< ಯಾಜಕಕಾಂಡ 21 >
1 ೧ ಯೆಹೋವನು ಮೋಶೆಯೊಂದಿಗೆ ಮಾತನಾಡಿ, “ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, ‘ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.
Yehowa gblɔ na Mose be, “Gblɔ na Aron ƒe vi nunɔlawo be, ‘Mele be nunɔla naƒo ɖi eɖokui to asikaka ame kukuwo ŋu me o,
2 ೨ ಆದರೂ ಸಮೀಪ ರಕ್ತಸಂಬಂಧಿಗಳಾದ ತಾಯಿ, ತಂದೆ, ಮಕ್ಕಳು ಮತ್ತು ಅಣ್ಣತಮ್ಮಂದಿರು ಇವರಿಗೋಸ್ಕರ ಈ ನಿಯಮ ಇರುವುದಿಲ್ಲ.
negbe eƒe ƒometɔ kekeake ko, abe dadaa alo fofoa, Via ŋutsu alo via nyɔnu, nɔvia ŋutsu,
3 ೩ ಇದಲ್ಲದೆ ಕನ್ನಿಕೆಯಾಗಿರುವ ತಂಗಿ ಇನ್ನು ಮದುವೆಯಾಗದೆ ಅವನ ಆಶ್ರಯದಲ್ಲಿರುವುದರಿಂದ ಅವಳಿಗೋಸ್ಕರ ಅವನು ಅಪವಿತ್ರ ಮಾಡಿಕೊಳ್ಳಬಹುದು.
alo nɔvia nyɔnu si meɖe srɔ̃ haɖe o, eye wòle eƒe dzikpɔkpɔ te, esi srɔ̃ mele esi o ta ene. Ate ŋu agblẽ kɔ na eɖokui le nɔvia nyɔnu sia ta.
4 ೪ ಅವನು ಕುಲದಲ್ಲಿ ನಾಯಕನಾಗಿರುವುದರಿಂದ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು, ಮಾಡಿದರೆ ಯಾಜಕಸೇವೆಗೆ ಅಯೋಗ್ಯನಾದಾನು.
Ele be wòanɔ alea, elabena nunɔla nye kplɔla le ameawo dome, eye mele be wòaƒo ɖi eɖokui abe ame bubu siwo menye nunɔlawo ene o.
5 ೫ ಅವರು ತಲೆಬೋಳಿಸಿಕೊಳ್ಳಬಾರದು, ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು.
“‘Nunɔla aɖeke mekpɔ mɔ aƒlɔ eƒe ta alo afɔ eƒe ge dzi alo asi eƒe ŋutigbalẽ o.
6 ೬ ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.
Ele be woanɔ kɔkɔe na woƒe Mawu, eye womado vlo woƒe Mawu la ƒe ŋkɔ o. Esi wònye be woawoe tsɔa dzovɔsa vɛ na Yehowa, nu si nye woƒe Mawu ƒe nuɖuɖu ta la, ele na wo be woanɔ kɔkɔe.
7 ೭ ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.
Mele be nunɔla naɖe gbolo alo nyɔnu si gbe atsu o, elabena nunɔlawo le kɔkɔe na woƒe Mawu la.
8 ೮ ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.
Mibu wo be wole kɔkɔe, elabena woawoe tsɔa miaƒe Mawu la ƒe Nuɖuɖunana. Mibu wo kɔkɔe, elabena nye Yehowa mele kɔkɔe, nye ame si wɔ mi miele kɔkɔe.
9 ೯ ಯಾಜಕನ ಮಗಳು ವೇಶ್ಯೆ ಎಂಬ ನಿಂದೆಗೆ ಒಳಗಾದರೆ ತನ್ನ ತಂದೆಯನ್ನು ನಿಂದೆಗೆ ಒಳಪಡಿಸಿದವಳಾದಳು, ಅವಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
Ne nunɔla aɖe ƒe vinyɔnu gblẽ kɔ ɖo na eɖokui hetrɔ zu gbolo la, edo ŋukpe fofoa, ele be woatɔ dzoe agbagbe.
10 ೧೦ “‘ಮಹಾಯಾಜಕನು ಅಂದರೆ ತನ್ನ ಸಹೋದರರಲ್ಲಿ ಪ್ರಧಾನನು, ಯಾವನು ತೈಲಾಭಿಷೇಕಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ದುಃಖಸೂಚನೆಗಾಗಿ ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು, ಬಟ್ಟೆಗಳನ್ನು ಹರಿದುಕೊಳ್ಳಬಾರದು.
“‘Nunɔlagã la, ame si wosi ami ɖe ta na le nɔvia ŋutsuwo dome, eye woɖoe nunɔlae be wòado nunɔlawu la, mele be wòakaka ɖa ɖe ta alo adze awu le eɖokui ŋu o.
11 ೧೧ ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿಮಿತ್ತ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.
Mekpɔ mɔ age ɖe teƒe si ame kuku le o. Mekpɔ mɔ hã be wòagblẽ kɔ ɖo na eɖokui, na fofoa alo dadaa gɔ̃ hã o.
