< ಯಾಜಕಕಾಂಡ 3 >
1 ೧ “‘ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು.
১কারো উপহার যদি মঙ্গলের জন্য বলিদান হয় এবং সে গরুর পাল থেকে পুরুষ কিংবা স্ত্রী গরু দেয়, তবে সে সদাপ্রভুর সামনে নির্দোষ পশু আনবে।
2 ೨ ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
২সে নিজের উপহারের মাথায় হাত রেখে সমাগম তাঁবুর দরজার সামনে তাকে হত্যা করবে; পরে হারোণের ছেলে অর্থাৎ যাজকরা তার রক্ত বেদির চারিদিকে ছড়িয়ে দেবে।
3 ೩ ಆ ಯಜ್ಞಪಶುವಿನ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
৩পরে সে সদাপ্রভুর উদ্দেশ্যে সেই মঙ্গলের জন্য বলি বিষয়ক আগুনের তৈরী উপহার উৎসর্গ করবে, তার ঢাকা মেদ ও অন্ত্রের সঙ্গে সংযুক্ত
4 ೪ ಎರಡು ಮೂತ್ರಪಿಂಡಗಳ ಮೇಲೆ, ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಹತ್ತಿರ ಮೂತ್ರಪಿಂಡದ ತನಕ ಇರುವ ಕೊಬ್ಬನ್ನು ತೆಗೆದು ಅವುಗಳನ್ನು ಯೆಹೋವನಿಗೆ ಹೋಮಮಾಡಬೇಕು.
৪এবং দুই কিডনি, কোমরের কাছের মেদ ও যকৃতে ওপরে অবস্থিত ফুসফুস কিডনির সঙ্গে ছাড়িয়ে নেবে।
5 ೫ ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮ ದ್ರವ್ಯದೊಡನೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮ ಆಗಿರುವುದು.
৫পরে হারোণের ছেলেরা বেদির ওপরে অবস্থিত আগুনের, কাঠের ওপরে তা পোড়াবে; তা সদাপ্রভুর উদ্দেশ্যে মিষ্টি সুগন্ধ স্বরূপ আগুনে উত্সর্গ করা উপহার।
6 ೬ “‘ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ, ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು.
৬আর যদি সে সদাপ্রভুর উদ্দেশ্যে মঙ্গলার্থক বলিদানের উপহার পশুর পাল থেকে দেয়, তবে সে নির্দোষ পুরুষ কিংবা স্ত্রী পশু উৎসর্গ করবে।
7 ೭ ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
৭কেউ যদি উপহারের জন্যে ভেড়ার বাচ্চা দেয়, তবে সে সদাপ্রভুর সামনে তা আনবে;
8 ೮ ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
৮আর নিজের উপহারের মাথায় হাত দিয়ে সমাগম তাঁবুর সামনে তাকে হত্যা করবে এবং হারোণের ছেলেরা বেদির চারদিকে রক্ত ছেঁটাবে।
9 ೯ ಆ ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನು, ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
৯আর মঙ্গলার্থক বলি থেকে কিছু নিয়ে সদাপ্রভুর উদ্দেশ্যে আগুনে তৈরী উপহার উৎসর্গ করবে; ফলে তার মেদ ও সম্পূর্ণ লেজটি মেরুদণ্ডের কাছ থেকে কেটে নেবে, আর ঢাকা মেদ ও অন্ত্রের কাছের সব মেদ,
10 ೧೦ ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಮೇಲೆ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.
১০কোমরের কাছে দুইটি কিডনিতে অবস্থিত যে মেদ এবং যকৃতের উপরে অবস্থিত ফুসফুস কিডনির সঙ্গে সে সমস্ত বাদ দেবে
11 ೧೧ ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು.
১১এবং যাজক তা বেদির ওপরে খাদ্য হিসাবে পোড়াবে, সদাপ্রভুর উদ্দেশ্যে আগুনে তৈরী উপহার।
12 ೧೨ “‘ಸಮರ್ಪಿಸುವಂಥದ್ದು ಆಡು ಆಗಿದ್ದರೆ ಅರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
১২আর যদি সে উপহারের জন্যে ছাগল দেয়, তবে সে তা সদাপ্রভুর সামনে আনবে;
13 ೧೩ ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು, ದೇವದರ್ಶನ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
১৩তার মাথায় হাত দিয়ে সমাগম তাঁবুর সামনে তাকে হত্যা করবে এবং হারোণের ছেলেরা বেদির চারিদিকে তার রক্ত ছড়িয়ে দেবে।
14 ೧೪ ಅದರ ಅಂಗಾಂಶದ ಕೊಬ್ಬನ್ನು ಮತ್ತು ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
১৪পরে সে তা থেকে নিজের উপহার, সদাপ্রভুর উদ্দেশ্যে আগুনের তৈরী উপহার উৎসর্গ করবে, অর্থাৎ ঢাকা মেদ ও ভিতরের অংশের কাছের সমস্ত মেদ এবং দুইটি কিডনি,
15 ೧೫ ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ಯೆಹೋವನಿಗೋಸ್ಕರ ಅಗ್ನಿಯ ಮೂಲಕ ಸಮರ್ಪಿಸಬೇಕು.
১৫তার সঙ্গে অবস্থিত পার্শ্বস্থ মেদ ও যকৃতের উপরে অবস্থিত ফুসফুস কিডনির সঙ্গে বাদ দেবে।
16 ೧೬ ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.
১৬যাজক তা বেদির ওপরে খাদ্য হিসাবে পোড়াবে; তা সুগন্ধের জন্য আগুনে তৈরী উপহার; সমস্ত মেদ সদাপ্রভুর।
17 ೧೭ ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.
১৭তোমাদের সমস্ত বাস করার জায়গায় চিরদিনের র জন্য এই নিয়ম পালন করতে হবে, তোমরা মেদ ও রক্ত খাবে না।