< ಯಾಜಕಕಾಂಡ 20 >

1 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
וַיְדַבֵּר יְהוָה אֶל־מֹשֶׁה לֵּאמֹֽר׃
2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ, ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.
וְאֶל־בְּנֵי יִשְׂרָאֵל תֹּאמַר אִישׁ אִישׁ מִבְּנֵי יִשְׂרָאֵל וּמִן־הַגֵּר ׀ הַגָּר בְּיִשְׂרָאֵל אֲשֶׁר יִתֵּן מִזַּרְעוֹ לַמֹּלֶךְ מוֹת יוּמָת עַם הָאָרֶץ יִרְגְּמֻהוּ בָאָֽבֶן׃
3 ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು, ನನ್ನ ದೇವಸ್ಥಾನವನ್ನು ಅಶುದ್ಧಮಾಡಿ, ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದರೆ, ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.
וַאֲנִי אֶתֵּן אֶת־פָּנַי בָּאִישׁ הַהוּא וְהִכְרַתִּי אֹתוֹ מִקֶּרֶב עַמּוֹ כִּי מִזַּרְעוֹ נָתַן לַמֹּלֶךְ לְמַעַן טַמֵּא אֶת־מִקְדָּשִׁי וּלְחַלֵּל אֶת־שֵׁם קָדְשִֽׁי׃
4 ಆ ಮನುಷ್ಯನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟಾಗ ಸ್ವದೇಶದವರು ಅವನನ್ನು ಕೊಲ್ಲದೆ ಅವನು ಮಾಡಿದ ಕೆಲಸವನ್ನು ನೋಡಿಯೂ ನೋಡದವರಂತಿದ್ದರೆ,
וְאִם הַעְלֵם יַעְלִימֽוּ עַם הָאָרֶץ אֶת־עֵֽינֵיהֶם מִן־הָאִישׁ הַהוּא בְּתִתּוֹ מִזַּרְעוֹ לַמֹּלֶךְ לְבִלְתִּי הָמִית אֹתֽוֹ׃
5 ಆಗ ನಾನು ಆ ಮನುಷ್ಯನಿಗೂ ಮತ್ತು ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆ ಮಾಡಿದವರೆಲ್ಲರನ್ನು ಕುಲದಿಂದ ತೆಗೆದುಹಾಕುವೆನು.
וְשַׂמְתִּי אֲנִי אֶת־פָּנַי בָּאִישׁ הַהוּא וּבְמִשְׁפַּחְתּוֹ וְהִכְרַתִּי אֹתוֹ וְאֵת ׀ כָּל־הַזֹּנִים אַחֲרָיו לִזְנוֹת אַחֲרֵי הַמֹּלֶךְ מִקֶּרֶב עַמָּֽם׃
6 “‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.
וְהַנֶּפֶשׁ אֲשֶׁר תִּפְנֶה אֶל־הָֽאֹבֹת וְאֶל־הַיִּדְּעֹנִים לִזְנוֹת אַחֲרֵיהֶם וְנָתַתִּי אֶת־פָּנַי בַּנֶּפֶשׁ הַהִוא וְהִכְרַתִּי אֹתוֹ מִקֶּרֶב עַמּֽוֹ׃
7 ನಾನು ನಿಮ್ಮ ದೇವರಾದ ಯೆಹೋವನಾಗಿರುವುದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.
וְהִתְקַדִּשְׁתֶּם וִהְיִיתֶם קְדֹשִׁים כִּי אֲנִי יְהוָה אֱלֹהֵיכֶֽם׃
8 ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪರಿಶುದ್ಧಜನವಾಗುವಂತೆ ಮಾಡುವ ಯೆಹೋವನು.
וּשְׁמַרְתֶּם אֶת־חֻקֹּתַי וַעֲשִׂיתֶם אֹתָם אֲנִי יְהוָה מְקַדִּשְׁכֶֽם׃
9 “‘ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.
כִּֽי־אִישׁ אִישׁ אֲשֶׁר יְקַלֵּל אֶת־אָבִיו וְאֶת־אִמּוֹ מוֹת יוּמָת אָבִיו וְאִמּוֹ קִלֵּל דָּמָיו בּֽוֹ׃
10 ೧೦ “‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.
וְאִישׁ אֲשֶׁר יִנְאַף אֶת־אֵשֶׁת אִישׁ אֲשֶׁר יִנְאַף אֶת־אֵשֶׁת רֵעֵהוּ מֽוֹת־יוּמַת הַנֹּאֵף וְהַנֹּאָֽפֶת׃
11 ೧೧ ಯಾವನಾದರೂ ಮಲತಾಯಿಯನ್ನು ಸಂಗಮಿಸಿದರೆ ಅವನು ತಂದೆಗೆ ಮಾನಭಂಗಮಾಡಿದ ಹಾಗಾಯಿತು; ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
וְאִישׁ אֲשֶׁר יִשְׁכַּב אֶת־אֵשֶׁת אָבִיו עֶרְוַת אָבִיו גִּלָּה מֽוֹת־יוּמְתוּ שְׁנֵיהֶם דְּמֵיהֶם בָּֽם׃
12 ೧೨ ಯಾವನಾದರೂ ಸೊಸೆಯನ್ನು ಸಂಗಮಿಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಅವರು ಧರ್ಮವಿರುದ್ಧವಾದ ಕಾರ್ಯವನ್ನು ಮಾಡಿರುವುದರಿಂದ ಆ ಶಿಕ್ಷೆಗೆ ಅವರೇ ಕಾರಣರು.
