< ಯಾಜಕಕಾಂಡ 17 >

1 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
Chúa Hằng Hữu phán bảo Môi-se:
2 “ನೀನು ಆರೋನನಿಗೂ ಅವನ ಮಕ್ಕಳಿಗೂ ಮತ್ತು ಇಸ್ರಾಯೇಲರಿಗೂ ಹೀಗೆ ಹೇಳಬೇಕು,
“Hãy truyền lại cho A-rôn, các con A-rôn, và toàn dân Ít-ra-ên những luật sau. Đây là điều Chúa Hằng Hữu phán bảo.
3 ಯೆಹೋವನು ಆಜ್ಞಾಪಿಸುವುದೇನೆಂದರೆ, ‘ಇಸ್ರಾಯೇಲರಲ್ಲಿ ಯಾವನಾದರೂ ಹೋರಿಯನ್ನಾಗಲಿ, ಕುರಿಯನ್ನಾಗಲಿ ಅಥವಾ ಆಡನ್ನಾಗಲಿ ಕೊಯ್ಯುವಾಗ,
Người Ít-ra-ên nào giết một con bò, chiên hay dê làm sinh tế dâng lên Chúa ở trong nơi đóng trại hay bên ngoài trại,
4 ಅದನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ಆತನ ಗುಡಾರದ ಬಾಗಿಲಿಗೆ ತಾರದೆ, ಪಾಳೆಯದ ಒಳಗಾಗಲಿ ಅಥವಾ ಹೊರಗಾಗಲಿ ವಧಿಸಿದರೆ ಅವನನ್ನು ಕೊಲೆಪಾತಕನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
mà không đem đến cửa Đền Tạm để dâng sinh tế lên Chúa Hằng Hữu, người ấy mắc tội gây đổ máu và bị truất khỏi cộng đồng dân chúng.
5 ಏಕೆಂದರೆ ಯಜ್ಞಪಶುಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು, ಯೆಹೋವನ ಮುಂದೆ ಸಮಾಧಾನಯಜ್ಞವಾಗಿ ಯೆಹೋವನಿಗೆ ಸಮರ್ಪಿಸಬೇಕು.
Luật này nhằm chấm dứt việc người Ít-ra-ên giết sinh tế ở ngoài đồng, và buộc họ đem sinh tế đến cửa Đền Tạm cho thầy tế lễ. Sinh tế sẽ bị giết tại đó để dâng lên Chúa Hằng Hữu.
6 ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಯಜ್ಞವೇದಿಗೆ ಎರಚಿ, ಅವುಗಳ ಕೊಬ್ಬನ್ನು ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.
Thầy tế lễ sẽ rảy máu trên bàn thờ của Chúa Hằng Hữu, tại cửa Đền Tạm, đốt mỡ dâng hương thơm lên Chúa Hằng Hữu.
7 ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’
Như thế, họ sẽ không còn giết thú vật cúng tế các thần dâm dục và liên lạc với chúng. Luật này áp dụng đời đời qua các thế hệ.
8 “ಇದಲ್ಲದೆ ನೀನು ಅವರಿಗೆ ಹೀಗೆ ಆಜ್ಞಾಪಿಸು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸಮಾಡುತ್ತಿರುವ ಅನ್ಯದೇಶದವರಲ್ಲಿಯಾಗಲಿ ಯಾರಾದರೂ ಸರ್ವಾಂಗಹೋಮವನ್ನು ಅಥವಾ,
Nhắc cho họ nhớ luôn rằng, dù người Ít-ra-ên hay người ngoại kiều, nếu ai dâng tế lễ thiêu hay dâng một sinh tế
9 ಬೇರೆ ವಿಧವಾದ ಯಜ್ಞವನ್ನು ಮಾಡುವಾಗ ಅದರ ಪಶುವನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತೆಗೆದುಕೊಂಡು ಬಾರದಿದ್ದರೆ ಅವನು ಕುಲದಿಂದ ಹೊರಗೆ ಹಾಕಬೇಕು.
tại một nơi nào khác, không phải tại cửa Đền Tạm nơi dâng lễ vật lên Chúa Hằng Hữu, thì người ấy phải bị trục xuất khỏi cộng đồng dân chúng.
10 ೧೦ “‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.
Nếu một người Ít-ra-ên hay ngoại kiều ăn bất kỳ máu gì, Ta sẽ chống đối người ấy và trục xuất người ấy khỏi cộng đồng.
11 ೧೧ ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ.
Ta cho các ngươi máu để rảy trên bàn thờ, chuộc tội linh hồn mình, vì máu tiềm tàng sức sống của cơ thể sinh vật. Chính sự sống của sinh vật ở trong máu, nên máu được dùng để chuộc tội.
12 ೧೨ ಆದುದರಿಂದ ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಇಸ್ರಾಯೇಲರಿಗೆ ಆಜ್ಞಾಪಿಸಿದ್ದೇನೆ.
Vì thế, Ta đã cấm người Ít-ra-ên và người ngoại kiều không được ăn máu.
13 ೧೩ “‘ಇಸ್ರಾಯೇಲರಲ್ಲಾಗಲಿ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ಬೇಟೆಯಾಡಿ ತಿನ್ನತಕ್ಕ ಮೃಗವನ್ನು ಇಲ್ಲವೆ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿಸಿ ಮಣ್ಣಿನಿಂದ ಮುಚ್ಚಿಬಿಡಬೇಕು.
Trường hợp một người Ít-ra-ên hay ngoại kiều đi săn, giết một con thú hay một con chim để ăn thịt, người ấy phải trút cho ráo hết máu và lấy đất lấp máu lại.
14 ೧೪ ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲರಿಗೆ, ಪ್ರತಿಪ್ರಾಣಿಗೂ ರಕ್ತವೇ ಪ್ರಾಣಾಧಾರವಾದುದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನು ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.
Vậy, máu là sức sống của các sinh vật. Do đó Ta đã cấm người Ít-ra-ên không được ăn máu của bất kỳ sinh vật nào, vì sự sống của một sinh vật là máu của nó. Ai ăn máu, sẽ bị trục xuất.
15 ೧೫ “‘ತಾನಾಗಿ ಸತ್ತುಬಿದ್ದದ್ದನ್ನಾಗಲಿ ಅಥವಾ ಕಾಡುಮೃಗ ಕೊಂದದ್ದನ್ನು ತಿಂದವನಾಗಲಿ ಸ್ವದೇಶದವನಾದರೂ ಇಲ್ಲವೇ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದ ವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.
Người nào, dù bản xứ hay ngoại kiều, ăn một con vật chết hoặc vì bị thú rừng cắn xé, phải giặt quần áo, phải tắm, bị ô uế cho đến tối, sau đó mới được sạch.
16 ೧೬ ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆ ಅಥವಾ ಸ್ನಾನ ಮಾಡದೆ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು’” ಎಂದು ಹೇಳಿದನು.
Nếu người ấy không giặt áo và không tắm, thì sẽ mang tội.”

< ಯಾಜಕಕಾಂಡ 17 >