< ಯಾಜಕಕಾಂಡ 6 >
И рече Господь к Моисею, глаголя:
2 ೨ “ಯಾವನಾದರೂ ಪಾಪಮಾಡಿ, ಯೆಹೋವನಿಗೆ ವಿರುದ್ಧವಾಗಿ, ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ಅಥವಾ ತನ್ನ ಬಳಿಯಲ್ಲಿ ಇಡಲ್ಪಟ್ಟ ಅಡವಿಟ್ಟ ವಸ್ತುಗಳ ವಿಷಯದಲ್ಲಾಗಲಿ ಸುಳ್ಳಾಡುವುದರಿಂದ, ಮತ್ತೊಬ್ಬನನ್ನು ಮೋಸಗೊಳಿಸಿದ್ದರಿಂದ,
душа яже аще согрешит, и презрев презрит заповеди Господня, и солжет к другу о вдании, или о общине, или о хищении, или преобиде чим ближняго,
3 ೩ ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾಗುವನು.
или обрете погубленое, и солжет о нем, и кленется в неправду о единем от всех, яже аще сотворит человек яко согрешити в них:
4 ೪ ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು,
и будет егда согрешит и преступит, и отдаст похищеное, еже похити, или обиду, еюже преобиде, или вдание, еже вдано бысть ему, или погибшее, еже обрете:
5 ೫ ಬೇರೆ ಯಾವುದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನು ಪೂರ್ತಿಯಾಗಿ ತಂದುಕೊಡಬೇಕಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ನ್ಯಾಯವಾದ ಅದರ ಒಡೆಯನಿಗೆ ಹಿಂದಕ್ಕೆ ಕೊಡಬೇಕು.
от всякия вещи, еяже ради кляся в неправду, и да отдаст самое то истое, и пятую часть свою приложит ктому: егоже есть, тому да отдаст, в оньже день обличится:
6 ೬ ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವನಿಗೆಂದು ಯಾಜಕನಿಗೆ ಒಪ್ಪಿಸಬೇಕು.
и о преступлении своем да принесет Господу овна от овец непорочна, ценою в немже прегреши:
7 ೭ ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು” ಎಂದು ಹೇಳಿದನು.
и да помолится жрец о нем пред Господем, и оставится ему за едино от всех, яже сотвори и преступи в нем.
8 ೮ ಅನಂತರ ಯೆಹೋವನು ಮೋಶೆಗೆ,
И рече Господь к Моисею, глаголя:
9 ೯ “ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸು, ‘ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು ನಂದಬಾರದು.
заповеждь Аарону и сыном его, глаголя: сей закон всесожжения: сие всесожжение на горении его на олтари всю нощь до заутра, и огнь олтаря да горит на нем, и не угасает:
10 ೧೦ ಯಾಜಕನು ನಾರಿನ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರಿನ ಒಳಉಡುಪನ್ನು ಹಾಕಿಕೊಂಡು, ಯಜ್ಞವೇದಿಯ ಮೇಲಣ ಸರ್ವಾಂಗಹೋಮದ್ರವ್ಯದ ಬೂದಿಯನ್ನು ಎತ್ತಿ ಯಜ್ಞವೇದಿಯ ಬಳಿಯಲ್ಲಿ ಇಡಬೇಕು.
и да облечется жрец в срачицу льняну, и надраги льняны да возвлечет на тело свое, и да изнесет принос, егоже аще изжжет огнь всесожжения от олтаря, и да поставит близ олтаря:
11 ೧೧ ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
и да совлечет ризы своя, и да облечется в ризы ины, и да изнесет принос вне полка на место чисто:
12 ೧೨ ಯಜ್ಞವೇದಿಯ ಮೇಲಣ ಬೆಂಕಿ ಸರ್ವಾಂಗಹೋಮದ್ರವ್ಯದಿಂದ ಉರಿಯುತ್ತಲೇ ಇರಬೇಕು; ಅದು ಆರಿಹೋಗಬಾರದು. ಪ್ರತಿದಿನವೂ ಹೊತ್ತಾರೆಯಲ್ಲಿ ಯಾಜಕನು ಕಟ್ಟಿಗೆಯನ್ನು ತಂದುಹಾಕಿ, ಬೆಂಕಿ ಉರಿಸಿ, ಅದರ ಮೇಲೆ ಹೋಮದ್ರವ್ಯವನ್ನು ಕ್ರಮಪಡಿಸಿ, ಸಮಾಧಾನಯಜ್ಞಪಶುಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.
и огнь на олтари да горит на нем и не угасает: и да возжжет на нем жрец дрова по вся утра, и да возкладет нань всесожжение, и да возложит нань тук спасения:
13 ೧೩ ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಆರಿಹೋಗಬಾರದು.
