< ಯಾಜಕಕಾಂಡ 26 >

1 “ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.
«لَا تَصْنَعُوا لَكُمْ أَوْثَانًا، وَلَا تُقِيمُوا لَكُمْ تِمْثَالًا مَنْحُوتًا أَوْ نَصَبًا، وَلَا تَجْعَلُوا فِي أَرْضِكُمْ حَجَرًا مُصَوَّرًا لِتَسْجُدُوا لَهُ. لِأَنِّي أَنَا ٱلرَّبُّ إِلَهُكُمْ.١
2 ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.
سُبُوتِي تَحْفَظُونَ وَمَقْدِسِي تَهَابُونَ. أَنَا ٱلرَّبُّ.٢
3 “ನೀವು ನನ್ನ ನಿಯಮಗಳನ್ನು ಕೈಕೊಂಡು, ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ,
«إِذَا سَلَكْتُمْ فِي فَرَائِضِي وَحَفِظْتُمْ وَصَايَايَ وَعَمِلْتُمْ بِهَا،٣
4 ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು.
أُعْطِي مَطَرَكُمْ فِي حِينِهِ، وَتُعْطِي ٱلْأَرْضُ غَلَّتَهَا، وَتُعْطِي أَشْجَارُ ٱلْحَقْلِ أَثْمَارَهَا،٤
5 ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.
وَيَلْحَقُ دِرَاسُكُمْ بِٱلْقِطَافِ، وَيَلْحَقُ ٱلْقِطَافُ بِٱلزَّرْعِ، فَتَأْكُلُونَ خُبْزَكُمْ لِلشِّبَعِ وَتَسْكُنُونَ فِي أَرْضِكُمْ آمِنِينَ.٥
6 ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ.
وَأَجْعَلُ سَلَامًا فِي ٱلْأَرْضِ، فَتَنَامُونَ وَلَيْسَ مَنْ يُزْعِجُكُمْ. وَأُبِيدُ ٱلْوُحُوشَ ٱلرَّدِيئَةَ مِنَ ٱلْأَرْضِ، وَلَا يَعْبُرُ سَيْفٌ فِي أَرْضِكُمْ.٦
7 ನೀವು ನಿಮ್ಮ ವೈರಿಗಳನ್ನು ಓಡಿಸುವಿರಿ ಮತ್ತು ಅವರನ್ನು ಕತ್ತಿಯಿಂದ ಸಂಹರಿಸುವಿರಿ.
وَتَطْرُدُونَ أَعْدَاءَكُمْ فَيَسْقُطُونَ أَمَامَكُمْ بِٱلسَّيْفِ.٧
8 ನಿಮ್ಮಲ್ಲಿ ಐದು ಜನರು ನೂರು ಜನರನ್ನೂ ಮತ್ತು ನೂರು ಜನರು ಹತ್ತು ಸಾವಿರ ಜನರನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.
يَطْرُدُ خَمْسَةٌ مِنْكُمْ مِئَةً، وَمِئَةٌ مِنْكُمْ يَطْرُدُونَ رَبْوَةً، وَيَسْقُطُ أَعْدَاؤُكُمْ أَمَامَكُمْ بِٱلسَّيْفِ.٨
9 ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸುವೆನು; ನಿಮ್ಮೊಂದಿಗೆ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.
وَأَلْتَفِتُ إِلَيْكُمْ وَأُثْمِرُكُمْ وَأُكَثِّرُكُمْ وَأَفِي مِيثَاقِي مَعَكُمْ،٩
10 ೧೦ ನೀವು ಬಹುದಿನದಿಂದ ಇಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ; ಹೊಸದಕ್ಕೆ ಸ್ಥಳ ಉಂಟಾಗುವಂತೆ ಹಳೆಯದನ್ನು ತೆಗೆಯುವಿರಿ.
فَتَأْكُلُونَ ٱلْعَتِيقَ ٱلْمُعَتَّقَ، وَتُخْرِجُونَ ٱلْعَتِيقَ مِنْ وَجْهِ ٱلْجَدِيدِ.١٠
11 ೧೧ ನಾನು ನಿಮ್ಮ ನಡುವೆ ವಾಸಮಾಡುವೆನು; ನಿಮ್ಮನ್ನು ತಳ್ಳಿಬಿಡುವುದಿಲ್ಲ.
وَأَجْعَلُ مَسْكَنِي فِي وَسَطِكُمْ، وَلَا تَرْذُلُكُمْ نَفْسِي.١١
12 ೧೨ ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು, ನೀವು ನನಗೆ ಪ್ರಜೆಯಾಗಿರುವಿರಿ.
