< ಯಾಜಕಕಾಂಡ 27 >
1 ೧ ಯೆಹೋವನು ಮೋಶೆಯ ಸಂಗಡ ಮಾತನಾಡಿ,
১আর সদাপ্রভু মোশিকে বললেন,
2 ೨ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಶೆಕೆಲ್ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೀಗಿರಬೇಕು.
২“তুমি ইস্রায়েল-সন্তানদেরকে বল, তাদেরকে বল, ‘যদি কেউ বিশেষ মানত করে, তবে তোমার নির্ধারিত মূল্য অনুসারে প্রাণী সব সদাপ্রভুর হবে।
3 ೩ ಇಪ್ಪತ್ತು ವರ್ಷದಿಂದ ಅರುವತ್ತು ವರ್ಷದ ವರೆಗಿನ ವಯಸ್ಸುಳ್ಳ ಪುರುಷನಿಗೋಸ್ಕರ, ದೇವಾಲಯದ ಶೆಕೆಲ್ ಗೆ ಸರಿಯಾಗಿ ಐವತ್ತು ಶೆಕೆಲ್ ಬೆಳ್ಳಿಯನ್ನು ಸಮರ್ಪಿಸಬೇಕು.
৩তোমার নির্ধারিত মূল্য এই; কুড়ি বছর বয়স থেকে ষাট বছর বয়স পর্যন্ত পুরুষ হলে তোমার নির্ধারিত মূল্য পবিত্র জায়গায় শেকল অনুসারে পঞ্চাশ শেকল রৌপ্য।
4 ೪ ಅದೇ ವಯಸ್ಸಿನ ಸ್ತ್ರೀಗೋಸ್ಕರ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
৪কিন্তু যদি স্ত্রীলোক হয়, তবে তোমার নির্ধারিত মূল্য ত্রিশ শেকল হবে।
5 ೫ ಐದು ವರ್ಷದ ವಯಸ್ಸಿನಿಂದ ಇಪ್ಪತ್ತು ವರ್ಷದ ವಯಸ್ಸಿನ ವರೆಗೆ ಪುರುಷನಿಗೋಸ್ಕರ ಇಪ್ಪತ್ತು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
৫যদি পাঁচ বছর বয়স থেকে কুড়ি বছর বয়স পর্যন্ত হয়, তবে তোমার নির্ধারিত মূল্য পুরুষের পক্ষে কুড়ি শেকল ও স্ত্রীর পক্ষে দশ শেকল হবে।
6 ೬ ಒಂದು ತಿಂಗಳಿನ ವಯಸ್ಸು ಮೊದಲುಗೊಂಡು ಐದು ವರ್ಷದ ವಯಸ್ಸಿನ ಹುಡುಗನಿಗೋಸ್ಕರ ಐದು ಶೆಕೆಲ್ ಬೆಳ್ಳಿಯನ್ನು, ಹುಡುಗಿಗೋಸ್ಕರ ಮೂರು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
৬যদি এক মাস বয়স থেকে পাঁচ বৎসর বয়স পর্যন্ত হয়, তবে তোমার নির্ধারিত মূল্য পুরুষের পক্ষে পাঁচ শেকল রূপা ও তোমার নির্ধারিত মূল্য স্ত্রীর পক্ষে তিন শেকল রূপা হবে।
7 ೭ ಅರವತ್ತು ವರ್ಷಗಳ ಪ್ರಾಯವನ್ನು ದಾಟಿದ ಪುರುಷನಿಗೋಸ್ಕರ ಹದಿನೈದು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
৭যদি ষাট বছর কিংবা তার বেশী বয়স হয়, তবে তোমার নির্ধারিত মূল্য পুরুষের পক্ষে পনের শেকল ও স্ত্রীর পক্ষে দশ শেকল হবে।
8 ೮ ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ, ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು.
৮কিন্তু যদি গরিব হওয়ার জন্য তোমার নির্ধারিত মূল্য দিতে সে না পারে, তবে যাজকের কাছে আনতে হবে এবং যাজক তার মূল্য নির্ধারন করবে; মানতকারী ব্যক্তির ক্ষমতা অনুসারে যাজক তার মূল্য নির্ধারন করবে।
9 ೯ “‘ಯೆಹೋವನಿಗೆ ಸಮರ್ಪಿಸಬಹುದಾದ ಪಶುವನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದಾದರೆ ಅದು ದೇವರ ಸೊತ್ತಾಗಿರಬೇಕು.
