< ಯಾಜಕಕಾಂಡ 15 >

1 ಯೆಹೋವನು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ,
主はまた、モーセとアロンに言われた、
2 “ನೀವು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ಒಬ್ಬನ ಜನನೇಂದ್ರಿಯದಲ್ಲಿ ಮೇಹಸ್ರಾವವಾದರೆ ಅದರಿಂದ ಅವನು ಅಶುದ್ಧನಾಗುವನು.
「イスラエルの人々に言いなさい、『だれでもその肉に流出があれば、その流出は汚れである。
3 ಆ ಸ್ರಾವವು ಹರಿಯುತ್ತಿದ್ದರು ಅಥವಾ ನಿಂತುಹೋಗಿದ್ದರು ಆ ದೇಹಸ್ಥಿತಿಯಿಂದ ಅವನು ಅಶುದ್ಧನು.
その流出による汚れは次のとおりである。すなわち、その肉の流出が続いていても、あるいは、その肉の流出が止まっていても、共に汚れである。
4 ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಮತ್ತು ಕುಳಿತಿರುವ ಪ್ರತಿಯೊಂದು ಆಸನವೂ ಅಶುದ್ಧವು.
流出ある者の寝た床はすべて汚れる。またその人のすわった物はすべて汚れるであろう。
5 ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
その床に触れる者は、その衣服を洗い、水に身をすすがなければならない。彼は夕まで汚れるであろう。
6 ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
流出ある者のすわった物の上にすわる者は、その衣服を洗い、水に身をすすがなければならない。彼は夕まで汚れるであろう。
7 ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
流出ある者の肉に触れる者は衣服を洗い、水に身をすすがなければならない。彼は夕まで汚れるであろう。
8 ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
流出ある者のつばきが、清い者にかかったならば、その人は衣服を洗い、水に身をすすがなければならない。彼は夕まで汚れるであろう。
9 ಸ್ರಾವವುಳ್ಳವನು ಕುಳಿತ್ತಿದ್ದ ತಡಿಯು ಅಶುದ್ಧವು.
流出ある者の乗った鞍はすべて汚れる。
10 ೧೦ ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅಂತಹ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
また彼の下になった物に触れる者は、すべて夕まで汚れるであろう。またそれらの物を運ぶ者は、その衣服を洗い、水に身をすすがなければならない。彼は夕まで汚れるであろう。
11 ೧೧ ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾವನನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
流出ある者が、水で手を洗わずに人に触れるならば、その人は衣服を洗い、水に身をすすがなければならない。彼は夕まで汚れるであろう。
12 ೧೨ ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು.
流出ある者が触れた土の器は砕かなければならない。木の器はすべて水で洗わなければならない。
13 ೧೩ “‘ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಸಿಕೊಳ್ಳುವುದಕ್ಕೆ ಆ ದಿನದಿಂದ ಏಳು ದಿನಗಳನ್ನು ಲೆಕ್ಕಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಂಡು, ಹರಿಯುವ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.
流出ある者の流出がやんで清くなるならば、清めのために七日を数え、その衣服を洗い、流れ水に身をすすがなければならない。そうして清くなるであろう。
14 ೧೪ ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.
八日目に、山ばと二羽、または家ばとのひな二羽を取って、会見の幕屋の入口に行き、主の前に出て、それを祭司に渡さなければならない。
15 ೧೫ ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು.
祭司はその一つを罪祭とし、他の一つを燔祭としてささげなければならない。こうして祭司はその人のため、その流出のために主の前に、あがないをするであろう。
16 ೧೬ “‘ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗ ಸ್ನಾನಮಾಡಬೇಕು, ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
人がもし精を漏らすことがあれば、その全身を水にすすがなければならない。彼は夕まで汚れるであろう。
17 ೧೭ ಯಾವ ಬಟ್ಟೆಯ ಮೇಲಾಗಲಿ ಅಥವಾ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದ ವರೆಗೆ ಅಶುದ್ಧವಾಗಿರುವುದು.
すべて精のついた衣服および皮で作った物は水で洗わなければならない。これは夕まで汚れるであろう。
18 ೧೮ ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
男がもし女と寝て精を漏らすことがあれば、彼らは共に水に身をすすがなければならない。彼らは夕まで汚れるであろう。
19 ೧೯ “‘ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
また女に流出があって、その身の流出がもし血であるならば、その女は七日のあいだ不浄である。すべてその女に触れる者は夕まで汚れるであろう。
20 ೨೦ ಅವಳು ಮುಟ್ಟಾಗಿರುವಾಗ ಯಾವುದರ ಮೇಲೆ ಮಲಗಿದರು ಅಥವಾ ಕುಳಿತುಕೊಂಡರು ಅದು ಅಶುದ್ಧವಾಗಿರುವುದು.