и огнь всегда да горит на олтари, не угасает:
14 ೧೪ “‘ಧಾನ್ಯನೈವೇದ್ಯ ವಿಷಯವಾದ ನಿಯಮಗಳು: ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.
сей закон жертвы, юже принесут сынове Аарони жерцы пред Господем, прямо олтаря:
15 ೧೫ ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಅದರ ಮೇಲಿರುವ ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.
и да возмет от него (жрец) горсть муки пшеничны жертвенныя с елеем ея и со всем ливаном ея, сущими на жертве: и да вознесет на олтарь принос в воню благовония, в память ея Господу:
16 ೧೬ ಉಳಿದದ್ದನ್ನು ಆರೋನನೂ ಮತ್ತು ಅವನ ವಂಶದವರೂ ತಿನ್ನಬಹುದು; ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.
оставшееся же от нея снест Аарон и сынове его: пресна да снедятся в месте святе, в притворе скинии свидения да снедят я:
17 ೧೭ ಅದಕ್ಕೆ ಹುಳಿಹಿಟ್ಟು ಸೇರಿಸಿ ಸುಡಬಾರದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಮತ್ತು ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.
да не испечется квасна: часть сию дах им от приносов Господних: святая святых суть, якоже еже о гресе, и якоже еже о преступлении:
18 ೧೮ ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸಲ್ಲತಕ್ಕದ್ದೆಂಬುದು ಶಾಶ್ವತನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವುದು’” ಎಂದು ಹೇಳಿದನು.
всяк мужеск пол жреческ да снедят ю: законно вечно в роды вашя от принос Господних: всяк, иже аще прикоснется им, освятится.
19 ೧೯ ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,
И рече Господь к Моисею, глаголя:
20 ೨೦ “ಆರೋನನಿಗೆ ಅಭಿಷೇಕವಾದ ದಿನ ಮೊದಲುಗೊಂಡು ಅವನೂ ಮತ್ತು ಅವನ ವಂಶದವರೂ ಯೆಹೋವನಿಗೆ ಸಮರ್ಪಿಸಬೇಕಾದ ಧಾನ್ಯ ನೈವೇದ್ಯ ಕ್ರಮ ಹೇಗೆಂದರೆ, ಅವರು ನಿತ್ಯವೂ ಮೂರು ಸೇರು ಗೋದಿಹಿಟ್ಟನ್ನು, ಹೊತ್ತಾರೆ ಅರ್ಧವನ್ನು ಹಾಗೂ ಸಾಯಂಕಾಲ ಅರ್ಧವನ್ನು ಸಮರ್ಪಿಸಬೇಕು.
сей дар Аарону и сыном его, егоже принесут Господу в день, в оньже аще помажеши его: десятую часть меры ефи муки пшеничны в жертву всегда, пол ея заутра и пол ея в вечер:
21 ೨೧ ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನಸಿದ್ದಾಗಿರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.
на сковраде в елеи да сотворится, спряжену да принесет ю витую жертву от укрухов, жертву в воню благовония Господу:
22 ೨೨ ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು.
жрец помазанный, иже вместо его от сынов его, да сотворит ю: законно вечно, все да совершится:
23 ೨೩ ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ಸಂಪೂರ್ಣವಾಗಿ ಹೋಮಮಾಡಬೇಕು; ಅದನ್ನು ತಿನ್ನಲೇಬಾರದು” ಎಂದು ಹೇಳಿದನು.
и всяка жертва жреческа всесожженна да будет и да не снестся.
24 ೨೪ ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,
И рече Господь Бог Моисею, глаголя:
25 ೨೫ “ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಆಜ್ಞಾಪಿಸು, ‘ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.
рцы Аарону и сыном его, глаголя: сей закон согрешения: на месте, на немже закалают всесожжения, да закалают яже греха ради пред Господем: святая (бо) святых суть:
26 ೨೬ ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.
жрец приносяй ю да снест ю: в месте святе да снестся, в притворе скинии свидения:
27 ೨೭ ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು.
всяк прикасайся мяс ея освятится: и емуже аще воскропится от крове ея на ризу, яже аще воскропится на ню, да исперется на месте святе:
28 ೨೮ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಉಜ್ಜಿ ನೀರಿನಿಂದ ತೊಳೆಯಬೇಕು.
и сосуд глинян, в немже варится, да разбиется: аще же в медян сосуде сварится, да изтрет его, и измыет водою:
29 ೨೯ ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದು.
всяк мужеск пол в жерцех да снест ю: святая (бо) святых суть Господу:
30 ೩೦ ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.
и вся, яже от гресе аще принесутся от крове их в скинию свидения, ко очищению во святыни, да не снедятся, огнем да сожгутся.