৯আর যদি কেউ সদাপ্রভুর কাছে উৎসর্গের জন্য পশু দান করে, তবে সদাপ্রভুর উদ্দেশ্যে দেওয়া সেরকম সব পশু পবিত্র বস্তু হবে।
10 ೧೦ ಅದನ್ನು ಬದಲಾಯಿಸಬಾರದು, ಕೆಟ್ಟದ್ದಕ್ಕೆ ಬದಲಾಗಿ ಒಳ್ಳೆಯದನ್ನೂ ಇಲ್ಲವೇ ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನೂ, ಒಂದಕ್ಕೆ ಬದಲಾಗಿ ಬೇರೊಂದನ್ನೂ ಕೊಡಬಾರದು. ಅವನು ಗೊತ್ತುಮಾಡಿದ ಪಶುವಿಗೆ ಬದಲಾಗಿ ಬೇರೊಂದು ಪಶುವನ್ನು ಪ್ರತ್ಯೇಕಿಸಿಟ್ಟಿರುವ ಪಕ್ಷಕ್ಕೆ, ಮೊದಲನೆಯ ಪಶುವೂ ಹಾಗೂ ಅದಕ್ಕೆ ಬದಲಾಗಿ ಇಟ್ಟ ಪಶುವೂ ಎರಡೂ ಯೆಹೋವನದಾಗಿರಬೇಕು.
১০সে তার অন্যথা কি পরিবর্তন করবে না, খারাপের বদলে ভাল, কিংবা ভালর বদলে খারাপ দেবে না; যদি সে কোন প্রকারে পশুর সঙ্গে পশুর বদল করে, তবে তা এবং তার বদলে দুটোই পবিত্র হবে।
11 ೧೧ ಯೆಹೋವನಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು.
১১আর যা সদাপ্রভুর উদ্দেশ্যে উপহার হিসাবে উৎসর্গ করা যায় না, এমন কোন অশুচি পশু যদি কেউ দান করে, তবে সে ঐ পশুকে যাজকের সামনে উপস্থিত করবে।
12 ೧೨ ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂದು ಯಾಜಕನು ನೋಡಿಕೊಂಡು ಅದರ ಬೆಲೆ ಇಷ್ಟೆಂದು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆಯೇ ಅಂತಿಮವಾದದ್ದು ಸ್ಥಿರವಾಗಿರುವುದು.
১২ঐ পশু ভাল কিংবা খারাপ হোক, যাজক তার মূল্য নির্ধারন করবে; তোমার অর্থাৎ যাজকের নির্ধারন অনুসারেই মূল্য হবে।
13 ೧೩ ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.
১৩কিন্তু যদি সে কোনো প্রকারে তা মুক্ত করতে চায়, তবে সে তোমার নির্ধারিত মূল্যের পঞ্চমাংশ বেশী দেবে।
14 ೧೪ “‘ಯಾವನಾದರೂ ತನ್ನ ಮನೆಯನ್ನು ಯೆಹೋವನಿಗೆ ಮೀಸಲಾಗಿ ಪ್ರತಿಷ್ಠಿಸಿದರೆ, ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆ ಅಂತಿಮವಾಗಿರುವುದು.
১৪আর যদি কোনো ব্যক্তি সদাপ্রভুর উদ্দেশ্যে নিজের গৃহ পবিত্র করে, তবে তা ভাল কিম্বা খারাপ হোক, যাজক তার মূল্য নির্ধারন করবে; যাজক তার যে মূল্য নিরধারণ করবে, তাই ঠিক হবে।
15 ೧೫ ಹರಕೆಮಾಡಿದವನು ಪ್ರತಿಷ್ಠೆ ಮಾಡಿದ ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವುದು.
১৫আর যে তা অর্পণ করেছে, সে যদি নিজের গৃহ মুক্ত করতে চায়, তবে সে তোমার নির্ধারিত মূল্যের পঞ্চমাংশ বেশী দেবে; তা করলে গৃহ তার হবে।
16 ೧೬ “‘ಯಾವನಾದರೂ ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅದರಲ್ಲಿ ಇಷ್ಟು ಬೀಜವನ್ನು ಬಿತ್ತತಕ್ಕದ್ದು ಎಂದು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಒಂದು ಓಮೆರ್ ಜವೆಗೋದಿಯನ್ನು ಬಿತ್ತಬಹುದಾದ ಹೊಲವು ಐವತ್ತು ಶೆಕೆಲ್ ಬೆಳ್ಳಿಯ ಬೆಲೆ ಬಾಳುವುದು.
