< ಯಾಜಕಕಾಂಡ 7 >

1 “‘ಪ್ರಾಯಶ್ಚಿತ್ತಯಜ್ಞದ ನಿಯಮಗಳು: ಆ ಯಜ್ಞವು ಮಹಾಪರಿಶುದ್ಧವಾದದ್ದು.
וְזֹ֥את תּוֹרַ֖ת הָאָשָׁ֑ם קֹ֥דֶשׁ קָֽדָשִׁ֖ים הֽוּא׃
2 ಸರ್ವಾಂಗಹೋಮಪಶುವನ್ನು ವಧಿಸುವ ಸ್ಥಳದಲ್ಲೇ ಪ್ರಾಯಶ್ಚಿತ್ತಯಜ್ಞದ ಪಶುವನ್ನು ವಧಿಸಬೇಕು. ಯಾಜಕನು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
בִּמְק֗וֹם אֲשֶׁ֤ר יִשְׁחֲטוּ֙ אֶת־הָ֣עֹלָ֔ה יִשְׁחֲט֖וּ אֶת־הָאָשָׁ֑ם וְאֶת־דָּמ֛וֹ יִזְרֹ֥ק עַל־הַמִּזְבֵּ֖חַ סָבִֽיב׃
3 ಅವನು ಅದರ ಕೊಬ್ಬನ್ನೆಲ್ಲಾ ಅಂದರೆ,
וְאֵ֥ת כָּל־חֶלְבּ֖וֹ יַקְרִ֣יב מִמֶּ֑נּוּ אֵ֚ת הָֽאַלְיָ֔ה וְאֶת־הַחֵ֖לֶב הַֽמְכַסֶּ֥ה אֶת־הַקֶּֽרֶב׃
4 ಬಾಲದ ಕೊಬ್ಬನ್ನು, ಅಂಗಾಂಶದ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಮೇಲಿನಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.
וְאֵת֙ שְׁתֵּ֣י הַכְּלָיֹ֔ת וְאֶת־הַחֵ֙לֶב֙ אֲשֶׁ֣ר עֲלֵיהֶ֔ן אֲשֶׁ֖ר עַל־הַכְּסָלִ֑ים וְאֶת־הַיֹּתֶ֙רֶת֙ עַל־הַכָּבֵ֔ד עַל־הַכְּלָיֹ֖ת יְסִירֶֽנָּה׃
5 ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅದು ಪ್ರಾಯಶ್ಚಿತ್ತ ಯಜ್ಞವಾಗಿದೆ.
וְהִקְטִ֨יר אֹתָ֤ם הַכֹּהֵן֙ הַמִּזְבֵּ֔חָה אִשֶּׁ֖ה לַיהוָ֑ה אָשָׁ֖ם הֽוּא׃
6 ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.
כָּל־זָכָ֥ר בַּכֹּהֲנִ֖ים יֹאכְלֶ֑נּוּ בְּמָק֤וֹם קָדוֹשׁ֙ יֵאָכֵ֔ל קֹ֥דֶשׁ קָֽדָשִׁ֖ים הֽוּא׃
7 ಪ್ರಾಯಶ್ಚಿತ್ತಯಜ್ಞದ ಹೋಮಶೇಷದ ವಿಷಯದಲ್ಲಿಯೂ ಮತ್ತು ದೋಷಪರಿಹಾರಕ ಯಜ್ಞದ ಹೋಮಶೇಷದ ವಿಷಯದಲ್ಲಿಯೂ ಒಂದೇ ನಿಯಮಯುಂಟು; ಹೇಗೆಂದರೆ ಆ ಹೋಮಶೇಷವು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕದ್ದು.
כַּֽחַטָּאת֙ כָּֽאָשָׁ֔ם תּוֹרָ֥ה אַחַ֖ת לָהֶ֑ם הַכֹּהֵ֛ן אֲשֶׁ֥ר יְכַפֶּר־בּ֖וֹ ל֥וֹ יִהְיֶֽה׃
8 ಯಾರಾದರೂ ಸರ್ವಾಂಗಹೋಮಕ್ಕಾಗಿ ಪಶುವನ್ನು ತಂದಾಗ ಅದರ ಚರ್ಮವು ಆ ಪಶುವನ್ನು ಸಮರ್ಪಿಸುವ ಯಾಜಕನದ್ದಾಗಿಯೇ ಇರಬೇಕು.