وَأَسِيرُ بَيْنَكُمْ وَأَكُونُ لَكُمْ إِلَهًا وَأَنْتُمْ تَكُونُونَ لِي شَعْبًا.١٢
13 ೧೩ ನೀವು ಐಗುಪ್ತ್ಯರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿಸಿದ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನು.
أَنَا ٱلرَّبُّ إِلَهُكُمُ ٱلَّذِي أَخْرَجَكُمْ مِنْ أَرْضِ مِصْرَ مِنْ كَوْنِكُمْ لَهُمْ عَبِيدًا، وَقَطَّعَ قُيُودَ نِيرِكُمْ وَسَيَّرَكُمْ قِيَامًا.١٣
14 ೧೪ “ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,
«لَكِنْ إِنْ لَمْ تَسْمَعُوا لِي وَلَمْ تَعْمَلُوا كُلَّ هَذِهِ ٱلْوَصَايَا،١٤
15 ೧೫ ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ,
وَإِنْ رَفَضْتُمْ فَرَائِضِي وَكَرِهَتْ أَنْفُسُكُمْ أَحْكَامِي، فَمَا عَمِلْتُمْ كُلَّ وَصَايَايَ، بَلْ نَكَثْتُمْ مِيثَاقِي،١٥
16 ೧೬ ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.
فَإِنِّي أَعْمَلُ هَذِهِ بِكُمْ: أُسَلِّطُ عَلَيْكُمْ رُعْبًا وَسِلًّا وَحُمَّى تُفْنِي ٱلْعَيْنَيْنِ وَتُتْلِفُ ٱلنَّفْسَ. وَتَزْرَعُونَ بَاطِلًا زَرْعَكُمْ فَيَأْكُلُهُ أَعْدَاؤُكُمْ.١٦
17 ೧೭ ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.
وَأَجْعَلُ وَجْهِي ضِدَّكُمْ فَتَنْهَزِمُونَ أَمَامَ أَعْدَائِكُمْ، وَيَتَسَلَّطُ عَلَيْكُمْ مُبْغِضُوكُمْ، وَتَهْرُبُونَ وَلَيْسَ مَنْ يَطْرُدُكُمْ.١٧
18 ೧೮ “ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.
«وَإِنْ كُنْتُمْ مَعَ ذَلِكَ لَا تَسْمَعُونَ لِي، أَزِيدُ عَلَى تَأْدِيبِكُمْ سَبْعَةَ أَضْعَافٍ حَسَبَ خَطَايَاكُمْ،١٨
19 ೧೯ ನಿಮ್ಮ ಗರ್ವಕ್ಕೆ ಕಾರಣವಾದ ಬಲವನ್ನು ಮುರಿಯುವೆನು. ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣದಂತೆಯೂ ಹಾಗು ನೀವು ಸಾಗುವಳಿಮಾಡುವ ಭೂಮಿಯನ್ನು ತಾಮ್ರದಂತೆಯೂ ಮಾಡುವೆನು.
فَأُحَطِّمُ فَخَارَ عِزِّكُمْ، وَأُصَيِّرُ سَمَاءَكُمْ كَٱلْحَدِيدِ، وَأَرْضَكُمْ كَٱلنُّحَاسِ،١٩
20 ೨೦ ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು; ನಿಮ್ಮ ಭೂಮಿಯಲ್ಲಿ ಬೆಳೆಯಾಗುವುದಿಲ್ಲ, ತೋಟಗಳ ಮರಗಳು ಫಲ ಕೊಡುವುದಿಲ್ಲ.
فَتُفْرَغُ بَاطِلًا قُوَّتُكُمْ، وَأَرْضُكُمْ لَا تُعْطِي غَلَّتَهَا، وَأَشْجَارُ ٱلْأَرْضِ لَا تُعْطِي أَثْمَارَهَا.٢٠
21 ೨೧ “ನೀವು ನನ್ನ ಮಾತನ್ನು ಕೇಳದೆ ನನ್ನ ವಿರುದ್ಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿಮಿತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.
