< ಯಾಜಕಕಾಂಡ 22 >
1 ೧ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
और ख़ुदावन्द ने मूसा से कहा,
2 ೨ “ಆರೋನನೂ ಮತ್ತು ಅವನ ಮಕ್ಕಳೂ ತಾವು ಅಶುದ್ಧರಾಗಿರುವಾಗ ಇಸ್ರಾಯೇಲರಿಂದ ನನಗೆ ಸಮರ್ಪಿಸಲ್ಪಟ್ಟ ಪರಿಶುದ್ಧ ದ್ರವ್ಯಗಳನ್ನು ಮುಟ್ಟಬಾರದೆಂದು ಅವರಿಗೆ ಆಜ್ಞಾಪಿಸು. ಅವರು ನನ್ನ ಪರಿಶುದ್ಧ ನಾಮದ ಘನತೆಗೆ ಕುಂದನ್ನು ತರಬಾರದು; ನಾನು ಯೆಹೋವನು.
“हारून और उसके बेटों से कह कि वह बनी — इस्राईल की पाक चीज़ों से जिनको वह मेरे लिए पाक करते हैं अपने आप को बचाए रख्खें, और मेरे पाक नाम को बे — हुरमत न करें; मैं ख़ुदावन्द हूँ।
3 ೩ ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, ‘ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು.
उनको कह दे कि तुम्हारी नसल — दर — नसल जो कोई तुम्हारी नसल में से अपनी नापाकी की हालत में उन पाक चीज़ों के पास जाए, जिनको बनी — इस्राईल ख़ुदावन्द के लिए पाक करते हैं, वह शख़्स मेरे सामने से काट डाला जाएगा; मैं ख़ुदावन्द हूँ।
4 ೪ ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಅಥವಾ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಊಟಮಾಡಬಾರದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನಾಗಲಿ, ವೀರ್ಯಸ್ಖಲನ ಮಾಡಿಕೊಂಡವನಾಗಲಿ,
हारून की नसल में जो कोढ़ी, या जिरयान का मरीज़ हो वह जब तक पाक न हो जाए, पाक चीज़ों में से कुछ न खाए; और जो कोई ऐसी चीज़ को जो मुर्दे की वजह से नापाक हो गई है, या उस शख़्स की जिस की धात बहती हो छुए
5 ೫ ಹರಿದಾಡುವ ಅಶುದ್ಧವಾದ ಕ್ರಿಮಿಕೀಟ ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಅಶುದ್ಧನಾಗಿರುವನು.
या जो कोई किसी रेंगने वाले जानदार को जिसके छूने से वह नापाक हो सकता है, छुए या किसी ऐसे शख़्स को छुए जिससे उसकी नापाकी चाहे वह किसी क़िस्म की हो उसको भी लग सकती हो;
6 ೬ “‘ಅಶುದ್ಧವಾದುದನ್ನು ಮುಟ್ಟುವ ಯಾಜಕನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಆದುದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಬಾರದು.
तो वह आदमी जो इनमें से किसी को छुए शाम तक नापाक रहेगा, और जब तक पानी से ग़ुस्ल न कर ले पाक चीज़ों में से कुछ न खाए;
7 ೭ ಹೊತ್ತುಮುಣುಗಿದ ನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು. ಅದು ಅವನ ಆಹಾರವೇ.
और वह उस वक़्त पाक ठहरेगा जब आफ़ताब गुरूब हो जाए, इसके बाद वह पाक चीज़ों में से खाए, क्यूँकि यह उसकी ख़ुराक है।
8 ೮ ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.
और मुरदार या दरिन्दों के फाड़े हुए जानवर को खाने से वह अपने आप को नजिस न कर ले; मैं ख़ुदावन्द हूँ
9 ೯ ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.
