< ಯಾಜಕಕಾಂಡ 14 >
1 ೧ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
耶和華曉諭摩西說:「
2 ೨ “ಕುಷ್ಠರೋಗಿಯು ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡೆಸಬೇಕಾದ ಕ್ರಮ ಹೇಗೆಂದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು.
長大痲瘋得潔淨的日子,其例乃是這樣:要帶他去見祭司;
3 ೩ ಯಾಜಕನು ಪಾಳೆಯದ ಹೊರಗೆ ಹೋಗಿ ಅವನಲ್ಲಿರುವ ಕುಷ್ಠವು ವಾಸಿಯಾಗಿದೆಯೋ ಎಂದು ಪರೀಕ್ಷಿಸಬೇಕು.
祭司要出到營外察看,若見他的大痲瘋痊癒了,
4 ೪ ವಾಸಿಯಾಗಿದೆ ಎಂದು ಕಂಡು ಬಂದರೆ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಸಜೀವವಾದ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.
就要吩咐人為那求潔淨的拿兩隻潔淨的活鳥和香柏木、朱紅色線,並牛膝草來。
5 ೫ ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಬೇಕು.
祭司要吩咐用瓦器盛活水,把一隻鳥宰在上面。
6 ೬ “ಅವನು ಮತ್ತೊಂದು ಪಕ್ಷಿಯನ್ನು, ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು.
至於那隻活鳥,祭司要把牠和香柏木、朱紅色線並牛膝草一同蘸於宰在活水上的鳥血中,
7 ೭ ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.
用以在那長大痲瘋求潔淨的人身上灑七次,就定他為潔淨,又把活鳥放在田野裏。
8 ೮ ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.
求潔淨的人當洗衣服,剃去毛髮,用水洗澡,就潔淨了;然後可以進營,只是要在自己的帳棚外居住七天。
9 ೯ ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.
第七天,再把頭上所有的頭髮與鬍鬚、眉毛,並全身的毛,都剃了;又要洗衣服,用水洗身,就潔淨了。
10 ೧೦ “ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.
「第八天,他要取兩隻沒有殘疾的公羊羔和一隻沒有殘疾、一歲的母羊羔,又要把調油的細麵伊法十分之三為素祭,並油一羅革,一同取來。
11 ೧೧ ಶುದ್ಧಿ ಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.
行潔淨之禮的祭司要將那求潔淨的人和這些東西安置在會幕門口、耶和華面前。
12 ೧೨ ಯಾಜಕನು ಆ ಟಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.
祭司要取一隻公羊羔獻為贖愆祭,和那一羅革油一同作搖祭,在耶和華面前搖一搖;
13 ೧೩ ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತ ಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ.
把公羊羔宰於聖地,就是宰贖罪祭牲和燔祭牲之地。贖愆祭要歸祭司,與贖罪祭一樣,是至聖的。
14 ೧೪ ಆಗ ಯಾಜಕನು ಆ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
祭司要取些贖愆祭牲的血,抹在求潔淨人的右耳垂上和右手的大拇指上,並右腳的大拇指上。
15 ೧೫ ಆಗ ಯಾಜಕನು ಆ ಒಂದು ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,
祭司要從那一羅革油中取些倒在自己的左手掌裏,
16 ೧೬ ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ, ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು.
把右手的一個指頭蘸在左手的油裏,在耶和華面前用指頭彈七次。
17 ೧೭ ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
將手裏所剩的油抹在那求潔淨人的右耳垂上和右手的大拇指上,並右腳的大拇指上,就是抹在贖愆祭牲的血上。
18 ೧೮ ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.
祭司手裏所剩的油要抹在那求潔淨人的頭上,在耶和華面前為他贖罪。
19 ೧೯ “ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆ ಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ಸರ್ವಾಂಗಹೋಮಕ್ಕಾಗಿ ವಧಿಸಬೇಕು.
祭司要獻贖罪祭,為那本不潔淨、求潔淨的人贖罪;然後要宰燔祭牲,
20 ೨೦ ಅವನು ಆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು.
把燔祭和素祭獻在壇上,為他贖罪,他就潔淨了。
21 ೨೧ “ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು.
