< ಯಾಜಕಕಾಂಡ 22 >

1 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
上主訓示梅瑟:」
2 “ಆರೋನನೂ ಮತ್ತು ಅವನ ಮಕ್ಕಳೂ ತಾವು ಅಶುದ್ಧರಾಗಿರುವಾಗ ಇಸ್ರಾಯೇಲರಿಂದ ನನಗೆ ಸಮರ್ಪಿಸಲ್ಪಟ್ಟ ಪರಿಶುದ್ಧ ದ್ರವ್ಯಗಳನ್ನು ಮುಟ್ಟಬಾರದೆಂದು ಅವರಿಗೆ ಆಜ್ಞಾಪಿಸು. ಅವರು ನನ್ನ ಪರಿಶುದ್ಧ ನಾಮದ ಘನತೆಗೆ ಕುಂದನ್ನು ತರಬಾರದು; ನಾನು ಯೆಹೋವನು.
你告訴亞郎和他的兒子,叫他們對以色列子民獻與我的聖物應謹慎,免得褻瀆了我的聖名:我是上主。
3 ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, ‘ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು.
你對他們說:世世代代,你們後裔中,若有玷汙不潔的,竟敢接近以色列子民獻與上主的聖物,這人應由我面前剷除:我是上主。
4 ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಅಥವಾ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಊಟಮಾಡಬಾರದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನಾಗಲಿ, ವೀರ್ಯಸ್ಖಲನ ಮಾಡಿಕೊಂಡವನಾಗಲಿ,
亞郎的後裔中,凡患癩病或淋病的,在他未取潔之前,不可吃聖物;凡摸過死屍所染不潔之物的,或遺精的人,
5 ಹರಿದಾಡುವ ಅಶುದ್ಧವಾದ ಕ್ರಿಮಿಕೀಟ ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಅಶುದ್ಧನಾಗಿರುವನು.
或摸了任何能染上不潔的爬蟲,或摸了能使自己染上任何不潔的人;
6 “‘ಅಶುದ್ಧವಾದುದನ್ನು ಮುಟ್ಟುವ ಯಾಜಕನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಆದುದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಬಾರದು.
凡摸了這些東西的人,直到晚上是不潔的,除非他用水洗身,不准吃聖物。
7 ಹೊತ್ತುಮುಣುಗಿದ ನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು. ಅದು ಅವನ ಆಹಾರವೇ.
太陽一落,他就潔淨了,以後可以吃聖物,因為這是屬他的食物。
8 ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.
不可吃自死或被猛壽撕裂的獸肉,免得染上不潔:我是上主。
9 ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.
他們應遵守我的訓令,免陷於罪惡;因此褻瀆訓令的,必遭死亡:我是使他們成聖的上主。
10 ೧೦ “‘ಯಾಜಕನಲ್ಲದೆ ಇತರರು ನೈವೇದ್ಯದ ಪದಾರ್ಥವನ್ನು ಊಟಮಾಡಬಾರದು. ಯಾಜಕನ ಬಳಿಯಲ್ಲಿರುವ ಅತಿಥಿಯಾಗಲಿ ಅಥವಾ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.
任何族外人,不准吃聖物;司祭的客人和傭工,也不准吃聖物;
11 ೧೧ ಆದರೆ ಯಾಜಕನು ಕ್ರಯಕ್ಕೆ ತೆಗೆದುಕೊಂಡ ಗುಲಾಮರೂ ಮತ್ತು ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು.
但是司祭用銀錢買來的僕人,卻可以吃;凡生在他家的人,也可以吃這食物。
12 ೧೨ ಯಾಜಕನ ಮಗಳು ಯಾಜಕನಲ್ಲದ ಇತರರಿಗೆ ಮದುವೆಯಾಗಿದ್ದರೆ ಅವಳು ನೈವೇದ್ಯದ ಪದಾರ್ಥಗಳನ್ನು ಊಟಮಾಡಬಾರದು.
