে কলঙ্ক দেখবে; আর দেখ, সেই কলঙ্ক যদি অন্য রঙের না হয়ে থাকে ও সে কলঙ্ক যদি বেড়ে না থাকে, তবে তা অশুচি, তুমি তা আগুনে পুড়িয়ে দেবে; ওটা ভিতরে কিংবা বাইরে উৎপন্ন ক্ষত।
56 ೫೬ ಆದರೆ ತೊಳೆದ ಬಟ್ಟೆಯನ್ನು ಯಾಜಕನು ಪರೀಕ್ಷಿಸುವಾಗ ಅದರಲ್ಲಿದ್ದ ಮಚ್ಚೆ ಮೊಬ್ಬಾಗಿಹೋಗಿದ್ದರೆ ಅವನು ಆ ಮಚ್ಚೆ ಇರುವ ಭಾಗವನ್ನು ಆ ಬಟ್ಟೆಯಿಂದಾಗಲಿ, ತೊಗಲಿನಿಂದಾಗಲಿ, ಹಾಸಿನಿಂದಾಗಲಿ, ಹೆಣಿಗೆಯಿಂದಾಗಲಿ ಕತ್ತರಿಸಬೇಕು.
৫৬কিন্তু যদি যাজক দেখে, আর দেখ, ধোয়ার পরে যাজকের দৃষ্টিতে যদি সেই কলঙ্ক মলিন হয়, তবে সে ঐ পোশাক থেকে কিংবা চামড়া থেকে কিংবা বোনা বা সংযুক্ত করা থেকে তা ছিঁড়ে ফেলবে।
57 ೫೭ ಆ ಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡು ಬಂದರೆ ಕುಷ್ಠರೋಗವು ಇನ್ನು ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು.
৫৭তাছাড়া যদি সেই পোশাকে কিংবা বোনা বা সংযুক্ত করাতে কিংবা চামড়ার তৈরী কোনো জিনিসে তা আবার দেখা যায়, তবে তা ব্যাপক কুষ্ঠ; যাতে সেই কলঙ্ক থাকে, তা তুমি আগুনে পুড়িয়ে দেবে।
58 ೫೮ ಆ ಬಟ್ಟೆಯನ್ನಾಗಲಿ, ಹಾಸನ್ನಾಗಲಿ, ಹೆಣಿಗೆಯನ್ನಾಗಲಿ ಅಥವಾ ತೊಗಲಿನ ಸಾಮಾನನ್ನಾಗಲಿ ತೊಳೆದನಂತರ ಆ ಮಚ್ಚೆ ಕಾಣದೆಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವುದು.
৫৮আর যে পোশাক কিংবা পোশাকের বোনা বা সংযুক্ত করা কিংবা চামড়ার যে কোনো জিনিসে ধোবে, তা থেকে যদি সেই কলঙ্ক দূর হয়, তবে দ্বিতীয় বার ধোবে; তাতে তা শুচি হবে।
59 ೫೯ “ಉಣ್ಣೇ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡುಬಂದ ಕುಷ್ಠರೋಗದ ಗುರುತಿನ ವಿಷಯವಾದ ನಿಯಮ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಥವಾ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು” ಎಂದು ಹೇಳಿದನು.
৫৯লোমের কিংবা মসীনাকৃত পোশাকের কিংবা বোনা বা সংযুক্ত করার কিংবা চামড়ার তৈরী কোনো পাত্রের শুচি বা অশুচির বিষয়ে কুষ্ঠ জন্য কলঙ্কের এই ব্যবস্থা।