「他若貧窮不能預備夠數,就要取一隻公羊羔作贖愆祭,可以搖一搖,為他贖罪;也要把調油的細麵伊法十分之一為素祭,和油一羅革一同取來;
22 ೨೨ ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.
又照他的力量取兩隻斑鳩或是兩隻雛鴿,一隻作贖罪祭,一隻作燔祭。
23 ೨೩ ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
第八天,要為潔淨,把這些帶到會幕門口、耶和華面前,交給祭司。
24 ೨೪ ಯಾಜಕನು ಪ್ರಾಯಶ್ಚಿತ್ತಯಜ್ಞದ ಕುರಿಯನ್ನು, ಒಂದು ಸೇರು ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
祭司要把贖愆祭的羊羔和那一羅革油一同作搖祭,在耶和華面前搖一搖。
25 ೨೫ ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.
要宰了贖愆祭的羊羔,取些贖愆祭牲的血,抹在那求潔淨人的右耳垂上和右手的大拇指上,並右腳的大拇指上。
26 ೨೬ ಅನಂತರ ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,
祭司要把些油倒在自己的左手掌裏,
27 ೨೭ ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಯೆಹೋವನ ಸನ್ನಿಧಿಯಲ್ಲಿ ಚಿಮುಕಿಸಬೇಕು.
把左手裏的油,在耶和華面前,用右手的一個指頭彈七次,
28 ೨೮ ಆಮೇಲೆ ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
又把手裏的油抹些在那求潔淨人的右耳垂上和右手的大拇指上,並右腳的大拇指上,就是抹贖愆祭之血的原處。
29 ೨೯ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.
祭司手裏所剩的油要抹在那求潔淨人的頭上,在耶和華面前為他贖罪。
30 ೩೦ ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳನ್ನಾಗಲಿ
那人又要照他的力量獻上一隻斑鳩或是一隻雛鴿,
31 ೩೧ ಪಾರಿವಾಳದ ಮರಿಗಳನ್ನಾಗಲಿ ದೋಷಪರಿಹಾರಕ ಯಜ್ಞವಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಧಾನ್ಯನೈವೇದ್ಯದೊಂದಿಗೆ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.
就是他所能辦的,一隻為贖罪祭,一隻為燔祭,與素祭一同獻上;祭司要在耶和華面前為他贖罪。
32 ೩೨ “ಶುದ್ಧೀಕರಣ ಯಜ್ಞಗಳನ್ನು ಮಾಡುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ನಿಯಮ” ಎಂದು ಹೇಳಿದನು.
這是那有大痲瘋災病的人、不能將關乎得潔淨之物預備夠數的條例。」
33 ೩೩ ಯೆಹೋವನು ಮೋಶೆ ಮತ್ತು ಆರೋನರಿಗೆ,
耶和華曉諭摩西、亞倫說:
34 ೩೪ “ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,
「你們到了我賜給你們為業的迦南地,我若使你們所得為業之地的房屋中有大痲瘋的災病,
35 ೩೫ ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು, ‘ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ’ ಎಂದು ಅವನಿಗೆ ತಿಳಿಸಬೇಕು.
房主就要去告訴祭司說:『據我看,房屋中似乎有災病。』
36 ೩೬ ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮೊದಲು ಆ ಮನೆಯನ್ನು ಬರಿದುಮಾಡಲು ಆಜ್ಞಾಪಿಸಬೇಕು. ಹಾಗೆ ಬರಿದುಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುತ್ತದೆ. ಬರಿದುಮಾಡಿದ ಮೇಲೆ ಯಾಜಕನು ಆ ಮನೆಯನ್ನು ನೋಡುವುದಕ್ಕೆ ಒಳಗೆ ಹೋಗಬೇಕು.
祭司還沒有進去察看災病以前,就要吩咐人把房子騰空,免得房子裏所有的都成了不潔淨;然後祭司要進去察看房子。
37 ೩೭ ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ಪರೀಕ್ಷಿಸಿ ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು, ಗೋಡೆಯ ಮಟ್ಟಕ್ಕಿಂತ ಆಳವಾಗಿ ತೋರಿದರೆ,
他要察看那災病,災病若在房子的牆上有發綠或發紅的凹斑紋,現象窪於牆,
38 ೩೮ ಯಾಜಕನು ಹೊರಗೆ ಬಂದು ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು.