וְהַ֨כֹּהֵ֔ן הַמַּקְרִ֖יב אֶת־עֹ֣לַת אִ֑ישׁ ע֤וֹר הָֽעֹלָה֙ אֲשֶׁ֣ר הִקְרִ֔יב לַכֹּהֵ֖ן ל֥וֹ יִהְיֶֽה׃
9 ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ ಅಥವಾ ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಸಮರ್ಪಿಸುವ ಯಾಜಕನಿಗೆ ಆಗಬೇಕು.
וְכָל־מִנְחָ֗ה אֲשֶׁ֤ר תֵּֽאָפֶה֙ בַּתַּנּ֔וּר וְכָל־נַעֲשָׂ֥ה בַמַּרְחֶ֖שֶׁת וְעַֽל־מַחֲבַ֑ת לַכֹּהֵ֛ן הַמַּקְרִ֥יב אֹתָ֖הּ ל֥וֹ תִֽהְיֶֽה׃
10 ೧೦ ಆದರೆ ಎಣ್ಣೆ ಹೊಯ್ದ ಹಿಟ್ಟನ್ನಾಗಲಿ ಅಥವಾ ಬರೀ ಹಿಟ್ಟನ್ನಾಗಲಿ ಯಾರಾದರೂ ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರೂ ಸಮಾನವಾಗಿ ಅನುಭವಿಸಬೇಕು.
וְכָל־מִנְחָ֥ה בְלוּלָֽה־בַשֶּׁ֖מֶן וַחֲרֵבָ֑ה לְכָל־בְּנֵ֧י אַהֲרֹ֛ן תִּהְיֶ֖ה אִ֥ישׁ כְּאָחִֽיו׃ פ
11 ೧೧ “‘ಜನರು ಯೆಹೋವನಿಗೆ ಅರ್ಪಿಸುವ ಸಮಾಧಾನಯಜ್ಞದ ನಿಯಮಗಳು ಇವೇ.
וְזֹ֥את תּוֹרַ֖ת זֶ֣בַח הַשְּׁלָמִ֑ים אֲשֶׁ֥ר יַקְרִ֖יב לַיהוָֽה׃
12 ೧೨ ಯಾರಾದರೂ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವುದಾದರೆ ಅದರೊಡನೆ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಕಡುಬುಗಳನ್ನು ಮತ್ತು ಎಣ್ಣೆಯಿಂದ ಪೂರಾ ನೆನಸಿದ ಗೋದಿ ಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.
אִ֣ם עַל־תּוֹדָה֮ יַקְרִיבֶנּוּ֒ וְהִקְרִ֣יב ׀ עַל־זֶ֣בַח הַתּוֹדָ֗ה חַלּ֤וֹת מַצּוֹת֙ בְּלוּלֹ֣ת בַּשֶּׁ֔מֶן וּרְקִיקֵ֥י מַצּ֖וֹת מְשֻׁחִ֣ים בַּשָּׁ֑מֶן וְסֹ֣לֶת מֻרְבֶּ֔כֶת חַלֹּ֖ת בְּלוּלֹ֥ת בַּשָּֽׁמֶן׃
13 ೧೩ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞದಲ್ಲಿ ಒಪ್ಪಿಸುವ ಪಶುವಿನೊಡನೆ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.
עַל־חַלֹּת֙ לֶ֣חֶם חָמֵ֔ץ יַקְרִ֖יב קָרְבָּנ֑וֹ עַל־זֶ֖בַח תּוֹדַ֥ת שְׁלָמָֽיו׃
14 ೧೪ ಸಮರ್ಪಿಸಿದ ಪ್ರತಿಯೊಂದು ವಿಧವಾದ ಯಜ್ಞದ ಪದಾರ್ಥಗಳಲ್ಲಿಯೂ ಒಂದೊಂದನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಯಜ್ಞವೇದಿಗೆ ಯಜ್ಞಪಶುವಿನ ರಕ್ತವನ್ನು ಎರಚಿದ ಯಾಜಕನಿಗೆ ಅರ್ಪಿಸಬೇಕು.
