< ಯಾಜಕಕಾಂಡ 25 >

1 ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಗೆ ಹೇಳಿದ್ದೇನೆಂದರೆ,
Og HERREN talede til Moses på Sinaj Bjerg og sagde:
2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನ ಗೌರವಾರ್ಥವಾಗಿ ಸಬ್ಬತ್ ಕಾಲವನ್ನು ಆಚರಿಸಬೇಕು.
Tal til Israeliterne og sig til dem: Når I kommer til det Land, jeg vil give eder, skal Landet holde Sabbatshvile for. HERREN.
3 ಆರು ವರ್ಷಗಳು ನೀವು ಹೊಲದಲ್ಲಿ ಬೀಜವನ್ನು ಬಿತ್ತಬಹುದು, ದ್ರಾಕ್ಷಿ ತೋಟದ ಕೆಲಸವನ್ನು ನಡೆಸಬಹುದು ಮತ್ತು ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು.
Seks År skal du beså din Mark, og seks År skal du beskære din Vingård og indsamle Landets Afgrøde;
4 ಆದರೆ ಏಳನೆಯ ವರ್ಷ ಯಾವ ವ್ಯವಸಾಯ ಮಾಡಬಾರದ ವಿಶ್ರಾಂತಿ ಕಾಲವಾಗಿಯೂ ಮತ್ತು ಯೆಹೋವನಿಗೆ ಆಚರಿಸಬೇಕಾದ ಸಬ್ಬತ್ ಕಾಲವಾಗಿಯೂ ಇರಬೇಕು. ಹೊಲದಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು.
men i det syvende År skal Landet have en fuldkommen Sabbatshvile, en Sabbat for HERREN; din Mark må du ikke beså, og din Vingård må du ikke beskære.
5 ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು, ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರ್ಷವೆಲ್ಲಾ ಭೂಮಿಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು.
Det selvgroede efter din Høst må du ikke høste, og Druerne på de ubeskårne Vinstokke må du ikke plukke; det skal være et Sabbatsår for Landet.
6 ಆದರೆ ಅಂತಹ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂಮಿಯಲ್ಲಿ ಹುಟ್ಟಿದ್ದು ನಿಮಗೂ, ನಿಮ್ಮ ದಾಸದಾಸಿಯರಿಗೂ, ಕೂಲಿಯವರಿಗೂ,
Hvad der gror af sig selv, medens Landet holder Sabbat, skal tjene eder til Føde, dig selv, din Træl og din Trælkvinde, din Daglejer og den indvandrede hos dig, dem, der bor som fremmede hos dig;
7 ನಿಮ್ಮ ಬಳಿಯಲ್ಲಿ ವಾಸವಾಗಿರುವವರಿಗೂ, ನಿಮ್ಮ ಪಶುಗಳಿಗೂ ಮತ್ತು ದೇಶದಲ್ಲಿರುವ ಕಾಡುಮೃಗಗಳಿಗೂ ಆಹಾರವಾಗಬಹುದು.
dit Kvæg og de vilde Dyr i dit Land skal hele Afgrøden tjene til Føde.
8 “‘ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು.
Og du skal tælle dig syv Årsabbater frem, syv Gange syv År, så de syv Årsabbater udgør et Tidsrum af ni og fyrretyve År.
9 ಆಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ದೇಶದಲ್ಲೆಲ್ಲಾ ಗಟ್ಟಿಯಾಗಿ ಕೊಂಬನ್ನು ಊದಿಸಬೇಕು. ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬನ್ನು ಊದಿಸಬೇಕು.
Så skal du lade Alarmhornet lyde rundt om på den tiende Dag i den syvende Måned; på Forsoningsdagen skal I lade Hornet lyde rundt om i hele eders Land.
10 ೧೦ ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು.