祭司就要出到房門外,把房子封鎖七天。
39 ೩೯ ಏಳನೆಯ ದಿನದಲ್ಲಿ ಯಾಜಕನು ಬಂದು ಪರೀಕ್ಷಿಸಿ ನೋಡುವಾಗ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ,
第七天,祭司要再去察看,災病若在房子的牆上發散,
40 ೪೦ ಆ ಗುರುತುಗಳು ಇರುವ ಕಲ್ಲುಗಳನ್ನು ತೆಗೆದುಬಿಟ್ಟು, ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು.
就要吩咐人把那有災病的石頭挖出來,扔在城外不潔淨之處;
41 ೪೧ ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗೋಡೆಯನ್ನೆಲ್ಲಾ ಕೆರೆದು, ಅದರ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.
也要叫人刮房內的四圍,所刮掉的灰泥要倒在城外不潔淨之處;
42 ೪೨ ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.
又要用別的石頭代替那挖出來的石頭,要另用灰泥墁房子。
43 ೪೩ “ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು.
「他挖出石頭,刮了房子,墁了以後,災病若在房子裏又發現,
44 ೪೪ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು.
祭司就要進去察看,災病若在房子裏發散,這就是房內蠶食的大痲瘋,是不潔淨。
45 ೪೫ ಅವನು ಆ ಮನೆಯನ್ನು ಕೆಡವಿ, ಅದರ ಎಲ್ಲಾ ಕಲ್ಲುಗಳನ್ನು, ತೊಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು.
他就要拆毀房子,把石頭、木頭、灰泥都搬到城外不潔淨之處。
46 ೪೬ ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
在房子封鎖的時候,進去的人必不潔淨到晚上;
47 ೪೭ ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು.
在房子裏躺着的必洗衣服;在房子裏吃飯的也必洗衣服。
48 ೪೮ “ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.
「房子墁了以後,祭司若進去察看,見災病在房內沒有發散,就要定房子為潔淨,因為災病已經消除。
49 ೪೯ ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಳ್ಳಬೇಕು.
要為潔淨房子取兩隻鳥和香柏木、朱紅色線並牛膝草,
50 ೫೦ ಅವನು ಒಂದು ಪಕ್ಷಿಯನ್ನು ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು,
用瓦器盛活水,把一隻鳥宰在上面,
51 ೫೧ ಆ ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪಿನ ಬರಲನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಸಜೀವವಾದ ಮತ್ತೊಂದು ಪಕ್ಷಿಯನ್ನು ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಹಾಗು ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.
把香柏木、牛膝草、朱紅色線,並那活鳥,都蘸在被宰的鳥血中與活水中,用以灑房子七次。
52 ೫೨ ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಅವನು ಶುದ್ಧಿಮಾಡುವನು.
要用鳥血、活水、活鳥、香柏木、牛膝草,並朱紅色線,潔淨那房子。
53 ೫೩ ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗೋಸ್ಕರ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು.
但要把活鳥放在城外田野裏。這樣潔淨房子,房子就潔淨了。」
54 ೫೪ “ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ,
這是為各類大痲瘋的災病和頭疥,
55 ೫೫ ಕೂದಲು ಬೆಳೆಯದ ಗಾಯ, ಬಟ್ಟೆಯಲ್ಲಿ ಅಥವಾ ಮನೆಯ ಗೋಡೆಯಲ್ಲಿ ಕಾಣಿಸುವ ಕುಷ್ಠ ರೋಗದ ಗುರುತು,
並衣服與房子的大痲瘋,
56 ೫೬ ಶರೀರದ ಚರ್ಮದ ಮೇಲೆ ಉಂಟಾಗುವ ಬಾವು, ಗುಳ್ಳೆ, ಹೊಳೆಯುವ ಕಲೆ
以及癤子、癬、火斑所立的條例,
57 ೫೭ ಇವುಗಳಲ್ಲಿ ಶುದ್ಧ ಅಥವಾ ಅಶುದ್ಧದ ಭೇದವನ್ನು ತಿಳಿಸುವ ನಿಯಮ ಇದೇ” ಎಂದು ಹೇಳಿದನು.
指明何時為潔淨,何時為不潔淨。這是大痲瘋的條例。