< ಯಾಜಕಕಾಂಡ 18 >

1 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
וַיְדַבֵּ֥ר יְהוָ֖ה אֶל־מֹשֶׁ֥ה לֵּאמֹֽר׃
2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ದೇವರಾಗಿರುವ ಯೆಹೋವನು.
דַּבֵּר֙ אֶל־בְּנֵ֣י יִשְׂרָאֵ֔ל וְאָמַרְתָּ֖ אֲלֵהֶ֑ם אֲנִ֖י יְהוָ֥ה אֱלֹהֵיכֶֽם׃
3 ನೀವು ವಾಸವಾಗಿದ್ದ ಐಗುಪ್ತ ದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್ ದೇಶದ ಆಚರಣೆಗಳನ್ನು ನೀವು ಅನುಸರಿಸಬಾರದು, ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು.
כְּמַעֲשֵׂ֧ה אֶֽרֶץ־מִצְרַ֛יִם אֲשֶׁ֥ר יְשַׁבְתֶּם־בָּ֖הּ לֹ֣א תַעֲשׂ֑וּ וּכְמַעֲשֵׂ֣ה אֶֽרֶץ־כְּנַ֡עַן אֲשֶׁ֣ר אֲנִי֩ מֵבִ֨יא אֶתְכֶ֥ם שָׁ֙מָּה֙ לֹ֣א תַעֲשׂ֔וּ וּבְחֻקֹּתֵיהֶ֖ם לֹ֥א תֵלֵֽכוּ׃
4 ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ನಿಯಮಗಳನ್ನು ಅನುಸರಿಸಬೇಕು.
אֶת־מִשְׁפָּטַ֧י תַּעֲשׂ֛וּ וְאֶת־חֻקֹּתַ֥י תִּשְׁמְר֖וּ לָלֶ֣כֶת בָּהֶ֑ם אֲנִ֖י יְהוָ֥ה אֱלֹהֵיכֶֽם׃
5 ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.
וּשְׁמַרְתֶּ֤ם אֶת־חֻקֹּתַי֙ וְאֶת־מִשְׁפָּטַ֔י אֲשֶׁ֨ר יַעֲשֶׂ֥ה אֹתָ֛ם הָאָדָ֖ם וָחַ֣י בָּהֶ֑ם אֲנִ֖י יְהוָֽה׃ ס
6 “‘ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳ ಸ್ತ್ರೀಯ ಸಹವಾಸವನ್ನು ಮಾಡಬಾರದು, ನಾನು ಯೆಹೋವನು.
אִ֥ישׁ אִישׁ֙ אֶל־כָּל־שְׁאֵ֣ר בְּשָׂרֹ֔ו לֹ֥א תִקְרְב֖וּ לְגַלֹּ֣ות עֶרְוָ֑ה אֲנִ֖י יְהוָֽה׃ ס
7 ತಾಯಿಯನ್ನು ಎಷ್ಟು ಮಾತ್ರವೂ ಸಂಗಮಿಸಬಾರದು, ಆಕೆ ಹೆತ್ತವಳಲ್ಲವೇ; ಸಂಗಮಿಸಿದರೆ ತಂದೆಗೆ ಮಾನಭಂಗವಾಗುವುದು.
עֶרְוַ֥ת אָבִ֛יךָ וְעֶרְוַ֥ת אִמְּךָ֖ לֹ֣א תְגַלֵּ֑ה אִמְּךָ֣ הִ֔וא לֹ֥א תְגַלֶּ֖ה עֶרְוָתָֽהּ׃ ס
8 ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.
עֶרְוַ֥ת אֵֽשֶׁת־אָבִ֖יךָ לֹ֣א תְגַלֵּ֑ה עֶרְוַ֥ת אָבִ֖יךָ הִֽוא׃ ס
9 ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಬಾರದು; ಅವರು ಒಡ ಹುಟ್ಟಿದವರು ಇಲ್ಲವೇ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.
עֶרְוַ֨ת אֲחֹֽותְךָ֤ בַת־אָבִ֙יךָ֙ אֹ֣ו בַת־אִמֶּ֔ךָ מֹולֶ֣דֶת בַּ֔יִת אֹ֖ו מֹולֶ֣דֶת ח֑וּץ לֹ֥א תְגַלֶּ֖ה עֶרְוָתָֽן׃ ס
10 ೧೦ ಮಗನ ಮಗಳೊಂದಿಗೆ ಅಥವಾ ಮಗಳ ಮಗಳೊಂದಿಗೆ ಸಂಗಮಿಸಬಾರದು; ಅವರು ನಿಮಗೆ ಮಕ್ಕಳಂತಲ್ಲವೇ.
עֶרְוַ֤ת בַּת־בִּנְךָ֙ אֹ֣ו בַֽת־בִּתְּךָ֔ לֹ֥א תְגַלֶּ֖ה עֶרְוָתָ֑ן כִּ֥י עֶרְוָתְךָ֖ הֵֽנָּה׃ ס
11 ೧೧ ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ಸಹೋದರಿ.