इसलिए वह मेरी शरा' को माने, ऐसा न हो कि उस की वजह से उनके सिर गुनाह लगे और उसकी बेहुरमती करने की वजह से वह मर भी जाएँ, मैं ख़ुदावन्द उनका पाक करने वाला हूँ।
10 ೧೦ “‘ಯಾಜಕನಲ್ಲದೆ ಇತರರು ನೈವೇದ್ಯದ ಪದಾರ್ಥವನ್ನು ಊಟಮಾಡಬಾರದು. ಯಾಜಕನ ಬಳಿಯಲ್ಲಿರುವ ಅತಿಥಿಯಾಗಲಿ ಅಥವಾ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.
'कोई अजनबी पाक चीज़ की न खाने पाए चाहे वह काहिन ही के यहाँ ठहरा हो, या उसका नौकर हो तो भी वह कोई पाक चीज़ न खाए;
11 ೧೧ ಆದರೆ ಯಾಜಕನು ಕ್ರಯಕ್ಕೆ ತೆಗೆದುಕೊಂಡ ಗುಲಾಮರೂ ಮತ್ತು ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು.
लेकिन वह जिसे काहिन ने अपने ज़र से ख़रीदा हो उसे खा सकता है, और वह जो उसके घर में पैदा हुए हों वह भी उसके खाने में से खाएँ।
12 ೧೨ ಯಾಜಕನ ಮಗಳು ಯಾಜಕನಲ್ಲದ ಇತರರಿಗೆ ಮದುವೆಯಾಗಿದ್ದರೆ ಅವಳು ನೈವೇದ್ಯದ ಪದಾರ್ಥಗಳನ್ನು ಊಟಮಾಡಬಾರದು.
अगर काहिन की बेटी किसी अजनबी से ब्याही गई हो, तो वह पाक चीज़ों की क़ुर्बानी में से कुछ न खाए।
13 ೧೩ ಯಾಜಕನ ಮಗಳು ವಿಧವೆಯಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳಾಗಲಿ, ಮಕ್ಕಳಿಲ್ಲದೆ ಇದ್ದರೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ಕನ್ಯೆಯಾಗಿಯೇ ತಂದೆಯ ಮನೆಯನ್ನು ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು.
लेकिन अगर काहिन की बेटी बेवा हो जाए, या मुतल्लक़ा हो और बे — औलाद हो, और लड़कपन के दिनों की तरह अपने बाप के घर में फिर आ कर रहे तो वह अपने बाप के खाने में से खाए; लेकिन कोई अजनबी उसे न खाए।
14 ೧೪ ಯಾವನಾದರೂ ತಿಳಿಯದೆ ನೈವೇದ್ಯವಾದದ್ದನ್ನು ಊಟಮಾಡಿದರೆ ಅದನ್ನು ಮತ್ತು ಅದರ ಐದನೆಯ ಭಾಗವನ್ನು ಯಾಜಕನಿಗೆ ತಂದುಕೊಡಬೇಕು.
और अगर कोई अनजाने में पाक चीज़ को खा जाए तो वह उसके पाँचवें हिस्से के बराबर अपने पास से उस में मिला कर वह पाक चीज़ काहिन को दे
15 ೧೫ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಇಟ್ಟ ನೈವೇದ್ಯದ ಪದಾರ್ಥಗಳನ್ನು ಯಾಜಕರು ಸಾಧಾರಣವೆಂದು ಎಣಿಸಬಾರದು.
और वह बनी — इस्राईल की पाक चीज़ों को जिनको वह ख़ुदावन्द की नज़्र करते हों बेहुरमत करके,
16 ೧೬ ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
उनके सिर उस गुनाह का जुर्म न लादें जो उनकी पाक चीज़ों को खाने से होगा; क्यूँकि मैं ख़ुदावन्द उनका पाक करने वाला हूँ।”
17 ೧೭ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
और ख़ुदावन्द ने मूसा से कहा,
18 ೧೮ “ನೀನು ಆರೋನನಿಗೂ, ಅವನ ಮಕ್ಕಳಿಗೂ ಹಾಗೂ ಇಸ್ರಾಯೇಲರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮ ಮಾಡುವಾಗ,
“हारून और उसके बेटों और सब बनी — इस्राईल से कह कि इस्राईल के घराने का या उन परदेसियों में से जो इस्राईलियों के बीच रहते हैं, जो कोई शख़्स अपनी क़ुर्बानी लाए, चाहे वह कोई मिन्नत की क़ुर्बानी हो या रज़ा की क़ुर्बानी, जिसे वह सोख़्तनी क़ुर्बानी के तौर पर ख़ुदावन्द के सामने पेश करते हैं;
19 ೧೯ ಅದು ಸಮರ್ಪಕವಾಗುವಂತೆ ದನಗಳಿಂದಾಗಲಿ ಅಥವಾ ಆಡು ಮತ್ತು ಕುರಿಗಳಿಂದಾಗಲಿ ಪೂರ್ಣಾಂಗವಾದ ಗಂಡನ್ನೇ ಸಮರ್ಪಿಸಬೇಕು.
