< ಯಾಜಕಕಾಂಡ 19 >

1 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
Yahweh akazungumza na Musa, akisema.
2 “ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, ‘ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.
Zungumza na kusanyiko lote la watu wa Israeli na uwaambie, 'Ni lazima muwe watakatifu, kwa kuwa mimi Yahweh Mungu wenu ni mtakatifu.
3 “‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.
Kila mtu amstahi mama yake na baba yake. Na ni lazima muzishike Sabato zangu. Mimi ndimi Yahweh Mungu wenu.
4 “‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.
Msizigeukie sanamu zisizo na thamani, wala kujitengenezea wenyewe miungu kutokana na chuma. Mimi ndimi Yahweh Mungu wenu.
5 “‘ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು.
Unapotoa dhabihu za sadaka ya ushirika kwa Yahweh, utatoa ili kupata kibali.
6 ನೀವು ಮಾಡುವ ಯಜ್ಞದ ಮಾಂಸವನ್ನು ಆ ದಿನದಲ್ಲಿಯಾಗಲಿ ಇಲ್ಲವೇ ಮರುದಿನದಲ್ಲಿಯಾಗಲಿ ಊಟಮಾಡಬೇಕು. ಮೂರನೆಯ ದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
Ni sharti iliwe siku hiyo hiyo uliyoitoa, au siku inayofuata.
7 ಮೂರನೆಯ ದಿನದ ತನಕ ಉಳಿದದ್ದು ಹೇಯವಾದುದರಿಂದ ಅದರಲ್ಲಿ ಏನಾದರೂ ತಿಂದರೆ ಆ ಯಜ್ಞವು ಯೆಹೋವನಿಗೆ ಅಂಗೀಕಾರವಾಗುವುದೇ ಇಲ್ಲ.
Kama kinabaki kitu cho chote hata siku ya tatu ni lazima kiteketezwe kwa moto. Kama kitaliwa katika siku ya tatu kitakuwa najisi. Hakitakubalika,
8 ಅದರಲ್ಲಿ ಏನಾದರೂ ತಿಂದವನು ಯೆಹೋವನ ಪವಿತ್ರ ದ್ರವ್ಯವನ್ನು ಹೊಲೆಮಾಡಿದವನಾದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನನ್ನು ಕುಲದಿಂದ ಹೊರಗೆ ಹಾಕಬೇಕು.
lakini kila akilaye ni lazima atachukua hatia yake kwa sababu amekivunjia heshima kilicho kitakatifu kwa Yahweh. Mtu huyo ni lazima akatiliwe mbali na watu wake.
9 “‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.
Unapovuna mavuno ya ardhi yako, usivune hata pembezo mwa shamba lako kabisa, wala hutakusanya mabaki ya mavuno yako yote.
10 ೧೦ ದ್ರಾಕ್ಷಿಯ ತೋಟಗಳಲ್ಲಿಯೂ ಹಕ್ಕಲಾಯಬಾರದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಮತ್ತು ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.
Usikusanye kila zabibu kutoka katika mizabibu yako, wala usiziokote dhabibu zilizoanguka chini katika shamba la mizabibu. Ni lazima uziache kwa ajili ya masikini na kwa ajili ya wageni. Mimi ndimi Yahweh Mungu wako.
11 ೧೧ “‘ಕದಿಯಬಾರದು, “‘ಮೋಸಮಾಡಬಾರದು, “‘ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.
Usiibe. Usiseme uongo. Msidanganyane.
12 ೧೨ “‘ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿಮ್ಮ ದೇವರ ನಾಮವನ್ನು ಅಪಕೀರ್ತಿಗೆ ಒಳಪಡಿಸಬಾರದು. ನಾನು ಯೆಹೋವನು.
Usiape kwa jina langu kwa uongo na kulinajisi jina la Mungu wako. Mimi ndimi Yahweh
13 ೧೩ “‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.
Usimgandamize jirani yako wala kumwibia. Usishikilie malipo ya kibarua usiku kucha hata asubuhi.