עֶרְוַ֨ת בַּת־אֵ֤שֶׁת אָבִ֙יךָ֙ מֹולֶ֣דֶת אָבִ֔יךָ אֲחֹותְךָ֖ הִ֑וא לֹ֥א תְגַלֶּ֖ה עֶרְוָתָֽהּ׃ ס
12 ೧೨ ತಂದೆಯ ಒಡಹುಟ್ಟಿದವಳ ಸಂಗ ಮಾಡಬಾರದು; ಆಕೆ ನಿಮಗೆ ತಂದೆಯ ರಕ್ತಸಂಬಂಧಿ.
עֶרְוַ֥ת אֲחֹות־אָבִ֖יךָ לֹ֣א תְגַלֵּ֑ה שְׁאֵ֥ר אָבִ֖יךָ הִֽוא׃ ס
13 ೧೩ ತಾಯಿಯ ಒಡಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ನಿಮ್ಮ ತಾಯಿಯ ರಕ್ತಸಂಬಂಧಿ.
עֶרְוַ֥ת אֲחֹֽות־אִמְּךָ֖ לֹ֣א תְגַלֵּ֑ה כִּֽי־שְׁאֵ֥ר אִמְּךָ֖ הִֽוא׃ ס
14 ೧೪ ತಂದೆಯ ಅಣ್ಣತಮ್ಮಂದಿರ ಹೆಂಡತಿಯರ ಜೊತೆ ಸಂಗಮಿಸಬಾರದು. ಅವರು ನಿಮ್ಮ ದೊಡ್ಡಮ್ಮ ಇಲ್ಲವೇ ಚಿಕ್ಕಮ್ಮ ಅಲ್ಲವೇ.
עֶרְוַ֥ת אֲחִֽי־אָבִ֖יךָ לֹ֣א תְגַלֵּ֑ה אֶל־אִשְׁתֹּו֙ לֹ֣א תִקְרָ֔ב דֹּדָֽתְךָ֖ הִֽוא׃ ס
15 ೧೫ ಸೊಸೆಯ ಸಹವಾಸ ಮಾಡಬಾರದು; ಆಕೆ ಮಗನ ಹೆಂಡತಿಯಾದವಳಲ್ಲವೇ.
עֶרְוַ֥ת כַּלָּֽתְךָ֖ לֹ֣א תְגַלֵּ֑ה אֵ֤שֶׁת בִּנְךָ֙ הִ֔וא לֹ֥א תְגַלֶּ֖ה עֶרְוָתָֽהּ׃ ס
16 ೧೬ ಅತ್ತಿಗೆ ಮತ್ತು ನಾದಿನಿಯರನ್ನು ಸಂಗಮಿಸಬಾರದು; ಅವರು ಅಣ್ಣ ಅಥವಾ ತಮ್ಮಂದಿರ ಹೆಂಡತಿಯರಲ್ಲವೇ.
עֶרְוַ֥ת אֵֽשֶׁת־אָחִ֖יךָ לֹ֣א תְגַלֵּ֑ה עֶרְוַ֥ת אָחִ֖יךָ הִֽוא׃ ס
17 ೧೭ ಒಬ್ಬ ಸ್ತ್ರೀಯನ್ನು ಮದುವೆಮಾಡಿಕೊಂಡರೆ ಆಕೆಯ ಮಗಳನ್ನಾಗಲಿ ಇಲ್ಲವೇ ಮೊಮ್ಮಗಳನ್ನಾಗಲಿ ಸಂಗಮಿಸಬಾರದು; ಅವರು ರಕ್ತಸಂಬಂಧಿಗಳಾದುದರಿಂದ ಅದು ದುಷ್ಟ ಕಾರ್ಯವೇ.
עֶרְוַ֥ת אִשָּׁ֛ה וּבִתָּ֖הּ לֹ֣א תְגַלֵּ֑ה אֶֽת־בַּת־בְּנָ֞הּ וְאֶת־בַּת־בִּתָּ֗הּ לֹ֤א תִקַּח֙ לְגַלֹּ֣ות עֶרְוָתָ֔הּ שַׁאֲרָ֥ה הֵ֖נָּה זִמָּ֥ה הִֽוא
18 ೧೮ ಹೆಂಡತಿಯು ಜೀವದಿಂದಿರುವಾಗಲೇ ಆಕೆಯ ಒಡಹುಟ್ಟಿದವಳನ್ನು ಮದುವೆಮಾಡಿಕೊಂಡು ಹೆಂಡತಿಗೆ ಮನಸ್ತಾಪವನ್ನು ಉಂಟುಮಾಡಬಾರದು.
וְאִשָּׁ֥ה אֶל־אֲחֹתָ֖הּ לֹ֣א תִקָּ֑ח לִצְרֹ֗ר לְגַלֹּ֧ות עֶרְוָתָ֛הּ עָלֶ֖יהָ בְּחַיֶּֽיהָ׃
19 ೧೯ “‘ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಬಾರದು.
וְאֶל־אִשָּׁ֖ה בְּנִדַּ֣ת טֻמְאָתָ֑הּ לֹ֣א תִקְרַ֔ב לְגַלֹּ֖ות עֶרְוָתָֽהּ׃
20 ೨೦ ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು.