וְהִקְרִ֨יב מִמֶּ֤נּוּ אֶחָד֙ מִכָּל־קָרְבָּ֔ן תְּרוּמָ֖ה לַיהוָ֑ה לַכֹּהֵ֗ן הַזֹּרֵ֛ק אֶת־דַּ֥ם הַשְּׁלָמִ֖ים ל֥וֹ יִהְיֶֽה׃
15 ೧೫ ಕೃತಜ್ಞತೆಯ ಯಜ್ಞಪಶುವಿನ ಮಾಂಸವನ್ನು ಯಜ್ಞವು ನಡೆದ ದಿನದಲ್ಲೇ ಭೋಜನ ಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು.
וּבְשַׂ֗ר זֶ֚בַח תּוֹדַ֣ת שְׁלָמָ֔יו בְּי֥וֹם קָרְבָּנ֖וֹ יֵאָכֵ֑ל לֹֽא־יַנִּ֥יחַ מִמֶּ֖נּוּ עַד־בֹּֽקֶר׃
16 ೧೬ “‘ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಲಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು.
וְאִם־נֶ֣דֶר ׀ א֣וֹ נְדָבָ֗ה זֶ֚בַח קָרְבָּנ֔וֹ בְּי֛וֹם הַקְרִיב֥וֹ אֶת־זִבְח֖וֹ יֵאָכֵ֑ל וּמִֽמָּחֳרָ֔ת וְהַנּוֹתָ֥ר מִמֶּ֖נּוּ יֵאָכֵֽל׃
17 ೧೭ ಮೂರನೆಯ ದಿನದ ವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
וְהַנּוֹתָ֖ר מִבְּשַׂ֣ר הַזָּ֑בַח בַּיּוֹם֙ הַשְּׁלִישִׁ֔י בָּאֵ֖שׁ יִשָּׂרֵֽף׃
18 ೧೮ ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.
וְאִ֣ם הֵאָכֹ֣ל יֵ֠אָכֵל מִבְּשַׂר־זֶ֨בַח שְׁלָמָ֜יו בַּיּ֣וֹם הַשְּׁלִישִׁי֮ לֹ֣א יֵרָצֶה֒ הַמַּקְרִ֣יב אֹת֗וֹ לֹ֧א יֵחָשֵׁ֛ב ל֖וֹ פִּגּ֣וּל יִהְיֶ֑ה וְהַנֶּ֛פֶשׁ הָאֹכֶ֥לֶת מִמֶּ֖נּוּ עֲוֺנָ֥הּ תִּשָּֽׂא׃
19 ೧೯ ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನದೆ ಬೆಂಕಿಯಲ್ಲಿ ಸುಟ್ಟುಬಿಡಬೇಕು. ಶುದ್ಧರಾಗಿರುವವರೆಲ್ಲರೂ ಯಜ್ಞಪಶುವಿನ ಮಾಂಸವನ್ನು ತಿನ್ನಬಹುದು.
וְהַבָּשָׂ֞ר אֲשֶׁר־יִגַּ֤ע בְּכָל־טָמֵא֙ לֹ֣א יֵֽאָכֵ֔ל בָּאֵ֖שׁ יִשָּׂרֵ֑ף וְהַ֨בָּשָׂ֔ר כָּל־טָה֖וֹר יֹאכַ֥ל בָּשָֽׂר׃
20 ೨೦ ಯಾವನಾದರೂ ಅಶುದ್ಧನಾಗಿದ್ದು, ಯೆಹೋವನಿಗೆ ಸಮರ್ಪಿತವಾದ ಸಮಾಧಾನ ಯಜ್ಞಪಶುವಿನ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು.
וְהַנֶּ֜פֶשׁ אֲשֶׁר־תֹּאכַ֣ל בָּשָׂ֗ר מִזֶּ֤בַח הַשְּׁלָמִים֙ אֲשֶׁ֣ר לַיהוָ֔ה וְטֻמְאָת֖וֹ עָלָ֑יו וְנִכְרְתָ֛ה הַנֶּ֥פֶשׁ הַהִ֖וא מֵעַמֶּֽיהָ׃
21 ೨೧ ಯಾವನಿಗಾದರೂ ಮನುಷ್ಯದೇಹದಿಂದ ಉಂಟಾದ ಅಶುದ್ಧವಸ್ತು ಅಥವಾ ಅಶುದ್ಧ ಮೃಗ ಮತ್ತು ನಿಷಿದ್ಧವಸ್ತು ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಮತ್ತು ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು’” ಎಂದು ಹೇಳಿದನು.