14 ೧೪ ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಅವರ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು.
Usimlaani kiziwi au kuweka kikwazo mbele ya kipofu. Badala yake, yakupasa umwogope Mungu wako. Mimi ndimi Yahweh.
15 ೧೫ “‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.
Usisababishe hukumu ikawa ya uongo. Usionyeshe upendeleo kwa mtu fulani eti kwa kuwa tu yeye ni masikini na usionyeshe upendeleo kwa mtu fulani eti kwa kuwa tu yeye ni mtu muhimu. Badala yake, amua juu ya jirani yako kwa haki.
16 ೧೬ “‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.
Usiende huku na huko ukisema habari za uchochezi miongoni mwa watu wako, bali tafuta kuyalinda maisha ya jirani yako. Mimi ndimi Yahweh.
17 ೧೭ “‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.
Usimchukie ndugu yako moyoni mwako. Mkemee jirani yako kwa heshima ili kwamba usishiriki katika dhambi kwa sababu yake.
18 ೧೮ “‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.
Usijilipize kisasi au kuwa na chuki yoyote dhidi ya mtu yeyote wa watu wako, lakini badala yake mpende jirani yako kama unavyojipenda wewe mwenyewe. Mimi ndimi Yahweh.
19 ೧೯ “‘ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. “‘ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಿಪಡಿಯಬಾರದು; “‘ನಿಮ್ಮ ಹೊಲಗಳಲ್ಲಿ ಮಿಶ್ರಬೀಜಗಳನ್ನು ಬಿತ್ತಬಾರದು; “‘ನಾರು ಮತ್ತು ಉಣ್ಣೆ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.
Shika amri zangu. Usiwazalishe wanyama wako kwa kutumia wanyama wa aina nyingine tofauti. Usichanganye aina mbili tofauti za mbegu unapopanda shamba lako. Usivae vazi lililofumwa kwa kutumia nyuzi za rangi mbili tofauti zilizochanganywa pamoja.
20 ೨೦ “‘ಒಬ್ಬನ ಅಧೀನದಲ್ಲಿರುವ ದಾಸಿ ಹಣಕೊಡುವುದರಿಂದಾಗಲಿ ಅಥವಾ ಉಚಿತವಾಗಿಯಾಗಲಿ ಬಿಡುಗಡೆಯನ್ನು ಹೊಂದದೆ ಇದ್ದರೆ, ಯಾವನಾದರೂ ಅವಳನ್ನು ಸಂಗಮಿಸಿದರೆ ಅವರಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯವಾಗಿ ನ್ಯಾಯವಿಚಾರಣೆ ಆಗಬೇಕು. ಅವಳು ಸ್ವತಂತ್ರಳಲ್ಲವಾದುದರಿಂದ ಅವರಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.
Yeyote anayelala na msichana mtumwa aliyeposwa na mume mwingine, lakini ambaye hajakombolewa au hajaachwa huru, lazima waadhibiwe. Hawatauawa kwa sababu yule msichana hakuwa huru.
21 ೨೧ ಆ ಪುರುಷನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ಒಂದು ಟಗರನ್ನು ತರಬೇಕು.
Ni lazima mtu huyo alete sadaka yake ya hatia kwenye ingilio la hema la kukutania—kondoo dume iwe sadaka ya hatia.
22 ೨೨ ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತಯಜ್ಞವಾಗಿ ಯೆಹೋವನಿಗೆ ಸಮರ್ಪಿಸಿ, ಅವನಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
Kisha kuhani atafanya upatanisho kwa ajili yake kwa huyo kandoo dume mbele za Yahweh kutokana na dhambi aliyoitenda. Nayo dhambi iliyotendwa itasamehewa.
23 ೨೩ “‘ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ, ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು.
Mtakapoingia katika nchi na kupanda aina zote za miti kwa chakula, kisha mtayahesabu matunda yatakayozaliwa kuwa yamekatazwa kuliwa. Tunda litakatazwa kwako kwa miaka mitatu. Halitaliwa.