«وَإِنْ سَلَكْتُمْ مَعِي بِٱلْخِلَافِ، وَلَمْ تَشَاءُوا أَنْ تَسْمَعُوا لِي، أَزِيدُ عَلَيْكُمْ ضَرْبَاتٍ سَبْعَةَ أَضْعَافٍ حَسَبَ خَطَايَاكُمْ.٢١
22 ೨೨ ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮ ಮಕ್ಕಳನ್ನು ಕದ್ದುಕೊಂಡು ಹೋಗುವವು, ನಿಮ್ಮ ಪಶುಗಳನ್ನು ಕೊಲ್ಲುವವು, ನಿಮ್ಮನ್ನು ಸ್ವಲ್ಪ ಜನರನ್ನಾಗಿ ಮಾಡುವವು; ನಿಮ್ಮ ದಾರಿಗಳು ಪಾಳು ಬೀಳುತ್ತದೆ.
أُطْلِقُ عَلَيْكُمْ وُحُوشَ ٱلْبَرِّيَّةِ فَتُعْدِمُكُمُ ٱلْأَوْلَادَ، وَتَقْرِضُ بَهَائِمَكُمْ، وَتُقَلِّلُكُمْ فَتُوحَشُ طُرُقُكُمْ.٢٢
23 ೨೩ “ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ಒಳಗಾಗದೆ ನನಗೆ ವಿರೋಧವಾಗಿ ನಡೆದರೆ,
«وَإِنْ لَمْ تَتَأَدَّبُوا مِنِّي بِذَلِكَ، بَلْ سَلَكْتُمْ مَعِي بِٱلْخِلَافِ،٢٣
24 ೨೪ ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.
فَإِنِّي أَنَا أَسْلُكُ مَعَكُمْ بِٱلْخِلَافِ، وَأَضْرِبُكُمْ سَبْعَةَ أَضْعَافٍ حَسَبَ خَطَايَاكُمْ.٢٤
25 ೨೫ ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.
أَجْلِبُ عَلَيْكُمْ سَيْفًا يَنْتَقِمُ نَقْمَةَ ٱلْمِيثَاقِ، فَتَجْتَمِعُونَ إِلَى مُدُنِكُمْ وَأُرْسِلُ فِي وَسَطِكُمُ ٱلْوَبَأَ فَتُدْفَعُونَ بِيَدِ ٱلْعَدُوِّ.٢٥
26 ೨೬ ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ.
بِكَسْرِي لَكُمْ عَصَا ٱلْخُبْزِ. تَخْبِزُ عَشَرُ نِسَاءٍ خُبْزَكُمْ فِي تَنُّورٍ وَاحِدٍ، وَيَرْدُدْنَ خُبْزَكُمْ بِٱلْوَزْنِ، فَتَأْكُلُونَ وَلَا تَشْبَعُونَ.٢٦
27 ೨೭ “ಇದನ್ನೆಲ್ಲಾ ನೀವು ಅನುಭವಿಸಿದ ಮೇಲೆಯೂ ಇನ್ನೂ ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ,
«وَإِنْ كُنْتُمْ بِذَلِكَ لَا تَسْمَعُونَ لِي بَلْ سَلَكْتُمْ مَعِي بِٱلْخِلَافِ،٢٧
28 ೨೮ ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.
فَأَنَا أَسْلُكُ مَعَكُمْ بِٱلْخِلَافِ سَاخِطًا، وَأُؤَدِّبُكُمْ سَبْعَةَ أَضْعَافٍ حَسَبَ خَطَايَاكُمْ،٢٨
29 ೨೯ ನೀವು ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳ ಮಾಂಸವನ್ನೇ ತಿನ್ನುವಿರಿ.
فَتَأْكُلُونَ لَحْمَ بَنِيكُمْ، وَلَحْمَ بَنَاتِكُمْ تَأْكُلُونَ.٢٩
30 ೩೦ ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.
وَأُخْرِبُ مُرْتَفَعَاتِكُمْ، وَأَقْطَعُ شَمْسَاتِكُمْ، وَأُلْقِي جُثَثَكُمْ عَلَى جُثَثِ أَصْنَامِكُمْ، وَتَرْذُلُكُمْ نَفْسِي.٣٠
31 ೩೧ ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಪರಿಮಳವನ್ನು ನಾನು ಮೂಸಿಯೂ ನೋಡುವುದಿಲ್ಲ.
