< ಯಾಜಕಕಾಂಡ 5 >
1 ೧ “‘ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.
もし人が証人に立ち、誓いの声を聞きながら、その見たこと、知っていることを言わないで、罪を犯すならば、彼はそのとがを負わなければならない。
2 ೨ ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಮತ್ತು ಜಂತು ಇವುಗಳ ಹೆಣವಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ, ದೇವರು ಅದನ್ನು ಅಶುದ್ಧ ಎಂದು ಪರಿಗಣಿಸುವುದರಿಂದ ಅವನಿಗೆ ತಿಳಿಯದೆ ಹೋದರೂ ಅವನು ಅಶುದ್ಧನೂ ಮತ್ತು ದೋಷಿಯೂ ಆಗಿರುವನು.
また、もし人が汚れた野獣の死体、汚れた家畜の死体、汚れた這うものの死体など、すべて汚れたものに触れるならば、そのことに気づかなくても、彼は汚れたものとなって、とがを得る。
3 ೩ ಮನುಷ್ಯದೇಹದಿಂದ ಉಂಟಾದ ಯಾವುದಾದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ಅದು ಅವನಿಗೆ ತಿಳಿದುಬಂದಾಗ ಅವನು ದೋಷಿಯಾಗುವನು.
また、もし彼が人の汚れに触れるならば、その人の汚れが、どのような汚れであれ、それに気づかなくても、彼がこれを知るようになった時は、とがを得る。
4 ೪ ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಅಥವಾ ಕೇಡಿಗಾಗಲಿ ಯಾವುದಾದರೂ ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.
また、もし人がみだりにくちびるで誓い、悪をなそう、または善をなそうと言うならば、その人が誓ってみだりに言ったことは、それがどんなことであれ、それに気づかなくても、彼がこれを知るようになった時は、これらの一つについて、とがを得る。
5 ೫ ಅವನು ಈ ವಿಷಯಗಳಲ್ಲಿ ಯಾವುದಾದರೂ ಒಂದರಲ್ಲಿ ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು.
もしこれらの一つについて、とがを得たときは、その罪を犯したことを告白し、
6 ೬ ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.
その犯した罪のために償いとして、雌の家畜、すなわち雌の小羊または雌やぎを主のもとに連れてきて、罪祭としなければならない。こうして祭司は彼のために罪のあがないをするであろう。
7 ೭ “‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.
もし小羊に手のとどかない時は、山ばと二羽か、家ばとのひな二羽かを、彼が犯した罪のために償いとして主に携えてきて、一羽を罪祭に、一羽を燔祭にしなければならない。
8 ೮ ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಆದರೆ ತಲೆಯನ್ನು ಪೂರ್ಣವಾಗಿ ತೆಗೆದುಬಿಡಬಾರದು.
すなわち、これらを祭司に携えてきて、祭司はその罪祭のものを先にささげなければならない。すなわち、その頭を首の根のところで、摘み破らなければならない。ただし、切り離してはならない。
9 ೯ ಆಗ ಅವನು ದೋಷಪರಿಹಾರಾರ್ಥವಾದ ಆ ಪಕ್ಷಿಯ ರಕ್ತದಲ್ಲಿ ಸ್ವಲ್ಪವನ್ನು ಯಜ್ಞವೇದಿಯ ಪಕ್ಕಕ್ಕೆ ಚಿಮುಕಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿಯಬೇಕು. ಅದು ದೋಷಪರಿಹಾರಕ ಯಜ್ಞ.
そしてその罪祭の血を祭壇の側面に注ぎ、残りの血は祭壇のもとに絞り出さなければならない。これは罪祭である。
10 ೧೦ ಅವನು ಎರಡನೆಯ ಪಕ್ಷಿಯನ್ನು ನಿಯಮಗಳಿಗೆ ಅನುಸಾರವಾಗಿ ಅದೇ ರೀತಿಯಲ್ಲಿ ಸರ್ವಾಂಗಹೋಮ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
また第二のものは、定めにしたがって燔祭としなければならない。こうして、祭司が彼のためにその犯した罪のあがないをするならば、彼はゆるされるであろう。
11 ೧೧ “‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.
もし二羽の山ばとにも、二羽の家ばとのひなにも、手の届かないときは、彼の犯した罪のために、供え物として麦粉十分の一エパを携えてきて、これを罪祭としなければならない。ただし、その上に油をかけてはならない。またその上に乳香を添えてはならない。これは罪祭だからである。
12 ೧೨ ಅವನು ಯಾಜಕನ ಬಳಿಗೆ ಅದನ್ನು ತಂದನಂತರ ಅದು ದೈವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಯಜ್ಞವೇದಿಯಲ್ಲಿ ಹೋಮಮಾಡಬೇಕು; ಅದು ದೋಷಪರಿಹಾರಕ ಯಜ್ಞ.
彼はこれを祭司のもとに携えて行き、祭司は一握りを取って、記念の分とし、これを主にささげる火祭のように、祭壇の上で焼かなければならない。これは罪祭である。
13 ೧೩ ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನೈವೇದ್ಯ ದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.’”
こうして、祭司が彼のため、すなわち、彼がこれらの一つを犯した罪のために、あがないをするならば、彼はゆるされるであろう。そしてその残りは素祭と同じく、祭司に帰するであろう』」。
14 ೧೪ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
主はまたモーセに言われた、
15 ೧೫ “ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.
「もし人が不正をなし、あやまって主の聖なる物について罪を犯したときは、その償いとして、あなたの値積りにしたがい、聖所のシケルで、銀数シケルに当る雄羊の全きものを、群れのうちから取り、それを主に携えてきて、愆祭としなければならない。
16 ೧೬ ಅವನು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ಪವಿತ್ರ ವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
そしてその聖なる物について犯した罪のために償いをし、またその五分の一をこれに加えて、祭司に渡さなければならない。こうして祭司がその愆祭の雄羊をもって、彼のためにあがないをするならば、彼はゆるされるであろう。
17 ೧೭ “ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ, ಅದು ಅವನಿಗೆ ತಿಳಿಯದೆ ಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.
また人がもし罪を犯し、主のいましめにそむいて、してはならないことの一つをしたときは、たといそれを知らなくても、彼は罪を得、そのとがを負わなければならない。
18 ೧೮ ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವುದು.
彼はあなたの値積りにしたがって、雄羊の全きものを群れのうちから取り、愆祭としてこれを祭司のもとに携えてこなければならない。こうして、祭司が彼のために、すなわち彼が知らないで、しかもあやまって犯した過失のために、あがないをするならば、彼はゆるされるであろう。
19 ೧೯ ಅವನು ಅಪರಾಧಿಯಾದುದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.”
これは愆祭である。彼は確かに主の前にとがを得たからである」。