וְנֶ֜פֶשׁ כִּֽי־תִגַּ֣ע בְּכָל־טָמֵ֗א בְּטֻמְאַ֤ת אָדָם֙ א֣וֹ ׀ בִּבְהֵמָ֣ה טְמֵאָ֗ה א֚וֹ בְּכָל־שֶׁ֣קֶץ טָמֵ֔א וְאָכַ֛ל מִבְּשַׂר־זֶ֥בַח הַשְּׁלָמִ֖ים אֲשֶׁ֣ר לַיהוָ֑ה וְנִכְרְתָ֛ה הַנֶּ֥פֶשׁ הַהִ֖וא מֵעַמֶּֽיהָ׃ פ
22 ೨೨ ಯೆಹೋವನು ಮೋಶೆಗೆ,
וַיְדַבֵּ֥ר יְהוָ֖ה אֶל־מֹשֶׁ֥ה לֵּאמֹֽר׃
23 ೨೩ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನೀವು ಎತ್ತು, ಕುರಿ ಮತ್ತು ಆಡುಗಳ ಕೊಬ್ಬನ್ನು ತಿನ್ನಬಾರದು.
דַּבֵּ֛ר אֶל־בְּנֵ֥י יִשְׂרָאֵ֖ל לֵאמֹ֑ר כָּל־חֵ֜לֶב שׁ֥וֹר וְכֶ֛שֶׂב וָעֵ֖ז לֹ֥א תֹאכֵֽלוּ׃
24 ೨೪ ಅಂತಹ ಪಶುವು ರೋಗದಿಂದ ಸತ್ತರೆ ಇಲ್ಲವೇ ಕಾಡುಮೃಗವು ಕೊಂದರೆ, ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದೇ ಹೊರತು ಎಷ್ಟು ಮಾತ್ರವೂ ತಿನ್ನಬಾರದು.
וְחֵ֤לֶב נְבֵלָה֙ וְחֵ֣לֶב טְרֵפָ֔ה יֵעָשֶׂ֖ה לְכָל־מְלָאכָ֑ה וְאָכֹ֖ל לֹ֥א תֹאכְלֻֽהוּ׃
25 ೨೫ ಮನುಷ್ಯರು ಯೆಹೋವನಿಗೆ ಹೋಮಮಾಡುವಂತಹ ಪಶು ಜಾತಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು.
כִּ֚י כָּל־אֹכֵ֣ל חֵ֔לֶב מִן־הַ֨בְּהֵמָ֔ה אֲשֶׁ֨ר יַקְרִ֥יב מִמֶּ֛נָּה אִשֶּׁ֖ה לַיהוָ֑ה וְנִכְרְתָ֛ה הַנֶּ֥פֶשׁ הָאֹכֶ֖לֶת מֵֽעַמֶּֽיהָ׃
26 ೨೬ ಪಕ್ಷಿಯದಾಗಲಿ ಅಥವಾ ಪಶುವಿನದಾಗಲಿ ಯಾವ ರಕ್ತವನ್ನು ನೀವು ಎಲ್ಲಿಯೂ ಊಟಮಾಡಬಾರದು.
וְכָל־דָּם֙ לֹ֣א תֹאכְל֔וּ בְּכֹ֖ל מוֹשְׁבֹתֵיכֶ֑ם לָע֖וֹף וְלַבְּהֵמָֽה׃
27 ೨೭ ರಕ್ತಭೋಜನವನ್ನು ಮಾಡಿದವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು’” ಎಂದು ಹೇಳಿದನು.