तो अपने मक़बूल होने के लिए तुम बैलों या बर्रों या बकरों में से बे — 'ऐब नर चढ़ाना।
20 ೨೦ ಕುಂದುಕೊರತೆ ಇರುವಂಥದ್ದನ್ನು ತರಬಾರದು; ಅಂಥದು ಸಮರ್ಪಣೆ ಆಗುವುದಿಲ್ಲ.
और जिसमें 'ऐब हो उसे न अदा करना क्यूँकि वह तुम्हारी तरफ़ से मक़बूल न होगा।
21 ೨೧ ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ದನವನ್ನು ಅಥವಾ ಹಿಂಡಿನ ಆಡು ಇಲ್ಲವೇ ಕುರಿಗಳನ್ನು ತಂದರೆ ಅವು ಯೆಹೋವನಿಗೆ ಸಮರ್ಪಕವಾಗುವುದಕ್ಕಾಗಿ ಅದು ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು.
और जो कोई अपनी मिन्नत पूरी करने के लिए या रज़ा की क़ुर्बानी के तौर पर गाय, बैल या भेड़ बकरी में से सलामती का ज़बीहा ख़ुदावन्द के सामने पेश करे, तो वह जानवर मक़बूल ठहरने के लिए बे — 'ऐब हो; उसमें कोई नुक़्स न हो।
22 ೨೨ ಕುರುಡಾದದ್ದು, ಕುಂಟಾದದ್ದು, ಗಾಯವಾದದ್ದು, ಹುಣ್ಣುಳ್ಳದ್ದು, ಕಜ್ಜಿ ತುರಿಯುಳ್ಳದ್ದು ಇಂಥವುಗಳನ್ನು ಯೆಹೋವನಿಗೆ ಸಮರ್ಪಿಸಲೇಬಾರದು, ಯಜ್ಞವೇದಿಯ ಮೇಲೆ ಹೋಮ ಮಾಡಲೇಬಾರದು.
जो अन्धा या शिकस्ता — ए — 'उज़्व या लूला हो, जिसके रसौली या खुजली या पपड़ियाँ हों, ऐसों को ख़ुदावन्द के सामने न चढ़ाना और न मज़बह पर उनकी आतिशी क़ुर्बानी ख़ुदावन्द के सामने पेश करना।
23 ೨೩ ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಣೆ ಆಗುವುದಿಲ್ಲ.
जिस बछड़े या बर्रे का कोई 'उज़्व ज़्यादा या कम हो उसे तो रज़ा की क़ुर्बानी के तौर पर पेश कर सकता है, लेकिन मिन्नत पूरी करने के लिए वह मक़बूल न होगा।
24 ೨೪ ಬೀಜಹೊಡೆದ, ಕುಟ್ಟಿದ, ಒಡೆದ ಮತ್ತು ಕೊಯ್ದ ಪಶುವನ್ನು ಯೆಹೋವನಿಗೆ ಸಮರ್ಪಿಸಬಾರದು, ಮತ್ತು ನಿಮ್ಮ ದೇಶದಲ್ಲಿ ಪಶುಗಳಿಗೆ ಹಾಗೆ ಮಾಡಲೇ ಬಾರದು.