וְאִישׁ אֲשֶׁר יִשְׁכַּב אֶת־כַּלָּתוֹ מוֹת יוּמְתוּ שְׁנֵיהֶם תֶּבֶל עָשׂוּ דְּמֵיהֶם בָּֽם׃
13 ೧೩ ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
וְאִישׁ אֲשֶׁר יִשְׁכַּב אֶת־זָכָר מִשְׁכְּבֵי אִשָּׁה תּוֹעֵבָה עָשׂוּ שְׁנֵיהֶם מוֹת יוּמָתוּ דְּמֵיהֶם בָּֽם׃
14 ೧೪ ಯಾವನಾದರೂ ಒಬ್ಬ ಸ್ತ್ರೀಯನ್ನು ಹಾಗೂ ಅವಳ ತಾಯಿಯನ್ನು ಸಂಗಮಿಸಿದರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು; ಅಂತಹ ದುರಾಚಾರವು ನಿಮ್ಮಲ್ಲಿ ಎಷ್ಟು ಮಾತ್ರವೂ ನಡೆಯಬಾರದು.
וְאִישׁ אֲשֶׁר יִקַּח אֶת־אִשָּׁה וְאֶת־אִמָּהּ זִמָּה הִוא בָּאֵשׁ יִשְׂרְפוּ אֹתוֹ וְאֶתְהֶן וְלֹא־תִהְיֶה זִמָּה בְּתוֹכְכֶֽם׃
15 ೧೫ ಯಾವನಾದರೂ ಪಶುಸಂಗ ಮಾಡಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ಆ ಪಶುವನ್ನು ಕೊಲ್ಲಿಸಬೇಕು.
וְאִישׁ אֲשֶׁר יִתֵּן שְׁכָבְתּוֹ בִּבְהֵמָה מוֹת יוּמָת וְאֶת־הַבְּהֵמָה תַּהֲרֹֽגוּ׃
16 ೧೬ ಯಾವ ಸ್ತ್ರೀಯಾದರೂ ಪಶುವಿನಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನು ಮತ್ತು ಪಶುವನ್ನು ಕೊಲ್ಲಿಸಬೇಕು; ಅವಳಿಗೂ ಹಾಗೂ ಅದಕ್ಕೂ ಮರಣವೇ ನಿಯಮ; ಆ ಮರಣ ಶಿಕ್ಷೆಗೆ ತಾವೇ ಕಾರಣರು.
וְאִשָּׁה אֲשֶׁר תִּקְרַב אֶל־כָּל־בְּהֵמָה לְרִבְעָה אֹתָהּ וְהָרַגְתָּ אֶת־הָאִשָּׁה וְאֶת־הַבְּהֵמָה מוֹת יוּמָתוּ דְּמֵיהֶם בָּֽם׃
17 ೧೭ ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಹಾಗು ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದ್ದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.
וְאִישׁ אֲשֶׁר־יִקַּח אֶת־אֲחֹתוֹ בַּת־אָבִיו אוֹ בַת־אִמּוֹ וְרָאָה אֶת־עֶרְוָתָהּ וְהִֽיא־תִרְאֶה אֶת־עֶרְוָתוֹ חֶסֶד הוּא וְנִכְרְתוּ לְעֵינֵי בְּנֵי עַמָּם עֶרְוַת אֲחֹתוֹ גִּלָּה עֲוֺנוֹ יִשָּֽׂא׃
18 ೧೮ ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ರಕ್ತಸ್ರಾವದ ಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದುದರಿಂದ ಅವರಿಬ್ಬರನ್ನು ಕುಲದಿಂದ ಹೊರಗೆ ಹಾಕಬೇಕು.
וְאִישׁ אֲשֶׁר־יִשְׁכַּב אֶת־אִשָּׁה דָּוָה וְגִלָּה אֶת־עֶרְוָתָהּ אֶת־מְקֹרָהּ הֶֽעֱרָה וְהִיא גִּלְּתָה אֶת־מְקוֹר דָּמֶיהָ וְנִכְרְתוּ שְׁנֵיהֶם מִקֶּרֶב עַמָּֽם׃
19 ೧೯ ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.