24 ೨೪ ನಾಲ್ಕನೆಯ ವರ್ಷದಲ್ಲಿ ಅದರ ಎಲ್ಲಾ ಹಣ್ಣುಗಳೂ ದೇವರದಾಗಿರಬೇಕು; ಅವುಗಳನ್ನು ಯೆಹೋವನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು.
Lakini katika mwaka wa nne matunda yote yatakuwa matakatiifu, matoleo ya sifa kwa Yahweh.
25 ೨೫ ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.
Katika mwaka wa tano unaweza kula tunda, ambalo umelisubiri ili kwamba mti uweze kuzaa zaidi. Mimi ndimi Yahweh Mungu wako.
26 ೨೬ “‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.
Usile nyama yoyote amabayo damu ingalimo ndani yake. Usiulize kwa roho juu ya wakati ujao,
27 ೨೭ “‘ಚಂಡಿಕೆ ಬಿಡಬಾರದು ಹಾಗೂ ಗಡ್ಡವನ್ನು ವಿಕಾರಗೊಳಿಸಬಾರದು.
Usitafute kuwadhibiti wengine kwa njia ya nguvu za kichawi. Msifuate tabia za kipagani kama vile kunyoa denge au kunyoa pembe za ndevu zeu.
28 ೨೮ “‘ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು.
Usiukate mwili wako kwa ajili ya wafu au kuchanja chale juu ya mwili wako. Mimi ndimi Yahweh.
29 ೨೯ “‘ಮಗಳನ್ನು ವೇಶ್ಯೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ವೇಶ್ಯಾವಾಟಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವುದು.
Usimwaibishe binti yako kwa kumfanya kahaba, la sivyo taifa litaangukia kwenye ukahaba na nchi itajawa na uovu.
30 ೩೦ “‘ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.
Utazitunza Sabato zangu na kupaheshimu mahali patakatifu pa hema langu la kukutania. Mimi ndimi Yahweh.
31 ೩೧ “‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.
Msiwageukie wale wanaoongea na wafu au roho wachafu. msiwatafute, la sivyo watawanajisi ninyi, Mimi ndimi Yahweh Mungu wenu.
32 ೩೨ “‘ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.
Ni lazima usimame mbele za mtu mwenye mvi na uheshimu uwepo wa mzee. Yakupasa umwegope Mungu wako. Mimi ndimi Yahweh.
33 ೩೩ “‘ನಿಮ್ಮ ದೇಶದಲ್ಲಿ ವಾಸವಾಗಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.
Mgeni anapoishi miongoni mwenu katika nchi yanu, usimtendee lolote lililobaya.
34 ೩೪ ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.
Mgeni anayeishi pamoja nanyi ni lazima awe kama mwenyeji Mwisraeli mzaliwa anayeishi kwenu, na sharti umpende kama unavyojipenda wewe mwenyewe, ni kwa sababu wewe ulikuwa mgeni katika nchi ya Misri. Mimi ndimi Yahweh Mungu wako.
35 ೩೫ “‘ನ್ಯಾಯವಿಚಾರಣೆ, ತೂಕ, ಅಳತೆ ಮತ್ತು ಪರಿಮಾಣಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು.
Unapopima urefu, uzito, au wingi usitumie vipimo vya udanganyifu.
36 ೩೬ ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.
Tumia mizani iliyo halali, mawe ya kupimia uzito yaliyo halali, efa halali, hini iliyo halali. Mimi ndimi Yahweh Mungu wako, aliyekutoa katika nchi ya utumwa ya Misri.
37 ೩೭ ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಯೆಹೋವನು’” ಎಂದು ಹೇಳಿದನು.
Utayatii maagizo yangu na sheria zangu zote na kuzitenda. Mimi ndimi Yahweh.

< ಯಾಜಕಕಾಂಡ 19 >