その不浄の間に、その女の寝た物はすべて汚れる。またその女のすわった物も、すべて汚れるであろう。
21 ೨೧ ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
すべてその女の床に触れる者は、その衣服を洗い、水に身をすすがなければならない。彼は夕まで汚れるであろう。
22 ೨೨ ಅವಳು ಯಾವುದರ ಮೇಲೆ ಕುಳಿತ್ತಿದ್ದಳೋ ಅದನ್ನು ಮುಟ್ಟಿದವರು ಅವರ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
すべてその女のすわった物に触れる者は皆その衣服を洗い、水に身をすすがなければならない。彼は夕まで汚れるであろう。
23 ೨೩ ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ ಅಥವಾ ಕುಳಿತ್ತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
またその女が床の上、またはすわる物の上におる時、それに触れるならば、その人は夕まで汚れるであろう。
24 ೨೪ ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿದರೆ, ಅವಳ ಋತುಸ್ರಾವ ಅವನಿಗೆ ತಗುಲಿದರೆ, ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು.
男がもし、その女と寝て、その不浄を身にうけるならば、彼は七日のあいだ汚れるであろう。また彼の寝た床はすべて汚れるであろう。
25 ೨೫ “‘ಸ್ತ್ರೀಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲಿಯೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ಧಳೋ ಹಾಗೆಯೇ ಆ ಸ್ರಾವವಾಗುವ ದಿನಗಳಲ್ಲೆಲ್ಲಾ ಅಶುದ್ಧಳಾಗಿರುವಳು.
女にもし、その不浄の時のほかに、多くの日にわたって血の流出があるか、あるいはその不浄の時を越して流出があれば、その汚れの流出の日の間は、すべてその不浄の時と同じように、その女は汚れた者である。
26 ೨೬ ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು.
その流出の日の間に、その女の寝た床は、すべてその女の不浄の時の床と同じようになる。すべてその女のすわった物は、不浄の汚れのように汚れるであろう。
27 ೨೭ ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದ್ದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
すべてこれらの物に触れる人は汚れる。その衣服を洗い、水に身をすすがなければならない。彼は夕まで汚れるであろう。
28 ೨೮ ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕ ಹಾಕಿಕೊಂಡ ತರುವಾಯ ಶುದ್ಧಳಾಗುವಳು.
しかし、その女の流出がやんで、清くなるならば、自分のために、なお七日を数えなければならない。そして後、清くなるであろう。
29 ೨೯ ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.
その女は八日目に山ばと二羽、または家ばとのひな二羽を自分のために取り、それを会見の幕屋の入口におる祭司のもとに携えて行かなければならない。
30 ೩೦ ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಶುದ್ಧತೆಯ ವಿಷಯವಾಗಿ ಯೆಹೋವನ ಸನ್ನಿಧಿಯಲ್ಲಿ ಅವಳಿಗೋಸ್ಕರ ದೋಷಪರಿಹಾರ ಮಾಡುವನು.
祭司はその一つを罪祭とし、他の一つを燔祭としてささげなければならない。こうして祭司はその女のため、その汚れの流出のために主の前に、あがないをするであろう。
31 ೩೧ “‘ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು.
このようにしてあなたがたは、イスラエルの人々を汚れから離さなければならない。これは彼らのうちにあるわたしの幕屋を彼らが汚し、その汚れのために死ぬことのないためである』」。
32 ೩೨ “‘ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು,
これは流出ある者、精を漏らして汚れる者、
33 ೩೩ ಮುಟ್ಟಾದ ಸ್ತ್ರೀಯು, ಸ್ರಾವವುಂಟಾಗುವ ಸ್ತ್ರೀ ಮತ್ತು ಪುರುಷರು, ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಿದವನು ಇವರ ವಿಷಯವಾಗಿ ಇದೇ ನಿಯಮ’” ಎಂದು ಹೇಳಿದನು.
不浄をわずらう女、ならびに男あるいは女の流出ある者、および不浄の女と寝る者に関するおきてである。

< ಯಾಜಕಕಾಂಡ 15 >