< ಯಾಜಕಕಾಂಡ 24 >
1 ೧ ಯೆಹೋವನು ಮೋಶೆಯ ಸಂಗಡ ಮಾತನಾಡಿ,
Господ говори още на Моисея, казвайки:
2 ೨ “ದೇವಸ್ಥಾನದಲ್ಲಿನ ದೀಪಗಳನ್ನು ಪ್ರತಿನಿತ್ಯವೂ ಉರಿಸುವುದಕ್ಕಾಗಿ ಇಸ್ರಾಯೇಲರು ಎಣ್ಣೆಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.
Заповядай на израилтяните да ти донесат първоток чисто дървено масло за осветление, за да свети постоянно светило.
3 ೩ ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಪೆಟ್ಟಿಗೆಯ ಮುಂದಣ ತೆರೆಯ ಹೊರಗೆ, ಆ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ಜಾವದ ವರೆಗೂ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.
Аарон да го приготвя отвън завесата, която е пред плочите на свидетелството в шатъра за срещане, за да свети от вечер до заран пред Господа винаги; това да бъде вечен закон във всичките ви поколения.
4 ೪ ಅವನು ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ಹಣತೆಗಳನ್ನು ಆ ಚೊಕ್ಕಬಂಗಾರದ ದೀಪಸ್ತಂಭದ ಮೇಲೆ ಸರಿಯಾಗಿ ಇಟ್ಟು ನಿರ್ವಹಿಸಬೇಕು.
На чистозлатния светилник да приготвя светилата пред Господа винаги.
5 ೫ “ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು.
И да вземеш чисто брашно, от което да опечеш дванадесет пити; всяка пита да бъде две десети от ефа.
6 ೬ ಅವುಗಳನ್ನು ಆರಾರು ರೊಟ್ಟಿಗಳ ಮೇರೆಗೆ ಎರಡು ರಾಶಿಗಳಾಗಿ, ಚೊಕ್ಕಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು.
И да ги сложиш на два реда, по шест на всеки ред, върху чистозлатната трапеза пред Господа.
7 ೭ ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಬೇಕು.
И на всеки ред да туриш чист ливан; и това ще бъде върху хляба за спомен в принос чрез огън Господу.
8 ೮ ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಕ್ರಮಪಡಿಸಬೇಕು. ಶಾಶ್ವತವಾದ ನಿಬಂಧನೆಯ ಮೇರೆಗೆ ಅವುಗಳನ್ನು ಇಸ್ರಾಯೇಲರಿಗೋಸ್ಕರ ಯೆಹೋವನಿಗೆ ಸಮರ್ಪಿಸಬೇಕು.
Всеки съботен ден свещеникът да слага това винаги пред Господа; това е от страна на израилтяните вечен завет.
9 ೯ ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು” ಅಂದನು.
И те ще бъдат за Аарона и за синовете му, които да ги ядат на свето място; защото са пресвети нему от жертвите принасяни чрез огън Господу; това е вечен закон.
10 ೧೦ ಇಸ್ರಾಯೇಲ್ ಸ್ತ್ರೀಯಲ್ಲಿ ಐಗುಪ್ತ ಪುರುಷನಿಂದ ಹುಟ್ಟಿದವನೊಬ್ಬನು ಇಸ್ರಾಯೇಲರ ಪಾಳೆಯದಲ್ಲಿ, ಇಸ್ರಾಯೇಲನಾದ ಒಬ್ಬ ಮನುಷ್ಯನ ಸಂಗಡ ಜಗಳವಾಡುತ್ತಾ ಬಂದನು.
И синът на една израилтянка, на когото бащата беше египтянин, излезе между израилтяните; и синът на израилтянката и един израилтянин се караха в стана.
11 ೧೧ ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.
И синът на израилтянката похули Господното Име и прокле. И доведоха го при Моисея. (А името на майка му беше Саломита, дъщеря на Даврия, от Дановото племе).
12 ೧೨ ಅವನ ವಿಷಯವಾಗಿ ಯೆಹೋವನ ತೀರ್ಪನ್ನು ತಿಳುಕೊಳ್ಳುವ ತನಕ ಅವನನ್ನು ಕಾವಲಲ್ಲಿರಿಸಿದರು.
И туриха го под стража, догде им се обяви от Господа, какво да му сторят.
13 ೧೩ ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
И Господ говори на Моисея, казвайки:
14 ೧೪ “ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.
Изведи вън от стана онзи, който прокле; и всички, които са го чули, нека турят ръцете си на главата му, и цялото общество нека го убие с камъни.
15 ೧೫ ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.
И говори на израилтяните, като речеш: Който прокълне своя Бог ще носи греха си.
16 ೧೬ ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣ ಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇ ಆಗಿರಲಿ ಅಥವಾ ಸ್ವದೇಶಸ್ಥನೇ ಆಗಿರಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.
Който похули Господното име непременно да се умъртви; цялото общество да го убие с камъни; бил той чужденец или туземец, когато похули Господното име, да се умъртви.
17 ೧೭ “‘ಮನುಷ್ಯನನ್ನು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.
Който убие някой човек, непременно да се умъртви.
18 ೧೮ ಪಶುವನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು, ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು.
А който убие животно, да го плати, Живот за живот.
19 ೧೯ ಯಾವನಾದರೂ ಮತ್ತೊಬ್ಬನನ್ನು ಅಂಗಹೀನಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಿಸಬೇಕು.
И ако някой причини повреда на ближния си, нека се направи нему така, както е направил той:
20 ೨೦ ಅವಯವವನ್ನು ಮುರಿದವನಿಗೆ ಅವಯವವನ್ನು ಮುರಿಯುವುದೇ ಶಿಕ್ಷೆ. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗೆಸಬೇಕು. ಮತ್ತೊಬ್ಬನನ್ನು ಅಂಗಹೀನ ಮಾಡಿದವನಿಗೆ ಈ ಪ್ರಕಾರ ಪ್ರತಿಕಾರ ಮಾಡಬೇಕು.
строшено за строшено, око за око, зъб за зъб; според повредата, която причини той на човека, така да се направи и нему.
21 ೨೧ ಪಶುವನ್ನು ಕೊಂದವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.
Който убие животно, да го плати; а който убие човек, да се умъртви.
22 ೨೨ ಅನ್ಯರಿಗಾಗಲಿ ಅಥವಾ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಯೆಹೋವನು’” ಎಂಬುದೇ.
Един закон да имате, както за чужденеца така и за туземеца; защото Аз съм Господ вашият Бог.
23 ೨೩ ಮೋಶೆ ಈ ಮಾತುಗಳನ್ನು ಇಸ್ರಾಯೇಲರಿಗೆ ತಿಳಿಸಲಾಗಿ ಅವರು ದೂಷಿಸಿದವನಾದ ಆ ಮನುಷ್ಯನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದುಬಿಟ್ಟರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು.
И тъй, Моисей каза на израилтяните; и те изведоха вън от стана онзи, който бе проклел, и го убиха с камъни; израилтяните сториха, според както Господ заповяда на Моисея.