< ಯಾಜಕಕಾಂಡ 2 >
1 ೧ “‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.
Și când va aduce cineva un dar de mâncare DOMNULUI, darul lui să fie din floarea făinii; și să toarne untdelemn pe el și să pună tămâie pe el;
2 ೨ ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
Și să îl aducă fiilor lui Aaron, preoții, și să ia din el, din făină, o mână a sa plină și din untdelemnul lui, cu toată tămâia lui; și preotul să ardă amintirea lui pe altar, să fie ofrandă făcută prin foc, de o aromă dulce DOMNULUI;
3 ೩ ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ.
Și rămășița din darul de mâncare să fie a lui Aaron și a fiilor săi; este un lucru preasfânt al darurilor DOMNULUI, făcute prin foc.
4 ೪ “‘ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳು ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳು ಆಗಿರಬೇಕು.
Și dacă aduci ca dar, un dar de mâncare copt în cuptor, să fie din turte nedospite din floarea făinii amestecată cu untdelemn, sau biscuiți nedospiți unși cu untdelemn.
5 ೫ ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.
Și dacă darul tău este un dar de mâncare copt într-o tavă, să fie din floarea făinii nedospită, amestecată cu untdelemn.
6 ೬ ನೀವು ಅದನ್ನು ಚೂರುಚೂರಾಗಿ ಮುರಿದು, ಅದರ ಮೇಲೆ ಎಣ್ಣೆ ಹೊಯ್ಯಬೇಕು. ಇದು ಧಾನ್ಯನೈವೇದ್ಯವಾಗಿದೆ.
Să îl împarți în bucăți și să torni untdelemn peste el, este un dar de mâncare.
7 ೭ ನೀವು ಅರ್ಪಿಸುವ ಧಾನ್ಯ ನೈವೇದ್ಯ ಬಾಂಡ್ಲಿಯಲ್ಲಿ ಪಕ್ವಮಾಡಿದ್ದಾದರೆ ಅದು ಎಣ್ಣೆ ಹೊಯ್ದ ಗೋದಿಹಿಟ್ಟಿನದಾಗಿರಬೇಕು.
Și dacă darul tău este un dar de mâncare copt în tigaie, să fie făcut din floarea făinii amestecată cu untdelemn.
8 ೮ ನೀವು ಈ ಪದಾರ್ಥಗಳಿಂದ ಮಾಡಿದ ನೈವೇದ್ಯವನ್ನು ಯೆಹೋವನಿಗೆ ಸಮರ್ಪಿಸುವಾಗ ಅದನ್ನು ಯಾಜಕನಿಗೆ ಒಪ್ಪಿಸಬೇಕು; ಅವನೇ ಅದನ್ನು ಯಜ್ಞವೇದಿಯ ಬಳಿಗೆ ತರಬೇಕು.
Și să aduci DOMNULUI darul de mâncare ce este făcut din aceste lucruri; și când acesta este prezentat preotului, el să îl aducă la altar.
9 ೯ ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
Și preotul să ia din darul de mâncare o amintire din acesta și să îl ardă pe altar, este ofrandă făcută prin foc, de o aromă dulce DOMNULUI.
10 ೧೦ ಧಾನ್ಯ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಕೊಡಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದ್ದರಿಂದ ಅತಿಪರಿಶುದ್ಧವಾಗಿದೆ.
Și ce rămâne din darul de mâncare să fie a lui Aaron și a fiilor săi; este un lucru preasfânt al ofrandelor DOMNULUI făcute prin foc.
11 ೧೧ “‘ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು.
Niciun dar de mâncare, pe care îl aduceți DOMNULUI, să nu fie făcut cu dospeală, pentru aceasta să nu ardeți nimic dospit, nici ceva cu miere, în niciuna din ofrandele DOMNULUI făcute prin foc.
12 ೧೨ ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಅವುಗಳನ್ನು ಹೋಮಮಾಡಬಾರದು.
Cât despre ofranda primelor roade, să le aduceți DOMNULUI, dar să nu fie arse pe altar pentru o aromă dulce.
13 ೧೩ ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವುದರಿಂದ ಅದು ಯಾವ ನೈವೇದ್ಯ ಪದಾರ್ಥವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪನ್ನು ಸೇರಿಸಲೇಬೇಕು.
Și fiecare dar al darului tău de mâncare să îl sărezi cu sare; și să nu permiți sării legământului Dumnezeului tău să lipsească din darul tău de mâncare; cu toate darurile tale să oferi sare.
14 ೧೪ “‘ನೀವು ಯೆಹೋವನಿಗೆ ಧಾನ್ಯ ನೈವೇದ್ಯದ ಪ್ರಥಮಫಲವನ್ನು ಸಮರ್ಪಣೆ ಮಾಡಬೇಕಾದರೆ ಗೋದಿಯ ತಾಜವಾದ ಹಸೀ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು, ಉಮ್ಮಿಗೆಯನ್ನು ಸಮರ್ಪಿಸಬೇಕು.
Și dacă aduci DOMNULUI un dar de mâncare din primele tale roade, să oferi spice verzi de grâne uscate în foc pentru darul de mâncare din primele roade, sau grăunțe din spice pisate și coapte.
15 ೧೫ ಅದು ಧಾನ್ಯನೈವೇದ್ಯ ವಸ್ತುವಾದ್ದರಿಂದ ನೀವು ಅದರ ಮೇಲೆ ಎಣ್ಣೆ ಹೊಯ್ದು ಧೂಪವಿಡಬೇಕು.
Și să pui untdelemn pe el și să pui tămâie pe el, este un dar de mâncare.
16 ೧೬ ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಉಮ್ಮಿಗೆಯಲ್ಲಿಯೂ ಮತ್ತು ಎಣ್ಣೆಯಲ್ಲಿಯೂ ಸ್ವಲ್ಪಭಾಗವನ್ನು ತೆಗೆದುಕೊಂಡು ಧೂಪವೆಲ್ಲವನ್ನು ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಯೆಹೋವನಿಗೆ ಹೋಮಮಾಡಬೇಕು.
Și preotul să ardă amintirea acesteia, parte din grăunțele pisate ale acestuia, și parte din untdelemnul acestuia, cu toată tămâia lui; este ofrandă făcută prin foc DOMNULUI.