司祭的女兒,如嫁給族外人為妻,不准吃作獻儀的聖物;
13 ೧೩ ಯಾಜಕನ ಮಗಳು ವಿಧವೆಯಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳಾಗಲಿ, ಮಕ್ಕಳಿಲ್ಲದೆ ಇದ್ದರೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ಕನ್ಯೆಯಾಗಿಯೇ ತಂದೆಯ ಮನೆಯನ್ನು ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು.
但是司祭的女兒,如成了寡婦或棄婦,因沒有兒子,又回到父家,如同她年輕時一樣,可以吃她父親的食物;但是任何族外人不得吃。
14 ೧೪ ಯಾವನಾದರೂ ತಿಳಿಯದೆ ನೈವೇದ್ಯವಾದದ್ದನ್ನು ಊಟಮಾಡಿದರೆ ಅದನ್ನು ಮತ್ತು ಅದರ ಐದನೆಯ ಭಾಗವನ್ನು ಯಾಜಕನಿಗೆ ತಂದುಕೊಡಬೇಕು.
如果一人因不慎而吃了聖物,應償還所吃的聖物,還應另加五分之一,交與司祭。
15 ೧೫ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಇಟ್ಟ ನೈವೇದ್ಯದ ಪದಾರ್ಥಗಳನ್ನು ಯಾಜಕರು ಸಾಧಾರಣವೆಂದು ಎಣಿಸಬಾರದು.
司祭不應讓以色列子民褻瀆所獻與上主的聖物,
16 ೧೬ ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
而使他們應吃自己獻的聖物,負起賠償的罪債;因為我是使他們成聖的上主。「祭牲應無瑕疵
17 ೧೭ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
上主訓示梅瑟說:」
18 ೧೮ “ನೀನು ಆರೋನನಿಗೂ, ಅವನ ಮಕ್ಕಳಿಗೂ ಹಾಗೂ ಇಸ್ರಾಯೇಲರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮ ಮಾಡುವಾಗ,
你告訴和亞郎和他的兒子,以及全體以色列子民說:以色列家中或住在以色列中的外方人,任何人如奉獻祭品,不管是為還願,或出於自願,獻給上主作全番祭的,
19 ೧೯ ಅದು ಸಮರ್ಪಕವಾಗುವಂತೆ ದನಗಳಿಂದಾಗಲಿ ಅಥವಾ ಆಡು ಮತ್ತು ಕುರಿಗಳಿಂದಾಗಲಿ ಪೂರ್ಣಾಂಗವಾದ ಗಂಡನ್ನೇ ಸಮರ್ಪಿಸಬೇಕು.
應是一隻無暇的公牛,公綿羊,或公山羊,方蒙悅納。
20 ೨೦ ಕುಂದುಕೊರತೆ ಇರುವಂಥದ್ದನ್ನು ತರಬಾರದು; ಅಂಥದು ಸಮರ್ಪಣೆ ಆಗುವುದಿಲ್ಲ.
凡身上有殘疾的,你們不應奉獻,因為這樣為你們決不會獲得悅納。
21 ೨೧ ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ದನವನ್ನು ಅಥವಾ ಹಿಂಡಿನ ಆಡು ಇಲ್ಲವೇ ಕುರಿಗಳನ್ನು ತಂದರೆ ಅವು ಯೆಹೋವನಿಗೆ ಸಮರ್ಪಕವಾಗುವುದಕ್ಕಾಗಿ ಅದು ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು.
如有人為還願,或出於自願,給上主奉獻牛羊作和平祭品,應是無暇的,方蒙悅納;身上不應有任何殘疾。
22 ೨೨ ಕುರುಡಾದದ್ದು, ಕುಂಟಾದದ್ದು, ಗಾಯವಾದದ್ದು, ಹುಣ್ಣುಳ್ಳದ್ದು, ಕಜ್ಜಿ ತುರಿಯುಳ್ಳದ್ದು ಇಂಥವುಗಳನ್ನು ಯೆಹೋವನಿಗೆ ಸಮರ್ಪಿಸಲೇಬಾರದು, ಯಜ್ಞವೇದಿಯ ಮೇಲೆ ಹೋಮ ಮಾಡಲೇಬಾರದು.