১৬আর যদি কেউ নিজের অধিকার করা জমির কোন অংশ সদাপ্রভুর উদ্দেশ্যে পবিত্র করে, তবে তার বোনা বীজ অনুসারে তার মূল্য তোমার নির্ধারিত হবে; এক এক হোমর পরিমিত যবের বীজের প্রতি পঞ্চাশ পঞ্চাশ শেকল করে রূপা।
17 ೧೭ ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದರೆ ಈ ಕ್ರಯ ಸ್ಥಿರವಾಗಿರುವುದು.
১৭যদি সে যোবেল বছর পর্যন্ত নিজের জমি পবিত্র করে, তবে তোমার নির্ধারিত সেই মূল্য অনুসারে তা ঠিক হবে।
18 ೧೮ ಜೂಬಿಲಿ ಸಂವತ್ಸರದ ತರುವಾಯ ಪ್ರತಿಷ್ಠೆ ಮಾಡಿದ ಭೂಮಿಯನ್ನು ಹರಕೆಮಾಡಿದರೆ, ಮುಂದಣ ಜೂಬಿಲಿ ಸಂವತ್ಸರಕ್ಕೆ ಕಳೆಯಬೇಕಾದ ವರ್ಷಗಳ ಸಂಖ್ಯೆಯ ಮೇರೆಗೆ ಅದರ ಬೆಲೆಯನ್ನು ಕಡಿಮೆಮಾಡಬೇಕು.
১৮কিন্তু যদি সে যোবেলের পরে নিজের জমি পবিত্র করে, তবে যাজক আগামী যোবেল পর্যন্ত অবশিষ্ট বছরের সংখ্যা অনুসারে তার দেওয়া রূপা গণনা করবে এবং সেই অনুসারে তোমার নির্ধারিত মূল্য কম করা যাবে।
19 ೧೯ ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿರುವ ಪಕ್ಷಕ್ಕೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಹೊಲ ಅವನದಾಗಿರುವುದು.
১৯আর যে তা পবিত্র করেছে, সে যদি কোনো প্রকারে নিজের জমি মুক্ত করতে চায়, তবে সে তোমার নির্ধারিত রূপার পঞ্চমাংশ বেশী দিলে তা তারই হবে।
20 ೨೦ ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ.
২০কিন্তু যদি সে সেই জমি মুক্ত না করে, কিংবা যদি অন্য কারও কাছে সেই জমি বিক্রয় করে, তবে তা আর কখনও মুক্ত হবে না;
21 ೨೧ ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.
২১সেই জমি যোবেল বছরে ক্রেতার হাত থেকে গিয়ে বর্জিত জমির মত সদাপ্রভুর উদ্দেশ্যে পবিত্র হবে, তাতে যাজকেরই অধিকার হবে।
22 ೨೨ “‘ಯಾವನಾದರೂ ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,
২২আর যদি কেউ নিজের পৈতৃক জমি ছেড়ে নিজের কেনা জমি সদাপ্রভুর উদ্দেশ্যে পবিত্র করে,
23 ೨೩ ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.
২৩তবে যাজক তোমার নির্ধারিত মূল্য অনুসারে যোবেল বছর পর্যন্ত তার দেওয়া রূপা গণনা করবে, আর সেই দিনের সে তোমার নির্ধারিত মূল্য দেবে; তা সদাপ্রভুর উদ্দেশ্যে পবিত্র।
24 ೨೪ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವನಿಗೆ ಪುನಃ ಬರಬೇಕು.
২৪যোবেল বছরে সেই জমি বিক্রেতার হাতে, অর্থাৎ সেই জমি যার পৈতৃক অধিকার, তার হাতে ফিরে আসবে।
25 ೨೫ ದೇವರ ಸೇವೆಯಲ್ಲಿ ನೇಮಕವಾದ ಎಲ್ಲಾ ತೂಕವು ದೇವಾಲಯದ ಶೆಕೆಲ್ ಮೇರೆಗೆ ಇರಬೇಕು. ಇಪ್ಪತ್ತು ಗೇರಾ ತೂಕವು ಒಂದು ಶೆಕೆಲಿಗೆ ಸಮವಾಗಿರಬೇಕೆಂದು ಯಾವಾಗಲೂ ನಿರ್ಣಯಿಸಬೇಕು.