כָּל־נֶ֖פֶשׁ אֲשֶׁר־תֹּאכַ֣ל כָּל־דָּ֑ם וְנִכְרְתָ֛ה הַנֶּ֥פֶשׁ הַהִ֖וא מֵֽעַמֶּֽיהָ׃ פ
28 ೨೮ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
וַיְדַבֵּ֥ר יְהוָ֖ה אֶל־מֹשֶׁ֥ה לֵּאמֹֽר׃
29 ೨೯ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸಮಾಧಾನಯಜ್ಞದ ಪಶುಗಳನ್ನು ಯೆಹೋವನಿಗೆ ಸಮರ್ಪಿಸುವವನು ಆ ಯಜ್ಞದ್ರವ್ಯಗಳಲ್ಲಿ ಯೆಹೋವನಿಗೆ ಸಲ್ಲಬೇಕಾದದ್ದನ್ನು ತಂದುಕೊಡಬೇಕು.
דַּבֵּ֛ר אֶל־בְּנֵ֥י יִשְׂרָאֵ֖ל לֵאמֹ֑ר הַמַּקְרִ֞יב אֶת־זֶ֤בַח שְׁלָמָיו֙ לַיהוָ֔ה יָבִ֧יא אֶת־קָרְבָּנ֛וֹ לַיהוָ֖ה מִזֶּ֥בַח שְׁלָמָֽיו׃
30 ೩೦ ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದುದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನು ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವುದಕ್ಕಾಗಿ ತಂದು ಸಮರ್ಪಿಸಬೇಕು.
יָדָ֣יו תְּבִיאֶ֔ינָה אֵ֖ת אִשֵּׁ֣י יְהוָ֑ה אֶת־הַחֵ֤לֶב עַל־הֶֽחָזֶה֙ יְבִיאֶ֔נּוּ אֵ֣ת הֶחָזֶ֗ה לְהָנִ֥יף אֹת֛וֹ תְּנוּפָ֖ה לִפְנֵ֥י יְהוָֽה׃
31 ೩೧ ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು; ಎದೆಯ ಭಾಗವು ಆರೋನನಿಗೂ ಮತ್ತು ಅವನ ವಂಶದವರಿಗೂ ಸೇರಬೇಕು.
וְהִקְטִ֧יר הַכֹּהֵ֛ן אֶת־הַחֵ֖לֶב הַמִּזְבֵּ֑חָה וְהָיָה֙ הֶֽחָזֶ֔ה לְאַהֲרֹ֖ן וּלְבָנָֽיו׃
32 ೩೨ ನೀವು ಸಮಾಧಾನಯಜ್ಞದ್ರವ್ಯಗಳಲ್ಲಿ ಬಲತೊಡೆಯನ್ನು ಯಾಜಕನಿಗೋಸ್ಕರ ಪ್ರತ್ಯೇಕಿಸಿ ಕೊಡಬೇಕು.
וְאֵת֙ שׁ֣וֹק הַיָּמִ֔ין תִּתְּנ֥וּ תְרוּמָ֖ה לַכֹּהֵ֑ן מִזִּבְחֵ֖י שַׁלְמֵיכֶֽם׃
33 ೩೩ ಆರೋನನ ವಂಶದವರಲ್ಲಿ ಯಾವನು ಆ ಯಜ್ಞಪಶುವಿನ ರಕ್ತವನ್ನು ಮತ್ತು ಕೊಬ್ಬನ್ನು ಸಮರ್ಪಿಸುತ್ತಾನೋ ಅದರ ಬಲತೊಡೆಯು ಅವನ ಭಾಗವಾಗಿರಬೇಕು.
הַמַּקְרִ֞יב אֶת־דַּ֧ם הַשְּׁלָמִ֛ים וְאֶת־הַחֵ֖לֶב מִבְּנֵ֣י אַהֲרֹ֑ן ל֧וֹ תִהְיֶ֛ה שׁ֥וֹק הַיָּמִ֖ין לְמָנָֽה׃
34 ೩೪ ಇಸ್ರಾಯೇಲರು ಸಮಾಧಾನಯಜ್ಞಪಶುವಿನ ಮಾಂಸದಲ್ಲಿ ನೈವೇದ್ಯರೂಪವಾಗಿ ನಿವಾಳಿಸುವ ಎದೆಯ ಭಾಗವನ್ನು ಮತ್ತು ಯಾಜಕನಿಗೋಸ್ಕರ ಪ್ರತ್ಯೇಕಿಸುವ ತೊಡೆಯನ್ನು ನಾನು ತೆಗೆದುಕೊಂಡು ಮಹಾಯಾಜಕನಾದ ಆರೋನನಿಗೂ ಹಾಗು ಅವನ ವಂಶದವರಿಗೂ ಕೊಟ್ಟು ಇವು ಇಸ್ರಾಯೇಲರಿಂದ ಯಾಜಕರಿಗೆ ಯಾವಾಗಲೂ ಸಲ್ಲಬೇಕೆಂದು ಶಾಶ್ವತವಾದ ನಿಯಮವನ್ನು ಮಾಡಿದ್ದೇನೆ’” ಎಂದು ಹೇಳಿದನು.