וְאֶל־אֵ֙שֶׁת֙ עֲמִֽיתְךָ֔ לֹא־תִתֵּ֥ן שְׁכָבְתְּךָ֖ לְזָ֑רַע לְטָמְאָה־בָֽהּ׃
21 ೨೧ “‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.
וּמִֽזַּרְעֲךָ֥ לֹא־תִתֵּ֖ן לְהַעֲבִ֣יר לַמֹּ֑לֶךְ וְלֹ֧א תְחַלֵּ֛ל אֶת־שֵׁ֥ם אֱלֹהֶ֖יךָ אֲנִ֥י יְהוָֽה׃
22 ೨೨ “‘ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ.
וְאֶ֨ת־זָכָ֔ר לֹ֥א תִשְׁכַּ֖ב מִשְׁכְּבֵ֣י אִשָּׁ֑ה תֹּועֵבָ֖ה הִֽוא׃
23 ೨೩ ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು.
וּבְכָל־בְּהֵמָ֛ה לֹא־תִתֵּ֥ן שְׁכָבְתְּךָ֖ לְטָמְאָה־בָ֑הּ וְאִשָּׁ֗ה לֹֽא־תַעֲמֹ֞ד לִפְנֵ֧י בְהֵמָ֛ה לְרִבְעָ֖הּ תֶּ֥בֶל הֽוּא׃
24 ೨೪ “‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.
אַל־תִּֽטַּמְּא֖וּ בְּכָל־אֵ֑לֶּה כִּ֤י בְכָל־אֵ֙לֶּה֙ נִטְמְא֣וּ הַגֹּויִ֔ם אֲשֶׁר־אֲנִ֥י מְשַׁלֵּ֖חַ מִפְּנֵיכֶֽם׃
25 ೨೫ ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ ಜನರನ್ನು ತ್ಯಜಿಸಿತು.
וַתִּטְמָ֣א הָאָ֔רֶץ וָאֶפְקֹ֥ד עֲוֹנָ֖הּ עָלֶ֑יהָ וַתָּקִ֥א הָאָ֖רֶץ אֶת־יֹשְׁבֶֽיהָ׃
26 ೨೬ ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ಮತ್ತು ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನಾದರೂ ನಡೆಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು.
וּשְׁמַרְתֶּ֣ם אַתֶּ֗ם אֶת־חֻקֹּתַי֙ וְאֶת־מִשְׁפָּטַ֔י וְלֹ֣א תַעֲשׂ֔וּ מִכֹּ֥ל הַתֹּועֵבֹ֖ת הָאֵ֑לֶּה הָֽאֶזְרָ֔ח וְהַגֵּ֖ר הַגָּ֥ר בְּתֹוכְכֶֽם׃
27 ೨೭ ನಿಮಗಿಂತ ಮುಂಚೆ ಆ ದೇಶದಲ್ಲಿ ಇದ್ದವರು ಇಂಥ ಅಸಹ್ಯವಾದ ಕೆಲಸಗಳನ್ನು ಮಾಡಿದ್ದರಿಂದ ಆ ದೇಶವು ಅಶುದ್ಧವಾಗಿ ಹೋಯಿತಲ್ಲಾ.
כִּ֚י אֶת־כָּל־הַתֹּועֵבֹ֣ת הָאֵ֔ל עָשׂ֥וּ אַנְשֵֽׁי־הָאָ֖רֶץ אֲשֶׁ֣ר לִפְנֵיכֶ֑ם וַתִּטְמָ֖א הָאָֽרֶץ׃
28 ೨೮ ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ.
וְלֹֽא־תָקִ֤יא הָאָ֙רֶץ֙ אֶתְכֶ֔ם בְּטַֽמַּאֲכֶ֖ם אֹתָ֑הּ כַּאֲשֶׁ֥ר קָאָ֛ה אֶת־הַגֹּ֖וי אֲשֶׁ֥ר לִפְנֵיכֶֽם׃
29 ೨೯ ಯಾವನಾದರೂ ಈ ಅಸಹ್ಯವಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.
כִּ֚י כָּל־אֲשֶׁ֣ר יַעֲשֶׂ֔ה מִכֹּ֥ל הַתֹּועֵבֹ֖ות הָאֵ֑לֶּה וְנִכְרְת֛וּ הַנְּפָשֹׁ֥ות הָעֹשֹׂ֖ת מִקֶּ֥רֶב עַמָּֽם׃
30 ೩೦ ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು.
וּשְׁמַרְתֶּ֣ם אֶת־מִשְׁמַרְתִּ֗י לְבִלְתִּ֨י עֲשֹׂ֜ות מֵחֻקֹּ֤ות הַתֹּֽועֵבֹת֙ אֲשֶׁ֣ר נַעֲשׂ֣וּ לִפְנֵיכֶ֔ם וְלֹ֥א תִֽטַּמְּא֖וּ בָּהֶ֑ם אֲנִ֖י יְהוָ֥ה אֱלֹהֵיכֶֽם׃ פ

< ಯಾಜಕಕಾಂಡ 18 >