Og I skal hellige det halvtredsindstyvende År og udråbe Frigivelse i Landet for alle Indbyggerne; et Jubelår skal det være eder; enhver af eder skal vende tilbage til sin Ejendom, og enhver af eder skal vende tilbage til sin Slægt;
11 ೧೧ ಆ ಐವತ್ತನೆಯ ವರ್ಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು, ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬೆಳದ ಹಣ್ಣನ್ನು ಸಂಗ್ರಹಿಸಬಾರದು.
et Jubelår skal dette År, det halvtredsindstyvende, være eder; I må ikke så og ikke høste, hvad der gror af sig selv i det, eller plukke Druer af de ubeskårne Vinstokke;
12 ೧೨ ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬೇಕು.
thi det er et Jubelår, helligt skal det være eder; I skal spise, hvad Marken bærer af sig selv.
13 ೧೩ “‘ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು.
I Jubelåret skal enhver af eder vende tilbage til sin Ejendom.
14 ೧೪ ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.
Når du sælger din Næste noget eller køber noget af ham, må I ikke forurette hinanden.
15 ೧೫ ಹಿಂದಿನ ಜೂಬಿಲಿ ಸಂವತ್ಸರದಿಂದ ಎಷ್ಟು ವರ್ಷವಾಯಿತೆಂದು ಲೆಕ್ಕಿಸಿ, ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು; ಅದರಂತೆ ಮಾರುವವನು ಎಷ್ಟು ವರ್ಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು.
Når du køber noget af din Næste, skal der regnes med Årene siden sidste Jubelår; når han sælger dig noget, skal der regnes med Afgrøderne indtil næste Jubelår.
16 ೧೬ ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು, ಕಡಿಮೆಯಾದರೆ ಕಡಿಮೆ ಮಾಡಬೇಕು; ಏಕೆಂದರೆ ಅವನು ಮಾರುವುದು ಭೂಮಿಯನ್ನಲ್ಲ, ಲೆಕ್ಕದ ಪ್ರಕಾರ ಬೆಳೆಗಳನ್ನೇ ಮಾರುತ್ತಾನಲ್ಲಾ.
Jo flere År der er tilbage, des højere må du sætte Prisen, jo færre, des lavere, thi hvad han sælger dig, er et vist Antal Afgrøder.
17 ೧೭ ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.
Ingen af eder må forurette sin Næste; du skal frygte din Gud, thi jeg er HERREN din Gud!
18 ೧೮ “‘ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ಆ ದೇಶದಲ್ಲಿ ನಿರ್ಭಯವಾಗಿ ವಾಸವಾಗಿರುವಿರಿ.
I skal gøre efter mine Anordninger og holde mine Lovbud, så I gør efter dem; så skal I bo trygt i Landet,
19 ೧೯ ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.
og Landet skal give sin Frugt, så I kan spise eder mætte og bo trygt deri.
20 ೨೦ “‘ಏಳನೆಯ ವರ್ಷದಲ್ಲಿ ಬೀಜವನ್ನು ಬಿತ್ತುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆ ಇಲ್ಲವಲ್ಲಾ; ಆ ವರ್ಷದಲ್ಲಿ ಏನು ತಿನ್ನಬೇಕು?’ ಎಂದು ವಿಚಾರಿಸುತ್ತೀರೋ
Men når I siger: "Hvad skal vi da spise i det syvende År, når vi hverken sår eller indsamler vor Afgrøde?"
21 ೨೧ ಕೇಳಿರಿ, ಆರನೆಯ ವರ್ಷದ ಬೆಳೆ ನನ್ನ ಅನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.
så vil jeg opbyde min Velsignelse til Bedste for eder i det sjette År, så det bærer Afgrøde for de tre År;
22 ೨೨ ನೀವು ಎಂಟನೆಯ ವರ್ಷದಲ್ಲಿ ಬೀಜವನ್ನು ಬಿತ್ತಿ, ಅದರ ಬೆಳೆ ದೊರೆಯುವ ತನಕ ಅಂದರೆ ಒಂಭತ್ತನೆಯ ವರ್ಷದ ವರೆಗೆ ಹಿಂದಿನ ವರ್ಷಗಳಲ್ಲಿ ನೀವು ಸಂಗ್ರಹಿಸಿದ ಬೆಳೆಯಿಂದಲೇ ಜೀವನಮಾಡುವಿರಿ.
i det ottende År skal I så, men I skal leve af gammelt Korn af den sidste Afgrøde indtil det niende År; indtil dets Afgrøde kommer, skal I leve af gammelt Korn.