כִּי֩ אֶת־חֲזֵ֨ה הַתְּנוּפָ֜ה וְאֵ֣ת ׀ שׁ֣וֹק הַתְּרוּמָ֗ה לָקַ֙חְתִּי֙ מֵאֵ֣ת בְּנֵֽי־יִשְׂרָאֵ֔ל מִזִּבְחֵ֖י שַׁלְמֵיהֶ֑ם וָאֶתֵּ֣ן אֹ֠תָם לְאַהֲרֹ֨ן הַכֹּהֵ֤ן וּלְבָנָיו֙ לְחָק־עוֹלָ֔ם מֵאֵ֖ת בְּנֵ֥י יִשְׂרָאֵֽל׃
35 ೩೫ ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. ಮೋಶೆ ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.
זֹ֣את מִשְׁחַ֤ת אַהֲרֹן֙ וּמִשְׁחַ֣ת בָּנָ֔יו מֵאִשֵּׁ֖י יְהוָ֑ה בְּיוֹם֙ הִקְרִ֣יב אֹתָ֔ם לְכַהֵ֖ן לַיהוָֽה׃
36 ೩೬ ಇಸ್ರಾಯೇಲರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಯೆಹೋವನು ಮೋಶೆಯ ಮುಖಾಂತರ ಕೈಯಿಂದ ಅವರನ್ನು ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲೇ ನೇಮಿಸಿದನು.
אֲשֶׁר֩ צִוָּ֨ה יְהוָ֜ה לָתֵ֣ת לָהֶ֗ם בְּיוֹם֙ מָשְׁח֣וֹ אֹתָ֔ם מֵאֵ֖ת בְּנֵ֣י יִשְׂרָאֵ֑ל חֻקַּ֥ת עוֹלָ֖ם לְדֹרֹתָֽם׃
37 ೩೭ ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ ಮತ್ತು ಸಮಾಧಾನಯಜ್ಞ ಎಂಬ ಯಜ್ಞಗಳ ವಿಷಯದಲ್ಲಿ ಮೇಲೆ ಹೇಳಿದ ನಿಯಮಗಳನ್ನು ಅನುಸರಿಸಬೇಕು.
זֹ֣את הַתּוֹרָ֗ה לָֽעֹלָה֙ לַמִּנְחָ֔ה וְלַֽחַטָּ֖את וְלָאָשָׁ֑ם וְלַ֨מִּלּוּאִ֔ים וּלְזֶ֖בַח הַשְּׁלָמִֽים׃
38 ೩೮ ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಎಲ್ಲಾ ಆಜ್ಞೆಗಳನ್ನು ಕೊಟ್ಟನು. ಮೋಶೆ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರು ಅರ್ಪಿಸಬೇಕಾದ ಯಜ್ಞವನ್ನು ಯೆಹೋವನಿಗೆ ಸಮರ್ಪಿಸಬೇಕೆಂದು ಆಜ್ಞಾಪಿಸಿ ಅವರಿಗೆ ಮೇಲೆ ಕಂಡ ನಿಯಮಗಳನ್ನು ಕೊಟ್ಟನು.
אֲשֶׁ֨ר צִוָּ֧ה יְהוָ֛ה אֶת־מֹשֶׁ֖ה בְּהַ֣ר סִינָ֑י בְּי֨וֹם צַוֺּת֜וֹ אֶת־בְּנֵ֣י יִשְׂרָאֵ֗ל לְהַקְרִ֧יב אֶת־קָרְבְּנֵיהֶ֛ם לַיהוָ֖ה בְּמִדְבַּ֥ר סִינָֽי׃ פ

< ಯಾಜಕಕಾಂಡ 7 >