২৫আর তোমার নির্ধারিত সব মূল্য পবিত্র জায়গার শেকল অনুসারে হবে; কুড়ি গেরাতে এক শেকল হয়।
26 ೨೬ “‘ಶುದ್ಧ ಪಶುವಿನಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಯೆಹೋವನದಾಗಿರುವುದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಬಾರದು; ಹೋರಿಯಾಗಿದ್ದರೂ, ಆಡು ಅಥವಾ ಕುರಿಯಾಗಿದ್ದರೂ ಅದು ಯೆಹೋವನ ಸೊತ್ತೇ.
২৬কেবল প্রথমজাত পশুর বাচ্চা সব সদাপ্রভুর উদ্দেশ্যে প্রথমজাত হওয়ার জন্য কেউ তা পবিত্র করতে পারবে না; গরু হোক, মেষ হোক, তা সদাপ্রভুর।
27 ೨೭ ಅಶುದ್ಧ ಪಶುವಿನಲ್ಲಿ ಚೊಚ್ಚಲಮರಿ ಹುಟ್ಟಿದ್ದಾದರೆ ಹರಕೆಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆ ಹೋದರೆ ಅದನ್ನು ನಿರ್ಣಯಿಸಲ್ಪಟ್ಟ ಕ್ರಯಕ್ಕೆ ಮಾರಬೇಕು.
২৭যদি সেই পশু অশুচি হয়, তবে সে তোমার নির্ধারিত মূল্যের পঞ্চমাংশ বেশী দিয়ে তা মুক্ত করতে পারে, মুক্ত না হলে তা তোমার নির্ধারিত মুল্যে বিক্রি করা যাবে।
28 ೨೮ “‘ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.
২৮আর কোনো ব্যক্তি নিজের সর্বস্ব হতে, মানুষ কি পশু কি অধিকার করা জমি হতে, যে কিছু সদাপ্রভুর উদ্দেশ্যে অর্পণ করে, তা বিক্রি করা বা মুক্ত করা যাবে না; সব অর্পিত বস্তু সদাপ্রভুর উদ্দেশ্যে অতি পবিত্র।
29 ೨೯ ಕೇವಲ ಯೆಹೋವನ ಸೊತ್ತಾಗುವುದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು.
২৯মানুষদের মধ্যে যে কেউ বর্জিত হয়, তাকে মুক্ত করা যাবে না; সে অবশ্যই মরবে।
30 ೩೦ “‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.
৩০জমির শস্য কিংবা গাছের ফল হোক, জমির উত্পন্ন সব জিনিসের দশমাংশ সদাপ্রভুর; তা সদাপ্রভুর উদ্দেশ্যে পবিত্র।
31 ೩೧ ಯಾವನಾದರೂ ತಾನು ಕೊಡಬೇಕಾದ ಹತ್ತನೆಯ ಒಂದು ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ ಅಷ್ಟರೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.
৩১আর যদি কেউ নিজের দশমাংশ থেকে কিছু মুক্ত করতে চায়, তবে সে তার পাঁচ অংশ বেশী দেবে।
32 ೩೨ ದನಗಳಾಗಲಿ ಇಲ್ಲವೇ ಹಿಂಡಿನ ಆಡು ಅಥವಾ ಕುರಿಗಳಾಗಲಿ ಕುರುಬನು ಲೆಕ್ಕಮಾಡಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು.
৩২আর গরু মেষ পালের দশমাংশ, পাঁচনির নিচ দিয়ে যা কিছু যায়, তার মধ্যে প্রত্যেক দশম পশু সদাপ্রভুর উদ্দেশ্যে পবিত্র হবে।
33 ೩೩ ಆ ಪಶುವು ಒಳ್ಳೇದೋ ಅಥವಾ ಕೆಟ್ಟದ್ದೋ ಎಂದು ನೋಡಬಾರದು; ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲು ಲೆಕ್ಕಿಸಿದ್ದೂ ಮತ್ತು ಅದಕ್ಕೆ ಬದಲಾಗಿ ಇಟ್ಟದ್ದೂ ಎರಡೂ ಯೆಹೋವನದಾಗಿರಬೇಕು; ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ’” ಎಂದು ಹೇಳಿದನು.
৩৩তা ভালো কি খারাপ, এর খোঁজ সে করবে না ও তার পরিবর্তন করবে না; কিন্তু যদি সে কোনো প্রকারে তার পরিবর্তন করে, তবে তা ও তার বিনিময়ে দুটোই পবিত্র হবে; তা মুক্ত করা যাবে না।’”
34 ೩೪ ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞೆಗಳು ಇವೇ.
৩৪সদাপ্রভু সীনয় পাহাড়ে ইস্রায়েল সন্তানদের জন্য মোশিকে এই সব আদেশ করেছিলেন।