23 ೨೩ “‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.
Jorden i Landet må I ikke sælge uigenkaldeligt; thi mig tilhører Landet, I er kun fremmede og indvandrede hos mig;
24 ೨೪ ನಿಮ್ಮಲ್ಲಿ ಮತ್ತೊಬ್ಬನ ಸ್ವತ್ತಿನ ಭೂಮಿ ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು.
overalt i det Land, I får i Eje, skal I sørge for, at Jorden kan indløses.
25 ೨೫ “‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.
Når din Broder kommer i Trang, så han må sælge noget af sin Ejendom, skal hans nærmeste Slægtning melde sig som Løser for ham og indløse, hvad hans Broder har solgt.
26 ೨೬ ಬಿಡಿಸುವ ಬಂಧುವು ಇಲ್ಲದೆಹೋದ ಪಕ್ಷಕ್ಕೆ ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಷ್ಟು ಹಣವನ್ನು ಸಂಪಾದಿಸಿದರೆ,
Hvis en ingen Løser har, men selv bliver i Stand til at skaffe den fornødne Løsesum,
27 ೨೭ ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು ಉಳಿದ ಕ್ರಯವನ್ನು ಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು.
skal han udregne, hvor mange År der er gået siden Salget, og kun tilbagebetale Manden der købte det, for den Tid, der er tilbage, og derpå igen overtage sin Ejendom.
28 ೨೮ ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು.
Er han derimod ikke i Stand til at skaffe den fornødne Sum til Tilbagebetalingen, så skal det, han har solgt, blive i Køberens Eje til Jubelåret; men i Jubelåret bliver det frit, så han atter kan overtage sin Ejendom.
29 ೨೯ “‘ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು.
Når en Mand sælger et Beboelseshus i en By med Mure om, gælder hans Indløsningsret kun et fuldt År efter Salget; hans Indløsningsret gælder et År.
30 ೩೦ ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರ್ಷದೊಳಗಾಗಿ ಬಿಡಿಸಿಕೊಳ್ಳಲು ಸಾಧ್ಯವಾಗದೆ ಹೋದರೆ, ಅದು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗಿ ಮಾರಿದವನಿಗೆ ಮತ್ತು ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು.
Hvis derfor Indløsning ikke har fundet Sted, før et fuldt År er omme, går Huset i Byen med Mure om uigenkaldeligt over i Køberens og hans Efterkommeres Eje; det bliver ikke frit i Jubelåret.
31 ೩೧ ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಲ್ಪಡಬೇಕು; ಅವುಗಳನ್ನು ಬಿಡಿಸುವ ಅಧಿಕಾರವಿದ್ದು, ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು.
Derimod henregnes Huse i Landsbyer, der ikke er omgivne af Mure, til Marklandet; for dem gælder Indløsningsretten, og i Jubelåret bliver de fri.
32 ೩೨ ಆದರೆ ಲೇವಿಯರ ಸ್ವತ್ತಾಗಿರುವ ಪಟ್ಟಣಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸುವ ಅಧಿಕಾರವು ಲೇವಿಯರಿಗೆ ಯಾವಾಗಲೂ ಇರುವುದು.
Men med Hensyn til Leviternes Byer, Husene i de Byer, der tilhører dem, da gælder der en ubegrænset Indløsningsret for Leviterne;
33 ೩೩ ಲೇವಿಯರೊಳಗೆ ಯಾರೂ ಅದನ್ನು ಬಿಡಿಸದೆಹೋದರೆ, ಲೇವಿಯರ ಸ್ವಂತವಾಗಿರುವ ಅಂತಹ ಪಟ್ಟಣಗಳಲ್ಲಿ ಮಾರಲ್ಪಟ್ಟ ಮನೆ ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವುದು. ಲೇವಿಯರ ಪಟ್ಟಣಗಳಲ್ಲಿನ ಮನೆಗಳು ಇಸ್ರಾಯೇಲರ ಮಧ್ಯದಲ್ಲಿರುವ ಅವರ ಸ್ವಾಸ್ತ್ಯವಷ್ಡೆ.
og når en af Leviterne ikke gør sin Indløsningsret gældende, bliver Huset, han solgte, i de Byer, der tilhører dem, frit i Jubelåret, thi Husene i Leviternes Byer er deres Ejendom blandt Israeliterne.