וְעֶרְוַת אֲחוֹת אִמְּךָ וַאֲחוֹת אָבִיךָ לֹא תְגַלֵּה כִּי אֶת־שְׁאֵרוֹ הֶעֱרָה עֲוֺנָם יִשָּֽׂאוּ׃
20 ೨೦ ಯಾವನಾದರೂ ದೊಡ್ಡಮ್ಮ ಅಥವಾ ಚಿಕ್ಕಮ್ಮನನ್ನಾಗಲಿ ಸಂಗಮಿಸಿದರೆ ಅವನು ದೊಡ್ಡಪ್ಪ ಮತ್ತು ಚಿಕ್ಕಪ್ಪನವರ ಮಾನವನ್ನು ಭಂಗಪಡಿಸಿದವನಾದುದರಿಂದ ಆ ಸ್ತ್ರೀಪುರುಷರು ಆ ಪಾಪದ ಫಲವನ್ನು ಅನುಭವಿಸಬೇಕು; ಅವರು ಸಂತಾನವಿಲ್ಲದೆ ಸಾಯುವರು.
וְאִישׁ אֲשֶׁר יִשְׁכַּב אֶת־דֹּדָתוֹ עֶרְוַת דֹּדוֹ גִּלָּה חֶטְאָם יִשָּׂאוּ עֲרִירִים יָמֻֽתוּ׃
21 ೨೧ ಯಾವನಾದರೂ ಅತ್ತಿಗೆ ಇಲ್ಲವೇ ನಾದಿನಿಯರನ್ನು ಸಂಗಮಿಸಿದರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು; ಅವರಿಗೆ ಸಂತಾನವಿರುವುದಿಲ್ಲ.
וְאִישׁ אֲשֶׁר יִקַּח אֶת־אֵשֶׁת אָחִיו נִדָּה הִוא עֶרְוַת אָחִיו גִּלָּה עֲרִירִים יִהְיֽוּ׃
22 ೨೨ “‘ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ತ್ಯಜಿಸುವುದಿಲ್ಲ.
וּשְׁמַרְתֶּם אֶת־כָּל־חֻקֹּתַי וְאֶת־כָּל־מִשְׁפָּטַי וַעֲשִׂיתֶם אֹתָם וְלֹא־תָקִיא אֶתְכֶם הָאָרֶץ אֲשֶׁר אֲנִי מֵבִיא אֶתְכֶם שָׁמָּה לָשֶׁבֶת בָּֽהּ׃
23 ೨೩ ನಾನು ನಿಮಗಿಂತ ಮೊದಲು ಹೊರಡಿಸಿದ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದ್ದರಿಂದ ನನಗೆ ಅಸಹ್ಯವಾದಾರು.
וְלֹא תֵֽלְכוּ בְּחֻקֹּת הַגּוֹי אֲשֶׁר־אֲנִי מְשַׁלֵּחַ מִפְּנֵיכֶם כִּי אֶת־כָּל־אֵלֶּה עָשׂוּ וָאָקֻץ בָּֽם׃
24 ೨೪ ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.
וָאֹמַר לָכֶם אַתֶּם תִּֽירְשׁוּ אֶת־אַדְמָתָם וַאֲנִי אֶתְּנֶנָּה לָכֶם לָרֶשֶׁת אֹתָהּ אֶרֶץ זָבַת חָלָב וּדְבָשׁ אֲנִי יְהוָה אֱלֹֽהֵיכֶם אֲשֶׁר־הִבְדַּלְתִּי אֶתְכֶם מִן־הָֽעַמִּֽים׃
25 ೨೫ “‘ನೀವು ಶುದ್ಧ ಮತ್ತು ಅಶುದ್ಧ ಪಶುಗಳನ್ನು ಹಾಗು ಪಕ್ಷಿಗಳನ್ನು ಪ್ರತ್ಯೇಕಿಸುವ ವಿವೇಚನೆ ಹೊಂದಿರಬೇಕು. ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪಶು, ಪಕ್ಷಿ ಹಾಗು ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಅಸಹ್ಯಮಾಡಿಕೊಳ್ಳಬಾರದು.
וְהִבְדַּלְתֶּם בֵּֽין־הַבְּהֵמָה הַטְּהֹרָה לַטְּמֵאָה וּבֵין־הָעוֹף הַטָּמֵא לַטָּהֹר וְלֹֽא־תְשַׁקְּצוּ אֶת־נַפְשֹֽׁתֵיכֶם בַּבְּהֵמָה וּבָעוֹף וּבְכֹל אֲשֶׁר תִּרְמֹשׂ הָֽאֲדָמָה אֲשֶׁר־הִבְדַּלְתִּי לָכֶם לְטַמֵּֽא׃
26 ೨೬ ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದುದರಿಂದ ನೀವು ನನಗೆ ಮೀಸಲಾಗಿರಬೇಕು.
וִהְיִיתֶם לִי קְדֹשִׁים כִּי קָדוֹשׁ אֲנִי יְהוָה וָאַבְדִּל אֶתְכֶם מִן־הֽ͏ָעַמִּים לִהְיוֹת לִֽי׃
27 ೨೭ “‘ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು’” ಎಂದು ಹೇಳಿದನು.
וְאִישׁ אֽוֹ־אִשָּׁה כִּֽי־יִהְיֶה בָהֶם אוֹב אוֹ יִדְּעֹנִי מוֹת יוּמָתוּ בָּאֶבֶן יִרְגְּמוּ אֹתָם דְּמֵיהֶם בָּֽם׃

< ಯಾಜಕಕಾಂಡ 20 >