وَأُصَيِّرُ مُدُنَكُمْ خَرِبَةً، وَمَقَادِسَكُمْ مُوحِشَةً، وَلَا أَشْتَمُّ رَائِحَةَ سَرُورِكُمْ.٣١
32 ೩೨ ನಾನು ನಿಮ್ಮ ದೇಶವನ್ನು ಸಂಪೂರ್ಣವಾಗಿ ಹಾಳುಮಾಡುವೆನು; ಅದರಲ್ಲಿ ವಾಸವಾಗಿರುವ ನಿಮ್ಮ ಶತ್ರುಗಳೂ ಅದನ್ನು ನೋಡಿ ಆಶ್ಚರ್ಯಪಡುವರು.
وَأُوحِشُ ٱلْأَرْضَ فَيَسْتَوْحِشُ مِنْهَا أَعْدَاؤُكُمُ ٱلسَّاكِنُونَ فِيهَا.٣٢
33 ೩೩ ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.
وَأُذَرِّيكُمْ بَيْنَ ٱلْأُمَمِ، وَأُجَرِّدُ وَرَاءَكُمُ ٱلسَّيْفَ فَتَصِيرُ أَرْضُكُمْ مُوحَشَةً، وَمُدُنُكُمْ تَصِيرُ خَرِبَةً.٣٣
34 ೩೪ ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆ ಇರುವ ದಿನಗಳಲ್ಲೆಲ್ಲಾ ನಿಮ್ಮ ದೇಶವು ಹಾಳುಬಿದ್ದು ತನಗೆ ಸಲ್ಲಬೇಕಾಗಿದ್ದ ಸಬ್ಬತ್ ಕಾಲವನ್ನು ಅನುಭವಿಸುವುದು; ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ ಕಾಲವನ್ನು ಅನುಭವಿಸುವುದು.
حِينَئِذٍ تَسْتَوْفِي ٱلْأَرْضُ سُبُوتَهَا كُلَّ أَيَّامِ وَحْشَتِهَا وَأَنْتُمْ فِي أَرْضِ أَعْدَائِكُمْ. حِينَئِذٍ تَسْبِتُ ٱلْأَرْضُ وَتَسْتَوْفِي سُبُوتَهَا.٣٤
35 ೩೫ ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ತಕ್ಕ ಸಬ್ಬತ್ ಕಾಲದಲ್ಲಿ ದೊರೆಯದ ವಿಶ್ರಾಂತಿಯನ್ನು, ಅದು ಹಾಳುಬಿದ್ದಿರುವ ಎಲ್ಲಾ ದಿನಗಳಲ್ಲಿ ಅನುಭವಿಸುವುದು.
كُلَّ أَيَّامِ وَحْشَتِهَا تَسْبِتُ مَا لَمْ تَسْبِتْهُ مِنْ سُبُوتِكُمْ فِي سَكَنِكُمْ عَلَيْهَا.٣٥
36 ೩೬ “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.
وَٱلْبَاقُونَ مِنْكُمْ أُلْقِي ٱلْجَبَانَةَ فِي قُلُوبِهِمْ فِي أَرَاضِي أَعْدَائِهِمْ، فَيَهْزِمُهُمْ صَوْتُ وَرَقَةٍ مُنْدَفِعَةٍ، فَيَهْرُبُونَ كَٱلْهَرَبِ مِنَ ٱلسَّيْفِ، وَيَسْقُطُونَ وَلَيْسَ طَارِدٌ.٣٦
37 ೩೭ ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು; ಶತ್ರುಗಳ ಮುಂದೆ ನಿಲ್ಲಲಾರದೆ ತತ್ತರಿಸುವಿರಿ.
وَيَعْثُرُ بَعْضُهُمْ بِبَعْضٍ كَمَا مِنْ أَمَامِ ٱلسَّيْفِ وَلَيْسَ طَارِدٌ، وَلَا يَكُونُ لَكُمْ قِيَامٌ أَمَامَ أَعْدَائِكُمْ،٣٧
38 ೩೮ ಅನ್ಯಜನಗಳಲ್ಲಿ ಚದರಿಸಲ್ಪಟ್ಟು ಕಾಣಿಸದೆ ಹೋಗುವಿರಿ, ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ನುಂಗಿಬಿಡುವುದು.
فَتَهْلِكُونَ بَيْنَ ٱلشُّعُوبِ وَتَأْكُلُكُمْ أَرْضُ أَعْدَائِكُمْ.٣٨
39 ೩೯ ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.