34 ೩೪ ಅವರು ತಮ್ಮ ಪಟ್ಟಣಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಬಾರದು. ಅವು ಅವರಿಗೆ ಶಾಶ್ವತವಾದ ಸ್ವತ್ತು.
Heller ikke må Græsmarkerne, der hører til deres Byer, sælges, thi de tilhører dem som evigt Eje.
35 ೩೫ “‘ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು.
Når din Broder i dit Nabolag kommer i Trang og ikke kan bjærge Livet, skal du holde ham oppe; som fremmed og indvandret skal han leve hos dig.
36 ೩೬ ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.
Du må ikke tage Rente eller Opgæld af ham, men du skal frygte din Gud og lade din Broder leve hos dig;
37 ೩೭ ನೀವು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ದವಸಕೊಟ್ಟರೆ ಲಾಭವನ್ನು ಕೇಳಬಾರದು.
du må ikke låne ham Penge mod Renter eller give ham af din Føde mod Opgæld.
38 ೩೮ ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವುದಕ್ಕೂ ಮತ್ತು ನಿಮಗೆ ಕಾನಾನ್ ದೇಶವನ್ನು ಕೊಡುವುದಕ್ಕೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದವನು ನಾನೇ.
Jeg er HERREN eders Gud, som førte eder ud af Ægypten for at give eder Kana'ans Land, for at være eders Gud.
39 ೩೯ “‘ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು.
Når din Broder i dit Nabolag kommer i Trang og han må sælge sig selv til dig, må du ikke lade ham arbejde som Træl,
40 ೪೦ ಅವನು ಕೂಲಿಯವನಂತೆಯೂ ಇಲ್ಲವೇ ಪ್ರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ.
men han skal være hos dig som Daglejer eller indvandret; han skal arbejde hos dig til Jubelåret.
41 ೪೧ ಆಗ ಅವನನ್ನೂ ಮತ್ತು ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವತ್ತಿಗೂ ಹೋಗಬಹುದು.
Da skal han gives fri sammen med sine Børn og vende tilbage til sin Slægt og sine Fædres Ejendom,
42 ೪೨ ಅವರು ನನಗೆ ಗುಲಾಮರಾಗಿದ್ದಾರೆ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನು; ದಾಸರನ್ನು ಮಾರುವಂತೆ ಅವರನ್ನು ಮಾರಬಾರದು.
thi mine Trælle er de, som jeg førte ud af Ægypten; de må ikke sælges, som man sælger Trælle.
43 ೪೩ ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು.
Du må ikke bruge din Magt over ham med Hårdhed; du skal flygte din Gud.
44 ೪೪ ನಿಮಗೆ ದಾಸದಾಸಿಯರು ಬೇಕಾಗಿದ್ದರೆ ಸುತ್ತಲಿರುವ ಅನ್ಯರನ್ನು ಕ್ರಯಕ್ಕೆ ತೆಗೆದುಕೊಳ್ಳಬಹುದು.
Men har du Brug for Trælle og Trælkvinder, skal du købe dem af de Folkeslag, der bor rundt om eder;
45 ೪೫ ನಿಮ್ಮ ನಡುವೆ ಇರುವ ವಿದೇಶಿಯರನ್ನೂ ಮತ್ತು ನಿಮ್ಮ ದೇಶದಲ್ಲಿ ಅವರಿಂದ ಹುಟ್ಟಿದವರನ್ನೂ ಕ್ರಯಕ್ಕೆ ತೆಗೆದುಕೊಳ್ಳಬಹುದು; ಅಂಥವರು ನಿಮಗೆ ಸೊತ್ತಾಗಬಹುದು.
også af Børnene efter de indvandrede, der bor som fremmede hos eder, må I købe og af deres Familier, som er hos eder, og som de har avlet i eders Land; de må blive eders Ejendom,
46 ೪೬ ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವತ್ತಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತ ದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲರಾದ ನೀವಾದರೋ ಎಲ್ಲರೂ ಸಹೋದರರಾಗಿರುವುದರಿಂದ ಒಬ್ಬರಿಂದ ಒಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು.
og dem må I lade gå i Arv og Eje til eders Børn efter eder; dem må I bruge som Trælle på Livstid; men over Israeliterne, eders Brødre, må du ikke bruge din Magt med Hårdhed, Broder over Broder.