12 ೧೨ ಇದಕ್ಕಾಗಿ ಅವನು ದೇವಸ್ಥಾನವನ್ನು ಬಿಡಲೇ ಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವರ ಮಂದಿರದ ಗೌರವಕ್ಕೆ ಕುಂದು ಬರುವುದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ, ನಾನು ಯೆಹೋವನು.
Mekpɔ mɔ agblẽ eƒe Mawu la ƒe kɔkɔeƒe ɖi alo ado gui o, elabena wokɔ eya amea ŋuti kple eƒe Mawu la ƒe ami kɔkɔe; nyee nye Yehowa.
13 ೧೩ ಅವನು ಕನ್ನಿಕೆಯನ್ನು ಮದುವೆ ಮಾಡಿಕೊಳ್ಳಬೇಕು.
Ele be wòaɖe ɖetugbivi dzadzɛ aɖe.
14 ೧೪ ಅವನು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ವೇಶ್ಯ ಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯ ಕನ್ನಿಕೆಯನ್ನೇ ಮದುವೆ ಮಾಡಿಕೊಳ್ಳಬೇಕು.
Maɖe ahosi alo nyɔnu si gbe atsu alo nyɔnu si atsu gbe loo alo gbolo o. Ele be wòaɖe ɖetugbi dzadzɛ tso eya ŋutɔ ƒe to la me,
15 ೧೫ ಇಲ್ಲವಾದರೆ ಅವನ ಸಂತತಿಯ ಸ್ವಜನರೊಳಗೆ ಅವನು ಅಪವಾದಕ್ಕೆ ಗುರಿಯಾಗುವನು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
elabena mele be wòanye fofo na ɖevi siwo nyɔnu si wòɖe la kplɔ va atsuƒee o; nu sia aɖi gbɔ̃ eya ŋutɔ ƒe viwo le eƒe amewo dome, elabena nyee nye Yehowa, ame si wɔe kɔkɔe.’”
16 ೧೬ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
Yehowa gblɔ na Mose be,
17 ೧೭ “ನೀನು ಆರೋನನಿಗೆ ಹೀಗೆ ಆಜ್ಞಾಪಿಸು, ‘ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಆಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಈ ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು.
“Gblɔ na Aron be, ‘Le dzidzime siwo gbɔna me la, nuwɔametɔ aɖeke mekpɔ mɔ ate va be yeatsɔ eƒe Mawu ƒe nuɖuɖu asa vɔ̃e o.
18 ೧೮ ಅವನು ಕುರುಡನಾಗಲಿ, ಕುಂಟನಾಗಲಿ, ವಿಕಾರ ಮುಖವುಳ್ಳವನಾಗಲಿ,
Manye le kpɔɖeŋu me, ame si nye ŋkuagbãtɔ alo xɔdrɔ̃, ame si ƒe ŋɔti gbã alo ame si to asibidɛ ade alo afɔbidɛ ade,
19 ೧೯ ವಿಪರೀತ ಅವಯವಗಳುಳ್ಳವನಾಗಲಿ, ಕೈಕಾಲು ಮುರಿದವನಾಗಲಿ,
alo wòŋe ata alo abɔ
20 ೨೦ ಗೂನು ಇಲ್ಲವೇ ಕುಬ್ಜರಾಗಲಿ, ಹೂಗಣ್ಣ ಅಥವಾ ಕಾಯಿಗಣ್ಣನಾಗಲಿ, ಕಜ್ಜಿ, ತುರಿಗಳುಳ್ಳವನಾಗಲಿ,
alo wòɖo kpo alo wònye ame kpui zegede alo tasi le ŋku dzi nɛ, wòdze akpa alo wòɖo vo o.
21 ೨೧ ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.
Ne amea nye Aron ƒe dzidzimevi hã la, womeɖe mɔ nɛ be wòawɔ dzovɔsa aɖeke na Yehowa o, le eƒe nuwɔametɔnyenye ta. Womaɖe mɔ nɛ be wòawɔ vɔsa aɖeke na Mawu o.
22 ೨೨ ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.
Ke ekpɔ mɔ aɖu nunɔlawo ƒe nu tso vɔ siwo wosa na Mawu la me, tso vɔsa kɔkɔewo kple vɔsa kɔkɔetɔwo kekeake me,
23 ೨೩ ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
gake mekpɔ mɔ ayi xɔmetsovɔ la godo alo ate ɖe vɔsamlekpui la ŋu o, le eƒe nuwɔametɔnyenye ta, ale be magaƒo ɖi nye teƒe kɔkɔe la o, elabena Yehowae kɔ eŋuti.’”
24 ೨೪ ಮೋಶೆಯು ಆರೋನನಿಗೂ, ಅವನ ಮಕ್ಕಳಿಗೂ ಮತ್ತು ಇಸ್ರಾಯೇಲರೆಲ್ಲರಿಗೂ ಈ ಆಜ್ಞೆಗಳನ್ನು ತಿಳಿಸಿದನು.
Ale Mose de se siawo na Aron kple via ŋutsuwo kple Israelviwo katã.