وَٱلْبَاقُونَ مِنْكُمْ يَفْنَوْنَ بِذُنُوبِهِمْ فِي أَرَاضِي أَعْدَائِكُمْ. وَأَيْضًا بِذُنُوبِ آبَائِهِمْ مَعَهُمْ يَفْنَوْنَ.٣٩
40 ೪೦ “ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುದರಿಂದಲೇ
لَكِنْ إِنْ أَقَرُّوا بِذُنُوبِهِمْ وَذُنُوبِ آبَائِهِمْ فِي خِيَانَتِهِمِ ٱلَّتِي خَانُونِي بِهَا، وَسُلُوكِهِمْ مَعِيَ ٱلَّذِي سَلَكُوا بِٱلْخِلَافِ،٤٠
41 ೪೧ ನಾನು ಅವರಿಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶದಲ್ಲಿ ಸೆರೆಯವರನ್ನಾಗಿ ಮಾಡಬೇಕಾಯಿತೆಂದೂ ಒಪ್ಪಿ, ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆ ಬಾಗಿ ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವುದಾದರೆ,
وَإِنِّي أَيْضًا سَلَكْتُ مَعَهُمْ بِٱلْخِلَافِ وَأَتَيْتُ بِهِمْ إِلَى أَرْضِ أَعْدَائِهِمْ. إِلَّا أَنْ تَخْضَعَ حِينَئِذٍ قُلُوبُهُمُ ٱلْغُلْفُ، وَيَسْتَوْفُوا حِينَئِذٍ عَنْ ذُنُوبِهِمْ،٤١
42 ೪೨ ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.
أَذْكُرُ مِيثَاقِي مَعَ يَعْقُوبَ، وَأَذْكُرُ أَيْضًا مِيثَاقِي مَعَ إِسْحَاقَ، وَمِيثَاقِي مَعَ إِبْرَاهِيمَ، وَأَذْكُرُ ٱلْأَرْضَ.٤٢
43 ೪೩ ಅವರು ಬಿಟ್ಟುಹೋದ ಸ್ವದೇಶವು ನಿರ್ಜನವಾಗಿ ಬಿದ್ದಿರುವಾಗ ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು. ಅವರು ಯೆಹೋವನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣವೇ ತಮ್ಮ ಪಾಪದ ಫಲವನ್ನು ಅನುಭವಿಸಬೇಕಾಗಿರುವುದು.
وَٱلْأَرْضُ تُتْرَكُ مِنْهُمْ وَتَسْتَوْفِي سُبُوتَهَا فِي وَحْشَتِهَا مِنْهُمْ، وَهُمْ يَسْتَوْفُونَ عَنْ ذُنُوبِهِمْ لِأَنَّهُمْ قَدْ أَبَوْا أَحْكَامِي وَكَرِهَتْ أَنْفُسُهُمْ فَرَائِضِي.٤٣
44 ೪೪ ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ, ತಾತ್ಸಾರಮಾಡುವುದಿಲ್ಲ; ನಾನು ಅವರಿಗೆ ಮಾಡಿದ ಒಡಂಬಡಿಕೆಯನ್ನು ಮೀರುವುದಿಲ್ಲ, ಅವರನ್ನು ಇಲ್ಲದಂತೆ ಮಾಡುವುದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ.
وَلَكِنْ مَعَ ذَلِكَ أَيْضًا مَتَى كَانُوا فِي أَرْضِ أَعْدَائِهِمْ، مَا أَبَيْتُهُمْ وَلَا كَرِهْتُهُمْ حَتَّى أُبِيدَهُمْ وَأَنْكُثَ مِيثَاقِي مَعَهُمْ، لِأَنِّي أَنَا ٱلرَّبُّ إِلَهُهُمْ.٤٤
45 ೪೫ ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು” ಎಂಬುದೇ.
بَلْ أَذْكُرُ لَهُمْ ٱلْمِيثَاقَ مَعَ ٱلْأَوَّلِينَ ٱلَّذِينَ أَخْرَجْتُهُمْ مِنْ أَرْضِ مِصْرَ أَمَامَ أَعْيُنِ ٱلشُّعُوبِ لِأَكُونَ لَهُمْ إِلَهًا. أَنَا ٱلرَّبُّ».٤٥
46 ೪೬ ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳೇ ಇವು.
هَذِهِ هِيَ ٱلْفَرَائِضُ وَٱلْأَحْكَامُ وَٱلشَّرَائِعُ ٱلَّتِي وَضَعَهَا ٱلرَّبُّ بَيْنَهُ وَبَيْنَ بَنِي إِسْرَائِيلَ فِي جَبَلِ سِينَاءَ بِيَدِ مُوسَى.٤٦

< ಯಾಜಕಕಾಂಡ 26 >