47 ೪೭ “‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿದ್ದು ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅಥವಾ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.
Når en fremmed eller en indvandret hos dig kommer til Velstand, og en af dine Brødre i hans Nabolag kommer i Trang, og han må sælge sig til den fremmede eller den indvandrede hos dig eller til en Efterkommer af en fremmeds Slægt,
48 ೪೮ ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು.
så gælder Indløsningsretten for ham efter Salget; en af hans Brødre må indløse ham,
49 ೪೯ ಅವನ ದೊಡ್ಡಪ್ಪ, ಚಿಕ್ಕಪ್ಪಂದಿರಾಗಲಿ, ಇವರ ಮಕ್ಕಳಾಗಲಿ ಅಥವಾ ಸಮೀಪಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.
eller også må hans Farbroder eller Fætter eller en anden kødelig Slægtning af hans Familie indløse ham; han må også indløse sig selv, hvis han får Evne dertil.
50 ೫೦ ಅವನು ತನ್ನನ್ನು ಮಾರಿಕೊಂಡ ವರ್ಷ ಮೊದಲುಗೊಂಡು ಮುಂದಣ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರ್ಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕ ಮಾಡುವಂತೆ ಅವನ ವಿಷಯದಲ್ಲಿಯೂ ಲೆಕ್ಕ ಮಾಡಬೇಕು.
Da skal han sammen med den, der købte ham, udregne Tiden fra det År, han solgte sig til ham, til Jubelåret, og Købesummen skal svare til det Åremål; hans Arbejdstid hos ham skal regnes som en Daglejers.
51 ೫೧ ಜೂಬಿಲಿ ಸಂವತ್ಸರವು ಬರುವುದಕ್ಕೆ ಇನ್ನು ಅನೇಕ ವರ್ಷಗಳಿದ್ದರೆ ಅವುಗಳ ಪ್ರಕಾರವೇ ತನ್ನ ಬಿಡುಗಡೆಯ ಕ್ರಯವನ್ನೂ ಕೊಡಬೇಕು.
Er der endnu mange År tilbage, skal han i Løsesum udrede den tilsvarende Del af Købesummen.
52 ೫೨ ಕೆಲವು ವರ್ಷಗಳು ಮಾತ್ರ ಉಳಿದರೆ ಸ್ವಲ್ಪಭಾಗವನ್ನೂ ದಣಿಗೆ ಕೊಟ್ಟು ತನ್ನನ್ನು ಬಿಡಿಸಿಕೊಳ್ಳಬೇಕು.
Og er der kun få År tilbage til Jubelåret, skal han regne dermed og udrede sin Løsesum i Forhold til de År, han har tilbage.
53 ೫೩ ಅವನು ವರ್ಷವರ್ಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳುವುದನ್ನು ನೀವು ನೋಡಿ ಸುಮ್ಮನೆ ಇರಬಾರದು.
Som en År for År lejet Daglejer skal han være hos ham; du må ikke roligt se på, at Køberen bruger sin Magt over ham med Hårdhed.
54 ೫೪ ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಮತ್ತು ಅವನ ಮಕ್ಕಳೂ ಬಿಡುಗಡೆಯಾಗಬೇಕು.
Men indløses han ikke på en af disse Måder, skal han frigives i Jubelåret, både han selv og hans Børn.
55 ೫೫ ಏಕೆಂದರೆ ಇಸ್ರಾಯೇಲರು ನನ್ನ ದಾಸರೇ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು.
Thi mig tilhører Israeliterne som Trælle; mine Trælle er de, thi jeg førte dem ud af Ægypten. Jeg er HERREN eders Gud!

< ಯಾಜಕಕಾಂಡ 25 >