जिस जानवर के ख़ुसिए कुचले हुए या चूर किए हुए या टूटे या कटे हुए हों, उसे तुम ख़ुदावन्द के सामने न चढ़ाना और न अपने मुल्क में ऐसा काम करना;
25 ೨೫ ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’” ಅಂದನು.
और न इनमें से किसी को लेकर तुम अपने ख़ुदा की ग़िज़ा परदेसी या अजनबी के हाथ से अदा करवाना, क्यूँकि उनका बिगाड़ उनमें मौजूद होता है, उनमें 'ऐब है इसलिए वह तुम्हारी तरफ़ से मक़बूल न होंगे।”
26 ೨೬ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
और ख़ुदावन्द ने मूसा से कहा,
27 ೨೭ “ಕರುವಾಗಲಿ, ಕುರಿಮರಿಯಾಗಲಿ ಅಥವಾ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿನಗಳ ವರೆಗೆ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿನದಿಂದ ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅದು ಅಂಗೀಕಾರವಾಗುವುದು.
“जिस वक़्त बछड़ा या भेड़ या बकरी का बच्चा पैदा हो, तो सात दिन तक वह अपनी माँ के साथ रहे और आठवें दिन से और उसके बाद से वह ख़ुदावन्द की आतिशी क़ुर्बानी के लिए मक़बूल होगा।
28 ೨೮ ಹೆತ್ತ ಆಕಳನ್ನು, ಅದರ ಕರುವನ್ನು ಇಲ್ಲವೆ ಈದ ಆಡು, ಕುರಿಗಳನ್ನು, ಅವುಗಳ ಮರಿಗಳನ್ನು ಒಂದೇ ದಿನದಲ್ಲಿ ವಧಿಸಬಾರದು.
और चाहे गाय हो या भेड़, बकरी, तुम उसे और उसके बच्चे दोनों को एक ही दिन ज़बह न करना।
29 ೨೯ “ನೀವು ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಯೆಹೋವನಿಗೆ ಮಾಡುವ ಯಜ್ಞವನ್ನು ಮೆಚ್ಚಿಗೆಯಾದ ರೀತಿಯಲ್ಲೇ ಸಮರ್ಪಿಸಬೇಕು.
और जब तुम ख़ुदावन्द के शुक्राने का ज़बीहा क़ुर्बानी करो, तो उसे इस तरह क़ुर्बानी करना कि तुम मक़बूल ठहरो;
30 ೩೦ ಅದೇ ದಿನದಲ್ಲಿ ಅದನ್ನು ಊಟಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು. ನಾನು ಯೆಹೋವನು.
और वह उसी दिन खा भी लिया जाए, तुम उसमें से कुछ भी दूसरे दिन की सुबह तक बाक़ी न छोड़ना; मैं ख़ुदावन्द हूँ।
31 ೩೧ “ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು; ನಾನು ಯೆಹೋವನು.
“इसलिए तुम मेरे हुक्मों को मानना और उन पर 'अमल करना; मैं ख़ुदावन्द हूँ।
32 ೩೨ ನನ್ನ ಪರಿಶುದ್ಧ ನಾಮದ ಘನತೆಗೆ ಕುಂದು ತರಬಾರದು; ಇಸ್ರಾಯೇಲರಲ್ಲಿ ನಾನು ಪರಿಶುದ್ಧನೆಂದು ಎಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು.
तुम मेरे पाक नाम को नापाक न ठहराना, क्यूँकि मैं बनी — इस्राईल के बीच ज़रूर ही पाक माना जाऊँगा; मैं ख़ुदावन्द तुम्हारा पाक करने वाला हूँ,
33 ೩೩ ನಿಮ್ಮ ದೇವರಾಗುವುದಕ್ಕೆ ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದೆನಲ್ಲಾ; ನಾನು ಯೆಹೋವನು” ಎಂದು ಹೇಳಿದನು.
जो तुम को मुल्क — ए — मिस्र से निकाल लाया हूँ ताकि तुम्हारा ख़ुदा बना रहूँ, मैं ख़ुदावन्द हूँ।”