< ಯಾಜಕಕಾಂಡ 2 >

1 “‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.
Når nogen vil ofre et matoffer til Herren, så skal hans offer være fint mel; og han skal helle olje på det og legge virak ved.
2 ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
Så skal han bære det frem til Arons sønner, prestene, og presten skal ta en håndfull av det, av det fine mel og av oljen, dessuten all viraken, og han skal brenne det som ihukommelses-offer på alteret; det er et ildoffer til velbehagelig duft for Herren.
3 ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ.
Det som blir tilovers av matofferet, skal Aron og hans sønner ha; det hører til det som er høihellig av Herrens ildoffer.
4 “‘ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳು ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳು ಆಗಿರಬೇಕು.
Og når du vil ofre et matoffer av noget som er bakt i ovn, så skal det være av fint mel, usyrede kaker med olje i eller usyrede brødleiver smurt med olje.
5 ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.
Og dersom ditt offer er et matoffer som er stekt på helle, så skal det være av fint mel som er blandet med olje og usyret.
6 ನೀವು ಅದನ್ನು ಚೂರುಚೂರಾಗಿ ಮುರಿದು, ಅದರ ಮೇಲೆ ಎಣ್ಣೆ ಹೊಯ್ಯಬೇಕು. ಇದು ಧಾನ್ಯನೈವೇದ್ಯವಾಗಿದೆ.
Du skal bryte det i stykker og helle olje på det; det er et matoffer.
7 ನೀವು ಅರ್ಪಿಸುವ ಧಾನ್ಯ ನೈವೇದ್ಯ ಬಾಂಡ್ಲಿಯಲ್ಲಿ ಪಕ್ವಮಾಡಿದ್ದಾದರೆ ಅದು ಎಣ್ಣೆ ಹೊಯ್ದ ಗೋದಿಹಿಟ್ಟಿನದಾಗಿರಬೇಕು.
Og dersom ditt offer er et matoffer som er stekt i panne, så skal det lages av fint mel med olje.
8 ನೀವು ಈ ಪದಾರ್ಥಗಳಿಂದ ಮಾಡಿದ ನೈವೇದ್ಯವನ್ನು ಯೆಹೋವನಿಗೆ ಸಮರ್ಪಿಸುವಾಗ ಅದನ್ನು ಯಾಜಕನಿಗೆ ಒಪ್ಪಿಸಬೇಕು; ಅವನೇ ಅದನ್ನು ಯಜ್ಞವೇದಿಯ ಬಳಿಗೆ ತರಬೇಕು.
Det matoffer som er tillaget på en av disse måter, skal du bære frem for Herren; du skal komme til presten med det, og han skal bære det frem til alteret.
9 ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
Og presten skal av matofferet ta ut ihukommelses-offeret og brenne det på alteret; det er et ildoffer til velbehagelig duft for Herren.
10 ೧೦ ಧಾನ್ಯ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಕೊಡಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದ್ದರಿಂದ ಅತಿಪರಿಶುದ್ಧವಾಗಿದೆ.
Og det som blir tilovers av matofferet, skal Aron og hans sønner ha; det hører til det som er høihellig av Herrens ildoffer.
11 ೧೧ “‘ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು.
Intet matoffer som I vil ofre til Herren, skal lages til med noget som er surt; for hverken av surdeig eller av honning skal I brenne ildoffer for Herren.
12 ೧೨ ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಅವುಗಳನ್ನು ಹೋಮಮಾಡಬಾರದು.
Som en førstegrøde-gave kan I bære slike offer frem for Herren, men på alteret skal de ikke komme, til velbehagelig duft.
13 ೧೩ ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವುದರಿಂದ ಅದು ಯಾವ ನೈವೇದ್ಯ ಪದಾರ್ಥವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪನ್ನು ಸೇರಿಸಲೇಬೇಕು.
Alle dine matoffer skal du salte; du skal ikke la det fattes på salt i ditt matoffer; for saltet hører til din Guds pakt; til alle dine offer skal du bære frem salt.
14 ೧೪ “‘ನೀವು ಯೆಹೋವನಿಗೆ ಧಾನ್ಯ ನೈವೇದ್ಯದ ಪ್ರಥಮಫಲವನ್ನು ಸಮರ್ಪಣೆ ಮಾಡಬೇಕಾದರೆ ಗೋದಿಯ ತಾಜವಾದ ಹಸೀ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು, ಉಮ್ಮಿಗೆಯನ್ನು ಸಮರ್ಪಿಸಬೇಕು.
Dersom du vil ofre et matoffer av førstegrøden til Herren, så skal du ofre aks som er ristet over ilden, nyhøstet korn som er knust; det skal være ditt matoffer av førstegrøden.
15 ೧೫ ಅದು ಧಾನ್ಯನೈವೇದ್ಯ ವಸ್ತುವಾದ್ದರಿಂದ ನೀವು ಅದರ ಮೇಲೆ ಎಣ್ಣೆ ಹೊಯ್ದು ಧೂಪವಿಡಬೇಕು.
Du skal ha olje på det og legge virak ved; det er et matoffer.
16 ೧೬ ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಉಮ್ಮಿಗೆಯಲ್ಲಿಯೂ ಮತ್ತು ಎಣ್ಣೆಯಲ್ಲಿಯೂ ಸ್ವಲ್ಪಭಾಗವನ್ನು ತೆಗೆದುಕೊಂಡು ಧೂಪವೆಲ್ಲವನ್ನು ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಯೆಹೋವನಿಗೆ ಹೋಮಮಾಡಬೇಕು.
Og presten skal til ihukommelses-offer brenne noget av det knuste korn og av oljen og dessuten all viraken; det er et ildoffer for Herren.

< ಯಾಜಕಕಾಂಡ 2 >