眼瞎的或殘廢的,或斷肢的,或患潰瘍的,或生痲疹的,或長癬疥的:這樣的牲畜,你們不可獻給上主;任何這樣的牲畜,不可放在祭壇上,獻給上主作火祭。
23 ೨೩ ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಣೆ ಆಗುವುದಿಲ್ಲ.
一腿太長或太短的牛或羊,你可現為自願祭祭品;但為還願,必不被悅納。
24 ೨೪ ಬೀಜಹೊಡೆದ, ಕುಟ್ಟಿದ, ಒಡೆದ ಮತ್ತು ಕೊಯ್ದ ಪಶುವನ್ನು ಯೆಹೋವನಿಗೆ ಸಮರ್ಪಿಸಬಾರದು, ಮತ್ತು ನಿಮ್ಮ ದೇಶದಲ್ಲಿ ಪಶುಗಳಿಗೆ ಹಾಗೆ ಮಾಡಲೇ ಬಾರದು.
此外,凡睪丸傷壞,砸碎,破裂,割去的牲畜,你們不可獻給上主;在你們的地域內,萬不可舉行這樣的祭獻,
25 ೨೫ ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’” ಅಂದನು.
也不可由外邦人手內接受這樣的牲畜,獻給你們的天主作供物,因為身上殘廢的,有缺陷的,為你們不會獲得悅納。」
26 ೨೬ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
上主訓示梅瑟說:
27 ೨೭ “ಕರುವಾಗಲಿ, ಕುರಿಮರಿಯಾಗಲಿ ಅಥವಾ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿನಗಳ ವರೆಗೆ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿನದಿಂದ ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅದು ಅಂಗೀಕಾರವಾಗುವುದು.
「幾時牛或綿羊或山羊一生下,應七天同其母在一起;自第八天,作為上主的火祭祭品,方蒙悅納。
28 ೨೮ ಹೆತ್ತ ಆಕಳನ್ನು, ಅದರ ಕರುವನ್ನು ಇಲ್ಲವೆ ಈದ ಆಡು, ಕುರಿಗಳನ್ನು, ಅವುಗಳ ಮರಿಗಳನ್ನು ಒಂದೇ ದಿನದಲ್ಲಿ ವಧಿಸಬಾರದು.
牛羊及其幼雛,不可在同一日內宰殺。
29 ೨೯ “ನೀವು ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಯೆಹೋವನಿಗೆ ಮಾಡುವ ಯಜ್ಞವನ್ನು ಮೆಚ್ಚಿಗೆಯಾದ ರೀತಿಯಲ್ಲೇ ಸಮರ್ಪಿಸಬೇಕು.
幾時你們給上主奉獻感恩祭,應這樣奉獻,才獲得悅納:
30 ೩೦ ಅದೇ ದಿನದಲ್ಲಿ ಅದನ್ನು ಊಟಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು. ನಾನು ಯೆಹೋವನು.
祭肉,應在當天吃完,不應留到次日早晨:我是上主。
31 ೩೧ “ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು; ನಾನು ಯೆಹೋವನು.
你們應遵守我的命令,一一依照執行:我是上主。
32 ೩೨ ನನ್ನ ಪರಿಶುದ್ಧ ನಾಮದ ಘನತೆಗೆ ಕುಂದು ತರಬಾರದು; ಇಸ್ರಾಯೇಲರಲ್ಲಿ ನಾನು ಪರಿಶುದ್ಧನೆಂದು ಎಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು.
不要褻瀆我的聖名,叫我在以色列子民中常被尊為聖;我是使你們成聖的上主,
33 ೩೩ ನಿಮ್ಮ ದೇವರಾಗುವುದಕ್ಕೆ ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದೆನಲ್ಲಾ; ನಾನು ಯೆಹೋವನು” ಎಂದು ಹೇಳಿದನು.
是我由埃及地領你們出來,為作為你們的天主:我是上主。」

< ಯಾಜಕಕಾಂಡ 22 >